ಮಂಗಳೂರು: ಪರೀಕ್ಷೆ (Exam) ಮುಗಿಸಿ ಖುಷಿಯಿಂದ ಈಜಲೆಂದು (Swimming) ನದಿಗೆ ಹೋಗಿ ನಾಪತ್ತೆಯಾಗಿದ್ದ ನಾಲ್ಕು ಮಕ್ಕಳ ಶವಗಳು (Students Drowned) ಪತ್ತೆಯಾಗಿವೆ. ಈ ಮಕ್ಕಳು ಮಂಗಳೂರಿನ (Mangalore news) ಸುರತ್ಕಲ್‌ನ ವಿದ್ಯಾದಾಯಿನಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಾಗಿದ್ದು, ಮಕ್ಕಳ ಪೋಷಕರ ರೋದನ ಮುಗಿಲು ಮುಟ್ಟಿದೆ.
ನದಿಯಲ್ಲಿ ಈಜಾಡಲು ತೆರಳಿ ದಾರುಣವಾಗಿ ಸಾವಿಗೀಡಾಗಿದ್ದಾರೆ (Students death) ಎಂದು ಶಂಕಿಸಲಾಗಿದೆ. ನಿನ್ನೆ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಸಿದ್ಧತಾ ಪರೀಕ್ಷೆ (SSLC preparatory exam) ಬರೆದು ಮುಗಿಸಿದ್ದ ವಿದ್ಯಾರ್ಥಿಗಳು ಮನೆಗೆ ತೆರಳದೇ ನಾಪತ್ತೆಯಾಗಿದ್ದರು. ಮಕ್ಕಳ ಪೋಷಕರು ಮತ್ತು ಪೊಲೀಸರು ಮಕ್ಕಳಿಗಾಗಿ ಹುಡುಕಾಟ ನಡೆಸಿದ್ದರು. ಪರೀಕ್ಷೆ ಒತ್ತಡದಿಂದ ಮಕ್ಕಳು ಓಡಿಹೋಗಿರಬಹುದು ಎಂದು ಮೊದಲು ಶಂಕಿಸಲಾಗಿತ್ತು.
ಹಳೆಯಂಗಡಿ ರೈಲ್ವೇ ಸೇತುವೆ ಕೆಳಭಾಗದಲ್ಲಿ ವಿದ್ಯಾರ್ಥಿಗಳ ಶಾಲಾ ಬ್ಯಾಗ್‌ಗಳು ಹಾಗೂ ಸಮವಸ್ತ್ರ ಪತ್ತೆಯಾಗಿದ್ದವು. ನದಿಯಲ್ಲಿ ಹುಡುಕಾಟ ನಡೆಸಿದಾಗ ನಾಲ್ವರು ವಿದ್ಯಾರ್ಥಿಗಳ ಶವ ಪತ್ತೆಯಾಗಿವೆ. ಸುರತ್ಕಲ್ ಅಗರಮೇಲ್ ನಿವಾಸಿ ಚಂದ್ರಕಾಂತ ಅವರ ಮಗ ಯಶ್ವಿತ್ (15), ಹಳೆಯಂಗಡಿ ತೋಕೂರು ನಿವಾಸಿ ವಸಂತ ಅವರ ಪುತ್ರ ರಾಘವೇಂದ್ರ (15), ಸುರತ್ಕಲ್ ಗೊಡ್ಡೆಕೊಪ್ಲ ನಿವಾಸಿ ವಿಶ್ವನಾಥ ಅವರ ಮಗ ನಿರೂಪ(15), ಚಿತ್ರಾಪುರ ನಿವಾಸಿ ದೇವದಾಸ ಅವರ ಪುತ್ರ ಅನ್ವಿತ್ (15) ಸಾವಿಗೀಡಾದ ಮಕ್ಕಳು.
ಮಕ್ಕಳು ನೇರವಾಗಿ ಶಾಲೆಯಿಂದ ಹಳೆಯಂಗಡಿ ನದಿಗೆ ಈಜಾಡಲು ಬಂದಿರುವ ಶಂಕೆ ಇದೆ. ಒಬ್ಬ ಮುಳುಗತೊಡಗಿದಾಗ ರಕ್ಷಿಸಲು ಹೋದ ಉಳಿದವರು ಮುಳುಗಿ ಸತ್ತಿರಬಹುದು ಎಂದು ಶಂಕಿಸಲಾಗಿದೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಲಬಾಧೆಗೆ ಗುತ್ತಿಗೆದಾರ ಆತ್ಮಹತ್ಯೆ
ಕಾರವಾರ: ಸಾಲಬಾಧೆಯಿಂದ ನೊಂದ ಗುತ್ತಿಗೆದಾರರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಗಸೂರು ಗ್ರಾಮದಲ್ಲಿ ದುರ್ಘಟನೆ ನಡೆದಿದೆ.
ಬಾಲಚಂದ್ರ ನಾಯ್ಕ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ. ಪ್ರಥಮ ದರ್ಜೆ ಗುತ್ತಿಗೆದಾರನಾಗಿದ್ದ ಬಾಲಚಂದ್ರ ನಾಯ್ಕ ತೋಟದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲದಿಂದ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ. ಅಂಕೋಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ: Mangalore News: ಪಣಂಬೂರು ಬೀಚ್‌ನಲ್ಲಿ ಸ್ನಾನಕ್ಕೆ ತೆರಳಿದ್ದ ಬಾಲಕ ನಾಪತ್ತೆ