ದಾವಣಗೆರೆ: ನಿರ್ಮಾಣ ಹಂತದ ಶಾಲಾ ಕಟ್ಟಡವನ್ನು ಕಿಡಿಗೇಡಿಗಳು ಧ್ವಂಸ (Building Collapsed) ಮಾಡಿದ್ದಾರೆ. ಶಾಲಾಭಿವೃದ್ಧಿ ಮಂಡಳಿ ನಾನಾ ಕಡೆಗಳಲ್ಲಿ ಅಲೆದಾಡಿ ಅನುದಾನ ತಂದು ಕೊಠಡಿ ಕಟ್ಟಡ ಕೆಲಸವನ್ನು ಆರಂಭಿಸಿದ್ದರು.
ಪ್ಲೆಂಚ್‌ನಿಂದ ಒಂದು ಪಿಟ್ ಮೇಲೆ ಎದ್ದಿದ್ದ ಗೋಡೆ ಕೆಡವಿ ಕುಕೃತ್ಯ ಮೆರೆದಿದ್ದಾರೆ. ದಾವಣಣೆರೆಯ ಹರಿಹರ ನಗರದ ಹಳ್ಳದಕೆರೆ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿಯನ್ನು ಕೆಡವಿದ್ದಾರೆ.
ನಿರ್ಮಾಣ ಹಂತದ ಕೊಠಡಿ ಸೇರಿದಂತೆ ಅಂತಿಮ ಹಂತಕ್ಕೆ ತಲುಪಿದ್ದ ಹೈಟೆಕ್ ಶೌಚಾಲಯ ಧ್ವಂಸ ಮಾಡಿದ್ದಾರೆ. 150ಕ್ಕೂ ಅಧಿಕ ವಿದ್ಯಾರ್ಥಿಗಳು ಕಲಿಯುತ್ತಿರುವ ಸರ್ಕಾರಿ ಶಾಲೆ ಇದಾಗಿದ್ದು, ಸಮಿತಿ ಕಷ್ಟಪಟ್ಟು ಅನುದಾನ ತಂದು ಕಟ್ಟಡ ಕಾಮಗಾರಿ ಅರಂಭಿಸಿದ್ದರು. ಕಿಡಿಗೇಡಿಗಳ ಕೃತ್ಯದಿಂದ ಶಾಲಾಭಿವೃದ್ಧಿ ಸಮಿತಿ ಮತ್ತು ವಿದ್ಯಾರ್ಥಿಗಳು ಬೇಸರಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಬಿಗಿ ಭದ್ರತೆಯಲ್ಲಿ ಶಾಲಾ ಕಟ್ಟಡ ಕಾಮಗಾರಿ ಮುಂದುವರಿಸುವ ತೀರ್ಮಾನಕ್ಕೆ ಬಂದಿದ್ದಾರೆ. ಸರ್ಕಾರಿ ಶಾಲಾ ಕೊಠಡಿ ಶೌಚಾಲಯ ಪುನರ್ ನಿರ್ಮಾಣ ಮಾಡುವಂತೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ: Murder Case : ಮಧ್ಯರಾತ್ರಿಲಿ ವೃದ್ಧೆಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು; ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ
ಬೆಂಗಳೂರಲ್ಲಿ ನಿರ್ಮಾಣ ಹಂತ ಕಟ್ಟಡ ಕುಸಿತ; ಇಬ್ಬರು ಸಾವು, ಮತ್ತಿಬ್ಬರು ಗಂಭೀರ
ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿದು (Building Collapsed) ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರಿನ ಪೀಣ್ಯದ ಎನ್‌ಟಿಎಸ್ ಸರ್ಕಲ್‌ನಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮತೋರ್ವ ಗಾಯಾಳಾನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್ ಕುಸಿತದಿಂದಾಗಿ ಈ ಘಟನೆ ನಡೆದಿದೆ. ಕಾರ್ಮಿಕರು ಏಷಿಯನ್ ಪೈಂಟ್ಸ್ ಕಟ್ಟಡ ನಿರ್ಮಾಣ ಮಾಡುತ್ತಿದ್ದರು. ಕಟ್ಟಡದ ನಾಲ್ಕನೇ ಮಹಡಿಗೆ ಕಾಂಕ್ರೀಟ್ ಹಾಕುತ್ತಿದ್ದಾಗ, ಏಕಾಏಕಿ ಸೆಂಟ್ರಿಂಗ್ ಕುಸಿದು ಬಿದ್ದಿದೆ. ಮೇಲ್ಭಾಗದಲ್ಲಿದ್ದ ಮೂವರು ಕಾರ್ಮಿಕರು ಕೆಳಗೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೂರನೆ ಕಾರ್ಮಿಕ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಅಗ್ನಿಶಾಮಕದಳ ಸಿಬ್ಬಂದಿ ಸದ್ಯ ಕಾಂಕ್ರೀಕ್ ತೆರವು ಮಾಡುತ್ತಿದ್ದಾರೆ.
ಉತ್ತರ ವಿಭಾಗ ಡಿಸಿಪಿ ಸೈದುಲು ಅಡಾವತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಯೋಮಾ ಎಲೈಟ್ಸ್ ಎಂಬ ಖಾಸಗಿ ಕಂಪನಿಯ ಕಟ್ಟಡವಾಗಿದೆ. ಐದನೇ ಫ್ಲೋರ್‌ನಿಂದ ಬಿದ್ದು ಇಬ್ಬರು ಮೃತ ಪಟ್ಟಿದ್ದಾರೆ. ಐದಾರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಕಲಬುರಗಿ ಮೂಲದವರು ವೀರೇಶ್ ಹಾಗೂ ಯಾದಗಿರಿ ಮೂಲದ ಹಿಮಾಂಶು ಮೃತರು ಎಂದು ತಿಳಿದು ಬಂದಿದೆ. ಸೋಲದೇವಹಳ್ಳಿ ಬಳಿ ವಾಸವಿದ್ದರು. ಫ್ಲೋರಿಂಗ್ ಹಾಕುತ್ತಿದ್ದಾಗ ಈ ರೀತಿ ಅವಘಡ ಸಂಭವಿಸಿದೆ. ಮಾಲೀಕರು ಯಾರು ಎಂಬುದನ್ನು ಪರಿಶೀಲನೆ ನಡೆಸುತ್ತಿದ್ದೇವೆ. ದೂರು ಪಡೆದು ತನಿಖೆಯನ್ನು ನಡೆಸುತ್ತೇವೆ ಎಂದರು.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ