Site icon Vistara News

Ravichandra Gatti | ಕೊರೊನಾಗೆ ರಮ್ ಮದ್ದು ಎಂದಿದ್ದ ಉಳ್ಳಾಲ ನಗರಸಭೆ ಕಾಂಗ್ರೆಸ್ ಕೌನ್ಸಿಲರ್ ಅಮಾನತು

Ravichandra Gatti

ಮಂಗಳೂರು: ಕೊರೊನಾಗೆ ರಮ್ ಮದ್ದು ಎಂದು ಹೇಳಿದ್ದ ಉಳ್ಳಾಲ ನಗರಸಭೆ ಕಾಂಗ್ರೆಸ್ ಕೌನ್ಸಿಲರ್ ರವಿಚಂದ್ರ ಗಟ್ಟಿ (Ravichandra Gatti) ಎಂಬುವವರು ಪಕ್ಷದಿಂದ ಅಮಾನತುಗೊಂಡಿದ್ದಾರೆ. ಕೊರೊನಾ ಸಂಬಂಧ ಇವರು ಮಾತನಾಡಿದ್ದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿ, ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದರಿಂದ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಕಮಿಟಿ ಅಮಾನತು ಮಾಡಿ ಆದೇಶ ಹೊರಡಿಸಿದೆ.

ಕಾಂಗ್ರೆಸ್ ಕೌನ್ಸಿಲರ್ ರವಿಚಂದ್ರ ಗಟ್ಟಿ, ರಮ್ ಕುಡಿದು ಪೆಪ್ಪರ್ ಹಾಕಿ ಮೊಟ್ಟೆ ತಿಂದರೆ ಕೊರೊನಾ ದೂರವಾಗುತ್ತದೆ ಎಂದು ಹೇಳಿದ್ದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮುಂದಿನ ಆದೇಶದವರೆಗೆ ರವಿಚಂದ್ರ ಗಟ್ಟಿಯನ್ನು ಅಮಾನತುಗೊಳಿಸಲಾಗಿದೆ.

ನಗರಸಭೆ ಸದಸ್ಯರಾಗಿರುವ ರವಿಚಂದ್ರ ಗಟ್ಟಿ, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಪಾನಮತ್ತರಾಗಿ ಮೈಮೇಲಿನ ಬಟ್ಟೆಗಳನ್ನು ಕಳಚಿ ಬಿದ್ದುಕೊಂಡು ಸಾರ್ವಜನಿಕವಾಗಿ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡುತ್ತಾ ಬಂದಿರುತ್ತಾರೆ. ಉಳ್ಳಾಲ ನಗರಸಭೆಯ ಸ್ಥಾಯಿಸಮಿತಿ ಅಧ್ಯಕ್ಷರ ಆಯ್ಕೆಯಂದೂ ಸಭೆಯಲ್ಲಿ ಭಾಗವಹಿಸದೆ ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡಿ ಪಕ್ಷದ ತತ್ವ ಸಿದ್ಧಾಂತಗಳನ್ನು ಉಲ್ಲಂಘಿಸಿದ್ದಾರೆ. ಆದ್ದರಿಂದ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ರವಿಚಂದ್ರ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಆದೇಶ ಹೊರಡಿಸಿದ್ದಾರೆ.‌

ಇದನ್ನೂ ಓದಿ | Tipu Sultan Drama | ಟಿಪ್ಪು ನಿಜಕನಸುಗಳು: ಇದು ʼಕರ್ನಾಟಕದ ಕಾಶ್ಮೀರ್‌ ಫೈಲ್ಸ್‌ʼ!

Exit mobile version