ದಾವಣಗೆರೆ: ಇಲ್ಲಿನ ಕೆಟಿಜೆ ನಗರ ಠಾಣೆ ಪೊಲೀಸರು ರೌಡಿಶೀಟರ್ (Rowdy sheeter) ಸಂತೋಷ್ ಅಲಿಯಾಸ್ ಕಣುಮ ಸೇರಿದಂತೆ ಹಲವರನ್ನು ಬಂಧಿಸಿದ್ದಾರೆ. ಕಾಂಗ್ರೆಸ್ ಪಾಲಿಕೆ ಸದಸ್ಯೆ ನಾಗರತ್ನಮ್ಮ ಅವರ ಜನಸಂಪರ್ಕ ಕೇಂದ್ರದಲ್ಲಿ ಅಕ್ರಮವಾಗಿ ಮಾರಕಾಸ್ತ್ರಗಳನ್ನು ಸಂಗ್ರಹಿಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಕೆಟಿಜೆ ಪೊಲೀಸರು ದಾಳಿ ನಡೆಸಿ ಈತನನ್ನು ಬಂಧಿಸಿದ್ದಾರೆ.
ಸಂತೋಷ್ ಕುಮಾರ್ ಜತೆಗೆ ಆತನ ಸಹಚರರಾದ ಪರಮೇಶ್, ಶಿವಪ್ಪ, ದಾದು, ಮಂಜುನಾಥ್, ಶ್ರೀನಿವಾಸ್, ತ್ರಿಲೋಕ್, ತ್ರಿಗುಣ, ದಸ್ತು ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 4 ಲಾಂಗ್, ಖಾರದ ಪುಡಿ, ನಂಬರ್ ಪ್ಲೇಟ್ ಇಲ್ಲದ ಕಾರನ್ನು ವಶಕ್ಕೆ ಪಡೆಯಲಾಗಿದೆ. ದಾಳಿ ನಡೆಸಿದ ಕೆಟಿಜೆ ಪೊಲೀಸರನ್ನು ದಾವಣಗೆರೆ ಎಸ್ಪಿ ಸಿ.ಬಿ. ರಿಷ್ಯಂತ್ ಶ್ಲಾಘಿಸಿದ್ದಾರೆ.
ಇದನ್ನೂ ಓದಿ | ದಾವಣಗೆರೆಯಲ್ಲಿ ತಾಲೂಕು ದಂಡಾಧಿಕಾರಿ ಎದುರೇ ಪಂಚಾಯಿತಿ ಸದಸ್ಯ ಆತ್ಮಹತ್ಯೆ ಯತ್ನ