Site icon Vistara News

Davanagere News: ಸಮರ್ಪಕ ಬಸ್‌ ಸೌಲಭ್ಯಕ್ಕೆ ಆಗ್ರಹಿಸಿ ಹೊನ್ನಾಳಿಯ ಗೋವಿನಕೋವಿ ಗ್ರಾಮಸ್ಥರ ಪ್ರತಿಭಟನೆ

Protest demanding adequate bus facility at govinakovi village

ನ್ಯಾಮತಿ: ಸಮರ್ಪಕ ಬಸ್‌ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಗೋವಿನಕೋವಿ ಗ್ರಾಮದಲ್ಲಿ ಗುರುವಾರ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಡೆದು ದಿಢೀರ್‌ ಪ್ರತಿಭಟನೆ (Davanagere News) ನಡೆಸಿದರು.

ಹೊನ್ನಾಳಿ ಮತ್ತು ಶಿವಮೊಗ್ಗ ಮಾರ್ಗದಲ್ಲಿ ಸಾಗುವ ಕೆಎಸ್‌ಆರ್‌ಟಿಸಿ ಬಸ್‌ಗಳ ನಿಲುಗಡೆ ಮಾಡದಿರುವುದರಿಂದ ದಿನನಿತ್ಯ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಕೂಡಲೇ ಬಸ್‌ಗಳ ನಿಲುಗಡೆಗೆ ಹಾಗೂ ಸಮರ್ಪಕ ಬಸ್‌ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು, ಈ ಮಾರ್ಗದ ಎಲ್ಲಾ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

ಪ್ರತಿನಿತ್ಯ ಗೋವಿನಕೋವಿ ಗ್ರಾಮದಿಂದ ಹೊನ್ನಾಳಿ ಮತ್ತು ಶಿವಮೊಗ್ಗಕ್ಕೆ ನೂರಾರು ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳುತ್ತಾರೆ ಆದರೆ ಸಮರ್ಪಕ ಬಸ್‌ ಸೌಲಭ್ಯವಿಲ್ಲದೇ ಹಾಗೂ ಎಲ್ಲ ಬಸ್‌ಗಳು ತುಂಬಿಬರುವುದರಿಂದ ದಿನನಿತ್ಯವೂ ಬಸ್‌ನಲ್ಲಿ ನಿಂತುಕೊಂಡೇ ಪ್ರಯಾಣಿಸಬೇಕಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದರು.

ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಶಾಲಾ-ಕಾಲೇಜುಗಳಿಗೆ ಹೋಗಲು ಸಾಧ್ಯವಾಗದೇ ತೊಂದರೆ ಅನುಭವಿಸುವಂತಾಗಿದೆ. ಬೆಳಿಗ್ಗೆ ಮತ್ತು ಸಂಜೆ ಸರಿಯಾದ ಸಮಯಕ್ಕೆ ಹೆಚ್ಚುವರಿ ಬಸ್‌ಗಳನ್ನು ಕಲ್ಪಿಸಲು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇದನ್ನೂ ಓದಿ: Gold Rate Today: ಕೈ ಸುಡುತ್ತಿದೆ ಚಿನ್ನದ ಬೆಲೆ; ಆಭರಣ ಖರೀದಿಗೆ ಮುನ್ನ ಬೆಲೆ ಹೆಚ್ಚಳ ಗಮನಿಸಿ

ಪ್ರತಿಭಟನೆಯಲ್ಲಿ ಗೋವಿನಕೋವಿ ಗ್ರಾಮದ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

Exit mobile version