ಕಲಬುರಗಿ: ದರ್ಗಾದಲ್ಲಿ ಶಿವಲಿಂಗ ಪೂಜೆ ಮಾಡಲು ವಕ್ಫ್ ಟ್ರಿಬ್ಯುನಲ್ ನೀಡಿದ್ದ ಆದೇಶವನ್ನು ಹೈಕೋರ್ಟ್ ಪೀಠ ಎತ್ತಿ (Dargah controversy) ಹಿಡಿದಿದ್ದು, ಶಿವಲಿಂಗ ಪೂಜೆಗೆ ಗ್ರೀನ್ ಸಿಗ್ನಲ್ ನೀಡಿದೆ. ಲಾಡ್ಲೇ ಮಶಾಕ್ ದರ್ಗಾದಲ್ಲಿರುವ ಶಿವಲಿಂಗಕ್ಕೆ ಫೆಬ್ರವರಿ 18ರಂದು ಶಿವರಾತ್ರಿ ದಿನ ಪೂಜೆ ಮಾಡಲು ಅವಕಾಶ ಕಲ್ಪಿಸುವಂತೆ ಹಿಂದು ಸಮುದಾಯ ಕೋರಿತ್ತು.
ಇದಕ್ಕೆ ಕಲಬುರಗಿ ವಕ್ಫ್ ಟ್ರಿಬ್ಯುನಲ್ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಹದಿನೈದು ಜನರಿಗೆ ಪೂಜೆಗೆ ಅವಕಾಶ ನೀಡಿತ್ತು. ಆದರೆ, ವಕ್ಫ್ ಟ್ರಿಬ್ಯುನಲ್ ಕೋರ್ಟ್ ಆದೇಶ ಪ್ರಶ್ನಿಸಿ ದರ್ಗಾ ಕಮಿಟಿಯು ಹೈಕೋರ್ಟ್ ಮೆಟ್ಟಿಲೇರಿತ್ತು.
ಇದನ್ನೂ ಓದಿ: karnataka budget 2023 : ಕ್ರೀಡಾಸಕ್ತರ ಪಾಲಿಗೂ ಸೂಪರ್ ಬಜೆಟ್ ಕೊಟ್ಟ ಸಿಎಂ ಬೊಮ್ಮಾಯಿ
ಶಿವಲಿಂಗ ಪೂಜೆಗೆ ಅವಕಾಶ ನೀಡಬಾರದು ಎಂದು ವಾದಿಸಿತ್ತು. ಆದರೆ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ನ್ಯಾಯಮೂರ್ತಿ ಜೆ.ಎಂ. ಖಾಜಿ ಅವರು ಶಿವಲಿಂಗ ಪೂಜೆಗೆ ಅವಕಾಶ ನೀಡಿ ಆದೇಶಿಸಿದ್ದಾರೆ.