Site icon Vistara News

Davanagere News: ತರಗನಹಳ್ಳಿಯ ಚನ್ನಮ್ಮ ವಸತಿ ಶಾಲೆಯಲ್ಲಿ ಪರಿಸರ ದಿನಾಚರಣೆ

World Environment Day Celebration at Kittur Rani Chennamma Residential School

ಹೊನ್ನಾಳಿ: ತಾಲೂಕಿನ ತರಗನಹಳ್ಳಿ ಸಮೀಪದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮವನ್ನು (Davanagere News) ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ: Karnataka Weather : ಉತ್ತರ ಒಳನಾಡು, ಕರಾವಳಿಯಲ್ಲಿ ವ್ಯಾಪಕ ಮಳೆ; ಶಾಲೆಗೆ ನುಗ್ಗಿದ ನೀರು, ಮಕ್ಕಳಿಗೆ ರಜೆ

ತರಗನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್ ಗೌಡ, ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪರಿಸರ ಸಂರಕ್ಷಣೆಯು ಪ್ರತಿಯೊಬ್ಬ ನಾಗರೀಕನ ಆದ್ಯ ಕರ್ತವ್ಯವಾಗಿದೆ. ಪರಿಸರವು ಸಕಲ ಜೀವರಾಶಿಗಳಿಗೂ ಆಶ್ರಯ ನೀಡಿದೆ. ಎಲ್ಲರೂ ಪರಿಸರ ಉಳಿಸಿ, ಬೆಳೆಸೋಣ ಎಂದು ಶಾಲೆಯ ವಿದ್ಯಾರ್ಥಿಗಳಿಗೆ ತಿಳಿಸಿದರು.

ಪರಿಸರದ ಬಗ್ಗೆ ಮಕ್ಕಳಿಗೆ ಬಾಲ್ಯದಲ್ಲಿಯೇ ಕಾಳಜಿ ಮೂಡಿಸಬೇಕು ಎಂದ ಅವರು, ಗಿಡಗಳನ್ನು ನೆಡುವುದರ ಜತೆಗೆ ಅದನ್ನು ಉಳಿಸಿ, ಬೆಳೆಸುವ ಕಾರ್ಯವನ್ನು ಮಾಡಬೇಕು ಎಂದು ತಿಳಿಸಿದರು. ಇದೇ ವೇಳೆ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಂದ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.

ಇದನ್ನೂ ಓದಿ: Toyota Kirloskar Motor: ದೆಹಲಿಯಲ್ಲಿ ಟಿಕೆಎಂನ ʼಟೊಯೊಟಾ ಯೂಸ್ಡ್ ಕಾರ್ʼ ಮಳಿಗೆಗೆ ಚಾಲನೆ

ಈ ಸಂದರ್ಭದಲ್ಲಿ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಮುಖ್ಯ ಶಿಕ್ಷಕ ಶಿವಕುಮಾರ್ ಕೆ.ಆರ್. ಹಾಗೂ ವಸತಿ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Exit mobile version