ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಸವನಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಬಸವನಹಳ್ಳಿಯ ರಾಧಾ(16) ಮೃತ ಬಾಲಕಿ.
ಹಾಸ್ಟೆಲ್ನಲ್ಲಿ ಓದುತ್ತಿದ್ದ ಬಾಲಕಿ ರಾಧಾ ಅನಾರೋಗ್ಯದ ಕಾರಣ ಮನೆಗೆ ಬಂದಿದ್ದಳು. ಶುಕ್ರವಾರ ಮನೆಯಲ್ಲಿ ಆಟವಾಡುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದಾಳೆ. ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Mysore Dasara 2022 | ಕುಶಾಲುತೋಪು ತಾಲೀಮು ಸ್ಥಳಾಂತರಕ್ಕೆ ಕಾರಣ ಅರಮನೆಯಲ್ಲ, ಗುತ್ತಿಗೆದಾರ