ಬೆಂಗಳೂರು: ಪ್ರವೀಣ್ ಹತ್ಯೆ (Praveen Nettaru Murder) ದುರದೃಷ್ಟಕರ. ಆದಷ್ಟು ಬೇಗ ಹಂತಕರನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಈ ನಡುವೆ, ರಾಜ್ಯದ ಬಿಜೆಪಿ ಸರಕಾರದ ನಿಷ್ಕ್ರಿಯತೆ ಮತ್ತು ಗೃಹ ಸಚಿವರ ಅದಕ್ಷತೆಯೇ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಗೆ ಕಾರಣ ಎಂಬ ಬಗ್ಗೆ ಜನಾಕ್ರೋಶ ವ್ಯಕ್ತವಾಗುತ್ತಿದೆ.
ಇದನ್ನೂ ಓದಿ | Praveen Nettaru Murder | ಪುತ್ತೂರಿನಲ್ಲಿ ಪರಿಸ್ಥಿತಿ ಉದ್ವಿಗ್ನ, ಹಲವೆಡೆ ಸ್ವಯಂಪ್ರೇರಿತ ಬಂದ್
ಅಮಾಯಕ ಯುವಕ ತನ್ನ ಅಂಗಡಿ ಮುಚ್ಚಿ ಮನೆಗೆ ಹೋಗುವ ವೇಳೆ ಈ ಹತ್ಯೆ ನಡೆದಿದೆ. ಕರಾವಳಿಯಲ್ಲಿ ಬಹಳ ವರ್ಷಗಳಿಂದ ಇಂತ ಘಟನೆಗಳು ನಡೆಯುತ್ತಿವೆ. ಇದನ್ನು ಮಟ್ಟ ಹಾಕುತ್ತೇವೆ. ಪೋಲೀಸರು ಈಗಾಗಲೇ ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳಬೇಕೆಂದು ಮನವಿ ಮಾಡುತ್ತೇನೆ. ಸೈದ್ಧಾಂತಿಕವಾಗಿ ಏನೇ ಭಿನ್ನಾಭಿಪ್ರಾಯ ಇರಬಹುದು. ಆದರೆ ಕೊಲೆಯಂತಹ ಕೃತ್ಯಗಳು ನಡೆಯಬಾರದು ಎಂದು ಆರಗ ಹೇಳಿದ್ದಾರೆ.
ಕರಾವಳಿಯ ಜನ ಈ ಘಟನೆಯಿಂದ ಉದ್ವೇಗಕ್ಕೆ ಒಳಗಾಗಬಾರದು ಎಂದು ಆರಗ ಮನವಿ ಮಾಡಿದ್ದಾರೆ.
ಇದನ್ನೂ ಓದಿ | ಸುಳ್ಯದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ