ಕಾಂಗ್ರೆಸ್‌ ಮುಕ್ತ ಭಾರತ ಹಗಲುಗನಸು, ಎಲ್ಲಿದೆ ಅಚ್ಛೆ ದಿನ್‌?: ಮೋದಿಗೆ ಸಿದ್ದರಾಮಯ್ಯ ನೇರ ಸವಾಲ್‌ - Vistara News

ದಾವಣಗೆರೆ

ಕಾಂಗ್ರೆಸ್‌ ಮುಕ್ತ ಭಾರತ ಹಗಲುಗನಸು, ಎಲ್ಲಿದೆ ಅಚ್ಛೆ ದಿನ್‌?: ಮೋದಿಗೆ ಸಿದ್ದರಾಮಯ್ಯ ನೇರ ಸವಾಲ್‌

75 ನೇ ವರ್ಷದ ಸಂದರ್ಭದಲ್ಲಿ ದಾವಣಗೆರೆಯಲ್ಲಿ ಆಯೋಜನೆ ಮಾಡಲಾಗಿದ್ದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ನೆರೆದಿದ್ದ ಲಕ್ಷಾಂತರ ಜನರನ್ನುದ್ದೇಶಿಸಿ ಮಾಜಿ ಸಿದ್ದರಾಮಯ್ಯ ಮಾತನಾಡಿದರು.

VISTARANEWS.COM


on

Siddaramaiah speech in siddaramotsava 2
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ: ಕಾಂಗ್ರೆಸ್‌ ಮುಕ್ತ ಭಾರತ್‌ ಎನ್ನುವ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಘೋಷಣೆಗಳಿಗೆ ಉತ್ತರ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ, ದೇಶದಿಂದ ಕಾಂಗ್ರೆಸನ್ನು ನಿರ್ನಾಮ ಮಾಡಲು ಎಂದಿಗೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 2024ರಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಲಿದೆ, ರಾಹುಲ್‌ ಗಾಂಧಿಯವರೇ ಮುಂದಿನ ಪ್ರಧಾನಮಂತ್ರಿಯಾಗಲಿ ಎಂಬ ಆಶಯವನ್ನು ವ್ಯಕ್ತಪಡಿಸಿದರು.

ತಮ್ಮ 75ನೇ ವರ್ಷದ ಪ್ರಯುಕ್ತ ದಾವಣಗೆರೆಯಲ್ಲಿ ಆಯೋಜನೆ ಮಾಡಲಾಗಿದ್ದ ಬೃಹತ್‌ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ನೆರೆದಿದ್ದ ಜನಸ್ತೋಮವನ್ನುದ್ದೇಶಿಸಿ ಮಾತನಾಡಿದರು.

ದೇಶಕ್ಕೆ ಸ್ವಾತಂತ್ರ್ಯ ಗಳಿಸಿಕೊಟ್ಟಿದ್ದರಲ್ಲಿ ಬಿಜೆಪಿ, ಆರ್‌ಎಸ್‌ಎಸ್‌ ಪಾತ್ರ ಏನೂ ಇಲ್ಲ ಎಂದು ಪುನರುಚ್ಚರಿಸಿದ ಸಿದ್ದರಾಮಯ್ಯ “”ಅವರು ಅಧಿಕಾರಕ್ಕೆ ಬಂದಿರುವುದು ಹಿಂದು ರಾಷ್ಟ್ರ ನಿರ್ಮಾಣ ಮಾಡಬೇಕು, ಲೂಟಿ ಮಾಡಬೇಕು, ದೇಶದ ಸಂವಿಧಾನವನ್ನು ಬುಡಮೇಲು ಮಾಡಬೇಕು, ಸರ್ವಾಧಿಕಾರವನ್ನು ತರಬೇಕು ಎಂಬ ಉದ್ದೇಶದಿಂದ. ನರೇಂದ್ರ ಮೋದಿ ಹಾಗೂ ಬಿಜೆಪಿಯವರೇ ಕೇಳಿ. ನೀವು ಎಂದೆಂದಿಗೂ ಕಾಂಗ್ರೆಸನ್ನು ಮುಗಿಸಲು ಸಾಧ್ಯವಿಲ್ಲ. ನಿಮ್ಮ ಕನಸು ಎಂದಿಗೂ ನನಸಾಗುವುದಿಲ್ಲ. 2024ರ ಲೋಕಸಭೆ ಚುನಾವಣೆ, 2023ರ ಕರ್ನಾಟಕದ ವಿಧಾನಸಭೆ ಚುನಾವಣೆ ನಡೆಯುತ್ತದೆ. 2024ಕ್ಕೆ ಮತ್ತೆ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುತ್ತದೆ. ರಾಹುಲ್‌ ಗಾಂಧಿಯವರು ಈ ದೇಶದ ಆಶಾಕಿರಣ. ಬಡವರ, ಹಿಂದುಳಿದವರ ಬಗ್ಗೆ ಕಾಳಜಿ ಇರುವವರು ಈ ದೇಶದ ಪ್ರಧಾನಿ ಆಗಬೇಕುʼʼ ಎಂದರು.

“”ಕಳೆದ ಎಂಟು ವರ್ಷದಲ್ಲಿ ಮೋದಿ ಪ್ರಧಾನಿಯಾಗಿದ್ದಾರೆ. ಆದರೆ ಅವರು ನುಡಿದಂತೆ ನಡೆಯಲಿಲ್ಲ. 2014ರಲ್ಲಿ ಮೋದಿ ಪ್ರಧಾನಿಯಾದಾಗ ಈ ದೇಶದ ಮೇಲಿದ್ದ ಸಾಲ 53 ಲಕ್ಷ ಕೋಟಿ ರೂಪಾಯಿ. ಎಂಟು ವರ್ಷದ ನಂತರ, ದೇಶದ ಮೇಲೆ 155 ಲಕ್ಷ ಕೋಟಿ ರೂ. ಸಾಲವಾಗಿದೆ. ಎಂಟು ವರ್ಷದಲ್ಲಿ 102 ಲಕ್ಷ ಕೋಟಿ ರೂ. ಸಾಲ ಮಾಡಿದ್ದೀರಿ. ರೈತರನ್ನು, ದಲಿತರನ್ನು, ಹಿಂದುಳಿದವರನ್ನು, ಅಲ್ಪಸಂಖ್ಯಾತರನ್ನು ಹಾಳು ಮಾಡಿದ್ದೀರಿ. ಅಚ್ಛೇ ದಿನ್‌ ಎಂದುಕೊಂಡು ಅಧಿಕಾರಕ್ಕೆ ಬಂದ ನೀವು ಇಂದು ಪೆಟ್ರೋಲ್‌, ಡೀಸೆಲ್‌, ಎಲ್‌ಪಿಜಿ ಬೆಲೆ ಗಗನಕ್ಕೇರಲು ಕಾರಣವಾಗಿದ್ದೀರʼʼ ಎಂದು ಹರಿಹಾಯ್ದರು.

ಇದನ್ನೂ ಓದಿ | ಸಿದ್ದರಾಮೋತ್ಸವದ ವೇದಿಕೆಯಲ್ಲಿ ಸಾಮೂಹಿಕ ನಾಯಕತ್ವದ ಮಂತ್ರ ಪಠಿಸಿದ ಡಿ.ಕೆ ಶಿವಕುಮಾರ್

ತಿನ್ನುವುದಿಲ್ಲ, ತಿನ್ನಲೂ ಬಿಡುವುದಿಲ್ಲ ಎಂದು ನರೇಂದ್ರ ಮೋದಿಯವರು ಸುಳ್ಳು ಹೇಳುತ್ತಾರೆ. ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರ 40% ಕಮಿಷನ್‌ ಸರ್ಕಾರ ಎಂದು ಕಂಟ್ರಾಕ್ಟರ್‌ ಅಸೋಸಿಯೇಷನ್‌ ಹೇಳಿದೆ, ನಿಮಗೆ ನೇರವಾಗಿ ಪತ್ರ ಬರೆದಿದೆ ಎಂದರು.

“”ಸಬ್‌ ಕಾ ಸಾಥ್‌, ಸಬ್‌ಕಾ ವಿಶ್ವಾಸ್‌ ಎಂದಿರಿ. ಕರಾವಳಿಯಲ್ಲಿ ಇತ್ತೀಚಿನ ದಿನಗಳಲ್ಲಿ ಮೂರು ಕೊಲೆ ಆಗಿವೆ. ಮಸೂದ್‌, ಪ್ರವೀಣ್‌ ಹಾಗೂ ಫಾಜಿಲ್‌ ಕೊಲೆ ಆಯಿತು. ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರಾವಳಿಗೆ ಭೇಟಿ ನೀಡಿದ್ದರು. ಮಸೂದ್‌ ಮನೆಗೂ ಹೋಗಲಿಲ್ಲ, ಫಾಜಿಲ್‌ ಮನೆಗೂ ಹೋಗಲಿಲ್ಲ. ಪ್ರವೀಣ್‌ಗೆ ಮಾತ್ರವೇ ಪರಿಹಾರ ಕೊಟ್ಟಿರಿ. ಪ್ರವೀಣ್‌ಗೆ ಪರಿಹಾರ ಕೊಟ್ಟಿದ್ದು ಸರಿ. ಆದರೆ ಉಳಿದಿಬ್ಬರಿಗೆ ಏಕೆ ಕೊಟ್ಟಿಲ್ಲ? ನೀವು ಇಡೀ ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ಒಂದು ಧರ್ಮಕ್ಕೆ ಸೇರಿದ ಮುಖ್ಯಮಂತ್ರಿಯೋ? ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ ಎನ್ನುವುದಕ್ಕೆ ನೈತಿಕತೆ ಇದೆಯ? ನೀವು ಈ ರಾಜ್ಯ ಆಳುವುದಕ್ಕೆ ಲಾಯಕ್ಕ? ನೀವು ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿʼʼ ಎಂದರು.

ರಾಹುಲ್‌ ಗಾಂಧಿ ಹಾಗೂ ಸೋನಿಯಾ ಗಾಂಧಿಯವರಿಗೆ ಇ.ಡಿ ವಿಚಾರಣೆ ನಡೆಸುತ್ತಿರುವ ವಿಚಾರವನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ “”ಜನಶಕ್ತಿ ಎದ್ದೇ ಏಳುತ್ತದೆ. ಇಂದು ರಾಹುಲ್‌ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರಿಗೆ ಕಿರುಕುಳ ನೀಡಲಾಗುತ್ತಿದೆ. ಯಾವುದೇ ಅಕ್ರಮ ಹಣ ವರ್ಗಾವಣೆ ನಡೆಯದಿದ್ದರೂ ಐವತ್ತು ಗಂಟೆ ವಿಚಾರಣೆ ಮಾಡುತ್ತಿದ್ದೀರ. ಸೋನಿಯಾ ಗಾಂಧಿಯವರ ವಯಸ್ಸನ್ನೂ ಲೆಕ್ಕಿಸದೆ ಇ.ಡಿ. ಕಚೇರಿಗೆ ಕರೆದು ವಿಚಾರಣೆ ಮಾಡಿದ್ದೀರಿ. ನರೇಂದ್ರ ಮೋದಿಯವರೇ, ಕಾಂಗ್ರೆಸ್‌ಗೆ ಕೋಟ್ಯಂತರ ಕಾರ್ಯಕರ್ತರಿದ್ದಾರೆ. ಅವರೆಲ್ಲರೂ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿಯವರ ಜತೆಗೆ ಇದ್ದಾರೆ. ಅಮಾಯಕರನ್ನು ವಿಚಾರಣೆ ನಡೆಸಲು ಕಾನೂನು, ಸಂವಿಧಾನ ಅವಕಾಶ ನೀಡುವುದಿಲ್ಲ. ಸೇಡಿನ ರಾಜಕಾರಣ ಮಾಡುವ ಕೋಮುವಾದಿ ಬಿಜೆಪಿ ಸರ್ಕಾರವನ್ನು ಆದಷ್ಟೂ ಬೇಗ ಕಿತ್ತೊಗೆಯಬೇಕುʼʼ ಎಂದರು.

ಇದನ್ನೂ ಓದಿ | ನಾನು ಹಾಗೂ ಡಿ.ಕೆ. ಶಿವಕುಮಾರ್‌ ಒಟ್ಟಾಗಿದ್ದೇವೆ: ಸಿದ್ದರಾಮೋತ್ಸವದಲ್ಲಿ ಸಿದ್ದರಾಮಯ್ಯ ಮಾತು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಎತ್ತಿನ ಬಂಡಿಯಲ್ಲಿ ಬರುವಾಗ ಸಿಡಿಲು ಬಡಿದು ಬಾಲಕ ಸಾವು; ಭಾರಿ ಮಳೆಗೆ ನಲುಗಿದ ಜನರು

Rain News : ಶನಿವಾರ ಗುಡುಗು, ಸಿಡಿಲು ಸಹಿತ ಸುರಿದ ಭಾರಿ ಮಳೆಗೆ ಜನರು ನಲುಗಿ (Karnataka Weather Forecast) ಹೋಗಿದ್ದಾರೆ. ಕಲಬುರಗಿಯಲ್ಲಿ ಸಿಡಿಲಿಗೆ ಬಾಲಕನೊರ್ವ ಬಲಿಯಾಗಿದ್ದಾನೆ. ಬೀದರ್‌ ಭಾರಿ ಮಳೆಗೆ ನೆಹರು ಸ್ಟೇಡಿಯಂ ಕೆರೆಯಂತಾಗಿತ್ತು. ಯಾದಗಿರಿಯಲ್ಲಿ ಪಿಡಬ್ಲ್ಯೂಡಿ ಕಚೇರಿಗೆ ನೀರು ನುಗ್ಗಿತ್ತು.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ (Rain News) ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಶನಿವಾರ ಕಲಬುರಗಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ವರುಣನ ಆರ್ಭಟಕ್ಕೆ (Karnataka Weather Forecast) ಜನರು ತತ್ತರಿಸಿ ಹೋಗಿದ್ದಾರೆ. ನರೋಣಾ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಮೃತಪಟ್ಟಿದ್ದಾನೆ. ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ನರೋಣ ಗ್ರಾಮ ಘಟನೆ ನಡೆದಿದೆ. ಜಮೀನಿನಿಂದ ಎತ್ತಿನ ಬಂಡಿಯಲ್ಲಿ ಮನೆಗೆ ವಾಪಾಸು ಬರುವಾಗ ಸಿಡಿಲು ಬಡಿದಿದೆ. ಸಿಡಿಲಿನ ಹೊಡೆತಕ್ಕೆ ಮಹೇಶ್ (10) ಎಂಬಾತ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ನರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೀದರ್‌ನಲ್ಲಿ ಗುಡುಗು ಸಹಿತ ಸುರಿದ ಭಾರಿ ಮಳೆಗೆ ನೆಹರು ಕ್ರೀಡಾಂಗಣವು ಕೆರೆಯಂತಾಗಿತ್ತು. ಕ್ರೀಡಾಂಗಣದ ಒಳಗೆ ಶೇ.70ರಷ್ಟು ಜಾಗ ಜಲಾವೃತವಾಗಿದೆ. ಒಳಚರಂಡಿ ವ್ಯವಸ್ಥೆ ಹಾಳಾದ ಹಿನ್ನೆಲೆಯಲ್ಲಿ ಸ್ಟೇಡಿಯಂವೊಳಗೆ 3-4 ಅಡಿ ನೀರು ಸಂಗ್ರಹವಾಗಿದೆ. ಮುಂಜಾನೆ ಹೊತ್ತು ಹಲವರು ನೆಹರು ಕ್ರೀಡಾಂಗಣಕ್ಕೆ ಬಂದು ವಾಕಿಂಗ್‌ ಮಾಡುತ್ತಿದ್ದರು. ಇದೀಗ ಆವರಣವೆಲ್ಲವೂ ನೀರುಮಯವಾದ ಕಾರಣಕ್ಕೆ ಕೂಡಲೇ ಒಳಚರಂಡಿ ವ್ಯವಸ್ಥೆ ಸರಿಪಡಿಸಿ ಎಂದು ಸಾರ್ವಜನಿಕರ ಆಕ್ರೋಶ ಹೊರಹಾಕಿದರು.

ಹಾವೇರಿ ಜಿಲ್ಲೆಯಲ್ಲೂ ಗುಡುಗು ಸಹಿತ ಮಳೆಯ ಅಬ್ಬರವಿತ್ತು. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹೊವಿನಶಿಗ್ಲಿ ಗ್ರಾಮದಲ್ಲಿ ತೆಂಗಿನ ಗಿಡಕ್ಕೆ ಸಿಡಿಲು ಬಡಿದು ತೆಂಗಿನಮರ ಹೊತ್ತಿ ಉರಿದಿತ್ತು. ಗುಡುಗಿನ ಹೊಡೆತಕ್ಕೆ ಹೊವಿನಶಿಗ್ಲಿ ಗ್ರಾಮದಲ್ಲಿ ಮನೆಯಲ್ಲಿರುವ ಹೋಂ ಥೆಟರ್ ಪುಡಿ ಪುಡಿಯಾಗಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ‌ ಸಂಭವಿಸಿಲ್ಲ.

ಇದನ್ನೂ ಓದಿ: Rain News : ಶುರುವಾಯ್ತು ಮಳೆ ಅವಘಡ; ಮಲಗಿದ್ದಾಗ ಚಾವಣಿ ಕುಸಿದು ಮಹಿಳೆ ಸಾವು

ಇನ್ನು ಯಾದಗಿರಿ ನಗರದಲ್ಲಿ ಶನಿವಾರ ಸುರಿದ ಅರ್ಧ ಗಂಟೆ ಮಳೆಗೆ ಪಿಡಬ್ಲ್ಯೂಡಿ ಕಚೇರಿ ಆವರಣದೊಳಗೆ ನೀರು ನುಗ್ಗಿತ್ತು. ಇದರಿಂದಾಗಿ ಕಚೇರಿಯೊಳಗೆ ಓಡಾಡಲು ಪರದಾಡಬೇಕಾಯಿತು. ಬಿಸಿಲ ನಗರಿ ಕಲಬುರಗಿಯಲ್ಲಿ ಬಿರುಗಾಳಿ ‌ಸಹಿತ ಭಾರಿ ಮಳೆಯಾಗಿದೆ. ಬಿಸಿಲ‌ ಬೇಗೆಗೆ ಬೆಂದಿದ್ದ ಜನತೆಗೆ ಮಳೆರಾಯ ತಂಪೇರಿದಿದ್ದ. ಭಾರಿ ಬಿರುಗಾಳಿಗೆ ಮರ ಧರೆಗುರುಳಿದ್ದವು.

ಬೆಂಗಳೂರು ಗ್ರಾಮಾಂತರಕ್ಕೆ ಕಾಲಿಟ್ಟ ಮಳೆರಾಯ

ಬೆಂಗಳೂರು ಗ್ರಾಮಾಂತರದ ಆನೇಕಲ್ ತಾಲ್ಲೂಕಿನಾದ್ಯಂತ ಮಳೆಯಾಗಿದೆ. ಬಿಸಿಲಿನ ಬೇಗೆಗೆ ಕಂಗೆಟ್ಟಿದ್ದ ಜನಕ್ಕೆ ಮಳೆಯು ನಿಟ್ಟುಸಿರುವ ಬಿಡುವಂತೆ ಮಾಡಿತ್ತು. ಆನೇಕಲ್, ಬೊಮ್ಮನಹಳ್ಳಿ, ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ ಭಾಗದಲ್ಲಿ ಮಳೆಯಾಗಿತ್ತು. ವರ್ಷದ ಮೊದಲ ಮಳೆ ಕಂಡು ಜನರು ಫುಲ್ ಖುಷ್ ಆದರು.

ಭಾರಿ ಮಳೆ ಎಚ್ಚರಿಕೆ

ದಕ್ಷಿಣ ಒಳನಾಡಿನ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕಲಬುರಗಿ, ಬೀದರ್, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳು ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ 24 ಗಂಟೆಯಲ್ಲಿ ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿ ಸಮಯದಲ್ಲಿ ಪ್ರತ್ಯೇಕ ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವೀಕೆಂಡ್‌ನಲ್ಲಿ ಬೆಂಗಳೂರಲ್ಲಿ ಮಳೆ ಗ್ಯಾರಂಟಿ; ಹಲವೆಡೆ ಗುಡುಗು, ಸಿಡಿಲು ಮುನ್ನೆಚ್ಚರಿಕೆ

Rain News: ಬೆಂಗಳೂರಿನಲ್ಲಿ ಮಳೆ ಯಾವಾಗ ಬರುತ್ತೆ ಎಂಬ ಪ್ರಶ್ನೆಗೆ ಹವಾಮಾನ ಇಲಾಖೆಯಿಂದ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಬೆಂಗಳೂರು ಸೇರಿದಂತೆ ಹಲವೆಡೆ ವಾರಾಂತ್ಯದಲ್ಲಿ ಗುಡುಗು ಸಹಿತ ಗಾಳಿ, ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ವಾರಾಂತ್ಯದಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಹಾವೇರಿ, ಬೆಳಗಾವಿ, ಧಾರವಾಡದಲ್ಲೂ ವರುಣನ ಸಿಂಚನವಾಗಲಿದೆ.

ಇದನ್ನೂ ಓದಿ: Instagram Reel: ಪ್ರಾಣಕ್ಕೇ ಕುತ್ತು ತಂದ ಇನ್‌ಸ್ಟಾಗ್ರಾಮ್‌ ರೀಲ್ಸ್‌; ಸಾಹಸ ಪ್ರದರ್ಶಿಸಲು ಹೋಗಿ 21 ವರ್ಷದ ಯುವಕ ಸಾವು

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದ್ದು, ಕರಾವಳಿಯ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ.

ಇನ್ನೂ ಮಳೆಯಿಲ್ಲದೇ ಕಂಗೆಟ್ಟಿರುವ ರಾಜಧಾನಿ ಬೆಂಗಳೂರಿಗೂ ವ್ಯಾಪಕವಾದ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಸಮಯದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ ಉಷ್ಣಾಂಶ 37 ಹಾಗೂ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಗುಡುಗು ಮುನ್ಸೂಚನೆ

ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿಯಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವರ್ಷಾಘಾತಕ್ಕೆ ಉತ್ತರ ಕರ್ನಾಟಕ ಸುಸ್ತು; ರಾತ್ರಿಯೆಲ್ಲ ಗಾಳಿ ಸಹಿತ ಮಳೆಯಾರ್ಭಟ

Rain News : ಹಲವೆಡೆ ಸುರಿಯುತ್ತಿರುವ ಬಿರುಗಾಳಿ ಮಳೆಯು ನಾನಾ ಅನಾಹುತಗಳನ್ನು ಸೃಷ್ಟಿ ಮಾಡಿದೆ. ಗಾಳಿ ಮಳೆಗೆ ಮನೆಯ ಚಾವಣಿ ಹಾರಿ ಹೋಗಿದೆ. ಮತ್ತೊಂದು ಕಡೆಗೆ ಸಿಡಿಲಿಗೆ ಜಾನುವಾರು ಹಾಗೂ ತೆಂಗಿನ ಮರ ಸುಟ್ಟು ಕರಕಲಾಗಿದೆ. ಮುಂದಿನ 3 ಗಂಟೆಯಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಬೇಸಿಗೆ ಮಳೆ (Rain News) ಅಬ್ಬರ ಜೋರಾಗಿದೆ. ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ಹಾಗೂ ಯಲಹಂಕದಲ್ಲಿ ವರ್ಷದ ಮೊದಲ ಮಳೆಯಾಗಿದೆ. ಕಾದ ಕೆಂಡದಂತಾಗಿದ್ದ ಧರೆಗೆ ಶುಕ್ರವಾರ ಮಧ್ಯಾಹ್ನ ಕೆಲಕಾಲ ಸುರಿದ ಮಳೆಯು ಜನರಲ್ಲಿ ಸಂತಸ (Karnataka weather Forecast) ಮೂಡಿಸಿತ್ತು.

ಶುಕ್ರವಾರ ಸಂಜೆ ನಂತರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮೇಲ್ಮೈ ಗಾಳಿಯೊಂದಿಗೆ ಲಘು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಬಳ್ಳಾರಿ, ಬೀದರ್‌, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗದ ಒಂದೆರಡು ಕಡೆಗಳಲ್ಲಿ ಗಾಳಿ ಸಹಿತ ಮಳೆಯಾಗಿದೆ.

ಇನ್ನೂ ತುಮಕೂರಿನ ಕುಣಿಗಲ್ ತಾಲೂಕು ಡಿ.ಹೊಸಹಳ್ಳಿ, ರಾಜೇಂದ್ರಪುರ ಭಾಗದಲ್ಲಿ ಗಾಳಿ- ಮಳೆಯ ಅಬ್ಬರಕ್ಕೆ ಮನೆಯ ಮೇಲ್ಛಾವಣಿಗಳು ಹಾರಿಹೋಗಿದ್ದವು. ಜತೆಗೆ ಮರಗಳೆಲ್ಲವೂ ಧರೆಗುರುಳಿದ್ದವು. ಕುಣಿಗಲ್ ತಾಲೂಕಿನ ಹಲವೆಡೆ ನಿನ್ನೆ ತುಂತುರು ಮಳೆಯೊಂದಿಗೆ ಬಿರುಗಾಳಿ ಬೀಸಿದೆ. ಬಿರುಗಾಳಿಯ ರಭಸಕ್ಕೆ 30ಕ್ಕೂ ಹೆಚ್ಚು ಮರಗಳು ನೆಲಸಮವಾಗಿತ್ತು. ಡಿ.ಹೊಸಹಳ್ಳಿಯಲ್ಲಿ ಶಾಲಾ ಕಟ್ಟಡದ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದಿತ್ತು. ಇನ್ನು ರಾಜೇಂದ್ರಪುರ ಗ್ರಾಮದಲ್ಲಿ ಕಲ್ಲೂರಯ್ಯ, ಬರಿಯಯ್ಯ, ಚಿಕ್ಕಕೂರಲಯ್ಯ ಎಂಬುವವರ ಮನೆಗಳ ಮೇಲ್ಛಾವಣಿಯೇ ಹಾರಿಹೋಗಿತ್ತು. ಸ್ಥಳಕ್ಕೆ ಕುಣಿಗಲ್ ಶಾಸಕ ಡಾ.ರಂಗನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: Fraud Case : ಉದ್ಯಮಿಗೆ ಚಮತ್ಕಾರಿ ಚೆಂಬು ಕೊಟ್ಟವರು ಅರೆಸ್ಟ್‌; 22 ಬ್ಯಾಂಕ್‌ಗಳಿಗೆ ಟೋಪಿ ಹಾಕಿದ ಫ್ಯಾಮಿಲಿ ಲಾಕ್‌

ಸಿಡಿಲು ಬಿಡಿದು ಹೊತ್ತಿ ಉರಿದ ತೆಂಗಿನ ಮರ

ಚಿಕ್ಕಮಗಳೂರಿನ ಬಾಳೆಹೊನ್ನುರು-ಕೊಪ್ಪ ರಸ್ತೆಯಲ್ಲಿ ಮಧ್ಯರಾತ್ರಿ ಸಿಡಿಲು ಬಡಿದು ತೆಂಗಿನ ಮರವೊಂದು ಹೊತ್ತಿ ಉರಿದಿತ್ತು. ಕೊಪ್ಪ ರಸ್ತೆಯ ಇಸಾಕ್ ಎಂಬುವರ ಮನೆಯ ತೆಂಗಿನ ಮರ ಹೊತ್ತಿ ಉರಿದಿತ್ತು. ಸಿಡಿಲು ಬಡಿದು ಸಂಪೂರ್ಣ ಸುಟ್ಟುಹೋಗಿತ್ತು. ಕಳೆದ ರಾತ್ರಿ ಬಾಳೆಹೊನ್ನೂರು ಸುತ್ತಮುತ್ತ ಗಾಳಿ-ಮಳೆ ಸುರಿದಿತ್ತು.

karnataka weather Forecast

ಸಿಡಿಲಿಗೆ ಮುರಿದು ಬಿದ್ದ ದೇವಾಲಯದ ಗರುಡುಗಂಬ

ಸಿಡಿಲು ಬಡಿದು ದೇವಾಲಯದ ಗರುಡುಗಂಬ ಮುರಿದು ಬಿದ್ದಿತ್ತು. ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿನ ಹಗರನೂರಿನಲ್ಲಿ ಘಟನೆ ನಡೆದಿತ್ತು. ನಿನ್ನೆ ತಡರಾತ್ರಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿತ್ತು. ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಸೇರಿದ ಗರಡುಗಂಬಕ್ಕೆ ಸಿಡಿಲು ಬಡಿದ ಪರಿಣಾಮ ಮುರಿದು ಬಿದ್ದಿತ್ತು. ಅಲ್ಲದೆ ಹಿರೇಹಡಗಲಿಯಲ್ಲಿ ರೈತ ಬಂದ್ರಕಳ್ಳಿ ಲಂಕೆಪ್ಪ ಎಂಬವರ ಹಸುವು ಸಿಡಿಲಿಗೆ ಬಲಿಯಾಗಿತ್ತು. ಹಿರೇಕೊಳಚಿ, ಚಿಕ್ಕಕೊಳಚಿ, ನಾಗತಿಬಸಾಪುರ ಹಿರೇಹಡಗಲಿ ಸೇರಿ ಹತ್ತಾರು ಗ್ರಾಮಗಳಲ್ಲಿ ಮಳೆಯಾಗಿದೆ. ಹಗರನೂರು ಗ್ರಾಮದ ರಸ್ತೆ ಮೇಲೆ ಮರಗಳು ಬಿದ್ದು ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ವಾಸದ ಮನೆ, ದನದ ಕೊಟ್ಟಿಗೆ ಮೇಲೆ ಹಾಕಲಾಗಿದ್ದ ತಗಡುಗಳು ಬಿರುಗಾಳಿಗೆ ಹಾರಿಹೋಗಿದ್ದವು.

ಉತ್ತರ ಕರ್ನಾಟಕದಲ್ಲಿ ಮಳೆ ಅಬ್ಬರ

ಗುರುವಾರದಂದು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಅಥಣಿ ಹಾಗೂ ನಿಪ್ಪಾಣಿಯಲ್ಲಿ ತಲಾ 6 ಸೆಂ.ಮೀ ಮಳೆಯಾಗಿದೆ. ಮಹಾಲಿಂಗಪುರ 4, ಹೊನ್ನಾವರ, ಲೋಕಾಪುರ, ಗದಗ, ಚಿಕ್ಕೋಡಿ, ಸೇಡಬಾಳ, ಟಿಕ್ಕೋಟ, ಹುಂಚದಕಟ್ಟೆ, ಬೇಲೂರು, ತ್ಯಾಗರ್ತಿಯಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.

ಮುಂಡಗೋಡು, ಹಾವೇರಿ, ಹಾವೇರಿ ಎಪಿಎಂಸಿ , ರಬಕವಿ , ಕುಂದಗೋಳ , ಸಂಕೇಶ್ವರ, ಕಲಘಟಗಿ , ಯಡವಾಡ, ಪೊನ್ನಂಪೇಟೆ, ಕೊಡಗು, ಹರಪನಹಳ್ಳಿಯಲ್ಲಿ ತಲಾ 2 ಸೆಂ.ಮೀ ಹಾಗೂ ಹಳಿಯಾಳ, ಸಿದ್ದಾಪುರ, ಗೋಕಾಕ್‌ , ರಾಣೆಬೆನ್ನೂರು, ಧಾರವಾಡ, ಮಂಡ್ಯದಲ್ಲಿ 1 ಸೆಂ.ಮೀ ಮಳೆಯಾಗಿದೆ. ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 41.4 ಡಿ.ಸೆ ಕಲಬುರಗಿ ಮತ್ತು ರಾಯಚೂರಿನಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Group Clash: ರಾಮ ನವಮಿಯಂದು ಎರಡು ಕೋಮಿನ ಯುವಕರ ನಡುವೆ ಘರ್ಷಣೆ; ಇಬ್ಬರಿಗೆ ಚಾಕು ಇರಿತ

Group Clash: ದಾವಣಗೆರೆಯ ಚನ್ನಗಿರಿ ತಾಲೂಕಿನ ನಲ್ಲೂರು ಕ್ಯಾಂಪ್‌ನಲ್ಲಿ ರಾಮ ನವಮಿ ದಿನದಂದು ಇಬ್ಬರಿಗೆ ಚಾಕು ಇರಿಯಲಾಗಿದೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

VISTARANEWS.COM


on

Group Clash
Koo

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಕ್ಯಾಂಪ್‌ನಲ್ಲಿ ರಾಮ ನವಮಿ ದಿನದಂದು ಎರಡು ಕೋಮಿನ ಯುವಕರ ನಡುವೆ ಘರ್ಷಣೆ ನಡೆದು, ಇಬ್ಬರು ಹಿಂದು ಯುವಕರಿಗೆ ಚಾಕು ಇರಿದಿರುವ ಘಟನೆ (Group Clash) ನಡೆದಿದೆ. ಕಳೆದ ಎರಡು ದಿನಗಳ‌ ಹಿಂದೆ ಘಟನೆ ನಡೆದಿದ್ದು, ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹನುಮಂತ, ಗೋಪಾಲ ಗಾಯಾಳುಗಳು. ಗಲಭೆಯಲ್ಲಿ ಅನ್ಯ ಕೋಮಿನ ಒಬ್ಬ ಯುವಕ ಗಾಯಗೊಂಡಿದ್ದಾನೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಇಬ್ಬರು ಚಿಕಿತ್ಸೆಗೆ ಪಡೆಯುತ್ತಿದ್ದು, ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನಲ್ಲೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ನಲ್ಲೂರು ಕ್ಯಾಂಪ್‌ನಲ್ಲಿ 2022ರಲ್ಲೂ ಎರಡು ಕೋಮುಗಳ‌ ನಡುವೆ ಜಗಳ ಆಗಿತ್ತು. ಈ ಬಾರಿಯು ರಾಮನವಮಿ ದಿನದಂದು ಎರಡು ಕೋಮಿನ‌ ಯುವಕರ ನಡುವೆ ಗಲಾಟೆ ನಡೆದಿದೆ.

ಇದನ್ನೂ ಓದಿ | Neha Murder Case: ನೇಹಾ ಕೊಲೆಗಾರ ಫಯಾಜ್‌ಗೆ 14 ದಿನ ನ್ಯಾಯಾಂಗ ಬಂಧನ; ʼಲವ್‌ ಜಿಹಾದ್‌ ಕೊಲೆʼ ವಿರೋಧಿಸಿ ಮೂರು ದಿನ ಮುನವಳ್ಳಿ ಬಂದ್

ಮೋದಿ ಹಾಡು ಬರೆದಿದ್ದಕ್ಕೆ ಯುವಕನಿಗೆ ಥಳಿತ; ಪಾಕ್‌ ಪರ ಘೋಷಣೆ ಕೂಗಲು ಒತ್ತಾಯ

Pro Pak Slogan

ಮೈಸೂರು: ಪ್ರಧಾನಿ ಮೋದಿ ಕುರಿತ ಹಾಡು ಬಿಡುಗಡೆ ಮಾಡಿದ್ದಕ್ಕೆ ಹಿಂದು ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಇದೇ ವೇಳೆ ಪಾಕ್‌ ಪರ ಮತ್ತು ಅಲ್ಲಾಹು ಅಕ್ಬರ್‌ ಎಂದು ಪರ ಘೋಷಣೆ (Pro Pak Slogan) ಕೂಗುವಂತೆ ಒತ್ತಾಯ ಮಾಡಿದ್ದಾರೆ ಎನ್ನಲಾಗಿದೆ. ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ಘಟನೆ ನಡೆದಿದ್ದು, ಈ ಬಗ್ಗೆ ನಗರದ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಯುವಕ ದೂರು ನೀಡಿದ್ದಾನೆ.

ಮೈಸೂರಿನ ರೋಹಿತ್ ಹಲ್ಲೆಗೊಳಗಾದ ಯುವಕ. ಮೋದಿ ಹಾಡು ರಿಲೀಸ್‌ ಮಾಡಿದ್ದೀಯ, ನಿನ್ನ ಸಾಯಿಸುತ್ತೇವೆ ಎಂದು ಅಪರಿಚಿತ ಮುಸ್ಲಿಂ ಯುವಕರ ಗುಂಪು, ಹಿಂದು ಯುವಕನ ಬಟ್ಟೆ ಹರಿದು ಹಲ್ಲೆ ನಡೆಸಿ ಪರಾರಿಯಾಗಿದೆ. ಹಲ್ಲೆ ವೇಳೆ ಪಾಕಿಸ್ತಾನ ಹಾಗೂ ಅಲ್ಲಾಹ್‌ ಪರ ಘೋಷಣೆ ಕೂಗುವಂತೆ ಯುವಕನಿಗೆ ಒತ್ತಾಯ ಮಾಡಿದ್ದಾರೆ ಎನ್ನಲಾಗಿದೆ. ಹಲ್ಲೆಗೊಳಗಾದ ಯುವಕನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಬಗ್ಗೆ ವಿಡಿಯೊ ಮೂಲಕ ರೋಹಿತ್ ಮಾಹಿತಿ ನೀಡಿದ್ದಾನೆ.

ಇದನ್ನೂ ಓದಿ | Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

ಘಟನೆ ಬಗ್ಗೆ ಗಾಯಳು ರೋಹಿತ್‌ ಪ್ರತಿಕ್ರಿಯಿಸಿ, ನಾನು ಕಳೆದ ವಾರ ಮೋದಿ ಸಾಂಗ್‌ ರಿಲೀಸ್‌ ಮಾಡಿದ್ದೆ. ಪರಿಚಯಸ್ಥರ ಬಳಿ ನಮ್ಮ ಯುಟ್ಯೂಟ್‌ ಚಾನೆಲ್‌ ಸಬ್‌ಸ್ಕ್ರೈಬ್‌ ಮಾಡಿಸುತ್ತಿದ್ದೆ. ಸರ್ಕಾರಿ ಗೆಸ್ಟ್‌ ಹೌಸ್‌ ಬಳಿ ಮುಸ್ಲಿಂ ವ್ಯಕ್ತಿಯೊಬ್ಬರು ಬಂದರು. ಅವರು ಮುಸ್ಲಿಂ ಎಂದು ನನಗೆ ಗೊತ್ತಿರಲಿಲ್ಲ. ನಂತರ ಆ ವ್ಯಕ್ತಿ ವಿಡಿಯೊ ನೋಡಿದ. ನಂತರ ನನ್ನನ್ನು ಒಳಗೆ ಕರೆದುಕೊಂಡು ಹೋಗಿ, ಮೋದಿ ಬಗ್ಗೆ ಸಾಂಗ್‌ ಮಾಡಿದ್ದೀಯಾ, ನಿನ್ನ ಇಲ್ಲೇ ಕೊಲ್ಲುತ್ತೇವೆ ಎಂದು ಸಹಚರರ ಜತೆ ಸೇರಿ ಹಲ್ಲೆ ಮಾಡಿದರು. ನನ್ನ ಕೈಯಲ್ಲಿ ಇದ್ದ ಶ್ರೀರಾಮನ ಫೋಟೊ, ಧ್ವಜವನ್ನು ಕಿತ್ತು ಬಿಸಾಡಿದರು. ನಂತರ ಅವಾಚ್ಯ ಶಬ್ದಗಳಿಂದ ಬೈಯ್ದು ನನ್ನ ಮೇಲೆ ಬಿಯರ್‌ ಎರಚಿ, ಮೂತ್ರ ವಿಸರ್ಜನೆ ಮಾಡಿ, ಸಿಗರೇಟ್‌ನಿಂದ ಸುಟ್ಟು ಅಮಾನುಷವಾಗಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Continue Reading
Advertisement
Apricot Benefits
ಆರೋಗ್ಯ4 mins ago

Apricot Benefits: ನಿಮಗೆ ಇಂತಹ ಸಮಸ್ಯೆಗಳಿವೆಯೇ?: ಹಾಗಾದರೆ ನಿತ್ಯವೂ ಆಪ್ರಿಕಾಟ್‌ ತಿನ್ನಿ!

Family health insurance
ಮನಿ ಗೈಡ್5 mins ago

Money Guide: ಕುಟುಂಬಕ್ಕಾಗಿ ಆರೋಗ್ಯ ವಿಮೆ; ಖರೀದಿ ಮುನ್ನ ತಿಳಿದಿರಲಿ ಕೆಲವು ವಿಚಾರ

Modi in Karnataka
ಪ್ರಮುಖ ಸುದ್ದಿ9 mins ago

Modi in Karnataka: ಪ್ರಧಾನಿ ಮೋದಿ ತೆರಳುವಾಗ ಚೆಂಬು ಪ್ರದರ್ಶನ; ನಲಪಾಡ್‌ ಸೇರಿ ಹಲವರು ವಶಕ್ಕೆ

Modi in Karnataka Govt turns tax city Bengaluru into tanker city and attacks girls too PM Narendra Modi
ಕರ್ನಾಟಕ43 mins ago

Modi in Karnataka: ಟ್ಯಾಕ್ಸ್ ಸಿಟಿ ಬೆಂಗಳೂರನ್ನು ಟ್ಯಾಂಕರ್ ಸಿಟಿ ಮಾಡಿದ ಸರ್ಕಾರ, ಹೆಣ್ಣು ಮಕ್ಕಳ ಮೇಲೂ ಹಲ್ಲೆ: ಮೋದಿ ವಾಗ್ದಾಳಿ

Kalki 2898 AD
ಸಿನಿಮಾ45 mins ago

Kalki 2898 AD: ನಾಳೆ ಮಹತ್ವದ  ಅಪ್‌ಡೇಟ್‌ ನೀಡಲಿದೆ ಪ್ರಭಾಸ್‌ ಅಭಿನಯದ ʼಕಲ್ಕಿ 2898 ಎಡಿʼ ಚಿತ್ರತಂಡ; ಹೊಸ ರಿಲೀಸ್‌ ದಿನಾಂಕ ಘೋಷಣೆ?

Lok Sabha Election
ದೇಶ54 mins ago

Lok Sabha Election: ನಿನ್ನೆ ಈ ಗ್ರಾಮದ ಒಬ್ಬರೂ ಮತ ಹಾಕಲಿಲ್ಲ; ಇದ್ದಿದ್ದು ಯಾರ ಭಯ?

Ashutosh Sharma
ಕ್ರೀಡೆ55 mins ago

Ashutosh Sharma: ಖಿನ್ನತೆಗೆ ಒಳಗಾಗಿದ್ದ ಬಿಗ್​ ಹಿಟ್ಟರ್​ ಅಶುತೋಷ್‌ ಶರ್ಮ; ಕ್ರಿಕೆಟ್​ ಜರ್ನಿಯೇ ರೋಚಕ

DK Shivakumar
ಕರ್ನಾಟಕ55 mins ago

DK Shivakumar: ಮತಯಾಚನೆ ವೇಳೆ ಬೆದರಿಕೆ ಆರೋಪ; ಡಿಕೆಶಿ ವಿರುದ್ಧ ಎಫ್‌ಐಆರ್‌

Karnataka Weather Forecast
ಮಳೆ1 hour ago

Karnataka Weather : ಎತ್ತಿನ ಬಂಡಿಯಲ್ಲಿ ಬರುವಾಗ ಸಿಡಿಲು ಬಡಿದು ಬಾಲಕ ಸಾವು; ಭಾರಿ ಮಳೆಗೆ ನಲುಗಿದ ಜನರು

Trust Of The Nation 2024
ಪ್ರಮುಖ ಸುದ್ದಿ1 hour ago

Trust Of The Nation 2024 : ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗುವುದು ಖಚಿತ; ಡೈಲಿಹಂಟ್ ಸಮೀಕ್ಷೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ2 hours ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 hours ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20245 hours ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ6 hours ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ7 hours ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ14 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ1 day ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ2 days ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ4 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ5 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

ಟ್ರೆಂಡಿಂಗ್‌