ಸಂಪುಟದ ಕುರಿತು ಸಿಎಂ ನಿರ್ಧಾರಕ್ಕೆ ಬದ್ಧ ಎಂದ ಸುನಿಲ್‌ಕುಮಾರ್‌ - Vistara News

ದಾವಣಗೆರೆ

ಸಂಪುಟದ ಕುರಿತು ಸಿಎಂ ನಿರ್ಧಾರಕ್ಕೆ ಬದ್ಧ ಎಂದ ಸುನಿಲ್‌ಕುಮಾರ್‌

ನ್ನನ್ನು ಚುನಾವಣೆಗೆ ನಿಲ್ಲಿಸಿ ಸಚಿವರನ್ನಾಗಿ ಮಾಡಿದೆ. ಮುಂದೆ ಕೂಡ ಪಕ್ಷ ಯಾವ ನಿರ್ಣಯ ತೆಗೆದುಕೊಳ್ಳುತ್ತೋ ಅದಕ್ಕೆ ನಾವು ಸಿದ್ದರಿದ್ದೇವೆ ಎಂದು ಸಚಿವ ಸುನಿಲ್‌ಕುಮಾರ್‌ ಹೇಳಿದ್ದಾರೆ.

VISTARANEWS.COM


on

suneel kumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ದಾವಣಗೆರೆ: ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿಯವರೇ ಅಂತಿಮ ತೀರ್ಮಾನ ಕೈಗೊಳ್ಳುವ ಪರಮಾಧಿಕಾರ ಹೊಂದಿದ್ದು, ಅದಕ್ಕೆ ಬದ್ಧ ಎಂದು ಇಂಧನ ಸಚಿವ ವಿ. ಸುನಿಲ್‌ಕುಮಾರ್‌ ತಿಳಿಸಿದ್ದಾರೆ. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸುನಿಲ್‌ಕುಮಾರ್‌, ಮುಖ್ಯಮಂತ್ರಿಗಳು ಕರ್ನಾಟಕಕ್ಕೆ ಒಳಿತಾಗುವ ನಿರ್ಣಯವನ್ನು ತೆಗೆದುಕೊಳ್ಳುತ್ತಿದ್ದಾರೆ. ದೂರದೃಷ್ಟಿ ಇಟ್ಟುಕೊಂಡ ನಾಯಕರು ಅವರು. ಯಾವ ಸಮಯಕ್ಕೆ ಯಾವ ನಿರ್ಣಯ ತೆಗೆದುಕೊಳ್ಳಬೇಕು ಎನ್ನುವುದು ಗೊತ್ತಿದೆ ಎಂದು ಹೇಳಿದರು.

ಆರ್‌ಎಸ್ಎಸ್ ಮೂಲದವರಿಗೆ ಸಚಿವ ಸ್ಥಾನದಿಂದ ಕೆಳಗಿಳಿಸುವುದಿಲ್ಲ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸುನಿಲ್‌ಕುಮಾರ್‌, ನಾನು ಸಾಮಾನ್ಯ ಕಾರ್ಯಕರ್ತನಾಗಿದ್ದೆ. ನನ್ನನ್ನು ಚುನಾವಣೆಗೆ ನಿಲ್ಲಿಸಿ ಸಚಿವರನ್ನಾಗಿ ಮಾಡಿದೆ ಸಂಘಟನೆ. ಮುಂದೆ ಕೂಡ ಪಕ್ಷ ಯಾವ ನಿರ್ಣಯ ತೆಗೆದುಕೊಳ್ಳುತ್ತದೆಯೋ ಅದಕ್ಕೆ ನಾವು ಸಿದ್ದರಿದ್ದೇವೆ. ಇದರಲ್ಲಿ ಬೇರೆ ಬೇರೆ ವಿಚಾರ ಪ್ರಸ್ತಾಪ ಇಲ್ಲ ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ | ರಾಜ್ಯ‌ದಲ್ಲಿ ಕಲ್ಲಿದ್ದಲು ಕೊರತೆಯಿಲ್ಲ: ಸಚಿವ ಸುನೀಲ್‌ಕುಮಾರ್

ಸಚಿವ ಸ್ಥಾನಕ್ಕೆ 60 ,100 ಕೋಟಿ ನೀಡುತ್ತಿದ್ದಾರೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಇಲ್ಲಿವರೆಗೂ ಪಕ್ಷ ನಮಗೆ ಕೊಟ್ಟಿದೆಯೇ ವಿನಃ ನಾವು ಪಕ್ಷಕ್ಕೆ ಏನೂ ಕೊಟ್ಟಿಲ್ಲ. ಇಲ್ಲಿ ವಿಚಾರಕ್ಕೆ ಆದ್ಯತೆಯೇ, ವಿನಃ ಹಣಕ್ಕೆ ಆದ್ಯತೆ ಇಲ್ಲ. ಬೊಮ್ಮಯಿ ನೇತೃತ್ವದಲ್ಲಿ ನಾವು ಮುಂದಿನ ಚುನಾವಣೆಗೆ ಹೋಗುತ್ತೇವೆ. ಒಳ್ಳೆಯ ಬಜೆಟ್ ನೀಡಿ, 180 ಯೋಜನೆಗಳಿಗೆ ಜೀವವನ್ನು ನೀಡಿದ್ದಾರೆ. ನವಭಾರತ ನಿರ್ಮಾಣಕ್ಕೆ ಪ್ರಧಾನಿ ಮೋದಿಯವರಾದರೆ, ನವ ಕರ್ನಾಟಕ ನಿರ್ಮಾಣಕ್ಕೆ ಬೊಮ್ಮಾಯಿ ಎಂದು ಶ್ಲಾಘಿಸಿದರು.

ಕಾಂಗ್ರೆಸ್‌ ಕುರಿತಾಗಿ ಪ್ರತಿಕ್ರಿಯಿಸಿದ ಸುನಿಲ್‌ಕುಮಾರ್‌, ಅಲ್ಲಿನ ಕಾರ್ಯಕರ್ತರ ಜತೆಗೆ ನಾಯಕರು ಕೂಡ ಅನಾಥರಾಗಿದ್ದಾರೆ. ಇವತ್ತು ರಾಜ್ಯದ ಜನರಿಗೆ ಬರವಸೆ ಇದ್ದರೆ ಅದು ಬಿಜೆಪಿ ಹಾಗೂ‌ ಮೋದಿಯವರ ಮೇಲೆ ಮಾತ್ರ. ಕಾಂಗ್ರೆಸ್ ಹತ್ತು ಸುಳ್ಳು ಹೇಳಿ ನಿಜ ಮಾಡಲು ಹೋಗುತ್ತಿದೆ. ಕಾಂಗ್ರೆಸ್ ಭ್ರಷ್ಟಾಚಾರಿಗಳು ಜಾಮೀನಿನ ಮೇಲೆ ಇರುವವರು. ರಾಷ್ಟ್ರೀಯ ಅಧ್ಯಕ್ಷರಿಂದ ಹಿಡಿದು, ರಾಜ್ಯ ಅಧ್ಯಕ್ಷರ ವರೆಗೂ ಬೇಲ್ ಮೇಲೆ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು.‌

ಇದನ್ನೂ ಓದಿ | ಎಸ್‌ಸಿ ಎಸ್‌ಟಿ ಮನೆಗಳಲ್ಲಿ ಇನ್ನಷ್ಟು ಬೆಳಕು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Kidnap case : ಅಕ್ಕನ ಅಕ್ರಮ ಸಂಬಂಧಕ್ಕೆ ಬೇಸತ್ತು ಅಕ್ಕನ ಮಗುವನ್ನೇ ಅಪಹರಿಸಿದ ತಮ್ಮ!

Kidnap case : ಅಕ್ಕನ ಅಕ್ರಮ ಸಂಬಂಧಕ್ಕೆ ಬೇಸತ್ತು ಅಕ್ಕನ ಮಗುವನ್ನೇ ತಮ್ಮ ಅಪಹರಿಸಿದ್ದು, ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

VISTARANEWS.COM


on

kidnap case

ದಾವಣಗೆರೆ/ಬೆಂಗಳೂರು: ಅಕ್ಕನ ಅಕ್ರಮ ಸಂಬಂಧಕ್ಕೆ ಬೇಸತ್ತ ತಮ್ಮನೊಬ್ಬ ಅಕ್ಕನ ಮಗುವನ್ನೇ ಅಪಹರಿಸಿದ ಘಟನೆ (Kidnap case) ನಡೆದಿದೆ. ಬೆಂಗಳೂರಿನಿಂದ ಹೊರಟಿದ್ದ ಅಪ್ರಾಪ್ತ ಬಾಲಕನನ್ನು ದಾವಣಗೆರೆಯಲ್ಲಿ ಬಂಧಿಸಲಾಗಿದೆ. 17 ವರ್ಷದ ತರುಣ್ ಎಂಬಾತ ಗೋಯಲ್ (3) ಎಂಬ ಮಗುವನ್ನು ಅಪಹರಿಸಿದ್ದ.
ನಿಜಾಮುದ್ದೀನ್‌ ಎಕ್ಸ್‌ಪ್ರೆಸ್‌ ರೈಲಿನ ಮೂಲಕ ದಾವಣಗೆರೆಗೆ ಬಂದಾಗ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ತರುಣ್‌ನ ಅಕ್ಕ ಅಕ್ರಮ ಸಂಬಂಧವಿಟ್ಟುಕೊಂಡು ಬೇರೆ ವ್ಯಕ್ತಿ ಜತೆ ವಾಸಿಸುತ್ತಿದ್ದಳು. ಈ ವೇಳೆ ಅಕ್ರಮ ಸಂಬಂಧ ಬಿಡಲು ಒಪ್ಪದಿದ್ದಕ್ಕೆ ಅಕ್ಕನ ಮಗುವನ್ನು ಅಪಹರಿಸಿಕೊಂಡು ಬರುವಾಗ ದಾವಣಗೆರೆ ಆರ್‌ಪಿಎಫ್‌ (RPF) ವಿಚಾರಣೆ ನಡೆಸಿ ವಶಕ್ಕೆ ಪಡೆದುಕೊಂಡು, ಬಳಿಕ ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಟ್ರೈನ್ ಬರುತ್ತಿದ್ದಂತೆ ತಪಾಸಣೆ ಮಾಡಿ ವಿಚಾರಿಸಿದಾಗ ಮಗು ಅಪಹರಿಸಿಕೊಂಡು ಹೋಗುತ್ತಿರುವುದು ಬೆಳಕಿಗೆ ಬಂದಿದೆ. ರೈಲ್ವೆ ಇನ್ಸ್‌ಪೆಕ್ಟರ್‌ ಎಕೆ ರೆಡ್ಡಿ, ಸಿಬ್ಬಂದಿಗಳಾದ ಶಿವಾನಂದ, ಅಮಿತ್, ಬಿಂದು ಮಧುರಿ ಅವರು ಇಬ್ಬರನ್ನು ರಕ್ಷಿಸಿದ್ದಾರೆ.

Continue Reading

ಮಳೆ

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

karnataka Weather Forecast

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ‌ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain : ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶವು ಹೊಳೆಯಂತಾಗಿದೆ.

VISTARANEWS.COM


on

Karnataka Rain

ಬೆಂಗಳೂರು:ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜಧಾನಿ ಬೆಂಗಳೂರು ಹೊಳೆಯಂತಾಗಿದೆ. ರಸ್ತೆಗಳೆಲ್ಲವೂ ಮಳೆ ನೀರಿನಿಂದ ಮುಳುಗಡೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.

Karnataka Rain

ಧಾರಾಕಾರ ಮಳೆಗೆ ಸರ್ಜಾಪುರ- ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿದೆ. ಸಿಲ್ಕ್ ಬೋರ್ಡ್‌ನಿಂದ ಸರ್ಜಾಪುರಕ್ಕೆ ಸಂಪರ್ಕಿಸುವ ರಸ್ತೆಯು ಮುಳುಗಡೆಯಾಗಿದೆ. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆಯು ಕೆರೆಯಂತಾಗಿದೆ. ಹಳ್ಳ-ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು.

karnataka Rain

ಬಿಟ್ಟು ಬಿಡದ ಮಳೆಗೆ ಬೆಂಗಳೂರಿನ ಕೆಆರ್‌ ಮಾರ್ಕೆಟ್‌ನಲ್ಲಿ ನಿಂತ ನೀರಿನಿಂದಾಗಿ ವ್ಯಾಪಾರಿಗಳ ಗೋಳು, ಇನ್ನೊಂದೆಡೆ ವಾಹನ ಸವಾರರ ಫಜೀತಿ ಹೇಳತಿರದು.

Karnataka Rain

ಬನ್ನೇರುಘಟ್ಟ ರಸ್ತೆಯ ವಿಜಯಶ್ರೀ ಲೇಔಟ್‌, ಹುಳಿಮಾವು ಮೆಟ್ರೋ ಸ್ಟೇಷನ್ ಬಳಿಯ ರಸ್ತೆಗಳು ಜಲಾವೃತಗೊಂಡಿದೆ.

Heavy rains lash Bengaluru

ಶೆಟ್ಟಿಹಳ್ಳಿ ವಾರ್ಡ್‌ನ ಚೌಡಪ್ಪ ಬಡಾವಣೆ, ಕಾವೇರಿ ಬಡಾವಣೆ, ಶ್ರೀದೇವಿ ಬಡಾವಣೆಯ ರಾಜಕಾಲುವೆ ನೀರು ತುಂಬಿದ್ದು, ರಸ್ತೆಗಳಿಗೆ ಹಾಗೂ ಮನೆಗಳಿಗೆ ನುಗ್ಗಿದೆ.

Karnataka rain

ಬೆಂಗಳೂರಿನ ಸಂಪಂಗಿರಾಮನಗರದ 3-4 ಕಿಲೋ ಮೀಟರ್ ಜಲಾವೃತಗೊಂಡಿದ್ದು, ಬಿಎಂಟಿಸಿ ಬಸ್‌ಗಳು ಅರ್ಧ ಮುಳುಗಡೆಯಾಗಿದ್ದವು.

Continue Reading

ಮಳೆ

Karnataka Rain :ಸತತ ಮಳೆಗೆ ಬೆಂಗಳೂರು ಥಂಡಾ; ಶಾಲೆಗಳಿಗೆ ಇಂದು ರಜೆ ಘೋಷಣೆ

Karnataka Rain : ಸತತ ಮಳೆ ಹಿನ್ನೆಲೆಯಲ್ಲಿ ಜನ-ಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿನ ಶಾಲೆಗಳಿಗೆ ಇಂದು ಸೋಮವಾರ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

Karnataka Rain

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ (Karnataka Rain) ನಿರಂತರವಾಗಿ ಮಳೆಯಾಗುತ್ತಿದ್ದು, ರಸ್ತೆಗಳು ಕೆರೆಯಂತಾಗಿ ಮಾರ್ಪಾಡಾಗಿದೆ. ಈ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ, ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ ಜಿ ಮೌಖಿಕವಾಗಿ ಆದೇಶಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.

ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Continue Reading
Advertisement
ಕರ್ನಾಟಕ10 ಗಂಟೆಗಳು ago

ಮಹಿಳಾ ಮೀಸಲಾತಿಗೆ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ

Latest14 ಗಂಟೆಗಳು ago

ಶ್ರೀ ಶ್ರೀ ಡಾ. ಪ್ರಕಾಶನಾಥ ಸ್ವಾಮೀಜಿ ಅವರಿಂದ PNS ವಿಸ್ತಾರ ನ್ಯೂಸ್ ಕಚೇರಿ ಉದ್ಘಾಟನೆ

ಪ್ರಮುಖ ಸುದ್ದಿ15 ಗಂಟೆಗಳು ago

ವಿಭಿನ್ನ ಕಾರ್ಯಯೋಜನೆಯೊಂದಿಗೆ ಸಮಾಜದ ಪ್ರತಿನಿಧಿ ರೂಪದಲ್ಲಿ ಸಿದ್ಧಗೊಳ್ಳುತ್ತಿದೆ ಪಿಎನ್‌ಎಸ್‌ ವಿಸ್ತಾರ ನ್ಯೂಸ್-ಹೆಚ್.ಜಿ ಪವಿತ್ರ ಗೌಡ

ಸುವಚನ15 ಗಂಟೆಗಳು ago

ಕರುನಾಡಿನ ಜನಧ್ವನಿಯಾಗಿ ಶುಭಾರಂಭಗೊಳ್ಳುತ್ತಿದೆ ಪಿಎನ್‌ಎಸ್‌ ವಿಸ್ತಾರ ನ್ಯೂಸ್‌ -ಶ್ರೀ ಶ್ರೀ ಡಾ. ಪ್ರಕಾಶನಾಥ ಗುರೂಜಿ

Kodava Family Hockey Tournament Website Launched
ಕೊಡಗು1 ವರ್ಷ ago

Kodagu News : ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ವೈಬ್ ಸೈಟ್ ಲೋಕಾರ್ಪಣೆ

Bengaluru News
ಬೆಂಗಳೂರು1 ವರ್ಷ ago

Bengaluru News : ಮಾಡಲಿಂಗ್‌ನಲ್ಲಿ ಗಿನ್ನಿಸ್‌ ರೆಕಾರ್ಡ್‌ ಮಾಡಲು ಹೊರಟ ಹಳ್ಳಿಹೈದ

Dina Bhavishya
ಭವಿಷ್ಯ1 ವರ್ಷ ago

Dina Bhavishya : ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಎಚ್ಚರಿಕೆ ಇರಲಿ

Gadag News Father commits suicide by throwing three children into river
ಗದಗ1 ವರ್ಷ ago

Gadag News : ಮೂವರು ಮಕ್ಕಳನ್ನು ನದಿಗೆ ಎಸೆದು, ಆತ್ಮಹತ್ಯೆ ಮಾಡಿಕೊಂಡ ತಂದೆ!

Dina Bhavishya
ಭವಿಷ್ಯ1 ವರ್ಷ ago

Dina Bhavishya: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ, ಯಶಸ್ಸು ಖಂಡಿತ

Dina Bhavishya
ಭವಿಷ್ಯ1 ವರ್ಷ ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ

galipata neetu
ಕಿರುತೆರೆ2 ವರ್ಷಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 ವರ್ಷಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 ವರ್ಷಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 ವರ್ಷಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 ವರ್ಷಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವರ್ಷಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ವರ್ಷಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ವರ್ಷಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ವರ್ಷಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ವರ್ಷಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ವರ್ಷಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ವರ್ಷಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ವರ್ಷಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ವರ್ಷಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ವರ್ಷಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌