Site icon Vistara News

Road Accident: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಕಾರು ಡಿಕ್ಕಿ; ವ್ಯಕ್ತಿ ಸಾವು, ಕಾಲ್ಕಿತ್ತ ಚಾಲಕ

road Accident

ಮಂಗಳೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ (Road Accident) ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಗಂಭೀರ ಗಾಯಗೊಂಡ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳೂರಿನ ಮರ್ಧಾಳ ಜಂಕ್ಷನ್‌ ಸಮೀಪ ಈ ಅಪಘಾತ ಸಂಭವಿಸಿದೆ. ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಮೃತ ದುರ್ದೈವಿ.

ಅಪಘಾತದ ಮಾಡಿದ ಕಾರಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಶನಿವಾರ ರಾತ್ರಿ ವಿಠಲ ರೈಯವರು ತಮ್ಮ ಕಾರನ್ನು ಮರ್ಧಾಳದಲ್ಲಿ ನಿಲ್ಲಿಸಿ, ರಸ್ತೆ ದಾಟುತ್ತಿದ್ದರು. ಈ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಮಾರುತಿ 800 ಕಾರು ಡಿಕ್ಕಿ ಹೊಡೆದಿದೆ.

ನಂತರ ಚಾಲಕ ಕಾರನ್ನು ನಿಲ್ಲಿಸದೆ ಪರಾರಿ ಆಗಿದ್ದಾರೆ. ಆರೋಪಿಗಳು ಕಾರನ್ನು ಮರ್ಧಾಳ ಸಮೀಪದ ನೆಕ್ಕಿತ್ತಡ್ಕಯ ರಶೀದ್ ಎಂಬವರ ಮನೆಯ ಮುಂಭಾಗದಲ್ಲಿ ನಿಲ್ಲಿಸಿ, ದನವನ್ನು ಪಕ್ಕದ ತೋಟದಲ್ಲಿ ಕಟ್ಟಿ ಪರಾರಿ ಆಗಿದ್ದಾರೆ. ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಕಡಬ ಆಸ್ಪತ್ರೆಗೆ ರವಾನಿಸಿದರು.

ರಸ್ತೆ ತಡೆದು ಪ್ರತಿಭಟನೆ

ಇನ್ನೂ ಕಡಬ ಆಸ್ಪತ್ರೆಯ ಬಳಿ ಮೃತ ಕುಟುಂಬಸ್ಥರು ಬೃಹತ್ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಎಸ್‌ಪಿ ಬರಬೇಕು ಎಂದು ಪಟ್ಟು ಹಿಡಿದರು. ಮಂಗಳೂರು ಕುಕ್ಕೆ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ರಸ್ತೆ ತಡೆ ಹಿಡಿದರು. ಹಿಂದು ಸಂಘಟನೆಗಳು ಕಡಬ ಆಸ್ಪತ್ರೆ ಬಳಿ ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸಾಥ್‌ ನೀಡಿದರು. ಪ್ರತಿಭಟನಾ ಸ್ಥಳಕ್ಕಾಗಮಿಸಿದ ಎಸ್‌ಪಿ ರಿಷ್ಯಂತ್, ಭಾನುವಾರ ಸಂಜೆಯೊಳಗೆ ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿದರು. ಭರವಸೆ ಬಳಿಕ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ವಾಪಸ್‌ ಪಡೆಯಲಾಯಿತು.

ಇದನ್ನೂ ಓದಿ: Heart Attack : ಶ್ರೀಶೈಲ ಪಾದಯಾತ್ರೆ ವೇಳೆ ನಿಂತು ಹೋಯ್ತು ಯುವಕನ ಹೃದಯದ ಬಡಿತ

Road Accident : ಹೆಡ್‌ ಕಾನ್ಸ್‌ಟೇಬಲ್‌ ಪ್ರಾಣ ತೆಗೆದ ರೋಡ್‌ ಹಂಪ್‌; ಕಾರು ಅಪಘಾತದಲ್ಲಿ ಚಾಲಕ ಸಾವು

ಹಾಸನ: ರೋಡ್‌ ಹಂಪ್‌ ಇರುವುದು ಗೊತ್ತಾಗದೆ ಬೈಕ್‌ನಿಂದ ಹಾರಿ ಬಿದ್ದು (Road Accident) ಹೆಡ್‌ ಕಾನ್ಸ್‌ಟೇಬಲ್‌ (Head Constable) ದಾರುಣವಾಗಿ ಮೃತಪಟ್ಟಿದ್ದಾರೆ. ಹಾಸನ (Hasana News) ಜಿಲ್ಲೆಯ ಅರಕಲಗೂಡು ತಾಲೂಕಿನ ಜೋಡಿಗುಬ್ಬಿ ಕ್ರಾಸ್ ಬಳಿ ಘಟನೆ ನಡೆದಿದೆ. ವೆಂಕಟೇಶ್ (55) ಮೃತ ದುರ್ದೈವಿ.

ಕೊಣನೂರು ಪೊಲೀಸ್ ಠಾಣೆಯಲ್ಲಿ ಹೆಡ್‌ ಕಾನ್ಸ್‌ಟೇಬಲ್ ಆಗಿದ್ದ ವೆಂಕಟೇಶ್ ಅವರು ಸಮನ್ಸ್ ನೀಡಿ ಬೈಕ್‌ನಲ್ಲಿ ಪೊಲೀಸ್ ಠಾಣೆಗೆ ವಾಪಾಸ್ಸಾಗುತ್ತಿದ್ದರು. ಜೋಡಿಗುಬ್ಬಿ ಕ್ರಾಸ್‌ನಲ್ಲಿ ಹಂಪ್ಸ್‌ ಕಾಣದೆ ಆಯತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ತಲೆಗೆ ತೀವ್ರ ಪೆಟ್ಟಾಗಿದೆ. ಗಂಭೀರ ಗಾಯಗೊಂಡಿದ್ದ ವೆಂಕಟೇಶ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ. ಅರಕಲಗೂಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Gold Rate Today: ಸತತ ಏರಿಕೆ ಬಳಿಕ ಚಿನ್ನದ ದರ ಯಥಾಸ್ಥಿತಿ; ಇಷ್ಟಿದೆ ಇಂದಿನ ಬೆಲೆ

ಕಾರು-ಲಾರಿ ನಡುವೆ ಅಪಘಾತ; ವ್ಯಕ್ತಿ ಸಾವು

ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ವ್ಯಕ್ತಿಯೊರ್ವ ಮೃತಪಟ್ಟಿದ್ದಾರೆ. ಚಿತ್ರದುರ್ಗ ತಾಲೂಕಿನ ಕೆ. ಬಳ್ಳಕಟ್ಟೆಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಘಟನೆ ನಡೆದಿದೆ.

ಕಾರು ಚಾಲಕನ ಅತಿ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ವೇಗವಾಗಿ ಹೋಗಿ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ರಭಸಕ್ಕೆ ಚಾಲಕ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಎಲ್ಲರೂ ತಮಿಳುನಾಡು ಮೂಲದವರು ಎಂಬ ಲಭ್ಯವಾಗಿದೆ. ಗಾಯಾಳುಗಳನ್ನು ಚಿತ್ರದುರ್ಗ, ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿವೈಡರ್‌ಗೆ ಕಾರು ಡಿಕ್ಕಿ; ಉರುಳಿ ಬಿತ್ತು ವಿದ್ಯುತ್‌ ಕಂಬ

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಉರುಳಿ ಬಿದ್ದಿದೆ. ಉತ್ತರಕನ್ನಡ ಜಿಲ್ಲೆಯ ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ಮಿರ್ಜಾನ ಬಳಿ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಜಖಂ ಆಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರಿನಲ್ಲಿ ಅಂಕೋಲಾದಿಂದ ಕುಮಟಾದತ್ತ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸ್ಥಳೀಯರು ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version