Site icon Vistara News

Pangala murder: ಶರತ್‌ ಶೆಟ್ಟಿ ಕೊಲೆ ಪ್ರಕರಣದ ಮಹತ್ವದ ಸುಳಿವು ಲಭ್ಯ

pangala murder1

ಉಡುಪಿ: ಇಲ್ಲಿನ ಪಾಂಗಾಳದಲ್ಲಿ ನಡೆದ ಶರತ್ ಶೆಟ್ಟಿ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಸಿಸಿ ಪೂಟೇಜ್ ಲಭ್ಯವಾಗಿದ್ದು, ಮೂವರು ವ್ಯಕ್ತಿಗಳು ಕೈಯಲ್ಲಿ ಲಾಂಗ್ ಹಿಡಿದು ಬೈಕ್‌ನಲ್ಲಿ ತೆರಳುತ್ತಿರುವ ದೃಶ್ಯ ಸೆರೆಯಾಗಿದೆ.

ಭಾನುವಾರ ರಾತ್ರಿ ರಿಯಲ್ ಎಸ್ಟೇಟ್ ಉದ್ಯಮಿ ಶರತ್ ಶೆಟ್ಟಿ ಅವರ ಹತ್ಯೆ ಮಾಡಲಾಗಿತ್ತು. ಪಾಂಗಾಳದ ಬಬ್ಬುಸ್ವಾಮಿ ದೈವಸ್ಥಾನದ ನೇಮೋತ್ಸವದಲ್ಲಿ ಭಾಗಿಯಾಗಿದ್ದ ಶರತ್ ಮೊಬೈಲ್ ಕರೆ ಬಂದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿ ಬಂದಿದ್ದರು. ಬಳಿಕ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ರಕ್ತದ ಮಡುವಿನಲ್ಲಿ ಬಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಪಘಾತವಾಗಿರಬಹುದು ಎಂದು ತಿಳಿದಿದ್ದ ಸ್ಥಳೀಯರಿಗೆ, ಜಾಗದಲ್ಲಿ ಪತ್ತೆಯಾದ ಚೂರಿ ನೋಡಿ ಕೊಲೆ ಶಂಕೆ ವ್ಯಕ್ತವಾಗಿತ್ತು. ಎದೆಯ ಭಾಗಕ್ಕೆ ಬಲವಾಗಿ ಚೂರಿ ಹಾಕಿದ್ದ ಹಿನ್ನೆಲೆಯಲ್ಲಿ ಶರತ್ ಶೆಟ್ಟಿ ಸಾವನ್ನಪ್ಪಿದ್ದರು.

ಘಟನಾ ಸ್ಥಳಕ್ಕೆ ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಭೇಟಿ ನೀಡಿದ್ದರು. ಅಕ್ಕಪಕ್ಕದಲ್ಲಿರುವ ಸಿಸಿ ಟಿವಿ ಪರಿಶೀಲಿಸಿದಾಗ ಮಹತ್ವದ ಸುಳಿವು ಸಿಕ್ಕಿದೆ. ಕಾರ್ಕಳ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ನೇತೃತ್ವದಲ್ಲಿ ಮೂರು ತಂಡ ರಚಿಸಲಾಗಿದ್ದು, ಒಂದು ತಂಡ ಮಂಗಳೂರಿಗೆ ತೆರಳಿ ತನಿಖೆ ಆರಂಭಿಸಿದೆ. ಇನ್ನೊಂದು ತಂಡ ಶರತ್ ಶೆಟ್ಟಿಯ ಮೊಬೈಲ್ ಮತ್ತು ಸಿಸಿ ಪೂಟೇಜ್ ಆಧರಿಸಿ ಮಾಹಿತಿ ಕಲೆಹಾಕುತ್ತಿದೆ. ಹಲವು ಜನರ ವಿಚಾರಣೆ ನಡೆಸಲಾಗಿದೆ. ಶರತ್ ಶೆಟ್ಟಿ ಭೂ ವ್ಯವಹಾರ ನಡೆಸುತ್ತಿದ್ದ ಕಾರಣ, ವ್ಯವಹಾರದ ತಗಾದೆ ಹಿನ್ನೆಲೆಯಲ್ಲಿ ಕೊಲೆಯಾಗಿರಬಹುದೇ ಎನ್ನುವ ಅನುಮಾನವಿದೆ.

ಇದನ್ನೂ ಓದಿ: Murder Case: ಉಡುಪಿಯಲ್ಲಿ ವ್ಯಕ್ತಿಗೆ ಚಾಕು ಇರಿದು ಹತ್ಯೆ; ಕೃತ್ಯ ಎಸಗಿ ಇಬ್ಬರು ದುಷ್ಕರ್ಮಿಗಳು ಪರಾರಿ

Exit mobile version