Award Ceremony : ಭಾವಿ ಪತ್ರಕರ್ತರು ಪರಿಷ್ಕರಣೆಗೊಳಗಾಗಲಿ; ಸ್ಪೀಕರ್ ಯು.ಟಿ ಖಾದರ್ ಸಲಹೆ - Vistara News

ದಕ್ಷಿಣ ಕನ್ನಡ

Award Ceremony : ಭಾವಿ ಪತ್ರಕರ್ತರು ಪರಿಷ್ಕರಣೆಗೊಳಗಾಗಲಿ; ಸ್ಪೀಕರ್ ಯು.ಟಿ ಖಾದರ್ ಸಲಹೆ

ಮೀಡಿಯಾ ಅಸೋಸಿಯೇಷನ್ ಆಫ್ ಮಂಗಳ ಗಂಗೋತ್ರಿ (ಮಾಮ್- ಮಂಗಳೂರು ವಿವಿ ಪತ್ರಿಕೋದ್ಯಮ ವಿಭಾಗದ ಹಳೆ ವಿದ್ಯಾರ್ಥಿಗಳ ಸಂಘಟನೆ) ವತಿಯಿಂದ, ಕರ್ನಾಟಕ ಮಹಿಳಾ ಯಕ್ಷಗಾನ (ರಿ) ಬೆಂಗಳೂರು ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಮಾಮ್ ಇನ್‌ಸ್ಪೈರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಭಿಪ್ರಾಯ.

VISTARANEWS.COM


on

mangalore university students
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪತ್ರಿಕೋದ್ಯಮ ಸಮಾಜದಲ್ಲಿ ಅತ್ಯಂತ ಗೌರವಾನ್ವಿತ ಕ್ಷೇತ್ರ. ಇಲ್ಲಿಗೆ ಬರುವ ಹೊಸಬರನ್ನು ಪರಿಷ್ಕರಣೆಗೊಳಪಡಿಸುವ ನಿಟ್ಟಿನಲ್ಲಿ ‘ಮಾಮ್’ ಸಂಸ್ಥೆ ತೊಡಗಿಕೊಳ್ಳಲಿ ಎಂದು ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಮೀಡಿಯಾ ಅಸೋಸಿಯೇಷನ್ ಆಫ್ ಮಂಗಳ ಗಂಗೋತ್ರಿ (ಮಾಮ್- ಮಂಗಳೂರು ವಿವಿ ಪತ್ರಿಕೋದ್ಯಮ ವಿಭಾಗದ ಹಳೆ ವಿದ್ಯಾರ್ಥಿಗಳ ಸಂಘಟನೆ) ವತಿಯಿಂದ, ಕರ್ನಾಟಕ ಮಹಿಳಾ ಯಕ್ಷಗಾನ (ರಿ) ಬೆಂಗಳೂರು ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಮಾಮ್ ಇನ್‌ಸ್ಪೈರ್ ಪ್ರಶಸ್ತಿ ಪ್ರದಾನ ಸಮಾರಂಭ (Award Ceremony) ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದ ಬೆಳವಣಿಗೆಯಲ್ಲಿ ಪತ್ರಿಕಾ ಕ್ಷೇತ್ರ ಮತ್ತು ಮಾಧ್ಯಮ ತನ್ನದೇ ಆದ ವಿಶಿಷ್ಟ ಸೇವೆಯನ್ನು ಸಲ್ಲಿಸುತ್ತಿದೆ. 24 ವರ್ಷಗಳ ಹಿಂದೆ ತಮ್ಮ ಮುಂದಿನ ಪೀಳಿಗೆಯ ವಿದ್ಯಾರ್ಥಿಗಳಿಗೆ ಆಸರೆಯಾಗಬೇಕೆಂಬ ದೂರದೃಷ್ಟಿ ಇಟ್ಟುಕೊಂಡು ಬೆಳೆದು ಬಂದ ಮಾದರಿ ಸಂಘಟನೆ ‘ಮಾಮ್’. ಇಲ್ಲಿ ವಿದ್ಯಾರ್ಥಿಗಳಿಗೆ ನೀಡಿದ ಪ್ರಶಸ್ತಿ ಅವರ ಸಾಧನೆಗೆ ಒಂದು ಗರಿ. ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ “ಮಾಮ್” ಕಾರ್ಯಕ್ರಮಗಳಿಗೆ 30 ಸಾವಿರ ರೂಪಾಯಿ ನೆರವು ನೀಡುವುದಾಗಿ ಘೋಷಿಸಿದರು.

ಮುಖ್ಯ ಅತಿಥಿ ಕನ್ನಡಪ್ರಭ- ಏಷ್ಯಾನೆಟ್ ಸುವರ್ಣ ನ್ಯೂಸ್ ಪ್ರಧಾನ ಸಂಪಾದಕ ರವಿ ಹೆಗಡೆ ಮಾತನಾಡಿ, ಇಂದಿನ ಮಾಧ್ಯಮ ಕ್ಷೇತ್ರದಲ್ಲಿ ಸ್ಫೂರ್ತಿದಾಯಕ ಅಂಶಗಳು ಕಡಿಮೆಯಾಗುತ್ತಿವೆ. ಒಂದುಕಡೆ ವಿಪರೀತ ವ್ಯಾಪಾರೀಕರಣ, ಮತ್ತೊಂದು ಕಡೆಗೆ ಸೈದ್ಧಾಂತಿಕ ಬದ್ಧತೆ ಉಳಿಸಿಕೊಳ್ಳುವ ಸವಾಲು ಇದೆ. ಕೆಲವು ಸಾಮಾಜಿಕ ಜಾಲತಾಣಗಳಿಂದ ಬರುವ ಸುಳ್ಳು ಸುದ್ದಿ ಮತ್ತು ಬೇಡದ ವಿಚಾರಗಳ ವೈಭವೀಕರಣದಿಂದ ಮಾಧ್ಯಮ ಕ್ಷೇತ್ರ ಇಕ್ಕಟ್ಟಿನಲ್ಲಿದೆ. ಮಾಧ್ಯಮ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಹೊಸ ಪರಂಪರೆಯನ್ನು ಹುಟ್ಟುಹಾಕುತ್ತಿದೆ. ಅದರಿಂದ ಪತ್ರಕರ್ತ ಬರೀ ಕೆಲಸ ಕಳೆದುಕೊಳ್ಳುವುದು ಮಾತ್ರವಲ್ಲ, ಪತ್ರಕರ್ತನ ಕ್ರಿಯಾಶೀಲತೆ, ಬರೆಯುವ ಶಕ್ತಿ, ಬುದ್ಧಿಮತ್ತೆಯನ್ನು, ಸ್ಮರಣಾ ಸಾಮರ್ಥ್ಯವನ್ನು ತಂತ್ರಜ್ಞಾನ ಕಿತ್ತುಕೊಳ್ಳುತ್ತಿದೆ. ಆದರೆ, ಅದು ಆಗದೇ ಇರುವ ರೀತಿಯಲ್ಲಿ ನಮ್ಮ ಕಾರ್ಯಪಡೆ ಮತ್ತು ಶಿಕ್ಷಣವನ್ನು ರೂಪಿಸಬೇಕಾಗಿದೆ ಎಂದರು.

ಯೂನಿವರ್ಸಲ್ ಸಮೂಹ ಸಂಸ್ಥೆಗಳ ಮುಖ್ಯಸ್ಥ ಆರ್. ಉಪೇಂದ್ರ ಶೆಟ್ಟಿ ವಿವಿ ಪತ್ರಿಕೋದ್ಯಮ ಅಧ್ಯಯನದ ದಿನಗಳನ್ನು ನೆನಪಿಸಿಕೊಂಡರು.

ಇದನ್ನೂ ಓದಿ : P.S. Sreedharan Pillai : ಗೋವಾ ರಾಜ್ಯಪಾಲರ ಕಥಾ ಸಂಕಲನದ ಕನ್ನಡ ಅನುವಾದ ಬಿಡುಗಡೆ

ಮಾಮ್‌ನ ಗೌರವಾಧ್ಯಕ್ಷ ವೇಣು ಶರ್ಮಾ ಮಾತನಾಡಿ, “ಕೆಲವು ಸಮಾನ ಮನಸ್ಕರೆಲ್ಲ ಸೇರಿಕೊಂಡು ಮಾಮ್ ಸಂಸ್ಥೆಯನ್ನು ಕಟ್ಟಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಎಲ್ಲ ರೀತಿಯ ಸಹಾಯವನ್ನು ಮಾಡುತ್ತ, 24 ವರ್ಷಗಳನ್ನು ಮುಗಿಸಿದೆ. ಮುಂದಿನ ವರ್ಷ ಅತೀ ದೊಡ್ಡ ಕಾರ್ಯಕ್ರಮವನ್ನು ಮಾಡುವ ಸಂಕಲ್ಪ ಹೊಂದಿದ್ದೇವೆ” ಎಂದರು.

ಕೆ.ಆರ್.ಪುರ ಕಾಲೇಜಿನ ಪ್ರಾಂಶುಪಾಲರಾದ ಪ್ರತಿಭಾ ಪಾರ್ಶ್ವನಾಥ್ ಅವರು ಮಾತನಾಡಿ, ಮಾಮ್ ಸಂಸ್ಥೆ ಬರೀ ಮಂಗಳೂರು ವಿಶ್ವವಿದ್ಯಾನಿಲಯಕ್ಕಷ್ಟೇ ಸೀಮಿತವಾಗಿರದೇ ಕರ್ನಾಟಕದ ಎಲ್ಲ ಕಾಲೇಜು, ವಿದ್ಯಾಸಂಸ್ಥೆಗಳನ್ನು ಒಳಗೊಂಡು ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಸಲಹೆ ಮಾಡಿದರು.

ಕರ್ನಾಟಕ ಕಲಾದರ್ಶಿನಿ ನಿರ್ದೇಶಕ ಶ್ರೀನಿವಾಸ್ ಸಾಸ್ತಾನ ಉಪಸ್ಥಿತರಿದ್ದರು. ಮಾಮ್ ಅಧ್ಯಕ್ಷ ನವೀನ್ ಅಮ್ಮೆಂಬಳ ಅಧ್ಯಕ್ಷತೆ ವಹಿಸಿದ್ದರು. ನವಿತಾ ಜೈನ್ ಕರ‍್ಯಕ್ರಮ ನಿರೂಪಿಸಿದರು. ಶರತ್ ಹೆಗ್ಡೆ ವಂದಿಸಿದರು.

ಪ್ರಶಸ್ತಿ ವಿಜೇತರು
2020-21 ನೇ ಸಾಲಿನ ಪದವಿಪೂರ್ವ

 1. ರಶ್ಮಿ ಯಾದವ್ (ಎಸ್‌ಡಿಎಂ ಕಾಲೇಜು ಉಜಿರೆ)
 2. ಯಕ್ಷಿತಾ (ಆಳ್ವಾಸ್ ಕಾಲೇಜು ಮೂಡಬಿದಿರೆ)
 3. .ಶಾಮ ಪ್ರಸಾದ್ (ಎಸ್‌ಡಿಎಂ ಉಜಿರೆ)
 4. ಪ್ರೋತ್ಸಾಹಕ ಬಹುಮಾನ ನವ್ಯಶ್ರೀ ಶೆಟ್ಟಿ, ಎಂಜಿಎಂ ಕಾಲೇಜು ಉಡುಪಿ

2020-21ನೇ ಸಾಲಿನ ಸ್ನಾತಕೋತ್ತರ

 1. ಚೈತ್ರಾ (ಎಸ್‌ಡಿಎಂ ಕಾಲೇಜು ಉಜಿರೆ)
 2. ಸ್ವಸ್ತಿಕ್ ಕನ್ಯಾಡಿ (ಎಸ್‌ಡಿಎಂ ಕಾಲೇಜು ಉಜಿರೆ)
 3. ಇಂದೂಧರ ಹಳೆಯಂಗಡಿ(ಆಳ್ವಾಸ್ ಕಾಲೇಜು ಮೂಡಬಿದಿರೆ)
 4. ನಳಿನಿ (ಆಳ್ವಾಸ್ ಕಾಲೇಜು ಮೂಡಬಿದಿರೆ)
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕೋರ್ಟ್

Soujanya Case : ಸೌಜನ್ಯ ಸಾವಿನ ಮರುತನಿಖೆಗೆ ತಂದೆ ಮನವಿ; ಸರ್ಕಾರ, ಸಿಬಿಐಗೆ ಕೋರ್ಟ್‌ ನೋಟಿಸ್‌

Soujanya Case : ಧರ್ಮಸ್ಥಳದ ಸೌಜನ್ಯ ಕೊಲೆ ಮತ್ತು ಅತ್ಯಾಚಾರದ ಕೇಸ್‌ಗೆ ಸಂಬಂಧಿಸಿ ಸಿಬಿಐ ಮರು ತನಿಖೆಗೆ ಮನವಿ ಮಾಡಲಾಗಿದೆ. ಈ ಸಂಬಂಧ ಕೋರ್ಟ್‌ ಸರ್ಕಾರ ಹಾಗೂ ಕೇಂದ್ರೀಯ ತನಿಖಾ ಸಂಸ್ಥೆಗೆ ನೋಟಿಸ್‌ ನೀಡಿದೆ.

VISTARANEWS.COM


on

Soujanya Case High Court
Koo

ಬೆಂಗಳೂರು: ಧರ್ಮಸ್ಥಳದಲ್ಲಿ 11 ವರ್ಷದ ಹಿಂದೆ ನಡೆದ ಸೌಜನ್ಯ ಎಂಬ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ (Soujanya Case) ಮರು ತನಿಖೆ ಕೋರಿ ಆಕೆಯ ತಂದೆ ರಾಜ್ಯ ಹೈಕೋರ್ಟ್‌ಗೆ (Karnataka High court) ಅರ್ಜಿ ಸಲ್ಲಿಸಿದ್ದಾರೆ. ಇದನ್ನು ಆಧರಿಸಿ ಹೈಕೋರ್ಟ್‌ ರಾಜ್ಯ ಸರ್ಕಾರ (Karnataka Government) ಮತ್ತು ಸಿಬಿಐಗೆ ನೋಟಿಸ್‌ ಜಾರಿ (Notice to CBI) ಮಾಡಿದೆ. 2012ರ ಅಕ್ಟೋಬರ್‌ 9ರಂದು ನಡೆದ ಈ ಘಟನೆಯಲ್ಲಿ ಆರೋಪಿ ಎಂದು ಬಂಧಿತನಾದ ಸಂತೋಷ್‌ ರಾವ್‌ಗೆ (Accused Santhosh Rao) ಸಿಬಿಐ ಕ್ಲೀನ್‌ ಚಿಟ್‌ ನೀಡಲಾಗಿತ್ತು. ಹಾಗಿದ್ದರೆ ಕೊಲೆಗಾರ ಯಾರು ಎನ್ನುವ ಪ್ರಶ್ನೆ ಗಾಢವಾಗಿ ಕಾಡುತ್ತಿದ್ದು, ಅದನ್ನು ಪತ್ತೆ ಹಚ್ಚಲು ಮರು ತನಿಖೆಯಾಗಲಿ ಎಂಬ ಬೇಡಿಕೆ ಜೋರಾಗಿ ಕೇಳಿಬಂದಿತ್ತು. ಅದರಂತೆ ಯುವತಿ ತಂದೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ‌ ಸೌಜನ್ಯ ಅವರ ತಂದೆ ಚಂದಪ್ಪ ಗೌಡ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೆ ನಟರಾಜನ್‌ ಅವರ ನೇತೃತ್ವದ ಏಕಸದಸ್ಯ ಪೀಠ ನಡೆಸಿತು.

ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನಂತರ ಪ್ರತಿವಾದಿಗಳಾಗಿರುವ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರು, ಸಿಐಡಿ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರು, ಅಪರಾಧ ಮತ್ತು ತಾಂತ್ರಿಕ ಸೇವಗಳ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರು, ದಕ್ಷಿಣ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ, ಸಿಐಡಿ ಉಪ ಪೊಲೀಸ್‌ ವರಿಷ್ಠಾಧಿಕಾರಿ, ಬೆಳ್ತಂಗಡಿ ಪೊಲೀಸ್‌ ಠಾಣಾಧಿಕಾರಿ ಮತ್ತು ಸಿಬಿಐಗೆ ಪೀಠವು ನೋಟಿಸ್‌ ಜಾರಿಗೊಳಿಸಿದೆ.

Soujanya Case Santhosh Rao

ಪ್ರಕರಣದಿಂದ ಆರೋಪಿ ಸಂತೋಷ್‌ ರಾವ್‌ ಅನ್ನು ಖುಲಾಸೆಗೊಳಿಸಿ ವಿಚಾರಣಾಧೀನ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್‌ ಮೇಲ್ಮನವಿಯು ಇದೇ ನ್ಯಾಯಾಲಯದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಾಕಿಯಿದೆ. ಮೇಲ್ಮನವಿಯೊಂದಿಗೆ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಬೇಕು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಇದನ್ನು ಪರಿಗಣಿಸಿರುವ ಪೀಠವು ರೋಸ್ಟರ್‌ ಪ್ರಕಾರ ಸೂಕ್ತ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲು ಮುಖ್ಯ ನ್ಯಾಯಮೂರ್ತಿಗಳಿಂದ ಅನುಮತಿ ಪಡೆಯುವಂತೆ ರಿಜಿಸ್ಟ್ರಿಗೆ ನಿರ್ದೇಶಿಸಿದೆ.

ಪ್ರಕರಣದಿಂದ ಖುಲಾಸೆಯಾಗಿರುವ ಸಂತೋಷ್‌ ರಾವ್‌ ಅನ್ನು ಸಹ ಪ್ರಕರಣದಲ್ಲಿ ಪ್ರತಿವಾದಿ ಮಾಡಲಾಗಿದೆ.

ಇದನ್ನೂ ಓದಿ : Soujanya Case : ಸೌಜನ್ಯ ಕೊಲೆ ಪ್ರಕರಣ; ಸಂತೋಷ್‌ ರಾವ್‌ ಖುಲಾಸೆ ಪ್ರಶ್ನಿಸಿ ಸಿಬಿಐ ಮೇಲ್ಮನವಿ

Soujanya Case : ಏನಿದು ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣ?

 1. 2012ರ ಅಕ್ಟೋಬರ್‌ 9ರಂದು ಸೌಜನ್ಯಳನ್ನು ಅಪಹರಿಸಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.
 2. ಬೆಳ್ತಂಗಡಿ ಠಾಣಾ ಪೊಲೀಸರು ಒಂದೆರಡು ದಿನದಲ್ಲಿ ಸಂತೋಷ್‌ ರಾವ್‌ ಎಂಬಾತನೇ ಕೊಲೆಗಾರ ಎಂದು ಹೇಳಿ ಬಂಧಿಸಿದ್ದರು. ನಂತರ ಪ್ರಕರಣದ ತನಿಖೆಯನ್ನು ಸಿಐಡಿ, ಆ ಬಳಿಕ ಸಿಬಿಐಗೆ ವರ್ಗಾಯಿಸಲಾಗಿತ್ತು.
 3. ಸಿಬಿಐ ತನಿಖೆ ಪೂರ್ಣಗೊಳಿಸಿ ಸಂತೋಷ್‌ ರಾವ್‌ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿತ್ತು. ವಿಶೇಷ ನ್ಯಾಯಾಲಯವು ಸೂಕ್ತ ಸಾಕ್ಷ್ಯಧಾರಗಳಿಲ್ಲ ಎಂದು ಸಂತೋಷ್‌ ರಾವ್‌ ಅವರನ್ನು ಖುಲಾಸೆಗೊಳಿಸಿ 2023ರ ಜೂನ್‌ 16ರಂದು ಆದೇಶಿಸಿತ್ತು.
 4. ಆ ಆದೇಶದಲ್ಲಿ ಪ್ರಾಸಿಕ್ಯೂಷನ್‌ (ತನಿಖಾಧಿಕಾರಿಗಳು) ಈ ಅಪರಾಧ ಕೃತ್ಯದಲ್ಲಿ ಆರೋಪಿಯ ಪಾತ್ರ ಇರುವುದನ್ನು ಮತ್ತು ಆತನ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸುವಲ್ಲಿ ವಿಫಲವಾಗಿತ್ತು.
 5. ಗೋಲ್ಡನ್‌ ಅವರ್‌ನಲ್ಲಿ ತನಿಖೆಯನ್ನು (ಪ್ರಕರಣ ಘಟಿಸಿದ ಅಲ್ಪ ಅವಧಿಯಲ್ಲಿಯೇ ನಡೆಸುವ ಮಾಹಿತಿ, ಸಾಕ್ಷ್ಯ ಸಂಗ್ರಹ) ಸಮರ್ಪಕವಾಗಿ ಮಾಡಿಲ್ಲ ಎಂದು ಸಿಬಿಐ ತನ್ನ ವರದಿಯಲ್ಲಿ ಸ್ಪಷ್ಟವಾಗಿ ಹೇಳಿದೆ.
 6. ಇದು ಸಂತೋಷ್‌ ರಾವ್‌ ಮಾಡಿದ ಕೊಲೆಯಲ್ಲ, ಯಾರೋ ಪ್ರಭಾವಿಗಳು ಮಾಡಿ ಸಂತೋಷ್‌ ರಾವ್‌ ತಲೆಗೆ ಕಟ್ಟಲಾಗಿದೆ ಎಂಬ ಆರೋಪಗಳು ಜೋರಾಗಿವೆ.
 7. ಸಂತೋಷ್‌ ರಾವ್‌ ಖುಲಾಸೆ ಆಗಿದ್ದರೆ ನಿಜವಾದ ಆರೋಪಿ ಯಾರು ಎನ್ನುವ ಬಗ್ಗೆ ತನಿಖೆಯಾಗಬೇಕು ಎಂಬ ಬೇಡಿಕೆಯೂ ಇದೆ.
 8. ತನಿಖೆ ನ್ಯಾಯೋಚಿತವಾಗಿ ನಡೆದಿಲ್ಲ ಎಂಬುದು ಸ್ಪಷ್ಟವಾಗಿರುವ ಕಾರಣ ಮರು ತನಿಖೆ ನಡೆಸಲು ಆದೇಶಿಸಬೇಕು ಎನ್ನುವುದು ತಂದೆಯ ಮನವಿಯಾಗಿತ್ತು.
Continue Reading

ಮಳೆ

Karnataka Weather : ಈ ನಾಲ್ಕು ಜಿಲ್ಲೆಗಳಲ್ಲಿ 35 ಡಿಗ್ರಿ ಸೆಲ್ಸಿಯಸ್‌ಗೂ ಹೆಚ್ಚು ತಾಪಮಾನ! ಹೀಗುಂಟು ಬೆಂಗಳೂರು ಹವಾಮಾನ

Karnataka Weather : ಬೆಂಗಳೂರು ನಗರದ ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಫೆಬ್ರವರಿ 22ರಿಂದ 26ರವರೆಗೆ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್‌ ಇರಲಿದ್ದರೆ, ಗರಿಷ್ಠ ಉಷ್ಣಾಂಶ 32 – 33 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಹೀಗಾಗಿ ಬೆಂಗಳೂರಿನಲ್ಲಿ ತಂಪಿನ ವಾತಾವರಣ ಈಗ ಮರೀಚಿಕೆಯಾಗಿದೆ.

VISTARANEWS.COM


on

Sun Stroke with girls
Koo

ಬೆಂಗಳೂರು: ರಾಜ್ಯದಲ್ಲಿ ನಿಧಾನವಾಗಿ ಬಿಸಿಲು ತನ್ನ ಪ್ರಭಾವವನ್ನು ಹೆಚ್ಚಳ ಮಾಡಿಕೊಳ್ಳುತ್ತಿದೆ. ಗುರುವಾರ ಮತ್ತು ಶುಕ್ರವಾರ ಗರಿಷ್ಠ ತಾಪಮಾನದಲ್ಲಿ ಏರಿಕೆ ಇರಲಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮತ್ತು ಹೊನ್ನಾವರ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹಾಗೂ ಕಲಬುರಗಿ, ಬೆಳಗಾವಿಯಲ್ಲಿ 35 ಡಿಗ್ರಿ ಸೆಲ್ಸಿಯಸ್‌ಗೂ ಹೆಚ್ಚು ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Karnataka Weather Forecast) ಉಲ್ಲೇಖಿಸಿದೆ.

ಹೀಗಾಗಿ ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಒಣ ಹವೆ (Dry Weather) ಇರಲಿದೆ. ಜತೆಗೆ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ 2 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರಲ್ಲಿ ಬಿಸಿಲು ಜಾಸ್ತಿ

ಬೆಂಗಳೂರು ನಗರದ ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಫೆಬ್ರವರಿ 22ರಿಂದ 26ರವರೆಗೆ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್‌ ಇರಲಿದ್ದರೆ, ಗರಿಷ್ಠ ಉಷ್ಣಾಂಶ 32 – 33 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಹೀಗಾಗಿ ಬೆಂಗಳೂರಿನಲ್ಲಿ ತಂಪಿನ ವಾತಾವರಣ ಈಗ ಮರೀಚಿಕೆಯಾಗಿದೆ.

ಮಲೆನಾಡಲ್ಲಿ ಭಾರಿ ಸೆಕೆ

ಮಲೆನಾಡು ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಇರಲಿದೆ. ಶಿವಮೊಗ್ಗದಲ್ಲಿ ಫೆ. 21ರಿಂದ 28ರವರೆಗಿನ ವಾತಾವರಣವನ್ನು ನೋಡುವುದಾದರೆ, ಗರಿಷ್ಠ ಉಷ್ಣಾಂಶದಲ್ಲಿ ಏರಿಕೆ ಕಾಣಲಿದೆ. ಅಲ್ಲಿ 33 ಡಿಗ್ರಿ ಸೆಲ್ಸಿಯಸ್‌ನಿಂದ 36 ಡಿಗ್ರಿ ಸೆಲ್ಸಿಯಸ್‌ವರೆಗೆ ಇರಲಿದೆ, ಚಿಕ್ಕಮಗಳೂರು, ಹಾಸನ, ಕೊಡುಗು ಜಿಲ್ಲೆಯಲ್ಲಿ ಉಷ್ಣಾಂಶದಲ್ಲಿ ಏರಿಕೆಯಾಗಲಿದೆ ಎಂದು ಅಂದಾಜಿಸಲಾಗಿದೆ. ‌

ಕರಾವಳಿಗೆ ಬಿಸಿಲಿನ ಬಳುವಳಿ

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆಕೆ ಹೆಚ್ಚಾಗಿ ಇರಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚು ಇರಲಿದೆ.

ದಕ್ಷಿಣ ಒಳನಾಡಿನ ವಾತಾವರಣ ಹೇಗಿರಲಿದೆ?

ದಕ್ಷಿಣ ಒಳನಾಡಿನಲ್ಲಿಯೂ ಬಿಸಿಲಿನ ಪ್ರಮಾಣ ಹೆಚ್ಚಾಗಿ ಇರಲಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಮೈಸೂರು, ಮಂಡ್ಯ, ಕೋಲಾರ, ರಾಮನಗರ, ವಿಜಯನಗರ, ಚಾಮರಾಜನಗರ, ತುಮಕೂರು, ಚಿತ್ರದುರ್ಗದ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಿರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹೀಗಾಗಿ ಇಲ್ಲೆಲ್ಲ ಮೈಸುಡುವ ಬಿಸಿಲು ಇರಲಿದ್ದು, ಮನೆಯಲ್ಲಿದ್ದರೂ ಜನ ಬೆವರು ಸುರಿಸುವ ಪರಿಸ್ಥಿತಿ ತಲೆದೋರಲಿದೆ.

ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನ 2 ಡಿಗ್ರಿ ಸೆಲ್ಸಿಯಸ್‌ ಹೆಚ್ಚಳ

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ: Love marriage : ಅಂತರ್ಜಾತಿ ವಿವಾಹಕ್ಕೆ ಅಡ್ಡಿ; ಮಗಳನ್ನು ಧರಧರನೇ ಎಳೆದೊಯ್ದ ಪೋಷಕರು

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 33 ಡಿ.ಸೆ -19 ಡಿ.ಸೆ
ಮಂಗಳೂರು: 35 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 34 ಡಿ.ಸೆ – 20 ಡಿ.ಸೆ
ಗದಗ: 34 ಡಿ.ಸೆ – 18 ಡಿ.ಸೆ
ಹೊನ್ನಾವರ: 33 ಡಿ.ಸೆ- 21 ಡಿ.ಸೆ
ಕಲಬುರಗಿ: 37 ಡಿ.ಸೆ – 22 ಡಿ.ಸೆ
ಬೆಳಗಾವಿ: 35 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 21 ಡಿ.ಸೆ

Continue Reading

ಸ್ಯಾಂಡಲ್ ವುಡ್

Karavali Movie : ಕರಾವಳಿಗೆ ಕಾಲಿಟ್ಟ ಪ್ರಜ್ವಲ್‌; ಗಜಗಾತ್ರದ ಕೋಣವೂ ಸಿನಿಮಾದ ಸ್ಪೆಷಲ್‌!

Karavali Movie : ಪ್ರಜ್ವಲ್‌ ದೇವರಾಜ್‌ ನಾಯಕರಾಗಿ ನಟಿಸುತ್ತಿರುವ ಕರಾವಳಿ ಸಿನಿಮಾದ ಮುಹೂರ್ತ ನಡೆದಿದೆ. ಕರಾವಳಿ ಕಂಬಳದ ದೈತ್ಯದೇಹಿ ಕೋಣವೂ ಈ ಸಿನಿಮಾದಲ್ಲಿರುವುದು ಸ್ಪೆಷಲ್‌.

VISTARANEWS.COM


on

Karavali Movie Prajwal Devaraj kambala
Koo

ಬೆಂಗಳೂರು: ಕರಾವಳಿ (Karavali Movie)-ಇದು ಈಗಾಗಲೇ ಭಾರಿ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಸಿನಿಮಾ. ಗುರುದತ್ ಗಾಣಿಗ (Gurudath Ganiga) ನಿರ್ದೇಶನದ ಅವರದೇ ಗಾಣಿಗ ಫಿಲ್ಮ್ಸ್‌ ಹಾಗೂ ವಿಕೆ ಫಿಲ್ಮ್‌ ಅಸೋಸಿಯೇಷನ್‌ನಲ್ಲಿ ನಿರ್ಮಾ಼ಣವಾಗುತ್ತಿರುವ ಚಿತ್ರ. ಪ್ರಜ್ವಲ್ ದೇವರಾಜ್ (Prajwal Devaraj) ನಾಯಕನಾಗಿ ನಟಿಸುತ್ತಿರುವ ಈ ಸಿನಿಮಾ ಈಗಾಗಲೇ ಪೋಸ್ಟರ್ ಮತ್ತು ಟೀಸರ್ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಇದೀಗ ಚಿತ್ರತಂಡ ಅಧಿಕೃತವಾಗಿ ಮೂಹೂರ್ತ ಮಾಡುವ ಮೂಲಕ ಶೂಟಿಂಗ್ ಗೆ ಹೊರಡಲು ಸಿದ್ಧವಾಗಿದೆ.

ಬೆಂಗಳೂರಿನ ಪ್ರಸಿದ್ಧ ಬುಲ್ ಟೆಂಪಲ್ ನಲ್ಲಿ ಚಿತ್ರದ ಮುಹೂರ್ತ ಅದ್ದೂರಿಯಾಗಿ ನೆರವೇರಿದೆ. ಮುಹೂರ್ತ ಸಮಾರಂಭದಲ್ಲಿ ಇಡೀ ಸಿನಿಮಾ ತಂಡ ಹಾಜರಾಗಿತ್ತು. ಜೊತೆಗೆ ಹಿರಿಯ ನಟ ದೇವರಾಜ್ (Actor Devaraj) ದಂಪತಿ ಸೇರಿದಂತೆ ಪ್ರಜ್ವಲ್ ದೇವರಾಜ್ ಅವರ ಫ್ಯಾಮಿಲಿ ಕೂಡ ಭಾಗಿಯಾಗಿತ್ತು. ಇನ್ನು ವಿಶೇಷ ಎಂದರೆ ಎಡಿಜಿಪಿ ಅನುಚೇತ್‌ ಅವರು ಭಾಗಿಯಾಗಿ ಸಿನಿಮಾ ತಂಡಕ್ಕೆ ಶುಭ ಹಾರೈಸಿದರು. ನಿರ್ಮಾಪಕ ಜಾಕ್ ಮಂಜು ಕ್ಲಾಪ್ ಮಾಡುವ ಮೂಲಕ ಚಿತ್ರತಂಡಕ್ಕೆ ಆಲ್ ದಿ ಬೆಸ್ಟ್ ಹೇಳಿದರು. ಡೈನಾಮಿಕ್ ದೇವರಾಜ್ ಕ್ಯಾಮೆರಾ ಸ್ವಿಚ್ ಆನ್ ಮಾಡಿದರು.

Karavali-Movie-Prajwal-Devaraj
ನಿರ್ದೇಶಕ ಗುರುದತ್ತ ಗಾಣಿಗ, ಪ್ರಜ್ವಲ್‌ ದೇವರಾಜ್‌, ನಾಯಕಿ ಸಂಪದಾ

ಇದನ್ನೂ ಓದಿ : Aadujeevitham Movie : ಆಡು ಜೀವಿತಂ‌ ನಿರೀಕ್ಷೆಗೂ ಮೊದಲೇ ತೆರೆಗೆ; ರಿಲೀಸ್‌ ಡೇಟ್‌ ಫಿಕ್ಸ್‌

ಮುಹೂರ್ತದ ಹೈಲೈಟ್ಸ್ ಎಂದರೆ ಕೋಣ (Buffalo of Kambala). ಕರಾವಳಿ ಚಿತ್ರದ ಫಸ್ಟ್ ಲುಕ್ ನಲ್ಲಿ ಕಾಣಿಸಿಕೊಂಡಿರುವ ಕೋಣ ಪತ್ರಿಕಾಗೋಷ್ಠಿಗೂ ಹಾಜರಾಗಿದ್ದು ವಿಶೇಷವಾಗಿತ್ತು. ಗಜಗಾತ್ರದ ಕೋಣವನ್ನು ನೋಡಿದವರೆಲ್ಲಾ ಆಶ್ಚರ್ಯ ಪಟ್ಟಿದ್ದೆ ಹೆಚ್ಚು. ಇನ್ನು ಮಾಧ್ಯಮದ ಮುಂದೆ ಹಾಜರಾಗಿದ್ದ ಸಿನಿಮಾ ತಂಡ ಚಿತ್ರದ ಬಗ್ಗೆ ಒಂದಿಷ್ಟು ಮಾಹಿತಿಯನ್ನು ಹಂಚಿಕೊಂಡರು.

ಮನುಷ್ಯ-ಪ್ರಾಣಿಯ ನಡುವಿನ ಸಂಘರ್ಷದ ಕಥೆ

ನಿರ್ದೇಶಕ ಮತ್ತು ನಿರ್ಮಾಪಕ ಗುರುದತ್ ಗಾಣಿಗ ಮಾತನಾಡಿ, ‘ಇದು ಮನುಷ್ಯ ಹಾಗೂ ಪ್ರಾಣಿಯ ಮಧ್ಯೆ ನಡೆಯುವ ಸಂಘರ್ಷದ ಕಥೆ. ಇದು ಹಳ್ಳಿಯ ಕಥೆ. ಚಿತ್ರದಲ್ಲಿ ಕಂಬಳವೂ ಒಂದು ಪಾತ್ರವಾಗಿ ಹರಿಯಲಿದೆ’ ಎಂದು ಹೇಳಿದರು. ಮತ್ತು ಪ್ರಾಣಿಗಳ ಜೊತೆ ಕೆಲಸ ಮಾಡುವುದು ಎಷ್ಟು ಕಷ್ಟ, ಹೇಗೆ ಕೆಲಸ ಮಾಡಬೇಕು, ಚಿತ್ರೀಕರಣಕ್ಕೆ ಏನೆಲ್ಲಾ ತಯಾರಿ ಮಾಡಿಕೊಂಡಿದ್ದೇವೆ ಎನ್ನುವುದನ್ನು ಸಹ ಅವರು ತಿಳಿಸಿದರು.

Karavali Movie Prajwal Devaraj and others

ಕೋಣ ನೋಡೋಕೆ ಭಯವಾಗುತ್ತದೆ, ಆದರೆ ಸಾಫ್ಟ್‌ ಎಂದ ಪ್ರಜ್ವಲ್‌

ನಟ ಪ್ರಜ್ವಲ್ ದೇವರಾಜ್ ಮಾತನಾಡಿ ಕೋಣದ ಜೊತೆಗಿನ ಶೂಟಿಂಗ್ ಅನುಭವ ಬಿಚ್ಚಿಟ್ಟರು. ‘ಕೋಣ ನೋಡೋಕೆ ಮಾತ್ರ ಭಯ ಆದರೆ ತುಂಬಾ ಸಾಫ್ಟ್ ಆಗಿದೆ. ಕನ್ನಡ ಸಿನಿಮಾರಂಗ ಬೆಳೆಯುತ್ತಿದೆ. ಕರಾವಳಿ ಸಿನಿಮಾದ ಟೀಸರ್ ನೋಡಿ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಕಥೆ ತುಂಬಾ ಚೆನ್ನಾಗಿದೆ. ನನಗೆ ತುಂಬಾ ಇಷ್ಟವಾಗಿದೆ. ನನ್ನ ಫ್ಯಾನ್ಸ್‌ಗೆ ಖುಷಿಯಾಗುವ ಹಾಗೆ ನಾನು ಸಿನಿಮಾಗಳನ್ನು ಮಾಡುತ್ತೇನೆ. ಕರಾವಳಿ ಸಿನಿಮಾ ಕೂಡ ನನ್ನ ಫ್ಯಾನ್ಸಿಗೆ ತುಂಬಾ ಇಷ್ಟ ಆಗುತ್ತೆ. ಇದು ನನ್ನ 40ನೇ ಸಿನಿಮಾ ಎನ್ನುವುದು ವಿಶೇಷ’ ಎಂದರು.

ಇನ್ನು ಮಗನ ಸಿನಿಮಾ ಮುಹೂರ್ತಕ್ಕೆ ಆಗಮಿಸಿದ ಡೈನಾಮಿಕ್ ಸ್ಟಾರ್ ದೇವರಾಜ್ ಮಾತನಾಡಿ, ಇಡೀ ತಂಡಕ್ಕೆ ಶುಭ ಹಾರೈಸುವ ಜೊತೆಗೆ ‘ಕರಾವಳಿ ನನ್ನ ಮಗನ ಕರಿಯರ್ ನಲ್ಲೇ ಬೆಸ್ಟ್ ಸಿನಿಮಾ ಆಗಲಿದೆ. ಎಲ್ಲೇ ಹೋದರೂ ಕರಾವಳಿ ಚಿತ್ರದ ಬಗ್ಗೆ ಕೇಳುತ್ತಾರೆ’ ಎಂದರು.

Karavali Movie Prajwal Devaraj muhoorta

ಪಶುವೈದ್ಯೆ ಪಾತ್ರವೇ ನಾಯಕಿ, ಸಂಪದಾ ಇಲ್ಲಿ ಹೀರೋಯಿನ್‌

ಇನ್ನು ಕರಾವಳಿ ಸಿನಿಮಾಗೆ ನಾಯಕಿಯಾಗಿ ಸಂಪದಾ ಆಯ್ಕೆ ಆಗಿದ್ದಾರೆ. ಈಗಾಗಲೇ ಬೆಂಕಿ ಹಾಗೂ ರೈಡರ್ ಸಿನಿಮಾಗಳಲ್ಲಿ ಕಾಣಿಸೊಂಡಿದ್ದ ಸಂಪದಾ ಇದೀಗ ಕರಾವಳಿ ಸಿನಿಮಾದಲ್ಲಿ ಮಿಂಚಲಿದ್ದಾರೆ. ಚಿತ್ರದ ಬಗ್ಗೆಸ ಸಖತ್ ಎಕ್ಸಾಯಿಟ್ ಆಗಿರುವ ಸಂಪದಾ ಪಶುವೈದ್ಯೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಇನ್ನು ಕರಾವಳಿ ಸಿನಿಮಾಗೆ ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್ ಇದೆ, ಸಚಿನ್ ಬಸ್ರೂರು ಸಂಗೀತವಿದೆ. ವಿಶೇಷ ಎಂದರೆ ನಟ ಮಿತ್ರ ಕರಾವಳಿ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ. ಈ ಟಿವಿ ಶ್ರೀಧರ್, ಜಿ ಜಿ, ನಿರಂಜನ್ ಇನ್ನು ಹಲವು ಪ್ರಖ್ಯಾತ ಕಲಾವಿದರು ಕರಾವಳಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಸದ್ಯ ಮುಹೂರ್ತ ಮುಗಿಸಿರೋ ಸಿನಿಮಾತಂಡ ಇದೇ ತಿಂಗಳು 23ರಿಂದ ಕರಾವಳಿ ಭಾಗದಲ್ಲಿ ಚಿತ್ರೀಕರಣ ಶುರು ಮಾಡಲಿದೆ.

Continue Reading

ಕರ್ನಾಟಕ

Mangalore News: ಸಂತ ಜೆರೊಸಾ ಶಾಲೆ ಘಟನೆ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಶಿಕ್ಷಕಿ ವಜಾ

Mangalore News: ಮಂಗಳೂರಿನ ತೊಕ್ಕೊಟ್ಟುವಿನ ಸಂತ ಸೆಬಾಸ್ಟಿಯನ್ ಶಾಲೆಯ ಶಿಕ್ಷಕಿಯನ್ನು ವಜಾ ಮಾಡಲಾಗಿದೆ.

VISTARANEWS.COM


on

St Sebastians School teacher sacked
Koo

ಮಂಗಳೂರು: ಸಂತ ಜೆರೊಸಾ ಶಾಲೆಯ ಘಟನೆ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಶಿಕ್ಷಕಿಯನ್ನು ವಜಾ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ತೊಕ್ಕೊಟ್ಟುವಿನ ಸಂತ ಸೆಬಾಸ್ಟಿಯನ್ ಶಾಲೆಯ ಶಿಕ್ಷಕಿಯನ್ನು ಶಾಲಾ ಆಡಳಿತ ಮಂಡಳಿ ವಜಾ ಮಾಡಿದೆ.

ಹಿಂದು ಧರ್ಮ ಹಾಗೂ ಶ್ರೀರಾಮನ ಅವಹೇಳನ ಮಾಡಿದ್ದ ಸಂತ ಜೆರೊಸಾ ಶಾಲೆ ಶಿಕ್ಷಕಿ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬಂದಿದ್ದರಿಂದ ಇತ್ತೀಚೆಗೆ ಅವರನ್ನು ಅಮಾನತು ಮಾಡಲಾಗಿತ್ತು. ಈ ಘಟನೆ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರಿಂದ ಇದೀಗ, ಸಂತ ಸೆಬಾಸ್ಟಿಯನ್ ಶಾಲೆಯ ಶಿಕ್ಷಕಿ ಕವಿತಾ ಎಂಬುವವರನ್ನು ವಜಾಗೊಳಿಸಲಾಗಿದೆ.

ಕವಿತಾ ಅವರ ಮಗಳು ಸಂತ ಜೆರೊಸಾ ಶಾಲೆಯ ವಿದ್ಯಾರ್ಥಿನಿ. ಫೆ.10ರಂದು ಡಿಡಿಪಿಐ ಕಚೇರಿಗೆ ಬಂದಿದ್ದ ಶಿಕ್ಷಕಿ ಕವಿತಾ, ಘಟನೆ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ್ದರು. ಅವರು ಮಾತನಾಡಿದ ವಿಡಿಯೊ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಅಷ್ಟಕ್ಕೇ ಶಿಕ್ಷಕಿ ಹುದ್ದೆಯಿಂದಲೇ ಕವಿತಾರನ್ನು ಆಡಳಿತ ಮಂಡಳಿ ವಜಾಗೊಳಿಸಿರುವ ಆರೋಪ ಕೇಳಿಬಂದಿದೆ.

ಇದನ್ನೂ ಓದಿ | Mangalore Issue : ಶಿಕ್ಷಕಿ ಪ್ರಕರಣಕ್ಕೆ ಟ್ವಿಸ್ಟ್‌; ಬಿಜೆಪಿ ಶಾಸಕರ ಮೇಲೆ ಜೆರೋಸಾ ಶಾಲೆ ಚಾರ್ಜ್‌ಶೀಟ್‌

ಶಿಕ್ಷಕಿಗೆ ಬೆದರಿಕೆ ಕರೆ

ತೊಕ್ಕೊಟ್ಟುವಿನ ಸಂತ ಸೆಬಾಸ್ಟಿಯನ್ ಶಾಲೆಯಲ್ಲಿ ಕವಿತಾ ಪ್ರಾಥಮಿಕ ತರಗತಿ ಶಿಕ್ಷಕಿಯಾಗಿದ್ದಾರೆ. ನಿಮ್ಮ ಸೇವೆ ಇನ್ನು ಅಗತ್ಯ ಇಲ್ಲ ಎಂದು ಅವರಿಗೆ ಶಾಲೆಯಿಂದ ಗೇಟ್ ಪಾಸ್ ನೀಡಲಾಗಿದೆ. ಆ ಬಳಿಕ ಕವಿತಾ ಅವರ ಮೊಬೈಲ್‌ಗೆ ವಿದೇಶದಿಂದ ನಿರಂತರ ಬೆದರಿಕೆ ಕರೆಗಳು ಬಂದಿದ್ದು, ಅವ್ಯಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ. ಈ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಗೆ ಶಿಕ್ಷಕಿ ದೂರು ನೀಡಿದ್ದಾರೆ.

Continue Reading
Advertisement
Sringeri Jagadguru inaugurates Shivashakti Dhama at Palikoppa in Hubballi
ಧಾರವಾಡ23 mins ago

Shivshakti Dhama: ಹುಬ್ಬಳ್ಳಿಯ ಪಾಲಿಕೊಪ್ಪದಲ್ಲಿ ಶೃಂಗೇರಿ ಜಗದ್ಗುರುಗಳಿಂದ ಶಿವಶಕ್ತಿ ಧಾಮ ಲೋಕಾರ್ಪಣೆ

Tax on temples and money used for other community Fictitious accusation Says CM Siddaramaiah
ದೇಶ36 mins ago

ದೇಗುಲಗಳಿಗೆ ತೆರಿಗೆ, ಅನ್ಯಧರ್ಮೀಯರಿಗೆ ಹಣ ಬಳಕೆ ಕಪೋಲಕಲ್ಪಿತ ಆರೋಪ; ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು!

Nitin Gadkari highways
ಬೆಂಗಳೂರು1 hour ago

Nitin Gadkari : ಪೆಟ್ರೋಲ್‌ ಬೆಲೆ ಶೀಘ್ರವೇ 50 ರೂ.ಗೆ ಇಳಿಯಲಿದೆ ಎಂದ ನಿತಿನ್‌ ಗಡ್ಕರಿ

BJP hits out at Rahul Gandhi for insulting Actor aishwarya rai bachchan
ದೇಶ1 hour ago

Rahul Gandhi: ಐಶ್ವರ್ಯಾ ರೈರನ್ನು ಅವಮಾನಿಸಿದ ರಾಹುಲ್‌ ಗಾಂಧಿಗೆ ಬಿಜೆಪಿ ತರಾಟೆ

INDIA Alliance partners Congress and AAP Seal seat deal for Goa, Haryana, Gujarat
ದೇಶ2 hours ago

INDIA Alliance: ದಿಲ್ಲಿ ಬಳಿಕ ಗೋವಾ, ಹರ್ಯಾಣ, ಗುಜರಾತ್‌ನಲ್ಲೂ ಕಾಂಗ್ರೆಸ್-ಆಪ್ ಸೀಟು ಹಂಚಿಕೆ ಫೈನಲ್!

Aryaman Ashok Shankar
ಚಾಮರಾಜನಗರ2 hours ago

Social Sevice : ಶ್ರವಣದೋಷವುಳ್ಳ ಮಕ್ಕಳ ಕೇಂದ್ರಕ್ಕೆ ಕ್ರೀಡಾಪರಿಕರಗಳ ವಿತರಣೆ

ರಾಜಕೀಯ2 hours ago

Karnataka Budget Session 2024: ಈ ಸರ್ಕಾರದಿಂದ ಹಿಂದೂಗಳಿಗೆ ದ್ರೋಹ: ಆರ್‌. ಅಶೋಕ್‌

Mudda Hanumegowda joins Congress
ತುಮಕೂರು2 hours ago

Mudda hanumegowda : ಕೆಲವರ ಅತೃಪ್ತಿ ನಡುವೆ ಮತ್ತೆ ಕೈ ಸೇರಿದ ಮುದ್ದಹನುಮೇಗೌಡ

D. hiremath foundation
ಉತ್ತರ ಕನ್ನಡ2 hours ago

Arun Yogiraj : ರಾಮಲಲ್ಲಾ ವಿಗ್ರಹ ಕೆತ್ತಿದ ಅರುಣ್​ ಯೋಗಿರಾಜ್​ಗೆ ‘ಅಭಿನವ ಅಮರ ಶಿಲ್ಪಿ’ ಪುರಸ್ಕಾರ

For Registration Movie Telugu Dubbing Rights sold for huge amount
ಸಿನಿಮಾ2 hours ago

For Registration Movie: ರಿಲೀಸ್‌ಗೂ ಮೊದ್ಲೇ ’ಫಾರ್ ರಿಜಿಸ್ಟ್ರೇಷನ್’ಗೆ ಡಿಮ್ಯಾಂಡ್! ತೆಲುಗಿಗೂ ಹೊರಟ ಪೃಥ್ವಿ-ಮಿಲನಾ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ4 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ4 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Catton Candy contain cancer Will there be a ban in Karnataka
ಬೆಂಗಳೂರು5 hours ago

cotton candy Ban : ಕರ್ನಾಟಕದಲ್ಲಿ ಬ್ಯಾನ್‌ ಆಗುತ್ತಾ ಬಾಂಬೆ ಮಿಠಾಯಿ; ಕ್ಯಾನ್ಸರ್​​ ಕಾರಕ ವಿಷ ಪತ್ತೆ!

Swarnavalli Mutt appoints successor ceremony
ಕರ್ನಾಟಕ8 hours ago

Swarnavalli Mutt: ಸ್ವರ್ಣವಲ್ಲೀ ಶ್ರೀಗಳ ಶಿಷ್ಯ ಸ್ವೀಕಾರ ಸಂಪನ್ನ; ಇಲ್ಲಿದೆ ಲೈವ್‌ ವಿಡಿಯೊ

read your daily horoscope predictions for february 21 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಸಂಗಾತಿಯ ವರ್ತನೆಯು ಕೋಪ, ಮುಜುಗರವನ್ನುಂಟು ಮಾಡುತ್ತೆ!

read your daily horoscope predictions for february 20 2024
ಭವಿಷ್ಯ3 days ago

Dina Bhavishya : ಈ ದಿನ ಆತುರದಲ್ಲಿ ಈ ರಾಶಿಯವರು ಯಾವ ತೀರ್ಮಾನವನ್ನು ಮಾಡ್ಬೇಡಿ!

read your daily horoscope predictions for february 19 2024
ಭವಿಷ್ಯ4 days ago

Dina Bhavishya : ನಿಮ್ಮನ್ನು ದ್ವೇಷಿಸುವವರೇ ಸ್ನೇಹಿತರಾಗಿ ಬದಲಾಗುತ್ತಾರೆ

read your daily horoscope predictions for february 18 2024
ಭವಿಷ್ಯ5 days ago

Dina Bhavishya : ಈ ರಾಶಿಯವರು ಇಂದು ನೀರಿನಂತೆ ಹಣವನ್ನು ಖರ್ಚು ಮಾಡ್ತಾರೆ

Challenging Darsha
ಪ್ರಮುಖ ಸುದ್ದಿ5 days ago

Actor Darshan : ಚಾಲೆಂಜಿಂಗ್ ಸ್ಟಾರ್​ ದರ್ಶನ್​ ‘ಬೆಳ್ಳಿ ಪರ್ವ’ ಕಾರ್ಯಕ್ರಮದ ಲೈವ್​ ಇಲ್ಲಿ ವೀಕ್ಷಿಸಿ

Children lock up their mother for property
ಕರ್ನಾಟಕ5 days ago

Inhuman Behaviour : ಆಸ್ತಿಗಾಗಿ ಹೆತ್ತ ತಾಯಿಯನ್ನೇ ಗೃಹ ಬಂಧನದಲ್ಲಿಟ್ಟರು ಮಕ್ಕಳು!

read your daily horoscope predictions for february 17 2024
ಭವಿಷ್ಯ6 days ago

Dina Bhavishya : ಈ ರಾಶಿಯವರು ಸೀಕ್ರೆಟ್‌ ವಿಷ್ಯವನ್ನು ರಿವೀಲ್‌ ಮಾಡಿದ್ರೆ ಅಪಾಯ ಗ್ಯಾರಂಟಿ!

Karnataka Budget Session 2024 siddaramaiah use cinema Lines
ಸಿನಿಮಾ6 days ago

Karnataka Budget Session 2024: ಡಾಲಿ ಧನಂಜಯ್‌ ಬರೆದ ಸಾಲುಗಳು ಬಜೆಟ್‌ನಲ್ಲಿ ಹೈಲೈಟ್‌!

ಟ್ರೆಂಡಿಂಗ್‌