ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರ ಟ್ರಸ್ಟ್‌ನ (Sri Rama Vidya Kendra) ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕೋತ್ಸವ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಾಲಾ ವಿದ್ಯಾರ್ಥಿಗಳ ವೈವಿಧ್ಯಮಯ ಸಾಂಸ್ಕೃತಿಕ ಕಲಾ ಕೌಶಲ ಕಂಡು ಬೆರಗಾದರು.
ಕಂದಾಯ ಸಚಿವರಾದ ಆರ್. ಅಶೋಕ್, ಕನ್ನಡ, ಸಂಸ್ಕೃತಿ ಮತ್ತು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್, ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಸಚಿವರಾದ ಮುನಿರತ್ನ, ಶಾಸಕರಾದ ರಾಜೇಶ್ ನಾಯ್ಕ್, ಶ್ರೀ ರಾಮ ವಿದ್ಯಾಕೇಂದ್ರದ ಮುಖ್ಯಸ್ಥ ಕಲ್ಲಡ್ಕ ಪ್ರಭಾಕರ್ ಭಟ್, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಸೇರಿ ಇತರೆ ಅಧಿಕಾರಿಗಳಿದ್ದರು.
ಇದನ್ನೂ ಓದಿ | Bahuroopi Rangotsava | ರಂಗಾಯಣದಲ್ಲಿ ಒಂದೇ ಸಿದ್ಧಾಂತವಾದಿಗಳ ಆರ್ಭಟ: ಅಡ್ಡಂಡ ಸಿ.ಕಾರ್ಯಪ್ಪ