Site icon Vistara News

ಎಸ್ಕೇಪ್‌ಗೆ ಯತ್ನ, ರಾಜಾ ಕೊಲೆ ಆರೋಪಿಗಳ ಮೇಲೆ ಮಂಗಳೂರು ಪೊಲೀಸರ ಫೈರಿಂಗ್

ಪೊಲೀಸರ ಫೈರಿಂಗ್‌

ಮಂಗಳೂರು : ಪೊಲೀಸರ ಮೇಲೆ ಹಲ್ಲೆಗೆ ಯತ್ನಸಿದ ಇಬ್ಬರು ಕೊಲೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್‌ ನಡೆಸಿದ್ದಾರೆ. ಮೂಲ್ಕಿ ಪೊಲೀಸರು ಪ್ರಕರಣವೊಂದರಲ್ಲಿ ಇತರ ಆರೋಪಿಗಳ ಬಂಧನಕ್ಕೆ ತೆರಳುವಾಗ ಇಬ್ಬರು ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಸಿದ್ದಾರೆ. ಈ ವೇಳೆ ಸಿಸಿಬಿ ಇನ್ಸ್‌ಪೆಕ್ಟರ್‌ ಮಹೇಶ್‌ ಪ್ರಸಾದ್‌ ಫೈರಿಂಗ್‌ ನಡೆಸಿದ್ದಾರೆ. ಆರೋಪಿಗಳ ಕಾಲಿಗೆ ಗುಂಡೇಟು ಬಿದ್ದಿದೆ.

ಕಳೆದ ಸೋಮವಾರ ರಾತ್ರಿ ಬೈಕಂಪಾಡಿ ಸಮೀಪದ ಮೀನಕಳಿ ಬಳಿ ನಡೆದ ರೌಡಿ ಶೀಟರ್‌ ರಾಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಅರ್ಜುನ್‌ ಮತ್ತು ಮನೋಜ್‌ ಬಂಧಿತ ಆರೋಪಿಗಳು. ಇವರಿಬ್ಬರೊಂದಿಗೆ ಇತರ ಆರೋಪಿಗಳ ಬಂಧನಕ್ಕೆ ಪೊಲೀಸರು ತೆರಳುತ್ತಿದ್ದರು.

ಇದನ್ನೂ ಓದಿ | ಅಮೆರಿಕದಲ್ಲಿ ಸ್ಮಶಾನ-ಚರ್ಚ್‌ನಲ್ಲಿ ಗುಂಡಿನ ದಾಳಿ; ಇಬ್ಬರು ಸಾವು, ಇಬ್ಬರಿಗೆ ಗಾಯ

ಈ ವೇಳೆ ಪಿಎಸ್‌ಐ ನಾಗೇಂದ್ರ, ಎಎಸ್‌ ಐ ಡೇವಿಡ್‌, ಎಎಚ್‌ಸಿ ಸಂತೋಷ್‌ ಪೂಜಾರಿ ಎಂಬುವರು ಗಾಯಗೊಂಡಿದ್ದಾರೆ. ಗಾಯಗೊಂಡ ಪೊಲೀಸರು ಹಾಗೂ ಆರೋಪಿಗಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ಸೋಮವಾರ (ಜೂ.6) ರಾತ್ರಿ 7.30 ರ ಸುಮಾರಿಗೆ ಬೈಕಂಪಾಡಿ ಸುಪ್ರಿಯಾ ಬಾರ್‌ ಬಳಿಯಿಂದ ಮೀನಕಳಿಯ ರಸ್ತೆಯಾಗಿ ಹೋಗುತ್ತಿದ್ದ ದುಷ್ಕರ್ಮಿಗಳು ವಿವಿಧ ಪ್ರಕರಣ ಎದುರಿಸುತ್ತಿದ್ದ ರಾಜಾನನ್ನು ಅಡ್ಡಗಟ್ಟಿದ್ದರು. ಬಳಿಕ ತಲವಾರು ಮತ್ತು ಚಾಕುವಿನಿಂದ ಹೊಡೆದಿದ್ದು, ರಾಜಾ ಗಂಭೀರವಾಗಿ  ಗಾಯಗೊಂಡು ಸ್ಥಳದಲ್ಲಿ ಬಿದ್ದಿದ್ದನು. ಪೊಲೀಸರು ರಾಜನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಆಸ್ಪತ್ರೆಯಲ್ಲಿ ರಾಜಾ ಮೃತಪಟ್ಟಿದ್ದ.  

ಇದನ್ನೂ ಓದಿ | ಮಂಗಳೂರು ಕೋರ್ಟ್‌ನಲ್ಲಿ ಮಳಲಿ‌ ಮಸೀದಿ-ಮಂದಿರ ಫೈಟ್

Exit mobile version