ದಾವಣಗೆರೆ: ಬಿಜೆಪಿ ಮುಖಂಡನ ಜತೆ ಜಗಳ ತೆಗೆದು ಹಲ್ಲೆ ಮಾಡಿ, ಬಳಿಕ ಅಧಿಕಾರ ಬಳಸಿ ಬಿಜೆಪಿ ಮುಖಂಡನನ್ನು ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಸೂಚಿಸಿದ್ದಾರೆ ಎಂಬ ಆರೋಪ ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಕೇಳಿಬಂದಿದೆ.
ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಶನಿವಾರ ರಾತ್ರಿ ಸಾರ್ವಜನಿಕ ಗಣೇಶ ವಿಸರ್ಜನೆ ವಿಚಾರದಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹಾಗೂ ಬಿಜೆಪಿ ಮುಖಂಡ ಎಂ.ಆರ್ ಮಹೇಶ್ ನಡುವೆ ಗಲಾಟೆ ನಡೆದಿದೆ. ಗಲಾಟೆ ಬಳಿಕ ಅಧಿಕಾರ ಬಳಸಿ ಬಿಜೆಪಿ ಮುಖಂಡ ಮಹೇಶ್‌ರನ್ನು ಪೊಲೀಸರು ವಶಕ್ಕೆ ಪಡೆಯುವಂತೆ ರೇಣುಕಾಚಾರ್ಯ ಸೂಚಿಸಿದ್ದರು ಎನ್ನಲಾಗಿದೆ. ರೇಣುಕಾಚಾರ್ಯ ಸೂಚನೆಯಂತೆ ಮಹೇಶ್‌ರನ್ನು ಪೊಲೀಸರು ವಶಕ್ಕೆ ಪಡೆದು ರಾತ್ರಿ ಠಾಣೆಯಲ್ಲೇ ಇರಿಸಿಕೊಂಡಿದ್ದರು. ಮಹೇಶ್ ಕೂಡ ಹೊನ್ನಾಳಿ ತಾಲೂಕು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಕೊಲೆಗೆ ಸ್ಕೆಚ್ ಹೈಡ್ರಾಮಾ
ನನ್ನನ್ನು 10ಕ್ಕೂ ಹೆಚ್ಚು ಮಂದಿ ಕೊಲೆ ಮಾಡಲು ಸ್ಕೆಚ್ ಹಾಕಿದ್ದಾರಂತೆ. ನನ್ನ ಜೀವಕ್ಕೆ ಅಪಾಯವಿದೆ, ಹೀಗಾಗಿ ರಕ್ಷಣೆ ಕಲ್ಪಿಸುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ, ನನಗೆ ಯಾವುದೇ ರಕ್ಷಣೆ ಬೇಕಿಲ್ಲ, ಇಷ್ಟಕ್ಕೂ ನಾನು ಪಾಕಿಸ್ತಾನದಲ್ಲಿಲ್ಲ, ಭಾರತದಲ್ಲಿದ್ದೇನೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ಪೊಲೀಸರು ವಶಕ್ಕೆ ಪಡೆದಿರುವ ಮಹೇಶ್ ಕೂಡ ಹೊನ್ನಾಳಿ ತಾಲೂಕು ಬಿಜೆಪಿ ಟಿಕೆಟ್ ಆಕಾಂಕ್ಷಿ. ಹೀಗಾಗಿ ಗಲಾಟೆ ಡೈವರ್ಟ್ ಮಾಡಲು ಮಹೇಶ್ ಮತ್ತು ಬೆಂಬಲಿಗರ ಮೇಲೆ ಗೂಬೆ ಕೂರಿಸಲು ಕೊಲೆ ಸ್ಕೆಚ್ ಹೈಡ್ರಾಮಾ ಮಾಡುತ್ತಿದ್ದಾರೆ ಎಂದು ಶಾಸಕರ ವಿರುದ್ಧ ರೇಣುಕಾಚಾರ್ಯ ಆರೋಪ ಕೇಳಿಬಂದಿದೆ.
ಇದನ್ನೂ ಓದಿ | ಪೆದ್ದ ನಾನಲ್ಲ, ಸಿದ್ದರಾಮಯ್ಯನೇ ಪೆದ್ದ: ದುಷ್ಟ ರಾಜಕಾರಣಿ, ಶಕುನಿ, ಸ್ವಾರ್ಥಿ ಎಂದೆಲ್ಲ ಬೈದ ಶ್ರೀರಾಮುಲು