ಹೊನ್ನಾಳಿ: ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಮಹಾಶಿವರಾತ್ರಿ (Mahashivaratri) ಅಂಗವಾಗಿ ಶುಕ್ರವಾರ ಶಿವ ದೇವಾಲಯಗಳಲ್ಲಿ ರುದ್ರಾಭಿಷೇಕ, ಬಿಲ್ವಾರ್ಚನೆ, ಸಹಸ್ರನಾಮ ಅರ್ಚನೆ ಸೇರಿದಂತೆ ವಿಶೇಷ ಪೂಜಾ ಕಾರ್ಯಕ್ರಮಗಳು (Davanagere News) ನೆರವೇರಿದವು.
ಪಟ್ಟಣದ ಶ್ರೀ ನೀಲಕಂಠೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಅಂಗವಾಗಿ ಕಳೆದ ಒಂದು ವಾರದಿಂದ ವಿಶೇಷ ಪೂಜೆ, ಮಧ್ಯಾಹ್ನ ಮಹಾ ಮಂಗಳಾರತಿ, ಸಂಜೆ ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ನೀಲಕಂಠೇಶ್ವರನ ದರ್ಶನ ಪಡೆದು ಪುನೀತರಾದರು ಮತ್ತು ತೀರ್ಥ ಪ್ರಸಾದ ವಿತರಣೆ ನಡೆಯಿತು. ವಿಶೇಷವಾಗಿ ಶಿವನಿಗೆ ಬಿಲ್ವ ಪತ್ರೆ, ಹೂವುಗಳನ್ನು ಅರ್ಪಿಸಿ, ಭಕ್ತರು ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.
ಇದನ್ನೂ ಓದಿ: IND vs ENG: ಅಂತಿಮ ಟೆಸ್ಟ್ ಗೆದ್ದು ಇತಿಹಾಸ ನಿರ್ಮಿಸಿದ ಭಾರತ; ನೂತನ ದಾಖಲೆ ಸೃಷ್ಟಿ
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ವತಿಯಿಂದ ಪಟ್ಟಣದ ನೀಲಕಂಠೇಶ್ವರ ದೇವರ ಸನ್ನಿಧಿಯಲ್ಲಿ ಸಹಸ್ರಲಿಂಗ ಲಿಂಗ ದೀಪೋತ್ಸವ, ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಇದನ್ನೂ ಓದಿ: Vinay Rajkumar: ವಿನಯ್ ರಾಜ್‌ಕುಮಾರ್ ನಟನೆಯ ʻಗ್ರಾಮಾಯಣʼ ಸೆಟ್‌ಗೆ ಭೇಟಿ ಕೊಟ್ಟ ಶಿವಣ್ಣ-ಗೀತಾ!
ಮಹಾಶಿವರಾತ್ರಿ ಅಂಗವಾಗಿ ಶಿವದೇವಾಲಯಗಳಿಗೆ ಭಕ್ತರ ದಂಡೆ ಹರಿದು ಬಂದಿತ್ತು. ಪಟ್ಟಣದ ಶ್ರೀ ಚನ್ನಪ್ಪ ಸ್ವಾಮಿ ಹಿರೇಕಲ್ ಮಠದಲ್ಲಿರುವ ಶಿವನ ದೇವಾಲಯದಲ್ಲಿ ನೂರಾರು ಭಕ್ತರು ಸರತಿ ಸಾಲಿನಲ್ಲಿ ಬಂದು ವಿಶೇಷ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದರು. ಗೆಡ್ಡೆ ರಾಮೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ಶಿವಾಲಯಗಳಲ್ಲಿ ವಿಶೇಷ ಪೂಜೆಗಳು ನಡೆದವು.