Site icon Vistara News

Karnataka Election : ಮತಯಾಚನೆ ಬಗ್ಗೆ ಪ್ರಧಾನಿ ಸಲಹೆ; ಲೈವ್‌ನಲ್ಲಿ ವೀಕ್ಷಿಸಿದ ಹೊನ್ನಾಳಿ ಬಿಜೆಪಿ ಮುಖಂಡರು, ಕಾರ್ಯಕರ್ತರು

#image_title

ಹೊನ್ನಾಳಿ: ವಿಧಾನಸಭಾ ಚುನಾವಣೆಗೆ (Karnataka Election) ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಸಾರ್ವಜನಿಕರಲ್ಲಿ ಮತ ಕೇಳುವುದು ಹೇಗೆ ಎನ್ನುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕರ್ತರಿಗೆ ತಿಳಿಸಿಕೊಟ್ಟಿದ್ದಾರೆ. ವರ್ಚುವಲ್‌ ಸಂವಾದದ ಮೂಲಕ ಪ್ರಧಾನಿ ಅವರು ನೀಡಿದ್ದ ಸಲಹೆಗಳನ್ನು ಹೊನ್ನಾಳಿಯ ಬಿಜೆಪಿ ಚುನಾವಣಾ ಕಚೇರಿಯ ಮುಂಭಾಗದಲ್ಲಿ ಕಾರ್ಯಕರ್ತರು ವೀಕ್ಷಿಸಿದ್ದಾರೆ.

ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಪಿ.ರೇಣುಕಾಚಾರ್ಯ, ಬಿಜೆಪಿ ಕಾರ್ಯಕರ್ತರು ಈ ಲೈವ್‌ ಕಾರ್ಯಕ್ರಮವನ್ನು ವೀಕ್ಷಿಸಿದರು. ಬೂತ್‌ ಮಟ್ಟದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ ಯಾವ ರೀತಿಯಲ್ಲಿ ಮತ ಕೇಳಬೇಕು, ಸರ್ಕಾರದ ಸಾಧನೆಗಳ ಬಗ್ಗೆ ಅವರಿಗೆ ಯಾವ ರೀತಿಯಲ್ಲಿ ಮಾಹಿತಿ ಕೊಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಕಾರ್ಯಕ್ರಮದಲ್ಲಿ ತಿಳಿಸಿಕೊಟ್ಟಿದ್ದಾರೆ. ಹಾಗೆಯೇ ಬೂತ್ ಮಟ್ಟದಲ್ಲಿ ಎಂತಹ ಸಂಕಷ್ಟ ಎದುರಾದರೂ ಸಾರ್ವಜನಿಕರು ಕೇಳುವಂತ ಪ್ರಶ್ನೆಗಳಿಗೆ ಉತ್ತರ ಕೊಡುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳುವುದು ಹೇಗೆ ಎನ್ನುವ ಬಗ್ಗೆಯೂ ಪ್ರಧಾನಿ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: Karnataka Election 2023 : ಪ್ರಚೋದನಕಾರಿ ಹೇಳಿಕೆ; ಅಮಿತ್ ಶಾ ವಿರುದ್ಧ ದೂರು ನೀಡಿದ ಕಾಂಗ್ರೆಸ್‌
ಈ ಸಂದರ್ಭದಲ್ಲಿ ಹೊನ್ನಾಳಿ ಬಿಜೆಪಿ ತಾಲೂಕು ಅಧ್ಯಕ್ಷ ಜೆ.ಕೆ.ಸುರೇಶ್, ತಾಲ್ಲೂಕು ಪಂಚಾಯತಿ ಉಪಾಧ್ಯಕ್ಷ ಶಿವಾನಂದ, ಪುರಸಭೆ ಸದಸ್ಯ ಹೊಸಕೇರಿ ಸುರೇಶ್, ಬಿಜೆಪಿ ಮುಖಂಡರಾದ ನಲವನ್ನೇ ಮಂಜಪ್ಪ, ಪಲ್ಲವಿ ರಾಜು, ಜಿಲ್ಲಾ ಕಾರ್ಯದರ್ಶಿ ನಾಗರಾಜ್ ಅರಕೆರೆ, ಹಂಚಿಕೆ ಪ್ರಭು ಇನ್ನು ಮುಂತಾದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರು ಹಾಗೂ ಮುಖಂಡರುಗಳು ಭಾಗವಹಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರ ಲೈವ್ ಕಾರ್ಯಕ್ರಮವನ್ನು ವೀಕ್ಷಿಸಿದರು.

Exit mobile version