Site icon Vistara News

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

Medical negligence

ದಾವಣಗೆರೆ: ಇತ್ತೀಚೆಗೆ ವೈದ್ಯರ ನಿರ್ಲಕ್ಷ್ಯಕ್ಕೆ (Medical negligence) ಬಲಿಯಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸದ್ಯ ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ವೈದ್ಯನ ಭಾರೀ ಯಡವಟ್ಟಿಗೆ ಹುಟ್ಟಿದಾಕ್ಷಣ ಮಗುವೊಂದು ಪ್ರಾಣವನ್ನೇ ಕಳೆದುಕೊಂಡಿದೆ. ವೈದ್ಯನೊಬ್ಬ ಹೆರಿಗೆ ಮಾಡುವಾಗ ಹೊಟ್ಟೆಯಲ್ಲಿದ್ದ ಮಗುವಿನ ಮರ್ಮಾಂಗವನ್ನೇ ಕೊಯ್ದಿದ್ದಾನೆ.

ದಾವಣಗೆರೆ ಕೊಂಡಜ್ಜಿ ರಸ್ತೆಯಲ್ಲಿರುವ ಅರ್ಜುನ್ ಎಂಬುವವರ ಪತ್ನಿ ಅಮೃತಾ ಹೆರಿಗೆಗೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ನಾರ್ಮಲ್‌ ಡೆಲಿವರಿ ಆಗದ ಹಿನ್ನೆಲೆಯಲ್ಲಿ ಸಿಸೇರಿಯನ್ ಮಾಡಲು ವೈದ್ಯರು ಮುಂದಾಗಿದ್ದರು. ಅದರಂತೆ ಕಳೆದ ಜೂನ್ 27ರಂದು ಅಮೃತಾಗೆ ಸಿಸೇರಿಯನ್ ಮಾಡಿ ಮಗು ತೆಗೆಯಲಾಗಿತ್ತು.

ಆದರೆ ಸಿಸೇರಿಯನ್‌ ಮಾಡುವಾಗ ವೈದ್ಯ ನಿಜಾಮುದ್ದೀನ್ ಮಗು ತೆಗೆಯುವಾಗ ಮರ್ಮಾಂಗವನ್ನೇ ಕೊಯ್ದಿದ್ದಾರೆ. ನಂತರ ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದರಿಂದ ಕೂಡಲೇ ಜಿಲ್ಲಾಸ್ಪತ್ರೆಯಿಂದ ಬಾಪೂಜಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಶುಕ್ರವಾರ ಮೃತಪಟ್ಟಿದೆ.

ಮಗುವಿನ ಸಾವಿಗೆ ವೈದ್ಯರು ಕಾರಣ ಎಂದು ಪೋಷಕರು ಆಕ್ರೋಶ ಹೊರಹಾಕಿದ್ದರು. ಜಿಲ್ಲಾಸ್ಪತ್ರೆ ಮುಂದೆ ಪ್ರತಿಭಟಿಸಿ, ಮಗುವಿನ ಸಾವಿಗೆ ಕಾರಣನಾದ ವೈದ್ಯನನ್ನು ಅಮಾನತು ಮಾಡುವಂತೆ ಒತ್ತಾಯಿಸಿದರು.

Self Harming

ಇದನ್ನೂ ಓದಿ: Medical Ethics : ಎದೆ ನೋವೆಂದು ಕ್ಲಿನಿಕ್​ಗೆ ಬಂದ ಯುವತಿ; ತಪಾಸಣೆ ನೆಪದಲ್ಲಿ ಅಂಗಿ ಬಿಚ್ಚಿಸಿ ಮುತ್ತಿಟ್ಟ ವೈದ್ಯ; ಕೇಸ್​ ದಾಖಲಿಸಲು ಕೋರ್ಟ್​ ಸೂಚನೆ

ಮೊದಲ ರಾತ್ರಿಯ ಟೆನ್ಶನ್‌ಗೆ ವರ ಆತ್ಮಹತ್ಯೆ? ಉತ್ತರ ಪ್ರದೇಶದಲ್ಲೊಂದು ವಿಲಕ್ಷಣ ಘಟನೆ

ಮದುವೆಯಾದ ಮೇಲೆ ಗಂಡನ ಮನೆಗೆ ಬರುವ ವಧು ತನ್ನ ಪತಿಯ ಜೊತೆ ಸುಖವಾಗಿ ಸಂಸಾರ ನಡೆಸುವಂತಹ ಹಲವಾರು ಕನಸುಗಳನ್ನು ಹೊತ್ತು ಬರುತ್ತಾಳೆ. ಆದರೆ ಅಂತಹ ವಧುವಿನ ಕನಸು ಕ್ಷಣಮಾತ್ರದಲ್ಲಿ ನುಚ್ಚು ನೂರಾದರೆ ಅವಳಿಗೆ ಆಘಾತವಾಗುವುದು ಖಂಡಿತ. ಅಂತಹದೊಂದು ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯಲ್ಲಿ ನಡೆದಿದೆ. ಹೊಸದಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಧು ಮೊದಲ ರಾತ್ರಿಗಾಗಿ ಕೋಣೆಗೆ ಹಾಲು ತೆಗೆದುಕೊಂಡು ಹೋದಾಗ ಅಲ್ಲಿ ವರನು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Self Harming) ಶರಣಾಗಿದ್ದ.

ಉತ್ತರ ಪ್ರದೇಶದ ಇಟಾವಾ ಜಿಲ್ಲೆಯ ರತನ್ಪುರ ಗ್ರಾಮದಲ್ಲಿ ಸಂಭ್ರಮದ ಮದುವೆ ಆಚರಣೆಗಳು ಮುಗಿದು ವಧು ಮೊದಲ ರಾತ್ರಿಗೆಂದು ವರನಿಗೆ ಹಾಲು ತೆಗೆದುಕೊಂಡು ಕೋಣೆಗೆ ಹೋದಾಗ ವರನು ಆತ್ಮಹತ್ಯೆ ಮಾಡಿಕೊಂಡಿದ್ದನು. ಇದರಿಂದ ಆ ಕುಟುಂಬದಲ್ಲಿ ಗೋಳಾಟ ಮುಗಿಲುಮುಟ್ಟಿದೆ.

Self Harming

24 ವರ್ಷದ ಸತ್ಯೇಂದ್ರ ಆತ್ಮಹತ್ಯೆ ಮಾಡಿಕೊಂಡ ವರ. ಈತ ಆತನ ವಧು ವಿನಿತಾ ಕುಮಾರಿ ಅವರೊಂದಿಗೆ ಅದ್ಧೂರಿಯಾಗಿ ಮದುವೆಯಾಗಿದ್ದು, ನಂತರ ದಿಬ್ಬಣ ಭರ್ಜರಿ ಮೆರವಣಿಗೆಯೊಂದಿಗೆ ಆತನ ಗ್ರಾಮಕ್ಕೆ ಮರಳಿದೆ. ನವವಿವಾಹಿತ ವಧುವನ್ನು ಮನೆಗೆ ಸಂಭ್ರಮದಿಂದ ಸ್ವಾಗತಿಸಲಾಗಿತ್ತು. ಹಾಗೇ ವಧುವರರ ಮೊದಲ ರಾತ್ರಿಗೆಂದು ಸಿದ್ಧತೆ ನಡೆಯುತ್ತಿದ್ದು, ವಧು ಹಾಲು ಹಿಡಿದುಕೊಂಡು ಪತಿಯ ಕೋಣೆಗೆ ಹೋದಾಗ ಆತ ಮದುವೆಯ ಉಡುಗೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ. ಇದನ್ನು ಕಂಡು ವಧು ಆಘಾತಕ್ಕೊಳಗಾಗಿದ್ದಾಳೆ. ಈ ಸುದ್ದಿ ಕುಟುಂಬಸ್ಥರು ಮತ್ತು ಅತಿಥಿಗಳಿಗೆ ನಂಬಲು ಅಸಾಧ್ಯವಾಗಿದೆ.

ಈ ಬಗ್ಗೆ ಉಸ್ರಾಹರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಸತೇಂದ್ರ ಅವರ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪೊಲೀಸರು ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಆದರೆ ಸತ್ಯೇಂದ್ರ ಅವರ ಆತ್ಮಹತ್ಯೆಯ ಹಿಂದಿನ ಉದ್ದೇಶ ತಿಳಿದುಬಂದಿಲ್ಲ. ಮೊದಲ ರಾತ್ರಿಯ ಟೆನ್ಶನ್‌ಗೆ ಆತ್ಮಹತ್ಯೆ ಮಾಡಿಕೊಂಡಿರಬಹುದಾ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಪೊಲೀಸರು ಸತ್ಯೇಂದ್ರ ಅವರ ಅಕಾಲಿಕ ಸಾವಿನ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.

ಸಂಭ್ರಮಾಚರಣೆಯಲ್ಲಿ ತೇಲಾಡುತ್ತಿದ್ದ ಕುಟುಂಬವನ್ನು ಈ ಘಟನೆ ಶೋಕಾಚರಣೆಯಲ್ಲಿ ಮುಳುಗುವಂತೆ ಮಾಡಿದೆ. ಇನ್ನೂ ಮದುವೆಯಾಗಿ ಕ್ಷಣಗಳೇ ಕಳೆದಿದ್ದು, ಜೀವನಪರ್ಯಂತ ಒಟ್ಟಿಗೆ ಇರುತ್ತಾನೆ ಎಂದು ಭಾವಿಸಿದ ಪತಿ ಸಾವಿಗೆ ಶರಣಾಗಿದ್ದನ್ನು ಕಂಡು ವಧು ಆಘಾತಕ್ಕೊಳಗಾಗಿದ್ದಾಳೆ. ಅಲ್ಲದೇ ಸಾಲಸೂಲ ಮಾಡಿ ಮಗಳು ಗಂಡನ ಮನೆಯಲ್ಲಿ ಸುಖವಾಗಿರಲಿ ಎಂದು ಬಯಸಿದ ಆಕೆಯ ಪೋಷಕರಿಗೆ ಈ ಘಟನೆ ಆಕಾಶವೇ ಕಳಚಿ ತಲೆಯ ಮೇಲೆ ಬಿದ್ದಂತೆ ಭಾಸವಾಗಿದೆ. ಒಟ್ಟಾರೆ ಈ ಮದುವೆ ಸಂಭ್ರಮ ದುರಂತದ ತಿರುವು ತೆಗೆದುಕೊಂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version