ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್‌ ಪೂಂಜಾಗೆ ಕೊಲೆ ಬೆದರಿಕೆ: ದೂರು ದಾಖಲು - Vistara News

ದಕ್ಷಿಣ ಕನ್ನಡ

ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್‌ ಪೂಂಜಾಗೆ ಕೊಲೆ ಬೆದರಿಕೆ: ದೂರು ದಾಖಲು

ಶಾಸಕರು ಪ್ರಯಾಣಿಸುತ್ತಿದ್ದ ಕಾರಿನ ಚಾಲಕನನ್ನು ನೋಡಿದ ದುಷ್ಕರ್ಮಿಗಳು, ಕತ್ತಿಯನ್ನು ಝಳಪಿಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ತೆರಳಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

VISTARANEWS.COM


on

harish poonja 1
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್‌ ಪೂಂಜಾಗೆ ಕೊಲೆ ಬೆದರಿಕೆ ಒಡ್ಡಿರುವ ಘಟನೆ ನಡೆದಿದ್ದು, ಈ ಕುರಿತು ಪೊಲೀಸ್‌ ದೂರು ದಾಖಲಾಗಿದೆ.

ಪರಂಗಿಪೇಟೆಯ ಸಮೀಪ ಕಾರಿನಲ್ಲಿ ಆಗಮಿಸಿದ ದುಷ್ಕರ್ಮಿಗಳು ತಲ್ವಾರ್‌ ಝಳಪಿಸಿ ಬೆದರಿಕೆ ಒಡ್ಡಿರುವುದಾಗಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಹರೀಶ್‌ ಪೂಂಜಾ ಕಾರು ಚಾಲಕ ನವೀನ್‌ ದೂರು ದಾಖಲಿಸಿದ್ದಾರೆ.

ಶಾಸಕ ಹರೀಶ್‌ ಪೂಂಜಾ ಅವರು ಬುಧವಾರ ಬೆಂಗಳೂರಿಗೆ ಹೋಗಿದ್ದು, ಗುರುವಾರ ಸಂಜೆ 6.20ರ ವಿಮಾನದಲ್ಲಿ ಮಂಗಳೂರಿಗೆ ಬಂದರು. ವಿಮಾನ ನಿಲ್ದಾಣದಿಂದ ಶಾಸಕರನ್ನು ಕರೆದುಕೊಂಡು ಬರಲಾಯಿತು, ಮಂಗಳೂರು ಸರ್ಕೂಟ್‌ ಹೌಸ್‌ಗೆ ಹೋಗಿ ಅಲ್ಲಿ ಮೀಟಿಂಗ್‌ನಲ್ಲಿ ಭಾಗವಹಿಸಿದರು.

ಬಳಿಕ ರಾತ್ರಿ 10.45 ಗಂಟೆಗೆ ಮಂಗಳೂರು ಸರ್ಕೂಟ್‌ ಹೌಸ್‌ನಿಂದ ತನ್ನ ಸಂಬಂಧಿಕರಾದ ಪ್ರಶಾಂತ್‌ ಕಾರಿನಲ್ಲಿ ಪೂಂಜಾ ಹೊರಟಿದ್ದಾರೆ. ಈ ವೇಳೆ ಸಮೀಪಕ್ಕೆ ಆಗಮಿಸಿದ ಸ್ಕಾರ್ಪಿಯೋ ಕಾರು ಶಾಸಕರ ಕಾರಿನ ಬಳಿ ಬಂದಿದೆ. ಶಾಸಕ ಆ ಕಾರಿನಲ್ಲಿ ಇರಲಿಲ್ಲವಾದ್ಧರಿಂದ, ಮುಂದೆ ಶಾಸಕರು ತೆರಳುತ್ತಿದ್ದ ಕಾರಿನ ಬಳಿ ತೆರಳಿದ್ದಾರೆ.

ಶಾಸಕರು ಪ್ರಯಾಣಿಸುತ್ತಿದ್ದ ಕಾರಿನ ಚಾಲಕನನ್ನು ನೋಡಿದ ದುಷ್ಕರ್ಮಿಗಳು, ಕತ್ತಿಯನ್ನು ಝಳಪಿಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ತೆರಳಿದ್ದಾರೆ. ಜೀವಬೆದರಿಕೆ ಒಡ್ಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನವೀನ್‌ ದೂರಿನಲ್ಲಿ ತಿಳಿಸಿದ್ದಾರೆ.

ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಅಕ್ರಮವಾಗಿ ವಶಕ್ಕೆ ಪಡೆಯುವಿಕೆ (ಐಪಿಸಿ 341), ಶಾಂತಿಗೆ ಭಂಗ ತರುವಿಕೆ (ಐಪಿಸಿ 504) ಹಾಗೂ ಜೀವ ಬೆದರಿಕೆ (ಐಪಿಸಿ 506) ಆರೋಪದಲ್ಲಿ ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ | ಶಾಸಕ ಹರೀಶ್‌ ಪೂಂಜಾ ಆಡಿದ ಮಾತು ತಿರುಗು ಬಾಣ: ಮನೆಗೆ ಬಂತು ಮುಸ್ಲಿಂ ಟೋಪಿ, ಶಾಲು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Karnataka Weather Forecast : ಮಲೆನಾಡು ಹಾಗೂ ಒಳನಾಡಿನಲ್ಲಿ ಮಳೆಯು (Rain News) ಅಬ್ಬರಿಸುತ್ತಿದೆ. ಬೆಂಗಳೂರು ಸೇರಿದಂತೆ ಚಿಕ್ಕಮಗಳೂರು, ಬಾಗಲಕೋಟೆಯಲ್ಲಿ ಗುರುವಾರ ಮಳೆಯ ಸಿಂಚನವಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೆಲ ದಿನಗಳ ಬಿಡುವು ಕೊಟ್ಟಿದ್ದ ವರುಣ (Rain news) ಗುರುವಾರ ಮಧ್ಯಾಹ್ನದ ವೇಳೆಗೆ ಅಬ್ಬರಿಸಿದ್ದ. ಊಟದ ಸಮಯಕ್ಕೆ ಬಂದ ದಿಢೀರ್‌ ಮಳೆಯಿಂದಾಗಿ (Karnataka Weather Forecast) ಹಲವರು ಬಸ್‌ ನಿಲ್ದಾಣ, ಹೋಟೆಲ್‌, ಅಂಗಡಿ ಮುಂಗಟ್ಟುಗಳ ಆಶ್ರಯ ಪಡೆದಿದ್ದರು.

ಬೆಂಗಳೂರಿನ ರಾಜಾಜಿನಗರ, ಮಲ್ಲೇಶ್ವರ, ಶ್ರೀರಾಂಪುರ, ಓಕಳಿಪುರ ಸೇರಿದಂತೆ ವಿಧಾನಸೌಧ, ಶಿವಾಜಿನಗರ, ಮೆಜೆಸ್ಟಿಕ್‌ ಸುತ್ತಮುತ್ತ ಅರ್ಧ ತಾಸಿಗೂ ಹೆಚ್ಚು ಮಳೆಯಾಗಿತ್ತು. ಬೆಳಗ್ಗೆಯಿಂದಲೇ ನಗರದಲ್ಲಿ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನ ಆಗುತ್ತಿದ್ದಂತೆ ಮಳೆಯು ಆರ್ಭಟಿಸಿತ್ತು.

ಚಿಕ್ಕಮಗಳೂರಲ್ಲಿ ಗಾಳಿ-ಮಳೆ

ಚಿಕ್ಕಮಗಳೂರಲ್ಲಿ ಗಾಳಿ ಸಹಿತ ಮಳೆಯು ಅಬ್ಬರಿಸಿತ್ತು. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಾಳೂರು, ಬಣಕಲ್ ಭಾಗದಲ್ಲಿ ಭಾರೀ ಮಳೆಯಾಗಿದೆ. ಅರ್ಧ ಗಂಟೆಗೂ ಹೆಚ್ಚು ಸಮಯ ಸುರಿದ ಧಾರಾಕಾರ ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಇತ್ತ ಕೊಟ್ಟಿಗೆಹಾರದಲ್ಲಿ ಸರದಿ ಸಾಲಲ್ಲಿ ವಾಹನಗಳು ನಿಂತಿದ್ದವು.

ಬಾಗಲಕೋಟೆಯಲ್ಲೂ ಕೃಪೆ ತೋರಿದ ವರುಣ

ನಾಲ್ಕೈದು ದಿನಗಳಿಂದ ವಿರಾಮ ನೀಡಿದ್ದ ಮಳೆರಾಯ ಬಾಗಲಕೋಟೆಯಲ್ಲಿ ಮಿಂಚಿದ್ದ. ವಿದ್ಯಾಗಿರಿ, ನವನಗರದ‌ ಸೇರಿ ಜಿಲ್ಲೆಯ ಹಲವೆಡೆ ಮಳೆಯಾಗಿತ್ತು. ಬಿತ್ತನೆ ಮಾಡಿ ಮಳೆಗಾಗಿ ಕಾಯುತ್ತಿದ್ದ ರೈತರಲ್ಲಿ ಸಂತಸ ಮೂಡಿತ್ತು. ಹೆಸರು, ಉದ್ದು, ತೊಗರಿ, ಮುಸುಕಿನ ಜೋಳ ಬಿತ್ತನೆ ಮಾಡಿದ್ದ ರೈತರಿಗೆ ಮಳೆಯಿಂದಾಗಿ ಮಂದಹಾಸ ಮೂಡಿದೆ.

ಇದನ್ನೂ ಓದಿ: Mysuru News : ಪತ್ನಿ ಶೀಲ ಶಂಕಿಸಿ ಬೆಂಕಿ ಹಚ್ಚಿ ಸುಟ್ಟು ಹಾಕಿದವನಿಗೆ ಜೀವಾವಧಿ ಶಿಕ್ಷೆ

ಜೂನ್‌ 23ಕ್ಕೆ ಭಯಂಕರ ಮಳೆ!

ಜೂನ್‌ 23ರಂದು ಪ್ರತ್ಯೇಕವಾಗಿ ವಿಪರೀತ ಮಳೆಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಲವಾದ ಗಾಳಿ ಮತ್ತು ಭೂಕುಸಿತದ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ಬಲವಾದ ಗಾಳಿಯಿಂದಾಗಿ ಕರಾವಳಿ ಮತ್ತು ಪಶ್ಚಿಮ ಘಟ್ಟಕ್ಕೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಶುಕ್ರವಾರ ಇಲ್ಲೆಲ್ಲ ಮಳೆ

ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ 30-40 ಕಿ.ಮೀ ವ್ಯಾಪ್ತಿಯಲ್ಲಿ ಬಿರುಗಾಳಿ ಬೀಸಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗುಡುಗು ಮುನ್ನೆಚ್ಚರಿಕೆಯನ್ನು ನೀಡಲಾಗಿದೆ. ಬೆಂಗಳೂರಲ್ಲಿ ಪ್ರಬಲ ಗಾಳಿ ಬೀಸಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ, ಮಲೆನಾಡಿನಲ್ಲಿ ಭರ್ಜರಿ ಮಳೆ

ನೈರುತ್ಯ ಮುಂಗಾರು ಬುಧವಾರ ರಾಜ್ಯದಲ್ಲಿ ದುರ್ಬಲವಾಗಿತ್ತು. ಕರಾವಳಿಯ ಹಲವು ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕೊಟ್ಟಿಗೆಹಾರದಲ್ಲಿ 5 ಸೆಂ.ಮೀ, ಕೋಟ, ಕುಂದಾಪುರ, ಗೇರ್ಸೊಪ್ಪ 4 ಸೆಂ.ಮೀ ಮಳೆಯಾಗಿದೆ. ಧರ್ಮಸ್ಥಳ, ಆಗುಂಬೆ, ಕಮ್ಮರಡಿಯಲ್ಲಿ 3 ಸೆಂ.ಮೀ ಮಳೆಯಾಗಿದೆ.

ಉಳಿದಂತೆ ಕಾರ್ಕಳ, ಕೊಲ್ಲೂರು, ಸಿದ್ದಾಪುರ, ಕಾರವಾರ, ಹೊನ್ನಾವರ, ಬೆಳ್ತಂಗಡಿ, ಮೂಡಿಗೆರೆ, ಶೃಂಗೇರಿ, ಕೃಷ್ಣರಾಜಸಾಗರ ಸೇರಿದಂತೆ, ಭಾಗಮಂಡಲದಲ್ಲಿ 2 ಸೆಂ.ಮೀ ಮಳೆಯಾಗಿದೆ. ತಿಪಟೂರು, ಮಂಕಿ, ಮಂಗಳೂರು , ಅಂಕೋಲಾ, ಪಣಂಬೂರು, ಮಣಿ, ಮೂಲ್ಕಿ, ಉಪ್ಪಿನಂಗಡಿ, ಕೊಪ್ಪ ಹಾಗೂ ಜಯಪುರ, ನಾಪೋಕ್ಲು, ಕಳಸ , ಅಜ್ಜಂಪುರ , ಪೊನ್ನಂಪೇಟೆಯಲ್ಲಿ 1 ಸೆಂ.ಮಿನಷ್ಟು ಮಳೆಯಾಗಿರುವ ವರದಿ ಆಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Murder Case: ಚಿಕ್ಕಮ್ಮನನ್ನು ಕೊಂದು ಕಥೆ ಕಟ್ಟಿದ ಕಾಮುಕ ಬಾಲಕ; ಪರಚಿದ ಗಾಯವೇ ಸಾಕ್ಷಿ ಹೇಳಿತು

Murder Case: ಹೇಮಾವತಿ ಅವರ ಮನೆಯಲ್ಲಿ ಅಂದು ರಾತ್ರಿ ತಂಗಿದ್ದ ಅಕ್ಕನ ಮಗ, ಹತ್ತನೇ ತರಗತಿ ವಿದ್ಯಾರ್ಥಿ, ಹೇಮಾವತಿ ಮಲಗಿದಲ್ಲಿಗೆ ಹೋಗಿ ದೇಹ ಸುಖ ಬಯಸಿದ್ದ. ಇದಕ್ಕೆ ಹೇಮಾವತಿಯವರು ಪ್ರತಿರೋಧ ವ್ಯಕ್ತಪಡಿಸಿದ್ದರೆನ್ನಲಾಗಿದೆ. ಬಳಿಕ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಪೊಲೀಸ್ ತನಿಖೆ ವೇಳೆ ಬಾಲಕ ಬಾಯಿ ಬಿಟ್ಟಿದ್ದಾನೆ.

VISTARANEWS.COM


on

murder case perne putturu
Koo

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪದ ಗ್ರಾಮವೊಂದರಲ್ಲಿ ದೈಹಿಕ ಸುಖ ಬಯಸಿ ಅದನ್ನು ನೀಡದ ಚಿಕ್ಕಮ್ಮನನ್ನು ಉಸಿರುಗಟ್ಟಿಸಿ (suffocate) ಕೊಂದ ಆರೋಪದಲ್ಲಿ (Murder Case) ಅಪ್ರಾಪ್ತ ಬಾಲಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈತ 10ನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ.

ಉಪ್ಪಿನಂಗಡಿಯ ಪೆರ್ನೆ ಗ್ರಾಮದಲ್ಲಿ ಘಟನೆ ನಡೆದಿದೆ. ವಿವಾಹಿತ ಮಹಿಳೆಯೊಬ್ಬರು ರಾತ್ರಿ ಮಲಗಿದ್ದಲ್ಲೇ ಸಾವನ್ನಪ್ಪಿದ್ದರು. ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಭಾನುವಾರ ತಡ ರಾತ್ರಿ ಸಂಶಯಾಸ್ಪದವಾಗಿ ಮೃತಪಟ್ಟಿದ್ದು, ಇದಕ್ಕೆ ಸಂಬಂಧಿಸಿ 10ನೇ ತರಗತಿ ವಿದ್ಯಾರ್ಥಿ ಬಾಲಕನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈತ ತನ್ನ ಚಿಕ್ಕಮ್ಮನ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಹೇಮಾವತಿ ಅವರ ಮನೆಯಲ್ಲಿ ಅಂದು ರಾತ್ರಿ ತಂಗಿದ್ದ ಅಕ್ಕನ ಮಗ, ಹತ್ತನೇ ತರಗತಿ ವಿದ್ಯಾರ್ಥಿ, ಹೇಮಾವತಿ ಮಲಗಿದಲ್ಲಿಗೆ ಹೋಗಿ ದೇಹ ಸುಖ ಬಯಸಿದ್ದ. ಇದಕ್ಕೆ ಹೇಮಾವತಿಯವರು ಪ್ರತಿರೋಧ ವ್ಯಕ್ತಪಡಿಸಿದ್ದರೆನ್ನಲಾಗಿದೆ. ಬಳಿಕ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಪೊಲೀಸ್ ತನಿಖೆ ವೇಳೆ ಬಾಲಕ ಬಾಯಿ ಬಿಟ್ಟಿದ್ದಾನೆ. ಬಾಲಕನ ಮೈ ಮೇಲೆ ಪರಚಿದ ಗಾಯಗಳಿರುವುದನ್ನು ಬಾಲಕನ ತಂದೆಯೇ ಪೊಲೀಸರಿಗೆ ತಿಳಿಸಿದ್ದ ಹಿನ್ನೆಲೆಯಲ್ಲಿ ಬಾಲಕನ ಮೇಲೆ ಪ್ರಾರಂಭಿಕ ಹಂತದಲ್ಲಿಯೇ ಸಂಶಯ ಮೂಡಿತ್ತು. ತನಿಖೆಯ ವೇಳೆ ತಾನು ಈ ಕೃತ್ಯವೆಸಗಿರುವುದು ನಿಜ ಎಂದು ಬಾಲಕ ತಪ್ಪು ಒಪ್ಪಿಕೊಂಡಿರುವುದರಿಂದ ಆತನನ್ನು ಬಂಧನ ಪ್ರಕ್ರಿಯೆಗೆ ಒಳಪಡಿಸಲಾಯಿತು.

ಬಾಲಕ ಮಲಗಿದ್ದ ತನ್ನ ಚಿಕ್ಕಮ್ಮನೊಡನೆ ಲೈಂಗಿಕ ಕ್ರಿಯೆ ಬಯಸಿ ಆಕೆಯನ್ನು ಸ್ಪರ್ಶಿಸಿದ್ದ. ಎಚ್ಚರಗೊಂಡ ಹೇಮಾವತಿ ಆತನ ಕೃತ್ಯಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸುಮ್ಮನೆ ನಿದ್ರಿಸಬೇಕೆಂದು ಗದರಿಸಿದ್ದರು. ನಾಳೆ ತನ್ನ ಕೃತ್ಯವನ್ನು ನೆರೆಹೊರೆಯವರಿಗೆ ತಿಳಿಸಿದರೆ ತಾನು ಅವಮಾನಿತನಾಗುವ ಸಾಧ್ಯತೆ ಇದೆ ಎಂದು ಅಂಜಿಕೆಯಿಂದ ಈ ಬಾಲಕ ಆಕೆಯನ್ನು ಕೊಲ್ಲುವ ನಿರ್ಧಾರ ತಾಳಿದ್ದ. ಸುಮಾರು ಅರ್ಧ ಗಂಟೆಯ ಬಳಿಕ ನಿದ್ರೆಗೆ ಜಾರಿದ್ದ ಚಿಕ್ಕಮ್ಮನ ಕುತ್ತಿಗೆ ಹಿಸುಕಿ ಉಸಿರು ಕಟ್ಟಿಸಿ ಕೊಲೆಗೈದಿದ್ದ. ಚಿಕ್ಕಮ್ಮ ಮೃತಪಟ್ಟಿರುವುದು ದೃಢವಾದೊಡನೆ ಆಕೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ತಾನೇ ಮೊದಲಾಗಿ ತನ್ನ ತಂದೆಗೆ ತಿಳಿಸಿ ಪಾರಾಗಲು ಯತ್ನಿಸಿದ್ದ. ಆದರೆ ಕುತ್ತಿಗೆ ಹಿಸುಕಿದ ವೇಳೆ ಆಕೆ ಪ್ರಾಣ ರಕ್ಷಣೆಗಾಗಿ ಬಾಲಕನಿಗೆ ಪರಚಿದ್ದು, ಈ ಪರಚಿದ ಗಾಯವೇ ಆತನ ವಿರುದ್ಧ ಸಾಕ್ಷಿಯಾಗಿ ಪೊಲೀಸರಿಗೆ ನೆರವಾಗಿದೆ.

ಇದನ್ನೂ ಓದಿ: Viral News: ವಿವಾಹಿತ ಮಹಿಳೆ ಮನೆಯ ಟ್ರಂಕ್‌ನೊಳಗೆ ಸಿಕ್ಕಿಬಿದ್ದ ಪ್ರೇಮಿ! ಮುಂದೇನಾಯ್ತು? ವಿಡಿಯೊ ನೋಡಿ!

Continue Reading

ಮಳೆ

Karnataka Weather : ಭಾರಿ ಮಳೆ ಜತೆಗೆ ಬೀಸಲಿದೆ ಬಿರುಗಾಳಿ; ಕಡಲಿಗಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Weather Forecast : ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆಯೊಂದಿಗೆ (Heavy rain alert) ಬಿರುಗಾಳಿ ಬೀಸಲಿದ್ದು, ಕಡಲಿಗಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ (Fisher Warning) ನೀಡಲಾಗಿದೆ. ಜತೆಗೆ ಮಲೆನಾಡು, ಒಳನಾಡಿನಲ್ಲೂ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು : ರಾಜ್ಯಾದ್ಯಂತ ಬುಧವಾರದಂದು ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಹಗುರದಿಂದ ಕೂಡಿರಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಉತ್ತರ ಒಳನಾಡಿನ ಹಲವೆಡೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇತ್ತ ಮಲೆನಾಡಿನ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲೂ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Wild Animals Attack : ಮನೆಯಂಗಳವನ್ನು ಧ್ವಂಸ ಮಾಡಿದ ಆನೆಗಳು; ಗ್ರಾಮಕ್ಕೆ ಓಡೋಡಿ ಬಂದ ಕರಡಿ

9 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ

ಗುಡುಗು, ಸಿಡಿಲು ಜತೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿ ವೇಗವು 30-40 ಕಿ.ಮೀ ಇರಲಿದೆ. ಹೀಗಾಗಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಮುಖ್ಯವಾಗಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಸೇರಿ ಒಳನಾಡಿನ ಚಿತ್ರದುರ್ಗ, ಮಂಡ್ಯ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕಡಲಿಗೆ ಮೀನುಗಾರರ ದಿಗ್ಬಂಧನ

ಕಡಲ ತೀರದಲ್ಲಿ ಅಲೆಗಳ ಅಬ್ಬರ ಜೋರಾಗಿ ಇರಲಿದ್ದು, ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜೂನ್‌ 21ರವರೆಗೆ ಮೀನುಗಾರರು ಮೀನುಗಾರಿಕೆ ತೆರಳದಂತೆ ಸೂಚಿಸಲಾಗಿದೆ. ಜತೆಗೆ ಪ್ರವಾಸಿಗರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಗುಡುಗು, ಸಿಡಿಲಿನ ಮಳೆಗೆ ಮನೆಯ ಗೋಡೆ ಕುಸಿತ; ನಾಳೆಗೂ ಇದೆ ಅಲರ್ಟ್‌

Karnataka Weather Forecast : ಗುಡುಗು, ಸಿಡಿಲು ಸಹಿತ ಸುರಿದ ಮಳೆಗೆ (Rain News) ಮನೆಯ ಗೋಡೆ ಕುಸಿದಿದ್ದು, ಕುಟುಂಬಸ್ಥರು ಪವಾಡ ಸದೃಶ್ಯದಂತೆ ಪಾರಾಗಿದ್ದಾರೆ. ರಾಜ್ಯದ ಹಲವೆಡೆ ಮಳೆಯಾಗಿರುವ ವರದಿ ಆಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು/ದೊಡ್ಡಬಳ್ಳಾಪುರ: ಸಿಡಿಲು ಬಡಿದು ಮನೆಯ ಗೋಡೆ ಕುಸಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಮುಕ್ಕಡಿಘಟ್ಟ ಗ್ರಾಮದಲ್ಲಿ (Karnataka Weather Forecast) ನಡೆದಿದೆ. ಸೋಮವಾರ ರಾತ್ರಿ ಗುಡುಗು, ಸಿಡಿಲು ಸಹಿತ ಜಡಿ (Rain News) ಮಳೆಯಾಗಿದೆ.

ಈ ವೇಳೆ ಸಿಡಿಲು ಬಡಿದ ಪರಿಣಾಮ ಗೋಡೆ ಕುಸಿತವಾಗಿದೆ. ಗಂಗರಾಜ್ ಎಂಬುವವರಿಗೆ ಸೇರಿದ ಮನೆ ಹಾನಿಯಾಗಿದೆ. ಮನೆಯ ಕುಟುಂಬಸ್ಥರು ಬೇರೆ ಕೋಣೆಯಲ್ಲಿದ್ದ ಕಾರಣ ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೂ ಗೋಡೆ ಕುಸಿದ ಪರಿಣಾಮ ಮನೆಯಲ್ಲಿದ್ದ ವಸ್ತುಗಳು ಜಖಂಗೊಂಡಿವೆ. ದೊಡ್ಡಬಳ್ಳಾಪುರ ಗ್ರಾಮಾಂತರ ‌ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Electric shock : ಮೀನು ಹಿಡಿಯಲು ಹೋದಾಗ ವಿದ್ಯುತ್‌ ಪ್ರವಹಿಸಿ ಬಾಲಕರಿಬ್ಬರು ಮೃತ್ಯು; ಕುಟುಂಬಸ್ಥರ ಆಕ್ರಂದನ

ಚಿಕ್ಕಮಗಳೂರಲ್ಲಿ ಅಬ್ಬರ ಮಳೆ

ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲಿ ಭಾರಿ ಮಳೆಯಾಗಿದ್ದು, 8 ಸೆಂ.ಮೀ ದಾಖಲಾಗಿದೆ. ಧರ್ಮಸ್ಥಳದಲ್ಲಿ 6 ಸೆಂ.ಮೀ, ಕಾರ್ಕಳ , ಕಕ್ಕೇರಿ, ಯಗಟಿಯಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಮಂಗಳೂರು ವಿಮಾನ ನಿಲ್ದಾಣ, ಹೊಸದುರ್ಗ, ಹಾರಂಗಿ, ರಾಯಲ್ಪಾಡು, ಚನ್ನಗಿರಿ, ಕೋಲಾರ, ಎಂಎಂ ಹಿಲ್ಸ್‌ನಲ್ಲಿ 4 ಸೆಂ.ಮೀ ಮಳೆಯಾಗಿದೆ.

ಇನ್ನೂ ಮಣಿ, ಶಿರಾಲಿ, ಬೆಳ್ತಂಗಡಿ, ಕೊಣನೂರಿನಲ್ಲಿ ತಲಾ 3 ಸೆಂ.ಮೀ ಹಾಗೂ ಹೊನ್ನಾವರ, ಪುತ್ತೂರು, ಮಂಗಳೂರು, ತುಮಕೂರು, ಭಾಗಮಂಡಲ, ವಿರಾಜಪೇಟೆ, ಕುಶಾಲನಗರದಲ್ಲಿ ತಲಾ 2 ಸೆಂ.ಮೀನಷ್ಟು ಮಳೆಯಾಗಿದೆ. ಮಂಕಿ, ಪಣಂಬೂರು , ಮೂಲ್ಕಿ, ಉಪ್ಪಿನಂಗಡಿ, ಕುಮಟಾ, ಮಧುಗಿರಿ, ಪರಶುರಾಂಪುರ, ತೊಂಡೇಭಾವಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಕರಾವಳಿ ಭಾಗಕ್ಕೆ ಮಳೆ ಅಲರ್ಟ್‌

ಜೂನ್‌ 19ರಂದು ಕರಾವಳಿ ಭಾಗಕ್ಕೆ ಮಳೆ ಎಚ್ಚರಿಕೆ ನೀಡಲಾಗಿದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಒಳನಾಡಿನಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಲ್ಲಿ ಕೆಲವೊಮ್ಮೆ ಹಗುರದಿಂದ ಕೂಡಿದ ಮಳೆಯಾಗಲಿದೆ. ಗರಿಷ್ಠ 30 ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
CM Siddaramaiah
ಪ್ರಮುಖ ಸುದ್ದಿ3 mins ago

CM Siddaramaiah: ಕರ್ನಾಟಕದಲ್ಲಿ ವಾಸಿಸುತ್ತಿರುವ ಪರ ಭಾಷಿಕರು ಕನ್ನಡ ಕಲಿಯಲೇಬೇಕು: ಸಿದ್ದರಾಮಯ್ಯ

Tumkur DC Shubha Kalyan inaugurated the Janaspandana programme in Koratagere
ತುಮಕೂರು14 mins ago

Koratagere News: ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರಕ್ಕೆ ಜನಸ್ಪಂದನ ಕಾರ್ಯಕ್ರಮ; ಡಿಸಿ ಶುಭ‌ ಕಲ್ಯಾಣ್

Power cut There will be power outage in various parts of Bengaluru on June 22
ಕರ್ನಾಟಕ15 mins ago

Power Cut: ಬೆಂಗಳೂರಿನ ವಿವಿಧ ಕಡೆ ಜೂ. 22ರಂದು ವಿದ್ಯುತ್‌ ವ್ಯತ್ಯಯ

Arvind Kejriwal
ದೇಶ16 mins ago

Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ಬಿಗ್‌ ರಿಲೀಫ್;‌ ಕೊನೆಗೂ ಸಿಕ್ಕಿತು ಜಾಮೀನು

Vijayanagara DC MS Diwakar meeting with officials of various departments
ವಿಜಯನಗರ18 mins ago

Vijayanagara News: ಜೂ. 21ರಂದು ಮುಖ್ಯಮಂತ್ರಿಗಳಿಂದ ಕೆಡಿಪಿ ಸಭೆ; ಡಿಸಿ ಎಂ.ಎಸ್.ದಿವಾಕರ್‌

Action will be taken to ensure that the Anganwadi workers do not suffer in any way says Minister Lakshmi Hebbalkar
ಬೆಂಗಳೂರು23 mins ago

Lakshmi Hebbalkar: ಲಕ್ಷ್ಮೀ ಹೆಬ್ಬಾಳಕರ್ ಭರವಸೆ; ಅಂಗನವಾಡಿ ನೌಕರರ ಮುಷ್ಕರ ವಾಪಸ್‌

Mecca Heatwave Death
ಪ್ರಮುಖ ಸುದ್ದಿ48 mins ago

Mecca Heatwave Death : ಮೆಕ್ಕಾದಲ್ಲಿ ನಿಧನ ಹೊಂದಿದ ಹಜ್​ ಯಾತ್ರಿಗಳಿಗೆ ಅಲ್ಲೇ ಸಂಸ್ಕಾರ; ಹಜ್​ ಕಮಿಟಿ ಮಾಹಿತಿ

CM Siddaramaiah
ಕರ್ನಾಟಕ1 hour ago

CM Siddaramaiah: ಪೆಟ್ರೋಲ್‌ ಬೆಲೆ ಏರಿಸಿದ್ದು ಗ್ಯಾರಂಟಿಗೋ? ಅಭಿವೃದ್ಧಿಗೋ? ಸಿದ್ದರಾಮಯ್ಯ ಹೀಗಂತಾರೆ!

Virat kohli
ಪ್ರಮುಖ ಸುದ್ದಿ1 hour ago

Virat kohli : ಕೊಹ್ಲಿಯನ್ನು ಮತ್ತೆ ಸ್ವಾರ್ಥಿ ಎಂದು ದೂರಿದ ಪಾಕಿಸ್ತಾನದ ಮೊಹಮ್ಮದ್ ಹಫೀಜ್​

Darshan Arrested
ಕರ್ನಾಟಕ2 hours ago

Darshan Arrested: ದರ್ಶನ್‌ ಸೇರಿ ನಾಲ್ವರನ್ನೇ ಪೊಲೀಸರು ಕಸ್ಟಡಿಗೆ ಪಡೆದಿದ್ದೇಕೆ? ಯಾವೆಲ್ಲ ತನಿಖೆ ಬಾಕಿ ಇದೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ2 hours ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು3 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು3 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ4 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ4 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ4 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ5 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ6 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

ಟ್ರೆಂಡಿಂಗ್‌