ಹೊನ್ನಾಳಿ: ತಾಲೂಕಿನ ರಾಮೇಶ್ವರ (Honnali News) ಗ್ರಾಮದಲ್ಲಿರುವ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಶ್ರೀ ಕುಮಾರರಾಮ ಸ್ವಾಮಿ ದೇವರ ವಾರ್ಷಿಕ ರಥೋತ್ಸವ ಕಾರ್ಯಕ್ರಮಕ್ಕೆ ಸೋಮವಾರ ಬೆಳಗ್ಗೆ 7.30ಕ್ಕೆ ಚಾಲನೆ ನೀಡಲಾಯಿತು.
ರಥೋತ್ಸವಕ್ಕೂ ಮೊದಲು ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಬಳಿಕ ದೇವರ ಉತ್ಸವ ಮೂರ್ತಿಯನ್ನು ವಾದ್ಯ ಮೇಳದೊಂದಿಗೆ ಮೆರವಣಿಗೆ ಮಾಡಲಾಯಿತು. ರಥಕ್ಕೆ ಪೂಜೆ ಸಲ್ಲಿಸಿದ ನಂತರ ಮಲ್ಲಿಕಾರ್ಜಿನ ಸ್ವಾಮಿ ಮತ್ತು ಕುಮಾರರಾಮ ಸ್ವಾಮಿ ದೇವರ ಮೂರ್ತಿಯನ್ನು ರಥದೊಳಗೆ ಪ್ರತಿಷ್ಟಾಪನೆ ಮಾಡಿ, ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು.
ಇದನ್ನೂ ಓದಿ: Ram Navami 2023: ಹೊಸನಗರ, ಚೆನ್ನಗಿರಿ, ಹೊನ್ನಾಳಿಯಲ್ಲಿ ಸಂಭ್ರಮದ ರಾಮನವಮಿ; ರಾಮನ ಹೆಸರೇ ಸ್ಫೂರ್ತಿ ಎಂದರು ರಾಘವೇಶ್ವರ ಶ್ರೀ
ಸಾವಿರಾರು ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆರು. ದೇವರಿಗೆ ಹಣ್ಣು ಕಾಯಿ ಸಮರ್ಪಿಸಿದ ಭಕ್ತರು ರಥವನ್ನು ಎಳೆಯುವ ಮೂಲಕ ರಥೋತ್ಸವದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಮಲ್ಲಿಕಾರ್ಜುನಪ್ಪ, ಗಂಗಾಧರಪ್ಪ ದೇವಿಕೊಪ್ಪ, ಎ ಪರಮೇಶ್ವರಪ್ಪ, ಡಿ.ರಾಮಗೌಡ್ರು, ಹೆಚ್ ತೀರ್ಥಲಿಂಗಪ್ಪ, ಚಂದ್ರಪ್ಪ ಪಾಟೀಲ್ ಗ್ರಾಮಸ್ಥರು ಹಾಗೂ ಅಕ್ಕಪಕ್ಕದ ಗ್ರಾಮದ ಭಕ್ತಾದಿಗಳು ಪಾಲ್ಗೊಂಡಿದ್ದರು.