ಹೊನ್ನಾಳಿ: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ (Neha Murder Case) ಖಂಡಿಸಿ, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ, ಹೊನ್ನಾಳಿಯ ಸ್ವಾಮಿ ವಿವೇಕಾನಂದ ಭಗತ್‌ಸಿಂಗ್ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ಹಿಂದೂ ಪರ ಸಂಘಟನೆಗಳು ಹಾಗೂ ಎಬಿವಿಪಿ ಸಂಘಟನೆಯ ವತಿಯಿಂದ ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಇದನ್ನೂ ಓದಿ: Neha Murder Case: ಒಂದು ಕೋಮನ್ನು ಓಲೈಸದೆ ಸರಿ ದಿಕ್ಕಿನಲ್ಲಿ ತನಿಖೆ ಮಾಡಿ: ಪ್ರಲ್ಹಾದ್ ಜೋಶಿ ಆಗ್ರಹ
ಪ್ರತಿಭಟನೆಯಲ್ಲಿ ಹಿಂದೂ ಜಾಗರಣ ವೇದಿಕೆಯ ಪ್ರಾಂತ ಸಂಚಾಲಕ ಸತೀಶ್ ಮಾತನಾಡಿ, ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಘಟನೆ ತೀವ್ರ ಖಂಡನೀಯವಾಗಿದ್ದು, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಮತ್ತು ಇಂತಹ ಪ್ರಕರಣಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸ್ವಾಮಿ ವಿವೇಕಾನಂದ ಭಗತ್‌ಸಿಂಗ್ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಎಂ.ಆರ್. ಮಹೇಶ್ ಮಾತನಾಡಿ ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಅವರ ಬರ್ಬರ ಹತ್ಯೆ ಮಾಡಿರುವ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು ಮತ್ತೊಮ್ಮೆ ಇಂತಹ ಕೃತ್ಯಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ: Car Accident: ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಮಗು ಸಾವು; ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಈ ಸಂದರ್ಭದಲ್ಲಿ ಮುಖಂಡರಾದ ಅರುಣ್, ಶಾಂತರಾಜ್ ಪಾಟೀಲ್, ಎ.ಬಿ.ಎಚ್. ಹನುಮಂತಪ್ಪ, ಕೆ. ವಿ. ಚೆನ್ನಪ್ಪ, ಬಲಮುರಿ ಹನುಮಂತಪ್ಪ, ಅಜಯ್ ರೆಡ್ಡಿ, ನಟರಾಜ್, ಚೆನ್ನೇಶ್, ಸಿದ್ದೇಶ್ ಮಾಸಡಿ, ಪ್ರವೀಣ್, ರವಿ, ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾಲೇಜು ವಿದ್ಯಾರ್ಥಿಗಳು, ಇತರರು ಪಾಲ್ಗೊಂಡಿದ್ದರು.