Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ! - Vistara News

ದಾವಣಗೆರೆ

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

Medical negligence: ವೈದ್ಯನೊಬ್ಬನ ನಿರ್ಲಕ್ಷ್ಯಕ್ಕೆ ಶಿಶುವೊಂದು ಕಣ್ಣು ಬಿಡುವ ಮುನ್ನವೇ ಕಣ್ಣು ಮುಚ್ಚಿದೆ. ಸಿಸೇರಿಯನ್ ಮಾಡುವಾಗ ಹೊಟ್ಟೆಯಲ್ಲಿದ್ದ ಮಗುವಿನ ಮರ್ಮಾಂಗವನ್ನೇ ವೈದ್ಯ ಕೊಯ್ದಿದ್ದಾನೆ. ಪರಿಣಾಮ ಚಿಕಿತ್ಸೆ ಫಲಿಸದೇ ಮಗು ಮೃತಪಟ್ಟಿದೆ.

VISTARANEWS.COM


on

Medical negligence
ವೈದ್ಯ ನಿಜಾಮುದ್ದೀನ್ ಯಡವಟ್ಟಿಗೆ ಮಗು ಸಾವು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ: ಇತ್ತೀಚೆಗೆ ವೈದ್ಯರ ನಿರ್ಲಕ್ಷ್ಯಕ್ಕೆ (Medical negligence) ಬಲಿಯಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸದ್ಯ ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ವೈದ್ಯನ ಭಾರೀ ಯಡವಟ್ಟಿಗೆ ಹುಟ್ಟಿದಾಕ್ಷಣ ಮಗುವೊಂದು ಪ್ರಾಣವನ್ನೇ ಕಳೆದುಕೊಂಡಿದೆ. ವೈದ್ಯನೊಬ್ಬ ಹೆರಿಗೆ ಮಾಡುವಾಗ ಹೊಟ್ಟೆಯಲ್ಲಿದ್ದ ಮಗುವಿನ ಮರ್ಮಾಂಗವನ್ನೇ ಕೊಯ್ದಿದ್ದಾನೆ.

ದಾವಣಗೆರೆ ಕೊಂಡಜ್ಜಿ ರಸ್ತೆಯಲ್ಲಿರುವ ಅರ್ಜುನ್ ಎಂಬುವವರ ಪತ್ನಿ ಅಮೃತಾ ಹೆರಿಗೆಗೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ನಾರ್ಮಲ್‌ ಡೆಲಿವರಿ ಆಗದ ಹಿನ್ನೆಲೆಯಲ್ಲಿ ಸಿಸೇರಿಯನ್ ಮಾಡಲು ವೈದ್ಯರು ಮುಂದಾಗಿದ್ದರು. ಅದರಂತೆ ಕಳೆದ ಜೂನ್ 27ರಂದು ಅಮೃತಾಗೆ ಸಿಸೇರಿಯನ್ ಮಾಡಿ ಮಗು ತೆಗೆಯಲಾಗಿತ್ತು.

ಆದರೆ ಸಿಸೇರಿಯನ್‌ ಮಾಡುವಾಗ ವೈದ್ಯ ನಿಜಾಮುದ್ದೀನ್ ಮಗು ತೆಗೆಯುವಾಗ ಮರ್ಮಾಂಗವನ್ನೇ ಕೊಯ್ದಿದ್ದಾರೆ. ನಂತರ ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದರಿಂದ ಕೂಡಲೇ ಜಿಲ್ಲಾಸ್ಪತ್ರೆಯಿಂದ ಬಾಪೂಜಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಶುಕ್ರವಾರ ಮೃತಪಟ್ಟಿದೆ.

ಮಗುವಿನ ಸಾವಿಗೆ ವೈದ್ಯರು ಕಾರಣ ಎಂದು ಪೋಷಕರು ಆಕ್ರೋಶ ಹೊರಹಾಕಿದ್ದರು. ಜಿಲ್ಲಾಸ್ಪತ್ರೆ ಮುಂದೆ ಪ್ರತಿಭಟಿಸಿ, ಮಗುವಿನ ಸಾವಿಗೆ ಕಾರಣನಾದ ವೈದ್ಯನನ್ನು ಅಮಾನತು ಮಾಡುವಂತೆ ಒತ್ತಾಯಿಸಿದರು.

Medical negligence

ಇದನ್ನೂ ಓದಿ: Medical Ethics : ಎದೆ ನೋವೆಂದು ಕ್ಲಿನಿಕ್​ಗೆ ಬಂದ ಯುವತಿ; ತಪಾಸಣೆ ನೆಪದಲ್ಲಿ ಅಂಗಿ ಬಿಚ್ಚಿಸಿ ಮುತ್ತಿಟ್ಟ ವೈದ್ಯ; ಕೇಸ್​ ದಾಖಲಿಸಲು ಕೋರ್ಟ್​ ಸೂಚನೆ

ಮೊದಲ ರಾತ್ರಿಯ ಟೆನ್ಶನ್‌ಗೆ ವರ ಆತ್ಮಹತ್ಯೆ? ಉತ್ತರ ಪ್ರದೇಶದಲ್ಲೊಂದು ವಿಲಕ್ಷಣ ಘಟನೆ

ಮದುವೆಯಾದ ಮೇಲೆ ಗಂಡನ ಮನೆಗೆ ಬರುವ ವಧು ತನ್ನ ಪತಿಯ ಜೊತೆ ಸುಖವಾಗಿ ಸಂಸಾರ ನಡೆಸುವಂತಹ ಹಲವಾರು ಕನಸುಗಳನ್ನು ಹೊತ್ತು ಬರುತ್ತಾಳೆ. ಆದರೆ ಅಂತಹ ವಧುವಿನ ಕನಸು ಕ್ಷಣಮಾತ್ರದಲ್ಲಿ ನುಚ್ಚು ನೂರಾದರೆ ಅವಳಿಗೆ ಆಘಾತವಾಗುವುದು ಖಂಡಿತ. ಅಂತಹದೊಂದು ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯಲ್ಲಿ ನಡೆದಿದೆ. ಹೊಸದಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಧು ಮೊದಲ ರಾತ್ರಿಗಾಗಿ ಕೋಣೆಗೆ ಹಾಲು ತೆಗೆದುಕೊಂಡು ಹೋದಾಗ ಅಲ್ಲಿ ವರನು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Self Harming) ಶರಣಾಗಿದ್ದ.

ಉತ್ತರ ಪ್ರದೇಶದ ಇಟಾವಾ ಜಿಲ್ಲೆಯ ರತನ್ಪುರ ಗ್ರಾಮದಲ್ಲಿ ಸಂಭ್ರಮದ ಮದುವೆ ಆಚರಣೆಗಳು ಮುಗಿದು ವಧು ಮೊದಲ ರಾತ್ರಿಗೆಂದು ವರನಿಗೆ ಹಾಲು ತೆಗೆದುಕೊಂಡು ಕೋಣೆಗೆ ಹೋದಾಗ ವರನು ಆತ್ಮಹತ್ಯೆ ಮಾಡಿಕೊಂಡಿದ್ದನು. ಇದರಿಂದ ಆ ಕುಟುಂಬದಲ್ಲಿ ಗೋಳಾಟ ಮುಗಿಲುಮುಟ್ಟಿದೆ.

Self Harming

24 ವರ್ಷದ ಸತ್ಯೇಂದ್ರ ಆತ್ಮಹತ್ಯೆ ಮಾಡಿಕೊಂಡ ವರ. ಈತ ಆತನ ವಧು ವಿನಿತಾ ಕುಮಾರಿ ಅವರೊಂದಿಗೆ ಅದ್ಧೂರಿಯಾಗಿ ಮದುವೆಯಾಗಿದ್ದು, ನಂತರ ದಿಬ್ಬಣ ಭರ್ಜರಿ ಮೆರವಣಿಗೆಯೊಂದಿಗೆ ಆತನ ಗ್ರಾಮಕ್ಕೆ ಮರಳಿದೆ. ನವವಿವಾಹಿತ ವಧುವನ್ನು ಮನೆಗೆ ಸಂಭ್ರಮದಿಂದ ಸ್ವಾಗತಿಸಲಾಗಿತ್ತು. ಹಾಗೇ ವಧುವರರ ಮೊದಲ ರಾತ್ರಿಗೆಂದು ಸಿದ್ಧತೆ ನಡೆಯುತ್ತಿದ್ದು, ವಧು ಹಾಲು ಹಿಡಿದುಕೊಂಡು ಪತಿಯ ಕೋಣೆಗೆ ಹೋದಾಗ ಆತ ಮದುವೆಯ ಉಡುಗೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ. ಇದನ್ನು ಕಂಡು ವಧು ಆಘಾತಕ್ಕೊಳಗಾಗಿದ್ದಾಳೆ. ಈ ಸುದ್ದಿ ಕುಟುಂಬಸ್ಥರು ಮತ್ತು ಅತಿಥಿಗಳಿಗೆ ನಂಬಲು ಅಸಾಧ್ಯವಾಗಿದೆ.

ಈ ಬಗ್ಗೆ ಉಸ್ರಾಹರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಸತೇಂದ್ರ ಅವರ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪೊಲೀಸರು ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಆದರೆ ಸತ್ಯೇಂದ್ರ ಅವರ ಆತ್ಮಹತ್ಯೆಯ ಹಿಂದಿನ ಉದ್ದೇಶ ತಿಳಿದುಬಂದಿಲ್ಲ. ಮೊದಲ ರಾತ್ರಿಯ ಟೆನ್ಶನ್‌ಗೆ ಆತ್ಮಹತ್ಯೆ ಮಾಡಿಕೊಂಡಿರಬಹುದಾ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಪೊಲೀಸರು ಸತ್ಯೇಂದ್ರ ಅವರ ಅಕಾಲಿಕ ಸಾವಿನ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.

ಸಂಭ್ರಮಾಚರಣೆಯಲ್ಲಿ ತೇಲಾಡುತ್ತಿದ್ದ ಕುಟುಂಬವನ್ನು ಈ ಘಟನೆ ಶೋಕಾಚರಣೆಯಲ್ಲಿ ಮುಳುಗುವಂತೆ ಮಾಡಿದೆ. ಇನ್ನೂ ಮದುವೆಯಾಗಿ ಕ್ಷಣಗಳೇ ಕಳೆದಿದ್ದು, ಜೀವನಪರ್ಯಂತ ಒಟ್ಟಿಗೆ ಇರುತ್ತಾನೆ ಎಂದು ಭಾವಿಸಿದ ಪತಿ ಸಾವಿಗೆ ಶರಣಾಗಿದ್ದನ್ನು ಕಂಡು ವಧು ಆಘಾತಕ್ಕೊಳಗಾಗಿದ್ದಾಳೆ. ಅಲ್ಲದೇ ಸಾಲಸೂಲ ಮಾಡಿ ಮಗಳು ಗಂಡನ ಮನೆಯಲ್ಲಿ ಸುಖವಾಗಿರಲಿ ಎಂದು ಬಯಸಿದ ಆಕೆಯ ಪೋಷಕರಿಗೆ ಈ ಘಟನೆ ಆಕಾಶವೇ ಕಳಚಿ ತಲೆಯ ಮೇಲೆ ಬಿದ್ದಂತೆ ಭಾಸವಾಗಿದೆ. ಒಟ್ಟಾರೆ ಈ ಮದುವೆ ಸಂಭ್ರಮ ದುರಂತದ ತಿರುವು ತೆಗೆದುಕೊಂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka Rain : ಸತತ ಮಳೆಯಿಂದಾಗಿ ಕರಾವಳಿ ಹಾಗೂ ಮಲೆನಾಡು ಭಾಗದ ಜನರು ಕಂಗಲಾಗಿದ್ದಾರೆ. ಉಡುಪಿಯಲ್ಲಿ ನೆರೆಹಾವಳಿಯಿಂದ ಮಕ್ಕಳು ಶಾಲೆಗೆ ಹೋಗಲು ಆಗದೆ ಪರದಾಡುತ್ತಿದ್ದಾರೆ. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಮತ್ತೊಂದು ಸೇತುವೆಯೂ ಮುಳುಗಡೆಯಾಗಿದೆ. ಹಿರೇಕೊಳಲೆ ಕೆರೆ ಭರ್ತಿಯಾಗಿದ್ದು, ಗಾಳಿಗೆ ವಿದ್ಯುತ್‌ ತಂತಿ ಮೇಲೆ ಮರ ಬಾಗಿ ಸಮಸ್ಯೆ (Rain Effect) ಸೃಷ್ಟಿಯಾಗಿದೆ.

VISTARANEWS.COM


on

By

Karnataka Rain
Koo

ಉಡುಪಿ: ಉಡುಪಿಯ ಬೈಂದೂರಿನಲ್ಲಿ ಮಳೆಗಾಲದ (Karnataka Rain) ಗೋಳು ಮುಗಿಯುವುದಿಲ್ಲ. ಮಳೆ (Rain News) ಬಂದರೆ ಶಾಲೆಗೆ ರಜೆ ಯಾಕೆ ಎನ್ನುವವರು ಈ ಸುದ್ದಿಯನ್ನು ಓದಲೇಬೇಕು. ಇಲ್ಲಿ ಜೋರಾಗಿ ಮಳೆ ಬಂದರೆ ಮಕ್ಕಳು ಶಾಲೆಗೆ ಗೈರು ಹಾಜರಾತಿಯೇ ಗತಿ. ಯಾಕಂದರೆ ಮಳೆ ಬಂದು ಹೋದ ಮೇಲೆ ನೆರೆಯಿಂದಾಗಿ ಹಳ್ಳ ದಾಟಿಕೊಂಡು ಶಾಲೆಗಳಿಗೆ ಹೋಗಲು ಮಕ್ಕಳು ಪರದಾಡಬೇಕಾಗುತ್ತದೆ.

ಉಡುಪಿಯ ಕುಂದಾಪುರ ತಾಲೂಕಿನ ಆಜ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೆಬ್ಬಾರ್ ತಡಿಯಲ್ಲಿ 25 ಮನೆಗಳಿದ್ದು, ಮಳೆ ಬಂದರೆ ಮನೆಯಲ್ಲೇ ಲಾಕ್‌ ಆಗಬೇಕಾಗುತ್ತದೆ. ಮುಖ್ಯಪೇಟೆ ಸಿದ್ದಾಪುರಕ್ಕೆ ತೆರಳಬೇಕಾದರೂ ಸಂಕಷ್ಟ ಎದುರಾಗುತ್ತದೆ. ನೀರಿನ ಪ್ರಮಾಣ ಇಳಿಕೆ ಅದರಷ್ಟೇ ಹಳ್ಳ ದಾಟಿ ಶಾಲೆಗೆ ಹೋಗಬೇಕಾಗುತ್ತದೆ.

ಇತ್ತ ಬೆಳಗ್ಗೆ ನೀರು ಇಳಿಕೆ ಆದರೆ ಸಂಜೆಗೆ ಏರಿಕೆ ಆಗುವ ಆತಂಕ ಇದೆ. ಹೀಗಾಗಿ ಶಾಲೆಗೆ ಕಳುಹಿಸಲು ಪೋಷಕರು ಮೀನಾಮೇಷ ಎಣಿಸುತ್ತಾರೆ. ಮಳೆ ಬಂದರೆ ರಜೆ ನೀಡಿ ಎನ್ನುತ್ತಿದ್ದಾರೆ. ನೌಕರಿಗೆ ತೆರಳುವವರಿಗೂ ಈ ಹಳ್ಳದ್ದೇ ಸಮಸ್ಯೆ ಇದೆ. ಇದುವರೆಗೂ ಕಿರು ಸೇತುವೆ ನಿರ್ಮಿಸಲು ಸಾಧ್ಯವಾಗಿಲ್ಲ.

ಮಳೆಗೆ ಸೇತುವೆ ಮುಳುಗಡೆ

ಮಹಾರಾಷ್ಟ್ರ ಮತ್ತು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಮತ್ತೊಂದು ಸೇತುವೆಯೂ ಮುಳುಗಡೆಯಾಗಿದೆ. ದೂದಗಂಗಾ ನದಿಯ ಚಿಕ್ಕೋಡಿ ತಾಲೂಕಿನ ಮಲ್ಲಿಕವಾಡ-ದತ್ತವಾಡ ಸಂಪರ್ಕ ಸೇತುವೆ ಜಲಾವೃತಗೊಂಡಿದೆ. ಮೊದಲೇ ನಾಲ್ಕು ಕೆಳ ಹಂತದ ಸೇತುವೆಗಳು ಮುಳುಗಡೆಯಾಗಿದೆ.

ನಿಪ್ಪಾಣಿ ತಾಲೂಕಿನ ಕುನ್ನೂರ-ಬಾರವಾಡ ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿದೆ. ವೇದಗಂಗಾ ನದಿಗೆ ಅಡ್ಡಲಾಗಿ ಇರುವ ಕೆಳ ಹಂತದ ಸೇತುವೆ, ದೂದಗಂಗಾ ನದಿಯ ಕಾರದಗಾ-ಬೋಜ್, ಕುನ್ನೂರ-ಭೋಜವಾಡಿ ಸಂಪರ್ಕಿಸುವ ಸೇತುವೆ ಸೇರಿ ಕೃಷ್ಣಾ ನದಿಗೆ ಅಡ್ಡಲಾಗಿರುವ ಮಾಂಜರಿ – ಭಾವನ ಸೌಂದತ್ತಿ ಸೇತುವೆಯೂ ಮುಳುಗಡೆಯಾಗಿದೆ. ಹೀಗಾಗಿ ಪರ್ಯಾಯ ಮಾರ್ಗಗಳ ಮೂಲಕ ಜನರು ಸಂಚಾರಿಸುವಂತಾಗಿದೆ. ಕೃಷ್ಣಾ ನದಿಗೆ ಸುಮಾರು 63 ಸಾವಿರ ಕ್ಯೂಸೆಕ್‌ಗೂ ಹೆಚ್ಚು ನೀರಿನ ಒಳಹರಿವು ಬೀಡಲಾಗಿದೆ. ಹೀಗಾಗಿ ನದಿಗೆ ಇಳಿಯದಂತೆ ಬೆಳಗಾವಿ ಜಿಲ್ಲಾಡಳಿತದಿಂದ ನದಿ ಪಾತ್ರದ ಜನರಿಗೆ ಮನವಿ ಮಾಡಿದೆ.

ಹಿರೇಕೊಳಲೆ ಕೆರೆ ಭರ್ತಿ! ವಿದ್ಯುತ್‌ ತಂತಿ ಮೇಲೆ ಬಾಗಿದ ಮರ

ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಭಾರಿ ಮಳೆಯಿಂದಾಗಿ ಹಿರೇ ಕೊಳಲೆ ಕೆರೆ ತುಂಬುವ ಹಂತಕ್ಕೆ ತಲುಪಿದೆ. ಚಿಕ್ಕಮಗಳೂರು ನಗರಕ್ಕೆ ನೀರು ಪೂರೈಸುವ ಬೃಹತ್ ಕೆರೆ ಇದಾಗಿದ್ದು, ಕೆರೆಗೆ ಬಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಇತ್ತ ವೀಕ್ಷಣಾ ಗೋಪುರ ಸಂಪೂರ್ಣ ಶಿಥಿಲಾವಸ್ಥೆ ತಲುಪಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ವೀಕ್ಷಣ ಗೋಪುರದ ಬಳಿ ಪ್ರವಾಸಗರಿಗೆ ನಿಷೇಧ ಹೇರಲಾಗಿದೆ. ಪೊಲೀಸರು ಗೋಪುರದ ಹಾದಿಗೆ ಅಡ್ಡಲಾಗಿ ಬೇಲಿ ಹಾಕಿದ್ದಾರೆ. ಕೆರೆ ಕೋಡಿ ಬೀಳಲು ಕೇವಲ ಮೂರು ಅಡಿ ಮಾತ್ರ ಬಾಕಿ ಇದೆ.

ಚಿಕ್ಕಮಗಳೂರಿನಲ್ಲಿ ಭಾರಿ ಗಾಳಿ-ಮಳೆಗೆ ಅಡಿಕೆ ಮರಗಳು ರಾಷ್ಟ್ರೀಯ ಹೆದ್ದಾರಿ ಪಕ್ಕದ ವಿದ್ಯುತ್ ತಂತಿಯ ಮೇಲೆ ಬಾಗಿವೆ. ಪರಿಣಾಮ ವಿದ್ಯುತ್ ತಂತಿಗೆ ಹಾನಿಯಾಗಿವೆ. ಮೂಡಿಗೆರೆ ತಾಲೂಕಿನ ಫಲ್ಗುಣಿ ಗ್ರಾಮದ ಬಳಿ ಘಟನೆ ನಡೆದಿದೆ. ಮತ್ತಷ್ಟು ಅಡಿಕೆ ಮರಗಳು ವಿದ್ಯುತ್ ತಂತಿಯ ಮೇಲೆ ಬೀಳುವ ಸಾಧ್ಯತೆ ಇದೆ. ಹೀಗಾಗಿ ಸ್ಥಳೀಯರು ಮೆಸ್ಕಾಂ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Karnataka Rain : ಸಮುದ್ರಕ್ಕೆ ಇಳಿಯದಂತೆ ಕಡಲತೀರದಲ್ಲಿ ರೆಡ್ ಫ್ಲ್ಯಾಗ್ ಅಳವಡಿಸಿದರೂ ಹುಚ್ಚಾಟ ತೋರಿದ ಪ್ರವಾಸಿಗರಿಗೆ ಲೈಫ್‌ಗಾರ್ಡ್‌ಗಳು ಬಿಸಿ ಮುಟ್ಟಿಸಿದ್ದಾರೆ. ಅಪಾಯವನ್ನು ಲೆಕ್ಕಿಸದೇ ಈಜುತ್ತಿದ್ದವರನ್ನು ದಡಕ್ಕೆ ಎಳೆದು ತಂದು ಥಳಿಸಿದ್ದಾರೆ.

VISTARANEWS.COM


on

By

Karnataka weather Forecast
Koo

ಕಾರವಾರ: ಭಾರಿ ಮಳೆ (Karnataka Rain) ನಡುವೆ ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರನ್ನು ದರದರನೇ ಎಳೆದುತಂದು ಲೈಫ್‌ಗಾರ್ಡ್‌ ಸಿಬ್ಬಂದಿ ಥಳಿಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ರವೀಂದ್ರನಾಥ ಟಾಗೋರ್ ಕಡಲತೀರದಲ್ಲಿ ಘಟನೆ ನಡೆದಿದೆ.

ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಅಬ್ಬರ ಒಂದೆಡೆ ಸಮುದ್ರತೀರದಲ್ಲಿ ಪ್ರವಾಸಿಗರ ಹುಚ್ಚಾಟ ಮಿತಿಮೀರಿದೆ. ಅಪಾಯದ ಎಚ್ಚರಿಕೆಯನ್ನು ನಿರ್ಲಕ್ಷಿಸಿದ ಕೆಲ ಪ್ರವಾಸಿಗರು ಸಮುದ್ರಕ್ಕಿಳಿದು, ಈಜುತ್ತಿದ್ದರು. ಅಪಾಯಕಾರಿ ರೀತಿಯಲ್ಲಿ ಅಲೆಗಳು ಅಪ್ಪಳಿಸುತ್ತಿದ್ದರೂ ಲೆಕ್ಕಿಸದೇ ಮೋಜು ಮಸ್ತಿ ಮಾಡುತ್ತಿದ್ದರು.

ಹೀಗಾಗಿ ನೀರಲ್ಲಿ ಈಜಲು ತೆರಳಿದ್ದ ಪ್ರವಾಸಿಗರಿಗೆ ಥಳಿಸಿ ಲೈಫ್‌ಗಾರ್ಡ್‌ಗಳು ದಡಕ್ಕೆ ಕರೆತಂದಿದ್ದಾರೆ. ಬಳಿಕ ಸೂಚನೆಯನ್ನು ನಿರ್ಲಕ್ಷ್ಯಿಸಿ ನೀರಿಗಿಳಿದಿದ್ದಕ್ಕೆ ಹೊಡೆದು ಬುದ್ಧಿ ಹೇಳಿದ್ದಾರೆ. ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜತೆಗೆ ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿಯೇ ನೀರಿಗಿಳಿಯದಂತೆ ಕಡಲತೀರದಲ್ಲಿ ರೆಡ್ ಫ್ಲ್ಯಾಗ್ ಅಳವಡಿಸಿದರೂ ಹುಚ್ಚಾಟ ತೋರಿದ ಪ್ರವಾಸಿಗರಿಗೆ ಬಿಸಿ ಮುಟ್ಟಿಸಲಾಗಿದೆ.

ನಿರಂತರ ಮಳೆಯಿಂದಾಗಿ ಚಾರ್ಮಾಡಿ ಘಾಟ್‌ ಅಧೋಗತಿ

ಚಿಕ್ಕಮಗಳೂರಿನಲ್ಲಿ ರಣಮಳೆಗೆ ಜನ-ಜೀವನ ಅಸ್ತವ್ಯಸ್ತವಾಗಿದೆ. ಮಳೆಯ ಅಬ್ಬರಕ್ಕೆ ಚಾರ್ಮಾಡಿ, ಕೊಟ್ಟಿಗೆಹಾರದಲ್ಲಿ ಕೇವಲ 7 ದಿನಕ್ಕೆ 96 ಇಂಚು ಪ್ರಮಾಣದ ಮಳೆ ದಾಖಲಾಗಿದೆ. ಇತ್ತ ನಿರಂತರ ಮಳೆಯಿಂದಾಗಿ ಚಾರ್ಮಾಡಿ ಹೆದ್ದಾರಿ ಸಂಚಾರ ಅಧೋಗತಿ ತಲುಪಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಲ್ಲಿ ವಾಹನ ಚಲಾಯಿಸಲು ಚಾಲಕರು ಪರದಾಡುತ್ತಿದ್ದಾರೆ. ಮಂಜು ಮಿಶ್ರಿತ ಮಳೆಯಿಂದಾಗಿ ಸಂಚಾರಕ್ಕೆ ಅಡೆತಡೆಯಾಗಿದ್ದು ಜತೆಗೆ ಗುಡ್ಡ ಕುಸಿತದ ಆತಂಕವು ಹೆಚ್ಚಿದೆ. ಕಳೆದ ಭಾನುವಾರ ರಾತ್ರಿ ಚಾರ್ಮಾಡಿಯ ಆಲೆಖಾನ್ ಬಳಿ ಗುಡ್ಡ ಕುಸಿದಿತ್ತು.

ಇದನ್ನೂ ಓದಿ: Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

ಮನೆಗಳಿಗೆ ನುಗ್ಗುತ್ತಿರುವ ನೀರು, ಕೆರೆಯಂತಾದ ಜಮೀನು

ಉತ್ತರಕನ್ನಡ ಜಿಲ್ಲೆಯಲ್ಲಿ ನಿಲ್ಲದ ಮಳೆ ಅಬ್ಬರಕ್ಕೆ ಹಲವೆಡೆ ಮನೆಗಳಿಗೆ ನೀರು ನುಗ್ಗುತ್ತಿದೆ. ಅಂಕೋಲಾ ತಾಲ್ಲೂಕಿನ ಅವರ್ಸಾದಲ್ಲಿ ಹೆದ್ದಾರಿ ಪಕ್ಕದ ಜಮೀನು ಕೆರೆಯಂತಾಗಿತ್ತು. ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಗುಡ್ಡ ಕುಸಿಯುವ ಭೀತಿಯಲ್ಲಿ ಜನರು ಕಾಲಕಳೆಯುತ್ತಿದ್ದಾರೆ. ಕಾರವಾರ, ಅಂಕೋಲಾ ಭಾಗದಲ್ಲಿ ಸಮುದ್ರಕ್ಕೆ ನೀರು ಹರಿದುಹೋಗದೇ ಹಲವೆಡೆ ಅವಾಂತರವೇ ಸೃಷ್ಟಿಯಾಗಿದೆ.

ಇನ್ನೂ ಉತ್ತರಕನ್ನಡದಲ್ಲಿ ಭಾರೀ ಮಳೆಯಿಂದಾಗಿ ಜಲಾಶಯಗಳಿಗೆ ನೀರು ಹರಿದುಬರುತ್ತಿದೆ. ಸೂಪಾ ಜಲಾಶಯದಲ್ಲಿ ನೀರಿನ ಒಳಹರಿವು ಹೆಚ್ಚಿದೆ. ಜೋಯಿಡಾದ ಗಣೇಶಗುಡಿಯಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೂಪಾ ಜಲಾಶಯದ ಗರಿಷ್ಠ 564 ಮೀ ಸಾಮರ್ಥ್ಯ ಇದ್ದು, ಸದ್ಯ ಜಲಾಶಯದಲ್ಲಿ 532.32 ಮೀ ನೀರು ಸಂಗ್ರಹವಾಗಿದೆ.

ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಗುಂಡಬಾಳ ನದಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ನದಿ ತೀರ ಪ್ರದೇಶದ ತೋಟ, ಮನೆಗಳಿಗೆ ನೀರು ನುಗ್ಗಿದೆ. ನೆರೆಯಿಂದಾಗಿ ಗ್ರಾಮದ ಜನರು ಸಂತ್ರಸ್ತರಾಗುವ ಆತಂಕ ಎದುರಾಗಿದೆ. ಮಲೆನಾಡಿನಲ್ಲಿ ಹೆಚ್ಚು ಮಳೆಯಾದ ಕಾರಣ ಗುಂಡಬಾಳ ನದಿ ನೀರಿನಮಟ್ಟ ಏರಿಕೆ ಆಗಿದೆ. ನದಿ ಪಾತ್ರದ ನಿವಾಸಿಗಳನ್ನು ಎತ್ತರದ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸ್ಥಳೀಯಾಡಳಿತದಿಂದ ಸೂಚನೆ ನೀಡಿದೆ.

ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ

ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ತಗ್ಗು ಪ್ರದೇಶ, ಗದ್ದೆ ಸಾಲುಗಳಿಗೆ ಭಾರೀ ಪ್ರಮಾಣದ ನೀರು ಹರಿದುಹೋಗುತ್ತಿದೆ. ಜನವಸತಿ ಪ್ರದೇಶಗಳತ್ತ ನೀರು ನುಗ್ಗಿ, ರಸ್ತೆಯಲ್ಲಿ ನದಿಯಂತೆ ಹರಿಯುತ್ತಿದೆ. ಸಗ್ರಿ, ಗುಂಡಿಬೈಲು, ಚಕ್ರತೀರ್ಥ ಪ್ರದೇಶದಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ.

ಜತೆಗೆ ಬೈಲಕೆರೆ, ಕಲ್ಸಂಕ ಮಠದಬೆಟ್ಟು ಜಲಾವೃತಗೊಂಡಿದೆ. ಬೈಲಕೆರೆ ಸಮೀಪ ಮನೆಗಳಿಗೆ ನೀರು ನುಗ್ಗಿ ನೆರೆ ಸೃಷ್ಟಿಯಾಗಿತ್ತು. ಹೀಗಾಗಿ ಗುಂಡಿಬೈಲು ಸಮೀಪ ಐದಾರು ಕುಟುಂಬಗಳ ಸದಸ್ಯರನ್ನು ಅಗ್ನಿಶಾಮಕ ದಳದಿಂದ ರಕ್ಷಣೆ ಮಾಡಲಾಗಿದೆ. ಒಂದು ಮನೆಯ ಮೂವರನ್ನು ರಕ್ಷಣೆ ಮಾಡಿ, ಪಾಡಿಗಾರು ಸಮೀಪ ನಾಲ್ಕು ಮನೆಗಳ ಜನರನ್ನು ಎತ್ತರ ಪ್ರದೇಶಕ್ಕೆ ಶಿಫ್ಟ್ ಮಾಡಿದ್ದಾರೆ. ಉಡುಪಿ ಅಂಬಾಗಿಲು ಕಲ್ಸಂಕ ರಸ್ತೆಯಲ್ಲಿ ಸಂಪೂರ್ಣ ನೆರೆಯಾಗಿದೆ. ಉಡುಪಿ ನಗರಕ್ಕೆ ಸಂಪರ್ಕ ಕಲ್ಪಿಸುವ ಬಹುಮುಖ್ಯ ರಸ್ತೆಯಲ್ಲಿ ನೀರು ನಿಂತಿದ್ದು, ನಗರದ ಗುಂಡಿಬೈಲು ವಾಹನ ಸಂಚಾರ ದುಸ್ತರ ಪರಿಸ್ಥಿತಿಯಲ್ಲಿ ಇದೆ.

ರಾಷ್ಟ್ರೀಯ ಹೆದ್ದಾರಿ 66ರ ಅಂಡರ್ ಪಾಸ್ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನೀರು ನಿಂತು ಸಮಸ್ಯೆಯಾಗಿದೆ. ಸರ್ವಿಸ್ ರಸ್ತೆಯಲ್ಲಿ ನೀರು ನಿಂತು ದಿನವು ಇಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಅಂಡರ್ ಪಾಸ್ ಕಾಮಗಾರಿ ವೇಳೆ ಅವೈಜ್ಞಾನಿಕ ಚರಂಡಿ ನಿರ್ಮಾಣದಿಂದ ಸರ್ವಿಸ್ ರಸ್ತೆ ಬ್ಲಾಕ್ ಆಗಿದೆ ಎಂದು ಸ್ಥಳೀಯರು ಕಿಡಿಕಾರಿದರು. ಸ್ಥಳೀಯರ ದೂರಿನ ಹಿನ್ನೆಲೆ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಪರಿಸ್ಥಿತಿ ಅವಲೋಕಿಸಿದರು. ತಕ್ಷಣ ಈ ಸಮಸ್ಯೆಗೆ ತುರ್ತು ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸಂಸದರು ಸೂಚಿಸಿದರು. ಸರ್ವಿಸ್ ರಸ್ತೆ ಪಕ್ಕದಲ್ಲಿರುವ ಚರಂಡಿ ವ್ಯವಸ್ಥೆ, ಸರಿ ಮಾಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಸಂಸರಿಗೆ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಸಾಥ್‌ ನೀಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರಲ್ಲಿ ಗುಡುಗು ಸಹಿತ ಮಳೆ; ಕರಾವಳಿ, ಮಲೆನಾಡಿನಲ್ಲಿ ವರುಣಾರ್ಭಟ ಮುಂದುವರಿಕೆ

Rain News: ಬೆಂಗಳೂರಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವರುಣಾರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕ ಕರಾವಳಿಯಲ್ಲಿ ಮಧ್ಯಮದಿಂದ ಭಾರಿ ಮಳೆಯಾಗಲಿದ್ದು, ಪ್ರತ್ಯೇಕದಿಂದ ಚದುರಿದ ಸ್ಥಳಗಳಲ್ಲಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು ಭಾಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಚದುರಿದ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಮಂಡ್ಯ, ರಾಮನಗರ, ಮೈಸೂರು ಹಾಗೂ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ವಿಜಯನಗರದಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ಬೆಳಗಾವಿಯಲ್ಲಿ ಭಾರಿ ಮಳೆ ಎಚ್ಚರಿಕೆ

ಉತ್ತರ ಒಳನಾಡಿ ವ್ಯಾಪಕವಾಗಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ರಾಯಚೂರು, ಬೀದರ್, ಕಲಬುರಗಿ, ಧಾರವಾಡ ಮತ್ತು ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ಯಾದಗಿರಿ, ಬಾಗಲಕೋಟೆಯಲ್ಲಿ ಮಧ್ಯಮ ಮಳೆಯಾಗಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ಬೆಂಗಳೂರಲ್ಲಿ ಗುಡುಗು ಸಹಿತ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Leopard Attack : ದಾಳಿ ಮಾಡಿದ ಚಿರತೆಯನ್ನು ಹೊಡೆದು ಕೊಂದು ಆಂಬ್ಯುಲೆನ್ಸ್‌ಗೆ ಹಾಕಿದ ಗ್ರಾಮಸ್ಥರು

ಇಂದು ಕರಾವಳಿ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ

ಕರಾವಳಿಯ ಉತ್ತರಕನ್ನಡದಲ್ಲಿ ಧಾರಾಕಾರ ಮಳೆ‌‌ಯಾಗಲಿದ್ದು, ಶಾಲಾ- ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ. ರಿಂದ ರಜೆ ಆದೇಶ ಹೊರಡಿಸಲಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಇನ್ನೂ ಘಟ್ಟದ ಮೇಲಿನ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಇಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Karnataka Weather Forecast : ಕರಾವಳಿಯಲ್ಲಿ ಸೋಮವಾರ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಮುನ್ನೆಚ್ಚರಿಕಾ ದೃಷ್ಟಿಯಿಂದ ಹಲವು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು/ಕಾರವಾರ: ಕರಾವಳಿ ಭಾಗದಲ್ಲಿ ಮಳೆಯು ಅಬ್ಬರಿಸುತ್ತಿದ್ದು, ಜು.8ಕ್ಕೂ ವ್ಯಾಪಕ ಮಳೆಯಾಗುವ (Heavy rain Alert) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಕರಾವಳಿಯ ಉತ್ತರಕನ್ನಡದಲ್ಲಿ ನಾಳೆಯೂ ಧಾರಾಕಾರ ಮಳೆ‌‌ಯಾಗಲಿದ್ದು, ಶಾಲಾ- ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ. ರಿಂದ ರಜೆ ಆದೇಶ ಹೊರಡಿಸಲಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಇನ್ನೂ ಘಟ್ಟದ ಮೇಲಿನ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಇಲ್ಲ.

ಬೆಂಗಳೂರಲ್ಲಿ ಸಾಧಾರಣ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಮುಂಜಾನೆ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲಿಯಸ್ಸ್‌ ಇರಲಿದೆ.

ಇದನ್ನೂ ಓದಿ: Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

ಮಳೆಗೆ ಕುಸಿದು ಬಿದ್ದ ಮನೆ ಗೋಡೆ

ಭಾರೀ ಗಾಳಿ ಮಳೆಗೆ ಗೋಡೆ ಬಿದ್ದು ಮನೆಗೆ ಹಾನಿಯಾಗಿದೆ. ಉತ್ತರಕನ್ನಡ ಜಿಲ್ಲೆಯ ಕುಮಟಾದ ಕುಮಟಾ ವಾಲಗಳ್ಳಿ ಗ್ರಾ.ಪಂ ವ್ಯಾಪ್ತಿಯ ಕೋಟೆಗುಡ್ಡದಲ್ಲಿ ಘಟನೆ ನಡೆದಿದೆ. ಕೋಟೆಗುಡ್ಡದ ರಘು ಹಮ್ಮು ಮುಕ್ರಿ ಎಂಬುವವರ ಮನೆ ಕುಸಿದು ಬಿದ್ದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಕುಸಿದು ಪರಿಣಾಮ ಯಾವುದೇ ಸಾವು-ನೋವು ಸಂಭವಿಸಿಲ್ಲ.

ಪಕ್ಕದ ವಿಷ್ಣು ಹಮ್ಮು ಮುಕ್ರಿ ಅವರ ಮನೆಯ ಗೋಡೆಯು ಕುಸಿದು ಹಾನಿಯಾಗಿದೆ. ಮನೆ ಕಳೆದುಕೊಂಡ ಕುಟುಂಬಸ್ಥರಿಗೆ ಕೋಟೆಗುಡ್ಡದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಶ್ರಯ ನೀಡಲಾಗಿದೆ. ಸ್ಥಳಕ್ಕೆ ಗ್ರಾ.ಪಂ ಅಧ್ಯಕ್ಷೆ ಶಾಂತಿ ಮಡಿವಾಳ, ಕಂದಾಯ ಅಧಿಕಾರಿಗಳು, ನೋಡಲ್ ಅಧಿಕಾರಿ ವಿನಾಯಕ ವೈದ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮನೆ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ವಸ್ತುಗಳು ಮಣ್ಣಿನಡಿ ಸಿಲುಕಿ ಹಾನಿಯಾಗಿದೆ. ಮನೆ ಕಳೆದುಕೊಂಡು ರಘು, ವಿಷ್ಣು ಕುಟುಂಬಸ್ಥರು ಕಂಗಲಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Home remedies for Dengue
ಆರೋಗ್ಯ3 mins ago

Home remedies for Dengue: ಸರಳ ಮನೆ ಮದ್ದು ಬಳಸಿ; ಡೆಂಗ್ಯೂ ಅಪಾಯದಿಂದ ಪಾರಾಗಿ!

ಪ್ರಮುಖ ಸುದ್ದಿ4 mins ago

Menstrual Leave: ಋತುಸ್ರಾವದ ರಜೆ ಬಗ್ಗೆ ಮಾದರಿ ನೀತಿ ರೂಪಿಸಲು ಸರ್ಕಾರಕ್ಕೆ ಸುಪ್ರೀಂ ಕೋರ್ಟ್​​​ ನಿರ್ದೇಶನ

cm Siddaramaiah
ಪ್ರಮುಖ ಸುದ್ದಿ4 mins ago

CM Siddaramaiah: ರಾಜ್ಯದಲ್ಲಿ ಶೇ.80 ಬಿಪಿಎಲ್‌ ಕಾರ್ಡ್‌! ಕಡಿತ ಮಾಡಲು ಸಿಎಂ ಸೂಚನೆ

Narendra modi Russia visit
ದೇಶ6 mins ago

Narendra Modi Russia Visit: ಪ್ರಧಾನಿ ಮೋದಿ ಮೂರು ದಿನಗಳ ವಿದೇಶ ಪ್ರವಾಸ; ರಷ್ಯಾ, ಆಸ್ಟ್ರೀಯಾಕ್ಕೆ ಭೇಟಿ

ಕರ್ನಾಟಕ11 mins ago

Rain Affected areas: ಮಳೆ ಸಂತ್ರಸ್ತ ಪ್ರದೇಶಗಳಲ್ಲಿ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಿ: ಡಿಸಿಗಳಿಗೆ ಸಿಎಂ ಸೂಚನೆ

Murder Case
Latest34 mins ago

Murder Case: ಕದ್ದುಮುಚ್ಚಿ ಸರಸವಾಡುತ್ತಿದ್ದ ಮಹಿಳೆ ಸಿಕ್ಕಿಬಿದ್ದಾಗ ಗಂಡನನ್ನೇ ಕೊಂದಳು!

road Accident
ಕೊಪ್ಪಳ35 mins ago

Road Accident : ಕೊಪ್ಪಳದಲ್ಲಿ ಟಿಪ್ಪರ್‌ ಹರಿದು ಬೈಕ್‌ ಸವಾರ ಸಾವು

Abhishek Sharma
ಪ್ರಮುಖ ಸುದ್ದಿ36 mins ago

Abhishek Sharma : ಅಭಿಷೇಕ್​ ಶತಕಕ್ಕೆ ಸಹೋದರಿಯ ಚಪ್ಪಾಳೆ, ವಿಡಿಯೊ ಶೇರ್ ಮಾಡಿದ ಕೋಮಲ್​ ಶರ್ಮಾ

MUDA site scandal
ಕರ್ನಾಟಕ53 mins ago

MUDA site scandal: ಸಿಎಂ ಆಪ್ತ ರಾಕೇಶ್‌ ಪಾಪಣ್ಣಗೆ ಹಂಚಿಕೆಯಾಗಿದ್ದ ಮುಡಾ ಸೈಟ್‌ಗೂ ತಡೆ!

steel flyover bridge shivananda circle
ಪ್ರಮುಖ ಸುದ್ದಿ1 hour ago

Steel Flyover: ಬೆಂಗಳೂರಿನ ಮೊದಲ ಸ್ಟೀಲ್‌ ಫ್ಲೈಓವರ್‌ ಸೇತುವೆಯಲ್ಲಿ ಬಿರುಕು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 hour ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ2 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

karnataka weather Forecast
ಮಳೆ18 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ21 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ22 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಟ್ರೆಂಡಿಂಗ್‌