ಹೊನ್ನಾಳಿ: ಪಕ್ಷ ಸಂಘಟನೆ ಹಾಗೂ ಪಕ್ಷದ ಬಲವರ್ಧನೆಗಾಗಿ ಪಾದಯಾತ್ರೆ (Padayatra) ಕೈಗೊಂಡಿದ್ದೇನೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಜಿ.ಬಿ. ವಿನಯ್ ಕುಮಾರ್ ತಿಳಿಸಿದರು.
ವಿನಯ್ ಮಾರ್ಗ ಟ್ರಸ್ಟ್ ವತಿಯಿಂದ ಹೊನ್ನಾಳಿ ತಾಲೂಕಿನ ಕೋಣನತಲೆ ಗ್ರಾಮದಲ್ಲಿ ಮಂಗಳವಾರ ವಿನಯ ನಡಿಗೆ ಹಳ್ಳಿ ಕಡೆಗೆ ಪಾದಯಾತ್ರೆಯ ವೇಳೆ ಮಾತನಾಡಿದ ಅವರು, ಜಗಳೂರು ತಾಲೂಕು ಚಿಕ್ಕಉಜ್ಜಿನಿಯಿಂದ ಪಾದಯಾತ್ರೆ ಪ್ರಾರಂಭಿಸಲಾಗಿದ್ದು, ಹರಪ್ಪನಹಳ್ಳಿ ತಾಲೂಕು ಹಾಗೂ 98 ಹಳ್ಳಿಗಳ ಭೇಟಿ ಮಾಡಿ, ಒಟ್ಟು 280 ಕಿಲೋಮೀಟರ್ ಪಾದಯಾತ್ರೆ ಕೈಗೊಂಡಿದ್ದೇನೆ. ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸಿ, ಪಕ್ಷ ಸಂಘಟನೆ ಮಾಡುತ್ತಿದ್ದೇನೆ ಎಂದು ಹೇಳಿದರು.
ಇದನ್ನೂ ಓದಿ: WhatsApp: 71 ಲಕ್ಷ ಭಾರತೀಯ ಖಾತೆಗಳನ್ನು ಡಿಲಿಟ್ ಮಾಡಿದ ವಾಟ್ಸಾಪ್!
ಪಾದಯಾತ್ರೆಯ ಸಂದರ್ಭದಲ್ಲಿ ರೈತರ, ಜನಸಾಮಾನ್ಯರ, ಮಹಿಳೆಯರ ಹಾಗೂ ವಿದ್ಯಾರ್ಥಿಗಳ ಸಮಸ್ಯೆ ತಿಳಿಯುವ ಪ್ರಯತ್ನ ಮಾಡುತ್ತಿದ್ದೇನೆ ಎಂದು ತಿಳಿಸಿದರು. ಈ ವೇಳೆ ಕಾಂಗ್ರೆಸ್ ಮುಖಂಡ ಸಿದ್ದಪ್ಪ, ಉಮಾಪತಿ ಅವರು ಮಾತನಾಡಿದರು.
ಇದನ್ನೂ ಓದಿ: Bengaluru Film Festival: ಫೆ.29 ರಿಂದ ಮಾ.7 ರವರೆಗೆ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
ಈ ಸಂದರ್ಭದಲ್ಲಿ ಮುಖಂಡರಾದ ಕರಿಬಸಪ್ಪ, ಎಚ್.ಪಿ. ನಾಗರಾಜಪ್ಪ, ನಾಗೇಂದ್ರಪ್ಪ, ಪರಮೇಶ್ವರಪ್ಪ, ಎಚ್. ಸುಭಾಷ್, ಶಿವಮೂರ್ತಿ ಸೇರಿದಂತೆ ಗ್ರಾಮಸ್ಥರು ಹಾಗೂ ಇತರರು ಪಾಲ್ಗೊಂಡಿದ್ದರು.