ಮಂಗಳೂರು: ನಗರದಲ್ಲಿ ಆಗಸ್ಟ್ 14ರವರೆಗೆ ನಿಷೇದಾಜ್ಞೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ ಆಯೋಜಿಸಲು ಕಡ್ಡಾಯವಾಗಿ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯಬೇಕು ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಕಾರ್ಯಕ್ರಮ ನಡೆಸುವ ಸಂಘ-ಸಂಸ್ಥೆ ಹಾಗೂ ರಾಜಕೀಯ ಪಕ್ಷಗಳು ಸಕ್ಷಮ ಪ್ರಾಧಿಕಾರದಿಂದ ಮುಂಚಿತವಾಗಿ ಅನುಮತಿ ಪಡೆಯಬೇಕು. ಅನುಮತಿ ಪಡೆದವರಿಗಷ್ಟೇ ನಿಷೇಧಾಜ್ಞೆಯಿಂದ ವಿನಾಯಿತಿ ನೀಡಲಾಗುತ್ತದೆ. ಕಾನೂನು ಉಲ್ಲಂಘಿಸಿ ಗುಂಪು ಸೇರಿ ಯಾವುದೇ ಕಾರ್ಯಕ್ರಮಗಳನ್ನು ನಡೆಸಬಾರದು ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ | ಪ್ರಚೋದನಕಾರಿ ಪೋಸ್ಟ್ ಹಾಕಿದ್ರೆ ವರ್ಷಗಟ್ಟಲೆ ಕೋರ್ಟ್‌ಗೆ ಅಲೆಯುತ್ತೀರ: ಮಂಗಳೂರು ಪೊಲೀಸ್ ಎಚ್ಚರಿಕೆ