Site icon Vistara News

Davanagere News : ಇಳಿ ವಯಸ್ಸಿನಲ್ಲಿ ಕೂಡಿ ಬಂದ ಕಂಕಣ ಭಾಗ್ಯ; ದೂರಾಯಿತು ಒಂಟಿತನ

Davanagere News Marriage at an early age

ದಾವಣಗೆರೆ: ಆ ಗ್ರಾಮದಲ್ಲಿ ನಡೆದ ಮದುವೆಯು (Marriage) ಸಂಭ್ರಮದೊಂದಿಗೆ ವಿಶೇಷವಾಗಿಯೂ ಇತ್ತು. ದಾಂಪತ್ಯ ಜೀವನಕ್ಕೆ ಕಾಲಿಟ್ಟ ವರನಿಗೆ 61 ಆದರೆ ವಧುವಿಗೆ 56 ವರ್ಷ.. ಈ ಹಿರಿಯರ ಮದುವೆಗೆ ಕುಟುಂಬಸ್ಥರು ಸೇರಿ ಗ್ರಾಮಸ್ಥರು ಸಾಕ್ಷಿಯಾಗಿದ್ದರು. ಇಳಿ ವಯಸ್ಸಿನಲ್ಲಿ ಕಂಕಣ ಭಾಗ್ಯ ಕೂಡಿ ಬಂದಿದ್ದು, ಕೊನೆಗಾಲದಲ್ಲಿ ಆಸರೆಯಾಗಿರಲು ಇಳಿ ವಯಸ್ಸಿನ ‌ವಧು-ವರ (Marriage at an early age) ಒಂದಾಗಿದ್ದರು.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕುಂಬಳೂರು ಗ್ರಾಮದಲ್ಲಿ ಈ ವಿಶೇಷ ಮದುವೆ ನಡೆದಿದೆ. 56 ವರ್ಷದ ರುಕ್ಮಿಣಿ ಹಾಗೂ 61 ವರ್ಷದ ನಿವೃತ್ತ ಶಿಕ್ಷಕ ನಾಗರಾಜ್‌ ಎಂಬುವವರು ಸತಿಪತಿಗಳಾದ ಜೋಡಿ.

ಶಾಲಾ‌ ಶಿಕ್ಷಕರಾಗಿ ನಿವೃತ್ತಿ ‌ಹೊಂದಿದ್ದ ನಾಗರಾಜ್, ಪತ್ನಿಯನ್ನು ಕಳೆದುಕೊಂಡು ಏಕಾಂಗಿ ಜೀವನ ನಡೆಸುತ್ತಿದ್ದರು. ಇತ್ತ ರುಕ್ಮಿಣಿ ಮದುವೆಯಾಗದೇ ತವರು ಮನೆಯಲ್ಲೇ ಆಶ್ರಯ ಪಡೆದಿದ್ದರು. ಒಂಟಿ ಜೀವಕ್ಕೆ ಜೋಡಿಯೊಂದು ಬೇಕೆಂದು ಹಂಬಲಿಸಿದ್ದ ನಾಗರಾಜ್‌ ಅವರು ಒಬ್ಬಂಟಿಯಾಗಿದ್ದ ರುಕ್ಮಿಣಿಯವರ ಕೈಹಿಡಿದಿದ್ದಾರೆ.

ಇನ್ನೂ ಇವರಿಬ್ಬರ ಮದುವೆಗೆ ಕುಟುಂಬಸ್ಥರು ಒಪ್ಪಿಗೆ ಮುದ್ರೆ ಒತ್ತಿದ್ದಾರೆ. ಕುಂಬಳೂರು ಗ್ರಾಮದ ದೇವಸ್ಥಾನದಲ್ಲಿ ಎರಡು ಕುಟುಂಬಗಳ ಸದಸ್ಯರ ಸಮ್ಮುಖದಲ್ಲಿ ಸರಳವಾಗಿ ವಿವಾಹ ನೆರವೇರಿದೆ.

Davanagere News Marriage at an early age

ಇದನ್ನೂ ಓದಿ: Metro Penalty: ಮೆಟ್ರೊ ಸ್ಟೇಷನ್‌ನಲ್ಲಿ ಗರ್ಲ್‌ ಫ್ರೆಂಡ್‌ಗೆ ಕಾಯುತ್ತ ಕೂತರೆ ಬೀಳುತ್ತೆ 50 ರೂ. ದಂಡ!

Abdu Rozik: ತನಗಿಂತ ತುಂಬಾ ಎತ್ತರದ ಹುಡುಗಿ ಜತೆ ಬಿಗ್‌ ಬಾಸ್‌ ಸ್ಪರ್ಧಿಯ ಮದುವೆ!

ಸಾಮಾಜಿಕ ಜಾಲತಾಣದಲ್ಲಿ (social media) ಸಕ್ರಿಯರಾಗಿರುವ ಮತ್ತು ಬಿಗ್ ಬಾಸ್ 16 (Bigg Boss 16) ಖ್ಯಾತಿಯ ಅಬ್ದು ರೋಝಿಕ್ (Abdu Rozik) ಇತ್ತೀಚೆಗಷ್ಟೇ ಅಮಿರಾ ಅವರೊಂದಿಗೆ ಮದುವೆ ನಿಶ್ಚಿತಾರ್ಥವನ್ನು (engagement) ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು ಮುಂದಿನ ಜುಲೈನಲ್ಲಿ ವಿವಾಹ ಕಾರ್ಯಕ್ರಮ ನಡೆಯಲಿದ್ದು, ಬಾಲಿವುಡ್ ನಟ (Bollywood actor) ಸಲ್ಮಾನ್ ಖಾನ್ (Salman Khan) ಪಾಲ್ಗೊಳ್ಳಲಿದ್ದಾರೆ ಎಂದು ಅಬ್ದು ತಿಳಿಸಿದ್ದಾರೆ.

20 ವರ್ಷದ ಗಾಯಕ (singer) ಅಬ್ದು ರೋಝಿಕ್ ಅವರು ಅಮೀರಾ ಅವರನ್ನು ಆಹಾರ ಉತ್ಸವದಲ್ಲಿ ಭೇಟಿಯಾಗಿದ್ದರು. ಮೊದಲ ನೋಟದಲ್ಲೇ ಇಬ್ಬರಿಗೂ ಪ್ರೀತಿಯಾಗಿತ್ತು ಎಂದು ಅಬ್ದು ತಿಳಿಸಿದರು.

ಅಬ್ದು ಅವರ ನಿಶ್ಚಿತಾರ್ಥವು ಯಾವುದೇ ಪ್ರಚಾರವಲ್ಲ ಎಂದು ಅಬ್ದು ಸ್ಪಷ್ಟಪಡಿಸಿದ್ದು, ನನ್ನಂತಹ ಸಣ್ಣ ವ್ಯಕ್ತಿ ಪ್ರೀತಿಯನ್ನು ಕಂಡುಕೊಂಡಿದ್ದಾನೆ ಎಂದು ಜನರು ನಂಬಲು ಕಷ್ಟವಾಗಬಹುದು ಎಂದು ತಿಳಿಸಿದರು.
ಅಮೀರಾಗಿಂತ ಚಿಕ್ಕವನಾಗಿರುವ ತನ್ನ ಎತ್ತರದ ವ್ಯತ್ಯಾಸವು ನಮ್ಮ ಪ್ರೀತಿಯ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ ಎಂದು ಹೇಳಿದರು.


ಅಬ್ದು ಅವರು 115 ಸೆಂ ಮತ್ತು ಅಮೀರಾ 155 ಸೆಂ.ಮೀ. ಎತ್ತರವಿದ್ದಾರೆ. ಅವರಿಬ್ಬರೂ ಕಡಿಮೆ ಎತ್ತರದಿಂದಾಗಿ ತಮ್ಮ ಸಂಗಾತಿಯನ್ನು ಹುಡುಕುವ ಬಗ್ಗೆ ಚಿಂತಿತರಾಗಿದ್ದರು. ಆದರೆ ಅಮೀರಾ ಅವರನ್ನು ಭೇಟಿ ಮಾಡಿದ್ದಕ್ಕಾಗಿ ಕೃತಜ್ಞರಾಗಿರುತ್ತೇನೆ. ಅಮೀರಾ ತನಗಿಂತ ಎತ್ತರವಾಗಿದ್ದರೂ ಅದು ನಮ್ಮ ಸಂಬಂಧದ ನಡುವೆ ಎಂದಿಗೂ ಬಂದಿಲ್ಲ ಎಂದು ತಿಳಿಸಿದರು.


ಕೆಲವು ದಿನಗಳ ಹಿಂದೆ ಅಬ್ದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ನಿಶ್ಚಿತಾರ್ಥ ಸಮಾರಂಭದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಅವರು ಅಮೀರಾ ಅವರ ಮುಖವನ್ನು ಬಹಿರಂಗಪಡಿಸಲಿಲ್ಲ, ಆದರೆ ಹೃದಯದ ಆಕಾರದ ವಜ್ರದ ಉಂಗುರದ ಫೋಟೋವನ್ನು ಹಂಚಿಕೊಂಡಿದ್ದಾರೆ.

ಸುದ್ದಿಯನ್ನು ಹಂಚಿಕೊಂಡ ಅವರು, “ಜುಲೈ 7 ರಂದು ದಾಂಪತ್ಯ ಜೀವನಕ್ಕೆ ಕಾಲಿರಿಸುವುದಾಗಿ ಹೇಳಿದ್ದು, ನನ್ನನ್ನು ಗೌರವಿಸುವ ಪ್ರೀತಿಯನ್ನು ಪಡೆಯುವ ಅದೃಷ್ಟಶಾಲಿ ಎಂದು ನಾನು ನನ್ನ ಜೀವನದಲ್ಲಿ ಎಂದಿಗೂ ಊಹಿಸಿರಲಿಲ್ಲ. ನಾನು ಎಷ್ಟು ಸಂತೋಷವಾಗಿದ್ದೇನೆ ಎಂದು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version