Aam Aadmi Party: ದಾವಣಗೆರೆಗೆ ಆಗಮಿಸಿದ ಅರವಿಂದ್ ಕೇಜ್ರಿವಾಲ್, ಭಗವಂತ್ ಮಾನ್‌ಗೆ ರಾಜ್ಯ ಎಎಪಿ ಮುಖಂಡರಿಂದ ಸ್ವಾಗತ - Vistara News

ದಾವಣಗೆರೆ

Aam Aadmi Party: ದಾವಣಗೆರೆಗೆ ಆಗಮಿಸಿದ ಅರವಿಂದ್ ಕೇಜ್ರಿವಾಲ್, ಭಗವಂತ್ ಮಾನ್‌ಗೆ ರಾಜ್ಯ ಎಎಪಿ ಮುಖಂಡರಿಂದ ಸ್ವಾಗತ

Aam Aadmi Party: ದಾವಣಗೆರೆಯಲ್ಲಿ ಆಮ್ ಆದ್ಮಿ ಪಕ್ಷದಿಂದ ಆಯೋಜಿಸಿದ್ದ ಬೃಹತ್ ಸಮಾವೇಶಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆಗಮಿಸಿದ್ದರು.

VISTARANEWS.COM


on

Arvind Kejriwal, Bhagwant Mann received by state AAP leaders on their arrival in Davanagere
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ: ನಗರದಲ್ಲಿ ಆಯೋಜಿಸಿದ್ದ ಆಮ್ ಆದ್ಮಿ ಪಕ್ಷದ (Aam Aadmi Party) ಬೃಹತ್ ಸಮಾವೇಶಕ್ಕೆ ಶನಿವಾರ ಆಗಮಿಸಿದ್ದ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಆಮ್ ಆದ್ಮಿ ಪಕ್ಷದ ಹಿರಿಯ ಮುಖಂಡರಾದ ಸೌಂದರ್ಯ ಮಂಜಪ್ಪ, ಯುವ ಮುಖಂಡರಾದ ವರುಣ್ ಹಾಗೂ ಯುವಕರ ಕಣ್ಮಣಿ, ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೀರ್ತನ್ ಕುಮಾರ್ ಮಂಜಪ್ಪ ಮತ್ತಿತರರು ಹೂಗುಚ್ಛ ನೀಡಿ ಸ್ವಾಗತಿಸಿದರು.

ಇದನ್ನೂ ಓದಿ | Aam Aadmi Party: ಎಎಪಿ ಭ್ರಷ್ಟಾಚಾರ ಸಹಿಸಲ್ಲ, ನನ್ನ ಮಗ ಭ್ರಷ್ಟಾಚಾರ ಮಾಡಿದರೂ ಜೈಲಿಗೆ ಹಾಕುವೆ: ಅರವಿಂದ್ ಕೇಜ್ರಿವಾಲ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Rain News: ರಾಜ್ಯದ ಹಲವೆಡೆ ಮಳೆಯು ಅಬ್ಬರಿಸುತ್ತಿದೆ. ಗುಡುಗು, ಸಿಡಿಲು ಸಹಿತ ಬಿರುಗಾಳಿ ಮಳೆಯಾಗುತ್ತಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ಶುಕ್ರವಾರವೂ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಜತೆಗೆ ವಿವಿಧೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ.

ಉತ್ತರ ಒಳನಾಡಿನ ಬೆಳಗಾವಿ ಮತ್ತು ಹಾವೇರಿ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗಲಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಚದುರಿದಂತೆ ಹಾಗೂ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: IPL‌ Betting: ಸಾಲಗಾರರ ಕಾಟ; ಹೆಂಡತಿ-ಮಕ್ಕಳಿಗೆ ವಿಷವಿಕ್ಕಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪಾಪಿ

ತಾಪಮಾನದ ಮುನ್ಸೂಚನೆ

ಏಪ್ರಿಲ್ 19 ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 2 ದಿನಗಳಲ್ಲಿ ಗರಿಷ್ಟ ಉಷ್ಣಾಂಶದಲ್ಲಿ ಹೆಚ್ಚಿನ ಬಡಲಾವಣೆ ಇರುವುದಿಲ್ಲ. ನಂತರದ 3 ದಿನಗಳವರೆಗೆ ಕ್ರಮೇಣ 2-3 ಡಿ.ಸೆ ಏರಿಕೆಯಾಗುತ್ತದೆ.

ಗುಡುಗು ಮುನ್ನೆಚ್ಚರಿಕೆ

ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಜತೆಗೆ ಮೇಲ್ಮೈ ಮಾರುತಗಳು ಬಲವಾದ ಮತ್ತು ರಭಸದಿಂದ ಕೂಡಿರುವ ಸಾಧ್ಯತೆಯಿದೆ.

ಮುಂದಿನ 48 ಗಂಟೆಯಲ್ಲಿ ಭಾಗಶಃ ಮೋಡ ಕವಿದ ಆಕಾಶವಿರುತ್ತದೆ. ಸಂಜೆ/ರಾತ್ರಿ ಸಮಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಗರಿಷ್ಠ ಉಷ್ಣಾಂಶ 37 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕೊಪ್ಪಳದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು; ಹೊತ್ತಿ ಉರಿದ ತೆಂಗಿನ ಮರ, ಧರೆಗುರುಳಿದ ಮರಗಳು, ವಿದ್ಯುತ್‌ ಕಂಬ

Karnataka Weather : ಹಲವೆಡೆ ಗುಡುಗು ಸಿಡಿಲು ಸಹಿತ (Rain News) ಭಾರಿ ಮಳೆಯಾಗಿದ್ದು, ಸಾವು-ನೋವಿಗೆ ಕಾರಣವಾಗಿದೆ. ಸಿಡಿಲು ಬಡಿದು ಕೂಲಿ ಕಾರ್ಮಿಕ ದಾರುಣವಾಗಿ ಮೃತಪಟ್ಟರೆ, ಹಲವೆಡೆ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿವೆ.

VISTARANEWS.COM


on

By

Karnataka Weather
Koo

ಕೊಪ್ಪಳ: ಉತ್ತರ ಕರ್ನಾಟಕದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಸಿಡಿಲಿಗೆ ವ್ಯಕ್ತಿಯೊಬ್ಬರು (Rain News) ಬಲಿಯಾಗಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜೂಲಕಟ್ಟಿ ಬಳಿ ಘಟನೆ (Karnataka Weather Forecast) ನಡೆದಿದೆ. ಕೊರಡಕೇರಿಯ ಅಮೋಘಸಿದ್ದಯ್ಯ ಗುರುವಿನ (32) ಮೃತ ದುರ್ದೈವಿ.

ಅಮೋಘಸಿದ್ದಯ್ಯ ಕೊರಡಕೇರಿಯಿಂದ ಜೂಲಕಟ್ಟಿಯಲ್ಲಿ ಕಟ್ಟಿಗೆ ಕಡಿಯಲು ಕೂಲಿ ಕೆಲಸಕ್ಕೆ ಹೋಗಿದ್ದರು. ಗುರುವಾರ ಮಧ್ಯಾಹ್ನ ದಿಢೀರ್‌ ಶುರುವಾದ ಮಳೆ- ಗಾಳಿ ಜತೆಗೆ ಸಿಡಿಲಿ ಬಡಿದು ಮೃತಪಟ್ಟಿದ್ದಾರೆ. ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗದಗನಲ್ಲೂ ಬಿರುಗಾಳಿ ಸಹಿತ ಮಳೆ

ಮುಂಗಾರಿಗೂ ಮುನ್ನ ಗದಗ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆ ಅಬ್ಬರ ಜೋರಾಗಿದೆ. ಬಿರುಗಾಳಿ ಮಳೆಗೆ ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿ‌‌ನ ಪರಸಾಪೂರ ಬಳಿ ಘಟನೆ ನಡೆದಿದೆ. ರಸ್ತೆ ಮೇಲೆ ಮರ ಹಾಗೂ ವಿದ್ಯುತ್‌ ಕಂಬ ಧರೆಗುರುಳಿದ ಕಾರಣದಿಂದ ಕೆಲಕಾಲ ವಾಹನ ಸಂಚಾರದಲ್ಲಿ ಅಸ್ತವ್ಯಸ್ತವಾಗಿತ್ತು. ಸ್ಥಳೀಯರ ಸಹಾಯದಿಂದ ಕೊಂಬೆಗಳನ್ನು ತೆರವುಗೊಳಿಸಿ ಸಂಚಾರಕ್ಕೆ‌ ಅನುಕೂಲ ಮಾಡಿಕೊಡಲಾಯಿತು.

ಇದನ್ನೂ ಓದಿ: Fraud Case : ಚಿಟ್‌ ಫಂಡ್‌ ಹೆಸರಿನಲ್ಲಿ ದಂಪತಿ ಕೋಟ್ಯಂತರ ರೂ. ವಂಚನೆ; ಬೀದಿಗೆ ಬಿದ್ದರು ಚೀಟಿದಾರರು

ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ಧಾರವಾಡದ ಕಲಘಟಗಿಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದೆ. ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿದಿದೆ. ಕಲಘಟಗಿಯ ದೇವರಕೊಂಡ ಗ್ರಾಮದಲ್ಲಿ ಘಟನೆ ನಡೆದಿದೆ. ಫಕ್ಕಿರಗೌಡ ಶಿವನಗೌಡರ ಎಂಬುವರ ಮನೆಯ ಮುಂದಿದ್ದ ತೆಂಗಿನ ಮರಕ್ಕೆ ಸಿಡಿಲು ಬಡಿದು ಧಗಧಗನೆ ಹೊತ್ತಿ ಉರಿದಿದೆ. ಅದೃಷ್ಟವಶಾತ್‌ ಸಮಯದಲ್ಲಿ ಮನೆ ಮುಂದೆ ಅಕ್ಕ-ಪಕ್ಕ ಯಾರು ಇರಲಿಲ್ಲ. ಹೀಗಾಗಿ ಯಾವುದೇ ಅಪಾಯ ಸಂಭವಿಸಿಲ್ಲ.

ಮತ್ತೊಂದೆಡೆ ಧಾರವಾಡದ ಅಣ್ಣಿಗೇರಿಯ ರಾಜರಾಜೇಶ್ವರಿ ನಗರದಲ್ಲೂ ಮನೆಯ ಪಕ್ಕದಲ್ಲಿಯೇ ಇದ್ದ ಮರಕ್ಕೆ ಸಿಡಿಲು ಬಡಿದ ಪರಿಣಾಮ ಹೊತ್ತಿ ಉರಿದಿತ್ತು. ಮರಕ್ಕೆ ಬೆಂಕಿ ಆವರಿಸುತ್ತಿದಂತೆಯೇ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವ ಕೆಲಸ ಮಾಡಿದರು.

ಧಾರವಾಡದಲ್ಲಿ ಆಲಿಕಲ್ಲು ಮಳೆ

ಧಾರವಾಡ ಜಿಲ್ಲೆಯಾದ್ಯಂತ ಆಲಿಕಲ್ಲು ಮಳೆಯಾಗಿದೆ. ನಗರದಲ್ಲಿ ಮಧ್ಯಾಹ್ನದವರೆಗೆ ಉರಿ ಬಿಸಿಲು ಇತ್ತು, ನಂತರ ಸಂಪೂರ್ಣ ಮೋಡ ಕವಿದ ವಾತಾವರಣದೊಂದಿಗೆ ಮಳೆಯು ಅಬ್ಬರಿಸಿತ್ತು. ವಿಜಯನಗರದ ನಾನಾ ಕಡೆ ಮಳೆರಾಯ ಕೃಪೆ ತೋರಿದ್ದಾನೆ. ಹರಪನಹಳ್ಳಿ ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ. ಹೊಸಪೇಟೆಯ ಮರಿಯಮ್ಮನಹಳ್ಳಿ, ದೇವಲಾಪುರ ಸೇರಿದಂತೆ ನಾನಾ ಕಡೆ ಉತ್ತಮ ಮಳೆಯಾಗಿದೆ. ಹರಪನಹಳ್ಳಿ ತಾಲೂಕಿನಲ್ಲಿ ಸಿಡಿಲು ಗುಡುಗು ಗಾಳಿ ಸಹಿತ ಭಾರೀ ಮಳೆಗೆ ಮರಗಳು ಉರುಳಿದವು. ಬಿರುಗಾಳಿಗೆ ಹಾಲಸ್ವಾಮಿ ಮಠದ ಬಳಿ, ಯಲ್ಲಾಪುರ ರಸ್ತೆ ಮೇಲೆ ಮರ ನೆಲಕ್ಕೆ ಉರುಳಿ ಕೆಲ ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ತಾಲೂಕು ಪಂ. ಆವರಣದಲ್ಲಿ ಎರಡು ಮರಗಳು ಕಳಚಿ ಬಿದ್ದಿತ್ತು. ಮಂಡ್ಯದ ಮಳವಳ್ಳಿಯ ಕೆಆರ್ ಪೇಟೆಯಲ್ಲಿ ಮೊದಲ ಮಳೆಯಾಗಿದೆ. ಸಿಡಿಲು ಬಡಿದ ಪರಿಣಾಮ ಬೃಹತ್ ಕಲ್ಲೊಂದು ಕಾರಿನ ಮೇಲೆ ಬಿದ್ದು, ಜಖಂಗೊಂಡಿರುವ ಘಟನೆ ವಿಜಯಪುರ ನಗರದ ಜೆಎಂ ರಸ್ತೆಯಲ್ಲಿ ನಡೆದಿದೆ.‌ ಮಹತ್ತರ ಮಹಲ್‌ನ ಗೋಡೆಯ ಬೃಹತ್ ಕಲ್ಲು ಕಾರಿನ ಮೇಲೆ ಬಿದ್ದಿದೆ. ಇದರಿಂದ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಯಾವುದೇ ಪ್ರಾಣ ಹಾನಿಯಾಗಿಲ್ಲ. ಭಾರಿ ಮಳೆ, ಗಾಳಿಯ ವೇಳೆ ಸಿಡಿಲು ಬಡಿದು ಈ ಅವಘಡ ಆಗಿದೆ. ಗೋಳಗುಮ್ಮಟ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ಭಾರಿ ಮಳೆ ಮುನ್ಸೂಚನೆ

ಮುಂದಿನ 3 ಗಂಟೆಗಳಲ್ಲಿ ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಬಿಜಾಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಗದಗ, ಗುಲ್ಬರ್ಗ, ಹಾವೇರಿ, ಕೊಪ್ಪಳ, ರಾಯಚೂರು, ಶಿವಮೊಗ್ಗ, ಉತ್ತರ ಕನ್ನಡದಲ್ಲಿ ಒಂದು ಅಥವಾ ಎರಡು ಕಡೆಗಳಲ್ಲಿ ಭಾರಿ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Children Death: ಅವಳಿ ಮಕ್ಕಳಿಗೆ ಮೃತ್ಯುವಾದ ಐಸ್‌ಕ್ರೀಂ; ಸ್ಮೋಕ್‌ ಬಿಸ್ಕೆಟ್‌ ತಿಂದು ಮಗು ಆಸ್ಪತ್ರೆಪಾಲು

Children Death: ಪೂಜಾ ಮತ್ತು ಪ್ರಸನ್ನ ದಂಪತಿಯ ಅವಳಿ ಮಕ್ಕಳು ಮೃತಪಟ್ಟವರು. ನಿನ್ನೆ ಸಂಜೆ ಗ್ರಾಮಕ್ಕೆ ಐಸ್‌ಕ್ರೀಂ ಮಾರಲು ಬಂದಿದ್ದ ವ್ಯಕ್ತಿಯಿಂದ ಐಸ್‌ಕ್ರೀಂ ತಾಯಿ ಮತ್ತು ಮಕ್ಕಳು ಖರೀದಿಸಿ ತಿಂದಿದ್ದರು. ನಂತರ ಅಸ್ವಸ್ಥರಾಗಿದ್ದರು.

VISTARANEWS.COM


on

twin children death
Koo

ಮಂಡ್ಯ: ಬೇಸಿಗೆಯಲ್ಲಿ ಸ್ವಚ್ಛತೆಯಿಲ್ಲದ ಬೀದಿ ಬದಿಯ ಆಹಾರ (Road side food) ಸೇವಿಸಿ ಅಸ್ಸಸ್ಥಗೊಳ್ಳುವ ಹಾಗೂ ಮೃತಪಡುವ ಪ್ರಕರಣಗಳು ಕಂಡುಬರುತ್ತಿವೆ. ಮಂಡ್ಯ (Mandy news) ಹಾಗೂ ದಾವಣಗೆರೆಯಲ್ಲಿ (Davanagere news) ಇವು ವರದಿಯಾಗಿವೆ. ಐಸ್ ಕ್ರೀಂ (Ice cream) ತಿಂದು ಒಂದುವರೆ ವರ್ಷದ ಅವಳಿ ಮಕ್ಕಳು (Twin Children death) ಮೃತಪಟ್ಟಿದ್ದು, ತಾಯಿ ಅಸ್ವಸ್ಥಗೊಂಡಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿಯಲ್ಲಿ ಈ ದಾರುಣ ಘಟನೆ ನಡೆದಿದೆ.

ಗ್ರಾಮದ ಪೂಜಾ ಮತ್ತು ಪ್ರಸನ್ನ ದಂಪತಿಯ ಅವಳಿ ಮಕ್ಕಳು ಮೃತಪಟ್ಟವರು. ನಿನ್ನೆ ಸಂಜೆ ಗ್ರಾಮಕ್ಕೆ ಐಸ್‌ಕ್ರೀಂ ಮಾರಲು ಬಂದಿದ್ದ ವ್ಯಕ್ತಿಯಿಂದ ಐಸ್‌ಕ್ರೀಂ ತಾಯಿ ಮತ್ತು ಮಕ್ಕಳು ಖರೀದಿಸಿ ತಿಂದಿದ್ದರು. ನಂತರ ಅಸ್ವಸ್ಥರಾಗಿದ್ದರು. ಮಕ್ಕಳು ಮನೆಯಲ್ಲಿ ಸಾವಿಗೀಡಾದರೆ, ತೀವ್ರ ಅಸ್ವಸ್ಥಗೊಂಡ ತಾಯಿಯನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಮಕ್ಕಳ ಮೃತ ದೇಹವನ್ನು ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ತಾಯಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ‌ ಕೊಡಿಸಲಾಗುತ್ತಿದೆ. ಐಸ್‌ಕ್ರೀಂ ಮಾರಲು ಬಂದಿದ್ದ ವ್ಯಕ್ತಿಗಾಗಿ ಪೊಲೀಸರ ಹುಡುಕಾಟ ನಡೆಯುತ್ತಿದೆ. ಅರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸ್ಮೋಕ್‌ ಬಿಸ್ಕೆಟ್‌ ತಿಂದು ಮಗು ಅಸ್ವಸ್ಥ

ದಾವಣಗೆರೆ: ದಾವಣಗೆರೆಯಲ್ಲಿ ನಡೆಯುತ್ತಿದ್ದ ಎಕ್ಸಿಬಿಷನ್‌ನಲ್ಲಿ ಬಾಲಕನೊಬ್ಬ ಸ್ಮೋಕ್‌ ಬಿಸ್ಕೆಟ್‌ ತಿಂದು ಅಸ್ವಸ್ಥನಾಗಿದ್ದಾನೆ. ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚೇತರಿಸಿಕೊಂಡಿದ್ದಾನೆ. ದಾವಣಗೆರೆ ನಗರದ ಅರುಣ್ ಸರ್ಕಲ್ ಬಳಿಯ ಎಕ್ಸಿಬಿಷನ್‌ನಲ್ಲಿ ಘಟನೆ ನಡೆದಿದೆ. ಮಕ್ಕಳ ಮನರಂಜನೆಗಾಗಿ ನಡೆಯುತ್ತಿರುವ ಎಕ್ಸಿಬಿಷನ್‌ನ ಸ್ಟಾಲ್ ಒಂದರಲ್ಲಿ ಸ್ಮೋಕ್ ಬಿಸ್ಕೆಟ್ ಕೊಡಲಾಗುತ್ತಿತ್ತು. ಅದನ್ನು ಏಕಾಏಕಿ ಸೇವಿಸಿ ಬಾಲಕ ಅಸ್ವಸ್ಥನಾಗಿದ್ದಾನೆ.

ಸ್ಮೋಕ್ ಬಿಸ್ಕೆಟ್ ಸ್ಟಾಲ್ ದೊಡ್ಡವರಿಂದ ಚಿಕ್ಕ‌ ಮಕ್ಕಳವರೆಗೂ ಗಮನ ಸೆಳೆದಿತ್ತು. ಒಂದು ಕಪ್‌ನಲ್ಲಿ 80 ರೂಪಾಯಿಗೆ ಐದು ಚಿಕ್ಕ‌ ಚಿಕ್ಕ ಬಿಸ್ಕೇಟ್ ನೀಡಲಾಗುತ್ತಿತ್ತು. ಹೀಗೆ ಕೊಟ್ಟ ಬಿಸ್ಕೇಟ್ ಅನ್ನು ಮಗು ಒಂದೇ ಸಲ ಬಾಯಿಗೆ ಹಾಕಿಕೊಂಡಿದೆ. ನಂತರ ನುಂಗಲೂ ಆಗದೇ ಉಗಿಯಲೂ ಆಗದೇ ಕಷ್ಟಪಟ್ಟಿದೆ.

ಅಸ್ವಸ್ಥಗೊಂಡ ಮಗುವನ್ನು ಕೂಡಲೇ ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಗುವಿಗೆ ಚಿಕಿತ್ಸೆ ನೀಡಿದ ನಂತರ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಘಟನೆಯಿಂದ ಆಕ್ರೋಶಗೊಂಡ ಪೋಷಕರು ಎಕ್ಸಿಬಿಷನ್‌ನಲ್ಲಿ ಹಾಕಲಾಗಿದ್ದ ಸ್ಟಾಲ್ ಅನ್ನು ಕಿತ್ತು ಬಿಸಾಕಿದ್ದಾರೆ. ಇಂತಹ ಸ್ಮೋಕ್ ಬಿಸ್ಕೆಟ್ ಅನ್ನು ಮಕ್ಕಳಿಗೆ ಕೊಡಬೇಡಿ ಎಂದು ಎಚ್ಚರಿಸುವ ಆಡಿಯೋ ಹರಿಬಿಟ್ಟಿದ್ದಾರೆ. ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಗೆ ಪಾಲಕರು ದೂರು ನೀಡಿದ್ದಾರೆ.

ಇದನ್ನೂ ಓದಿ: Kids Care: ಪ್ರಯಾಣದ ವೇಳೆ ಮಕ್ಕಳು ಅಸ್ವಸ್ಥರಾಗದಂತೆ ನೋಡಿಕೊಳ್ಳಲು ಹೀಗೆ ಮಾಡಿ

Continue Reading

ದಾವಣಗೆರೆ

Lok Sabha Election 2024: ಹೊನ್ನಾಳಿಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Lok Sabha Election 2024: ಹೊನ್ನಾಳಿ ತಾಲೂಕಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪುರಸಭೆ ಮತ್ತು ತಾಲೂಕು ಆಡಳಿತದ ಸಹಯೋಗದಲ್ಲಿ ಬುಧವಾರ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

VISTARANEWS.COM


on

Voting awareness programme in Honnali
Koo

ಹೊನ್ನಾಳಿ: ತಾಲೂಕಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪುರಸಭೆ ಮತ್ತು ತಾಲೂಕು ಆಡಳಿತದ ಸಹಯೋಗದಲ್ಲಿ ಬುಧವಾರ ಮತದಾನ ಜಾಗೃತಿ ಕಾರ್ಯಕ್ರಮವನ್ನು (Lok Sabha Election 2024) ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಅಭಿಷೇಕ್ ಪಿ. ಮತದಾನದ ಮಹತ್ವ ಕುರಿತು ಮಾತನಾಡಿ, ಎಲ್ಲ ಅರ್ಹ ಮತದಾರರು ತಪ್ಪದೇ ಮತದಾನ ಮಾಡಬೇಕು. ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ನಿರ್ಭೀತಿಯಿಂದ ಮತ ಚಲಾಯಿಸಬೇಕು ಎಂದು ಇದೇ ವೇಳೆ ತಿಳಿಸಿದರು.

ಇದೇ ವೇಳೆ ಅವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಮತದಾನದ ಮಹತ್ವ ಕುರಿತು ಅರಿವು ಮೂಡಿಸಲಾಯಿತು.

ಇದನ್ನೂ ಓದಿ: Deepika Padukone: ತಾಯ್ತತನದ ಜೊತೆಗೆ ವೃತ್ತಿ ಜೀವನ ನಿಭಾಯಿಸುತ್ತಿರುವ ದೀಪಿಕಾ ಪಡುಕೋಣೆ

ಈ ಸಂದರ್ಭದಲ್ಲಿ ತಹಸೀಲ್ದಾರ್‌ ಪುರಂದರ, ಪುರಸಭೆ ಮುಖ್ಯ ಅಧಿಕಾರಿ ನಿರಂಜನಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಘವೇಂದ್ರ, ಪರಮೇಶ್‌ ನಾಯ್ಕ, ಹರ್ಷವರ್ಧನ್‌ ಸೇರಿದಂತೆ ತಾ.ಪಂ. ಪುರಸಭೆ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.

Continue Reading
Advertisement
Murder Case
ಬೆಂಗಳೂರು8 mins ago

Murder case : ಬೆಂಗಳೂರಲ್ಲಿ ರಕ್ತದೋಕುಳಿ; ಪ್ರತ್ಯೇಕ ಕಡೆಗಳಲ್ಲಿ ಯುವಕರಿಬ್ಬರ ಬರ್ಬರ ಹತ್ಯೆ

IPL 2024
ಕ್ರೀಡೆ16 mins ago

IPL 2024: ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ರೋಹಿತ್​ ಶರ್ಮ

Lok Sabha Election 2024 Rajinikanth Kamal Haasan Dhanush Vijay Sethupathi vote in Chennai
ಕಾಲಿವುಡ್17 mins ago

Lok Sabha Election 2024: ಚೆನ್ನೈನಲ್ಲಿ ಮತ ಚಲಾಯಿಸಿದ ರಜನಿಕಾಂತ್​, ಧನುಷ್, ಕಮಲ್ ಹಾಸನ್, ವಿಜಯ್‌!

summer trip
ಪ್ರವಾಸ53 mins ago

Summer Tour: ಹಚ್ಚ ಹಸುರಿನ ಪ್ರಶಾಂತ ನಗರ ಶಿಲ್ಲಾಂಗ್; ಬೇಸಿಗೆ ಪ್ರವಾಸಕ್ಕೆ ಸೂಕ್ತ

Viral Video
ವೈರಲ್ ನ್ಯೂಸ್56 mins ago

Viral Video: ಲ್ಯಾಂಬೋರ್ಗಿನಿ ಕಾರಿನ ಮೇಲೆ ಕುಣಿದು ಕುಪ್ಪಳಿಸಿದ ಮಹಿಳೆ; ಕಾರಿನ ಸ್ಥಿತಿ ನೋಡಿ ಮರುಗಿದ ನೆಟ್ಟಿಗರು!

Harshika Poonacha Bhuvan! for speak Kannada
ಸ್ಯಾಂಡಲ್ ವುಡ್1 hour ago

Harshika Poonacha: ಹರ್ಷಿಕಾ ಪೂಣಚ್ಚ-ಭುವನ್‌ ಮೇಲೆ ಅಟ್ಯಾಕ್! ಕನ್ನಡ ಮಾತನಾಡಿದ್ದೇ ತಪ್ಪಾಯ್ತಾ?

murali sreeshankar
ಕ್ರೀಡೆ1 hour ago

Murali Sreeshankar: ಒಲಿಂಪಿಕ್ಸ್‌ ಆರಂಭಕ್ಕೂ ಮುನ್ನವೇ ಭಾರತಕ್ಕೆ ಆಘಾತ; ಟೂರ್ನಿಯಿಂದ ಹೊರಬಿದ್ದ ಪದಕ ಭರವಸೆಯ ಕ್ರೀಡಾಪಟು

virat kohli
ಕ್ರೀಡೆ2 hours ago

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ ನೋಡಲು ಮುಗಿಬಿದ್ದ ಅಭಿಮಾನಿಗಳು

Pruthvi Ambaar new movie direction by Rathaavara Director
ಸಿನಿಮಾ2 hours ago

Pruthvi Ambaar: ʻದಿಯಾʼ ಹೀರೊಗೆ `ರಥಾವರʼ ಡೈರೆಕ್ಟರ್ ಆ್ಯಕ್ಷನ್ ಕಟ್!

Kantara Movie Rishab Shetty And Pragathi Shetty Met Mohanlal
ಸಿನಿಮಾ2 hours ago

Kantara Movie: ‘ಕಾಂತಾರ 2’ ಸಿನಿಮಾದಲ್ಲಿ ಇರಲಿದ್ದಾರಾ ಮೋಹನ್​ಲಾಲ್?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ6 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ7 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ1 week ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

ಟ್ರೆಂಡಿಂಗ್‌