ದಾವಣಗೆರೆ : ದಾವಣಗೆರೆ ನಗರದ ಚಾಮರಾಜಪೇಟೆ ಸರ್ಕಲ್ ನಲ್ಲಿರುವ (Davangere) ಶಿವ ಸಹಕಾರಿ ಬ್ಯಾಂಕ್ ನಲ್ಲಿ ಐಟಿ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.
ಹುಬ್ಬಳ್ಳಿ ಮೂಲದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಂದ ಕಳೆದ ಎರಡು ದಿನಗಳಿಂದ ಪರಿಶೀಲನೆ ನಡೆದಿದೆ. ನಾಲ್ಕು ಇನ್ನೊವಾ ಕಾರ್ ನಲ್ಲಿ ಬಂದಿದ್ದ ಹುಬ್ಬಳ್ಳಿ ಮೂಲದ ಐಟಿ ಅಧಿಕಾರಿಗಳು ತಪಾಸಣೆ ನಡೆದಿದ್ದಾರೆ. ಒಟ್ಟು 12 ಜನ ಐಟಿ ಅಧಿಕಾರಿಗಳಿಂದ ಕಳೆದ ಎರಡು ದಿನಗಳಿಂದ ಪರಿಶೀಲನೆ ನಡೆಯಿತು.
ಚುನಾವಣಾ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ವ್ಯವಹಾರದ ಬಗ್ಗೆ ಪರಿಶೀಲನೆ ನಡೆದಿದೆ. ಶನಿವಾರ ತಡರಾತ್ರಿ ವರೆಗೂ ಪರಿಶೀಲಿಸಿ ಕೆಲ ದಾಖಲೆಗಳನ್ನು ಅಧಿಕಾರಿಗಳು ಕೊಂಡೊಯ್ದರು.
ಹಾಸನ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (DCC Bank) ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇತ್ತೀಚೆಗೆ ದಾಳಿ ನಡೆಸಿದ್ದಾರೆ. ಜೆಡಿಎಸ್ (JDS Party) ಹಿಡಿತದಲ್ಲಿರುವ ಬ್ಯಾಂಕ್ ಮೇಲೆ ನಡೆದಿರುವ ದಾಳಿಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರಿ ಕುತೂಹಲ ಮತ್ತು ಆತಂಕ ನೆಲೆ ಮಾಡಿದೆ.
ಕಳೆದ ಶುಕ್ರವಾರ ಬೆಳಗ್ಗೆ ಐಟಿ ಅಧಿಕಾರಿಗಳು ಬ್ಯಾಂಕ್ ಪ್ರಧಾನ ಕಚೇರಿಗೆ ಭೇಟಿ ನೀಡಿದ್ದರು. ಚುನಾವಣೆಯ ಹೊಸ್ತಿಲಲ್ಲೂ, ಅದರಲ್ಲೂ ಜೆಡಿಎಸ್ ಸಾರಥ್ಯ ಇರುವ ಬ್ಯಾಂಕ್‌ಗೆ ಈ ರೀತಿ ಐಟಿ ದಾಳಿ ನಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬ್ಯಾಂಕ್‌ನಲ್ಲಿ ಯಾರೆಲ್ಲ ಠೇವಣಿ ಇಟ್ಟಿದ್ದರು. ಬ್ಯಾಂಕ್‌ನಲ್ಲಿ ಗಣ್ಯ ವ್ಯಕ್ತಿಗಳ ಖಾತೆಯಲ್ಲಿನ ವ್ಯವಹಾರದ ವಿವರಗಳು, ಠೇವಣಿ ಹಿಂದೆಗೆತ ಮತ್ತಿತರ ವಿಚಾರಗಳನ್ನು ತಂಡ ಪರಿಶೀಲಿಸುತ್ತಿದೆ ಎಂದು ಹೇಳಲಾಗಿದೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಅರ್ಬನ್ ಕ್ರೆಡಿಟ್ ಸೌಹಾರ್ದ ಕ್ರೆಡಿಟ್ ಮೇಲೂ ಇತ್ತೀಚೆಗೆ ಐಟಿ ದಾಳಿ ನಡೆದಿದೆ.