SCST Reservation: 9ನೇ ಪರಿಚ್ಛೇದಕ್ಕೆ ಸೇರಿಸುವ ಪ್ರಕ್ರಿಯೆ ಆರಂಭ: ಸಿದ್ದರಾಮಯ್ಯ ಮಾತಿಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು - Vistara News

ದಾವಣಗೆರೆ

SCST Reservation: 9ನೇ ಪರಿಚ್ಛೇದಕ್ಕೆ ಸೇರಿಸುವ ಪ್ರಕ್ರಿಯೆ ಆರಂಭ: ಸಿದ್ದರಾಮಯ್ಯ ಮಾತಿಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು

ವಿಜಯನಗರ ಸಾಮ್ರಾಜ್ಯವನ್ನು ರಕ್ಷಣೆ ಮಾಡುವಲ್ಲಿ ವಾಲ್ಮೀಕಿ ಸಮಾಜ ಮಹತ್ವ ಪಾತ್ರ ವಹಿಸಿದೆ. ಮದಕರಿ ನಾಯಕ, ರಾಜ್ಯದ ಇತಿಹಾಸದಲ್ಲಿ ಪ್ರಮುಖರು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

VISTARANEWS.COM


on

karnataka budget 2023 7th pay commission
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ: ಎಸ್‌ಸಿಎಸ್‌ಟಿ ಸಮಾಜಕ್ಕೆ ನ್ಯಾಯ ದೊರಕಿಸುಕೊಡುವುದೇ ನಮ್ಮ ಸರ್ಕಾರದ ಏಕೈಕ ಗುರಿಯಾಗಿದ್ದು, ಎಸ್‌ಸಿಎಸ್‌ಟಿ ಮೀಸಲಾತಿ (SCST Reservation) ಹೆಚ್ಚಳವನ್ನು 9ನೇ ಪರಿಚ್ಛೇದದಲ್ಲಿ ಸೇರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವ ಅಂಗವಾಗಿ “ಜನಜಾಗೃತಿ ಜಾತ್ರಾ ಮಹೋತ್ಸವದ ಉದ್ಘಾಟನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಎಸ್‌ಸಿಎಸ್‌ಟಿ ಸಮುದಾಯದ ಕುರಿತು ಹೇಳಿಕೆ ನೀಡುವುದು ಮಾತ್ರವಲ್ಲ, ಸಂವಿಧಾನದ 9ನೇ ಪರಿಚ್ಛೇದದಲ್ಲಿ ಇದನ್ನು ಸೇರಿಸಿ ಡಬಲ್‌ ಇಂಜಿನ್‌ ಸರ್ಕಾರದ ಶಕ್ತಿ ತೋರಿಸಿ ಎಂದು ಆಗಾಗ್ಗೆ ಸವಾಲೆಸೆಯುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಾತಿಗೆ ಸಿಎಂ ಪರೋಕ್ಷವಾಗಿ ಉತ್ತರ ನೀಡಿದ್ದಾರೆ.

ಎಸ್‌ಸಿ ವರ್ಗಕ್ಕೆ ಶೇ. 15 ರಿಂದ ಶೇ. 17 ಮತ್ತು ಎಸ್‌ಟಿಗೆ 3 ರಿಂದ ಶೇ. 7 ಕ್ಕೆ ಹೆಚ್ಚಿಸಲಾಗಿದೆ. ತಳಸಮುದಾಯದ ಯುವಜನತೆಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಹೆಚ್ಚಿನ ಲಾಭ ದೊರೆಯಲಿದೆ. ಈ ಹೆಚ್ಚಳಕ್ಕೆ ಕಾನೂನಿನ ರಕ್ಷಣೆಯನ್ನು ಈಗಾಗಲೇ ಸರ್ಕಾರ ನೀಡಿದೆ. ಕೇವಲ ಭಾಷಣದಿಂದ ಸಾಮಾಜಿಕ ನ್ಯಾಯ ಸಿಗುವುದಿಲ್ಲ. ಮೀಸಲಾತಿ ಹೆಚ್ಚಳವನ್ನು ಸರ್ಕಾರ ಈಗಾಗಲೇ ಜಾರಿ ಮಾಡಿದ್ದು, ಸರ್ಕಾರದ ನೇಮಕಾತಿಗಳಲ್ಲಿ ಈ ನಿಯಮವನ್ನು ಈಗಾಗಲೇ ಪಾಲಿಸಲಾಗುತ್ತಿದೆ ಎಂದರು.

ನಾನು ಬಯಸಿ ಮುಖ್ಯಮಂತ್ರಿಯಾದವನಲ್ಲ. ನಮ್ಮ ನಾಯಕರು ಹಾಗೂ ಜನರಿಂದ ಈ ಆಶೀರ್ವಾದ ನನಗೆ ದೊರೆಯಿತು. ಪರಿಶಿಷ್ಟ ಪಂಗಡದ ಸಮುದಾಯಗಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅನುಷ್ಠಾನಗೊಳಿಸಲು ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಲಾಗಿದೆ. 75 ಯೂನಿಟ್ ಉಚಿತ ವಿದ್ಯುತ್ , ಸಮುದಾಯದ ರೈತರಿಗೆ ಜಮೀನು ಖರೀದಿಗೆ 25 ಲಕ್ಷದವರೆಗೆ ಅನುದಾನ, ಮನೆ ನಿರ್ಮಾಣಕ್ಕೆ 2 ಲಕ್ಷ, ಹಾಸ್ಟೆಲ್ ಗಳ ಹೆಚ್ಚಳ ಮಾಡಲಾಗಿದೆ. ಸಮುದಾಯದ ಯುವಕರಿಗೆ ಸ್ವಯಂ ಉದ್ಯೋಗಕ್ಕೆ ಸಹಕಾರ ನೀಡಲಾಗುತ್ತಿದೆ. ಪರಿಶಿಷ್ಟ ಪಂಗಡದ ಬುಡಕಟ್ಟು ಸಮುದಾಯಗಳಿಗೆ ಹೆಚ್ಚಿನ ಅನುದಾನವನ್ನು ಕೇಂದ್ರ ಸರ್ಕಾರ ನೀಡಿದೆ. ಬುಡಕಟ್ಟು ಜನಾಂಗಕ್ಕೆ ಸೇರಿದ ಶ್ರೀಮತಿ ದ್ರೌಪದಿ ಮುರ್ಮು ಅವರು ಗೌರವಾನ್ವಿತ ರಾಷ್ಟ್ರಪತಿಗಳಾಗಿದ್ದಾರೆ. ಸಮುದಾಯದ ಜನನಾಯಕರಿಗೆ ಸರ್ಕಾರದಲ್ಲಿ ಪ್ರಮುಖ ಸ್ಥಾನಮಾನಗಳನ್ನು ನೀಡಲಾಗಿದೆ ಎಂದರು.

ತಳ ಸಮುದಾಯ ಸದೃಢವಾದರೆ ನಾಡು ಸದೃಢವಾದಂತೆ :
ವಿಜಯನಗರ ಸಾಮ್ರಾಜ್ಯವನ್ನು ರಕ್ಷಣೆ ಮಾಡುವಲ್ಲಿ ವಾಲ್ಮೀಕಿ ಸಮಾಜ ಮಹತ್ವ ಪಾತ್ರ ವಹಿಸಿದೆ. ಮದಕರಿ ನಾಯಕ, ರಾಜ್ಯದ ಇತಿಹಾಸದಲ್ಲಿ ಪ್ರಮುಖರು. ವಾಲ್ಮೀಕಿ ರಚಿಸಿರುವ ರಾಮಾಯಣ ಜಗತ್ತಿನ 10 ಶ್ರೇಷ್ಠ ಗ್ರಂಥಗಳಲ್ಲಿ ಒಂದು. ಮನುಷ್ಯ ಸಂಬಂಧಗಳನ್ನು ಉತ್ತಮವಾಗಿ ಅತ್ಯುತ್ತಮವಾಗಿ ಬಿಂಬಿಸಿ, ದುಷ್ಟಶಕ್ತಿಗಳನ್ನು ಸಂಹರಿಸುವ ಪರಿಯನ್ನು ತೋರಿದ್ದಾರೆ. ವೀರ ಸಿಂಧೂರ ಲಕ್ಷ್ಮಣ, ಬೇಡರ ಕಣ್ಣಪ್ಪ ಈ ಸಮುದಾಯದವರೇ. ತಳಸಮುದಾಯವನ್ನು ಸದೃಢಗೊಳಿಸಿದರೆ , ನಾಡು ಸದೃಢಗೊಳಿಸಿದಂತೆ ಎಂದರು.

ಸಮುದಾಯದವರು ಸಂಘಟಿತರಾಗಬೇಕು :
ಗುರುಪೀಠದ ಶ್ರೀಗುರುಗಳೊಂದಿಗೆ ಭಕ್ತಿಭಾವದ ಸಂಬಂಧವಿದೆ. ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆ ಅರ್ಥಪೂರ್ಣವಾಗಿ ನಡೆಯುತ್ತಿರುವುದು ಸಂತೋಷದ ವಿಷಯ. ವಾಲ್ಮೀಕಿ ಸಮುದಾಯದವರು ಸಂಘಟಿತರಾಗಿರುತ್ತೇವೆ ಎಂಬ ಸಂಕಲ್ಪ ಮಾಡಬೇಕಿದೆ. ತಮ್ಮ ಹಕ್ಕುಗಳನ್ನು ಪಡೆಯುವ ಸಂಕಲ್ಪ ಮಾಡಬೇಕಿದೆ. ಶ್ರೀ ಸುದೀಪ್ ಅವರನ್ನು ನಾನು ಹತ್ತಿರದಿಂದ ಬಲ್ಲೆ. ಅವರು ಕರ್ನಾಟಕದ ಎಲ್ಲರ ಹೃದಯದಲ್ಲಿ ಸ್ಥಾನವನ್ನು ಪಡೆದಿರುವುದು ಹೆಮ್ಮೆಯ ಸಂಗತಿ. ಈ ಸಮುದಾಯದ ಯುವಕರ ಆಶಾಕಿರಣವಾಗಿದ್ದಾರೆ ಎಂದರು.

ಇದನ್ನೂ ಓದಿ: SCST ಮೀಸಲಾತಿ ಹೆಚ್ಚಳ | ಪರಿಚ್ಛೇದ 9ರ ಮೇಲೆ ರಾಜ್ಯದ ಭರವಸೆ: ಯಶಸ್ವಿಯಾಗುತ್ತೇವೆ ಎಂದ ಸಿಎಂ

ಈ ಸಮಾಜದಿಂದ ಸಾಧಕರು ಹೊರಹೊಮ್ಮಬೇಕು :
ವಾಲ್ಮೀಕಿ ಸಮುದಾಯ ಶ್ರೀಮಂತ ಸಮುದಾಯವಾಗಿದೆ. ಹೃದಯ ಶ್ರೀಮಂತಿಕೆಯಿರುವ ಈ ಸಮುದಾಯ ಎಲ್ಲ ರಂಗಗಳಲ್ಲಿಯೂ ದಕ್ಷತೆಯಿಂದ ಕೆಲಸ ಮಾಡುತ್ತಿದೆ. ಅನೇಕ ಸಾಧಕರು ಈ ಸಮಾಜದಿಂದ ಹೊರಹೊಮ್ಮಬೇಕು. ಮಾದರಿ ಸಮಾಜವನ್ನು ನಿರ್ಮಾಣವಾಗಬೇಕು. ಸಮಾಜ ಕಟ್ಟುವ ಕೆಲಸದಲ್ಲಿ ಈ ಸಮಾಜ ಮುಂಚೂಣಿಯಲ್ಲಿ ನಿಲ್ಲಬೇಕೆಂದು ಮುಖ್ಯಮಂತ್ರಿಗಳು ಹಾರೈಸಿದರು.

ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿ, ಸಚಿವರಾದ ಆನಂದ್ ಸಿಂಗ್, ಶಾಸಕ ರಾಜು ಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉಡುಪಿ

Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Rain News : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದ್ದು, 7 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು (Karnataka Weather Forecast) ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದೆ (Rain News) ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ ಮತ್ತು ಮೈಸೂರು, ಬೆಂಗಳೂರು ನಗರ , ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ವಿಜಯನಗರ, ರಾಯಚೂರು, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಮಳೆಯು ವ್ಯಾಪಕವಾಗಿ ಹಗುರದಿಂದ ಕೂಡಿರಲಿದೆ.

ಇದನ್ನು ಓದಿ: Silicon City Hospital: ಲಕ್ಷಕ್ಕೆ ಇಬ್ಬರಿಗೆ ಬರುವ ಮೆದುಳಿನ ರಕ್ತನಾಳ ಒಡೆಯುವ ಕಾಯಿಲೆ; ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಬಾಲಕಿ ಪಾರು

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಭಾರೀ ಮಳೆಯೊಂದಿಗೆ ಗುಡುಗು ಮತ್ತು ಗಾಳಿ ವೇಗವು ಗಂಟೆಗೆ 40-50 ಕಿ.ಮೀ ಇರಲಿದೆ. ಹೀಗಾಗಿ ಬಳ್ಳಾರಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Karnataka weather: ಸಿಡಿಲಿಗೆ ಸಿದ್ದಾಪುರದ ವ್ಯಕ್ತಿ ಬಲಿ; ಇನ್ನೂ ನಾಲ್ಕು ದಿನ ಇದೆ ಭಾರಿ ಮಳೆ ಎಚ್ಚರಿಕೆ!

Karnataka weather: ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯ ಸುರಿದಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಾಕಾರ ಮಳೆ‌ಯಾಗಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿದೆ. ಬಲವಾದ ಗಾಳಿ – ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

VISTARANEWS.COM


on

Karnataka weather Man from Siddapura killed in lightning Heavy rain warning for four more days
Koo

ಬೆಂಗಳೂರು: ರಾಜ್ಯಾದ್ಯಂತ ಮಳೆಯಾರ್ಭಟ ಜೋರಾಗಿದೆ. ಗುಡುಗು – ಸಿಡಿಲಿನಿಂದ ಕೂಡಿದ ಮಳೆಯಾಗುತ್ತಿದೆ. ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಇನ್ನು ಮೇ 18ರ ವರೆಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು (Karnataka weather Forecast) ಹವಾಮಾನ ಇಲಾಖೆ ನೀಡಿದೆ.

ಸಿದ್ದಾಪುರ ಗ್ರಾಮದ ಸುರೇಶ್‌ ಶೆಟ್ಟಿ (38) ಮೃತ ದುರ್ದೈವಿ. ಇಂದು ಸಂಜೆ ಹೊತ್ತಿಗೆ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿದಿದೆ. ಈ ವೇಳೆ ಸುರೇಶ್‌ ಶೆಟ್ಟಿ ಅವರಿಗೆ ಸಿಡಿಲು ಬಡಿದಿದ್ದು, ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ (Heavy Rain) ಮಳೆಯಾಗಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯ ಸುರಿದಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಾಕಾರ ಮಳೆ‌ಯಾಗಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿದೆ. ಬಲವಾದ ಗಾಳಿ – ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸತತ ಮಳೆಯಿಂದಾಗಿ (Rain News) ತುಂಗಾ ನದಿಯ ಹರಿವು ಕೊಂಚ ಏರಿಕೆಯಾಗುವ ಸಾಧ್ಯತೆ ಇದೆ. ಧಾರವಾಡದಲ್ಲಿಯೂ ಭಾರಿ ಮಳೆಯಾಗಿದೆ.

ಉತ್ತರ ಕನ್ನಡದಲ್ಲೂ ವರುಣಾರ್ಭಟ

ಉತ್ತರ ಕನ್ನಡದ ಘಟ್ಟದ ಮೇಲಿನ ತಾಲೂಕುಗಳಲ್ಲೂ ವರುಣಾರ್ಭಟ ಜೋರಾಗಿದೆ. ಶಿರಸಿ, ಸಿದ್ದಾಪುರ ಭಾಗದಲ್ಲೂ ಭಾರಿ ಗಾಳಿ ಸಹಿತ ಮಳೆಯಾಗಿದೆ. ಶಿರಸಿಯಲ್ಲಿ ಭಾರಿ ಮಳೆಗೆ ಮರಗಳು ಧರೆಗುರುಳಿವೆ. ನಗರದ ಸಹ್ಯಾದ್ರಿ ಕಾಲೋನಿಯಲ್ಲಿ ಮರ ಬಿದ್ದು, ವಿದ್ಯುತ್ ಕಂಬ ಮುರಿದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ. ಹತ್ತಕ್ಕೂ ಅಧಿಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಕುಮಟಾ ತಾಲೂಕಿನ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲಿಗೆ ಕಾದಿದ್ದ ಇಳೆಗೆ ವರುಣ ತಂಪೆರೆದಿದ್ದಾನೆ. ಅರ್ಧ ಗಂಟೆಗೂ ಅಧಿಕ ಕಾಲ ಧಾರಾಕಾರ ಮಳೆಯಾಗಿದೆ. ಘಟ್ಟದ ಮೇಲಿನ ತಾಲೂಕುಗಳಲ್ಲಿ ಮಳೆಯಾದರೂ ಕರಾವಳಿಗೆ ವರುಣ ಕಾಲಿಟ್ಟಿರಲಿಲ್ಲ. ಇದೀಗ ವರುಣಾಗಮನದಿಂದ ಕರಾವಳಿ ಜನತೆ ಖುಷಿಯಾಗಿದ್ದಾರೆ. ಭಟ್ಕಳ, ಹೊನ್ನಾವರ, ಅಂಕೋಲಾ, ಕಾರವಾರ ಭಾಗದಲ್ಲಿ ಮೋಡ ಕವಿದ ವಾತಾವರಣವಿದೆ.

ಧಾರವಾಡದಲ್ಲಿ ಮಳೆಯ ಅಬ್ಬರ

ಧಾರವಾಡದಲ್ಲಿ ಮಂಗಳವಾರ ಬೆಳಗ್ಗೆಯಿಂದಲ್ಲೂ ಮೋಡ ಕವಿದ ವಾತಾವರಣವಿತ್ತು. ಇಳಿ ಸಂಜೆಯಾಗುತ್ತಿದ್ದಂತೆ ಧಾರವಾಡ ನಗರಕ್ಕೆ ವರುಣನ ಆಗಮನವಾಗಿದೆ. ಕಳೆದ ಎರಡು ದಿನಗಳ ಹಿಂದೆ ಸುರಿದಿದ್ದ ಮಳೆಯು ಸ್ವಲ್ಪ ಸಮಯ ಬ್ರೇಕ್‌ ಕೊಟ್ಟಿತ್ತು. ಇಂದು ಮತ್ತೆ ಮಳೆ ಸುರಿದಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಮೇ 18ರ ವರೆಗೆ ಮಳೆ ಸಾಧ್ಯತೆ

ಮೇ 18ರ ವರೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ.

ಕೊಡಗು, ಮೈಸೂರು, ಮಂಡ್ಯದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿಮೀ)ಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಉತ್ತರ ಕನ್ನಡ, ಧಾರವಾಡ, ಗದಗ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆ

ನಿನ್ನೆ ಸೋಮವಾರ (ಮೇ 13) ರಾಜ್ಯಾದ್ಯಂತ ಮಳೆಯಾಗಿದ್ದು, ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆಯಾಗಿದ್ದು, ಮಂಡ್ಯದ ಪಿಟಿಒನಲ್ಲಿ 9 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಶಿರಾಳಿಯಲ್ಲಿ ಗರಿಷ್ಠ ಉಷ್ಣಾಂಶ 38.4 ಡಿ.ಸೆನಷ್ಟು ದಾಖಲಾಗಿದೆ.

Continue Reading

ಮಳೆ

Karnataka Weather : ಭಾರಿ ಗಾಳಿ, ಮಳೆಗೆ ಶೃಂಗೇರಿಯಲ್ಲಿ ವಿದ್ಯುತ್‌ ಕಡಿತ; ಶಿರಸಿಯಲ್ಲಿ ಉರುಳಿ ಬಿದ್ದ ಮರ

Karnataka Weather Forecast : ಮಂಗಳವಾರ ಸಂಜೆ ಚಿಕ್ಕಮಗಳೂರು, ಕಾರವಾರ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ವಿದ್ಯುತ್‌ ಕಂಬಗಳು ಉರುಳಿ ಬಿದ್ದರೆ, ಗಾಳಿ ಮಳೆಗೆ ಮರಗಳು ಧರೆಗುರುಳಿವೆ. ಈ ವಾರ ಪೂರ್ತಿ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Rain News) ನೀಡಿದೆ.

VISTARANEWS.COM


on

By

Karnataka Weather Forecast
Koo

ಚಿಕ್ಕಮಗಳೂರು/ಬೆಂಗಳೂರು: ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ (Heavy Rain) ಮಳೆಯಾಗುತ್ತಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯದಿಂದ ಸುರಿಯುತ್ತಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಕಾರ ಮಳೆ‌ಯಾಗುತ್ತಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿತ್ತು. ಇನ್ನೂ ಗಾಳಿ ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸತತ ಮಳೆಯಿಂದಾಗಿ (Rain News) ತುಂಗಾ ನದಿ ಹರಿವು ಕೊಂಚ ಏರಿಕೆಯಾಗುವ (Karnataka weather Forecast) ಸಾಧ್ಯತೆ ಇದೆ.

ಉತ್ತರಕನ್ನಡದಲ್ಲೂ ವರುಣಾರ್ಭಟ

ಉತ್ತರಕನ್ನಡದ ಘಟ್ಟದ ಮೇಲಿನ ತಾಲೂಕುಗಳಲ್ಲೂ ವರುಣಾರ್ಭಟ ಜೋರಾಗಿದೆ. ಶಿರಸಿ, ಸಿದ್ದಾಪುರ ಭಾಗದಲ್ಲೂ ಭಾರೀ ಗಾಳಿ ಸಹಿತ ಮಳೆಯಾಗುತ್ತಿದೆ. ಶಿರಸಿಯಲ್ಲಿ ಭಾರೀ ಮಳೆಗೆ ಮರಗಳು ಧರೆಗುರುಳಿದೆ. ನಗರದ ಸಹ್ಯಾದ್ರಿ ಕಾಲೋನಿಯಲ್ಲಿ ಮರ ಬಿದ್ದು, ವಿದ್ಯುತ್ ಕಂಬ ಮುರಿದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ. ಹತ್ತಕ್ಕೂ ಅಧಿಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಕುಮಟಾ ತಾಲೂಕಿನ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲಿಗೆ ಕಾದಿದ್ದ ಇಳೆಗೆ ವರುಣ ತಂಪೆರೆದಿದ್ದಾನೆ. ಅರ್ಧ ಗಂಟೆಗೂ ಅಧಿಕ ಕಾಲ ಧಾರಾಕಾರ ಮಳೆಯಾಗಿದೆ. ಘಟ್ಟದ ಮೇಲಿನ ತಾಲ್ಲೂಕುಗಳಲ್ಲಿ ಮಳೆಯಾದರೂ ಕರಾವಳಿಗೆ ವರುಣ ಕಾಲಿಟ್ಟಿರಲಿಲ್ಲ. ಇದೀಗ ವರುಣಾಗಮನದಿಂದ ಕರಾವಳಿ ಜನತೆ ಖುಷಿಯಾಗಿದ್ದಾರೆ. ಭಟ್ಕಳ, ಹೊನ್ನಾವರ, ಅಂಕೋಲಾ, ಕಾರವಾರ ಭಾಗದಲ್ಲಿ ಮೋಡ ಕವಿದ ವಾತಾವರಣವಿದೆ.

ಧಾರವಾಡದಲ್ಲಿ ಮಳೆಯ ಅಬ್ಬರ

ಧಾರವಾಡದಲ್ಲಿ ಮಂಗಳವಾರ ಬೆಳಗ್ಗೆನಿಂದಲ್ಲೂ ಮೋಡ ಕವಿದ ವಾತಾವರಣವಿತ್ತು. ಇಳಿ ಸಂಜೆಯಾಗುತ್ತಿದ್ದಂತೆ ಧಾರವಾಡ ನಗರಕ್ಕೆ ವರುಣನ ಆಗಮನವಾಗಿದೆ. ಕಳೆದ ಎರಡು ದಿನಗಳ ಹಿಂದೆ ಸುರಿದಿದ್ದ ಮಳೆಯು ಸ್ವಲ್ಪ ಸಮಯ ಬ್ರೇಕ್‌ ಕೊಟ್ಟಿತ್ತು. ಇಂದು ಮತ್ತೆ ಮಳೆ ಸುರಿದಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಇದನ್ನೂ ಓದಿ: Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಮೇ 18ರ ವರೆಗೆ ಮಳೆ ಸಾಧ್ಯತೆ

ಮೇ 18ರ ವರೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ.

ಕೊಡಗು, ಮೈಸೂರು, ಮಂಡ್ಯದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿಮೀ)ಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕನ್ನಡ, ಧಾರವಾಡ, ಗದಗ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆ

ನಿನ್ನೆ ಸೋಮವಾರ (ಮೇ 13) ರಾಜ್ಯಾದ್ಯಂತ ಮಳೆಯಾಗಿದ್ದು, ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆಯಾಗಿದ್ದು, ಮಂಡ್ಯದ ಪಿಟಿಒನಲ್ಲಿ 9 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಶಿರಾಳಿಯಲ್ಲಿ ಗರಿಷ್ಠ ಉಷ್ಣಾಂಶ 38.4 ಡಿ.ಸೆನಷ್ಟು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದಾವಣಗೆರೆ

Davanagere News : ಇಳಿ ವಯಸ್ಸಿನಲ್ಲಿ ಕೂಡಿ ಬಂದ ಕಂಕಣ ಭಾಗ್ಯ; ದೂರಾಯಿತು ಒಂಟಿತನ

Davanagere News : ಇತ್ತೀಚೆಗೆ ಯುವಜನತೆ ಮದುವೆಗೆ ವರ ಸಿಗುತ್ತಿಲ್ಲ, ವಧು ಸಿಗುತ್ತಿಲ್ಲ ಅಂತ ಪೆಚಾಡುತ್ತಿದ್ದರೆ, ಇತ್ತ ದಾವಣಗೆರೆಯಲ್ಲಿ ಇಳಿ ವಯಸ್ಸಿನಲ್ಲಿ (Marriage at an early age) ಕಂಕಣ ಭಾಗ್ಯ ಕೂಡಿ ಬಂದಿದ್ದು, ಜೋಡಿಯ ಒಂಟಿತನವು ದೂರಾಗಿದೆ. ಕುಟುಂಬಸ್ಥರ ಸಮ್ಮುಖದಲ್ಲೇ ಸರಳ ಮದುವೆ ಕಾರ್ಯವು ನೆರವೇರಿದೆ.

VISTARANEWS.COM


on

By

Davanagere News Marriage at an early age
Koo

ದಾವಣಗೆರೆ: ಆ ಗ್ರಾಮದಲ್ಲಿ ನಡೆದ ಮದುವೆಯು (Marriage) ಸಂಭ್ರಮದೊಂದಿಗೆ ವಿಶೇಷವಾಗಿಯೂ ಇತ್ತು. ದಾಂಪತ್ಯ ಜೀವನಕ್ಕೆ ಕಾಲಿಟ್ಟ ವರನಿಗೆ 61 ಆದರೆ ವಧುವಿಗೆ 56 ವರ್ಷ.. ಈ ಹಿರಿಯರ ಮದುವೆಗೆ ಕುಟುಂಬಸ್ಥರು ಸೇರಿ ಗ್ರಾಮಸ್ಥರು ಸಾಕ್ಷಿಯಾಗಿದ್ದರು. ಇಳಿ ವಯಸ್ಸಿನಲ್ಲಿ ಕಂಕಣ ಭಾಗ್ಯ ಕೂಡಿ ಬಂದಿದ್ದು, ಕೊನೆಗಾಲದಲ್ಲಿ ಆಸರೆಯಾಗಿರಲು ಇಳಿ ವಯಸ್ಸಿನ ‌ವಧು-ವರ (Marriage at an early age) ಒಂದಾಗಿದ್ದರು.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕುಂಬಳೂರು ಗ್ರಾಮದಲ್ಲಿ ಈ ವಿಶೇಷ ಮದುವೆ ನಡೆದಿದೆ. 56 ವರ್ಷದ ರುಕ್ಮಿಣಿ ಹಾಗೂ 61 ವರ್ಷದ ನಿವೃತ್ತ ಶಿಕ್ಷಕ ನಾಗರಾಜ್‌ ಎಂಬುವವರು ಸತಿಪತಿಗಳಾದ ಜೋಡಿ.

ಶಾಲಾ‌ ಶಿಕ್ಷಕರಾಗಿ ನಿವೃತ್ತಿ ‌ಹೊಂದಿದ್ದ ನಾಗರಾಜ್, ಪತ್ನಿಯನ್ನು ಕಳೆದುಕೊಂಡು ಏಕಾಂಗಿ ಜೀವನ ನಡೆಸುತ್ತಿದ್ದರು. ಇತ್ತ ರುಕ್ಮಿಣಿ ಮದುವೆಯಾಗದೇ ತವರು ಮನೆಯಲ್ಲೇ ಆಶ್ರಯ ಪಡೆದಿದ್ದರು. ಒಂಟಿ ಜೀವಕ್ಕೆ ಜೋಡಿಯೊಂದು ಬೇಕೆಂದು ಹಂಬಲಿಸಿದ್ದ ನಾಗರಾಜ್‌ ಅವರು ಒಬ್ಬಂಟಿಯಾಗಿದ್ದ ರುಕ್ಮಿಣಿಯವರ ಕೈಹಿಡಿದಿದ್ದಾರೆ.

ಇನ್ನೂ ಇವರಿಬ್ಬರ ಮದುವೆಗೆ ಕುಟುಂಬಸ್ಥರು ಒಪ್ಪಿಗೆ ಮುದ್ರೆ ಒತ್ತಿದ್ದಾರೆ. ಕುಂಬಳೂರು ಗ್ರಾಮದ ದೇವಸ್ಥಾನದಲ್ಲಿ ಎರಡು ಕುಟುಂಬಗಳ ಸದಸ್ಯರ ಸಮ್ಮುಖದಲ್ಲಿ ಸರಳವಾಗಿ ವಿವಾಹ ನೆರವೇರಿದೆ.

Davanagere News Marriage at an early age

ಇದನ್ನೂ ಓದಿ: Metro Penalty: ಮೆಟ್ರೊ ಸ್ಟೇಷನ್‌ನಲ್ಲಿ ಗರ್ಲ್‌ ಫ್ರೆಂಡ್‌ಗೆ ಕಾಯುತ್ತ ಕೂತರೆ ಬೀಳುತ್ತೆ 50 ರೂ. ದಂಡ!

Abdu Rozik: ತನಗಿಂತ ತುಂಬಾ ಎತ್ತರದ ಹುಡುಗಿ ಜತೆ ಬಿಗ್‌ ಬಾಸ್‌ ಸ್ಪರ್ಧಿಯ ಮದುವೆ!

ಸಾಮಾಜಿಕ ಜಾಲತಾಣದಲ್ಲಿ (social media) ಸಕ್ರಿಯರಾಗಿರುವ ಮತ್ತು ಬಿಗ್ ಬಾಸ್ 16 (Bigg Boss 16) ಖ್ಯಾತಿಯ ಅಬ್ದು ರೋಝಿಕ್ (Abdu Rozik) ಇತ್ತೀಚೆಗಷ್ಟೇ ಅಮಿರಾ ಅವರೊಂದಿಗೆ ಮದುವೆ ನಿಶ್ಚಿತಾರ್ಥವನ್ನು (engagement) ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು ಮುಂದಿನ ಜುಲೈನಲ್ಲಿ ವಿವಾಹ ಕಾರ್ಯಕ್ರಮ ನಡೆಯಲಿದ್ದು, ಬಾಲಿವುಡ್ ನಟ (Bollywood actor) ಸಲ್ಮಾನ್ ಖಾನ್ (Salman Khan) ಪಾಲ್ಗೊಳ್ಳಲಿದ್ದಾರೆ ಎಂದು ಅಬ್ದು ತಿಳಿಸಿದ್ದಾರೆ.

20 ವರ್ಷದ ಗಾಯಕ (singer) ಅಬ್ದು ರೋಝಿಕ್ ಅವರು ಅಮೀರಾ ಅವರನ್ನು ಆಹಾರ ಉತ್ಸವದಲ್ಲಿ ಭೇಟಿಯಾಗಿದ್ದರು. ಮೊದಲ ನೋಟದಲ್ಲೇ ಇಬ್ಬರಿಗೂ ಪ್ರೀತಿಯಾಗಿತ್ತು ಎಂದು ಅಬ್ದು ತಿಳಿಸಿದರು.

ಅಬ್ದು ಅವರ ನಿಶ್ಚಿತಾರ್ಥವು ಯಾವುದೇ ಪ್ರಚಾರವಲ್ಲ ಎಂದು ಅಬ್ದು ಸ್ಪಷ್ಟಪಡಿಸಿದ್ದು, ನನ್ನಂತಹ ಸಣ್ಣ ವ್ಯಕ್ತಿ ಪ್ರೀತಿಯನ್ನು ಕಂಡುಕೊಂಡಿದ್ದಾನೆ ಎಂದು ಜನರು ನಂಬಲು ಕಷ್ಟವಾಗಬಹುದು ಎಂದು ತಿಳಿಸಿದರು.
ಅಮೀರಾಗಿಂತ ಚಿಕ್ಕವನಾಗಿರುವ ತನ್ನ ಎತ್ತರದ ವ್ಯತ್ಯಾಸವು ನಮ್ಮ ಪ್ರೀತಿಯ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ ಎಂದು ಹೇಳಿದರು.


ಅಬ್ದು ಅವರು 115 ಸೆಂ ಮತ್ತು ಅಮೀರಾ 155 ಸೆಂ.ಮೀ. ಎತ್ತರವಿದ್ದಾರೆ. ಅವರಿಬ್ಬರೂ ಕಡಿಮೆ ಎತ್ತರದಿಂದಾಗಿ ತಮ್ಮ ಸಂಗಾತಿಯನ್ನು ಹುಡುಕುವ ಬಗ್ಗೆ ಚಿಂತಿತರಾಗಿದ್ದರು. ಆದರೆ ಅಮೀರಾ ಅವರನ್ನು ಭೇಟಿ ಮಾಡಿದ್ದಕ್ಕಾಗಿ ಕೃತಜ್ಞರಾಗಿರುತ್ತೇನೆ. ಅಮೀರಾ ತನಗಿಂತ ಎತ್ತರವಾಗಿದ್ದರೂ ಅದು ನಮ್ಮ ಸಂಬಂಧದ ನಡುವೆ ಎಂದಿಗೂ ಬಂದಿಲ್ಲ ಎಂದು ತಿಳಿಸಿದರು.


ಕೆಲವು ದಿನಗಳ ಹಿಂದೆ ಅಬ್ದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ನಿಶ್ಚಿತಾರ್ಥ ಸಮಾರಂಭದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಅವರು ಅಮೀರಾ ಅವರ ಮುಖವನ್ನು ಬಹಿರಂಗಪಡಿಸಲಿಲ್ಲ, ಆದರೆ ಹೃದಯದ ಆಕಾರದ ವಜ್ರದ ಉಂಗುರದ ಫೋಟೋವನ್ನು ಹಂಚಿಕೊಂಡಿದ್ದಾರೆ.

ಸುದ್ದಿಯನ್ನು ಹಂಚಿಕೊಂಡ ಅವರು, “ಜುಲೈ 7 ರಂದು ದಾಂಪತ್ಯ ಜೀವನಕ್ಕೆ ಕಾಲಿರಿಸುವುದಾಗಿ ಹೇಳಿದ್ದು, ನನ್ನನ್ನು ಗೌರವಿಸುವ ಪ್ರೀತಿಯನ್ನು ಪಡೆಯುವ ಅದೃಷ್ಟಶಾಲಿ ಎಂದು ನಾನು ನನ್ನ ಜೀವನದಲ್ಲಿ ಎಂದಿಗೂ ಊಹಿಸಿರಲಿಲ್ಲ. ನಾನು ಎಷ್ಟು ಸಂತೋಷವಾಗಿದ್ದೇನೆ ಎಂದು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Seema Haider
ದೇಶ36 seconds ago

Seema Haider: ಮತ್ತೆ ಸುದ್ದಿಯಾದ ಸೀಮಾ ಹೈದರ್‌; ಇದು ಗಡಿಯಾಚೆಗಿನ ಪ್ರೇಮ ಕಥೆಯೋ ಅಥವಾ ಪಾಕ್‌ ಗೂಢಾಚಾರಿಕೆಯೋ?

ICMR Dietary Guidelines
ಆರೋಗ್ಯ2 mins ago

ICMR Dietary Guidelines: ಊಟದ ಮೊದಲು, ಊಟದ ನಂತರ ಚಹಾ, ಕಾಫಿ ಕುಡಿದರೆ ಏನಾಗುತ್ತದೆ?

viral video shakti scheme women fight
ವೈರಲ್ ನ್ಯೂಸ್11 mins ago

Viral video: ಚಪ್ಪಲಿಯಲ್ಲಿ ಬಡಿದಾಡಿ ಬಟ್ಟೆ ಹರಿದುಕೊಂಡರು; ಪುಕ್ಕಟೆ ಬಸ್‌ನಲ್ಲಿ ಮಹಿಳೆಯರ ʼಶಕ್ತಿʼ ಪ್ರದರ್ಶನ!

Narendra Modi
ದೇಶ14 mins ago

ಮೋದಿ ಬಲಿಷ್ಠ ನಾಯಕ, ಮತ್ತೆ ಪ್ರಧಾನಿಯಾಗೋದು ನಿಶ್ಚಿತ ಎಂದ ಪಾಕ್‌ ಮೂಲದ ಉದ್ಯಮಿ

Rishabh Pant
ಕ್ರೀಡೆ28 mins ago

Rishabh Pant: ಬಿಸಿಸಿಐ ನಿಯಮದ ಬಗ್ಗೆ ಅಸಮಾಧಾನ ಹೊರಹಾಕಿದ ರಿಷಭ್​ ಪಂತ್​

LIC
ವಾಣಿಜ್ಯ32 mins ago

LIC: ಎಲ್‌ಐಸಿಗೆ ಬಿಗ್‌ ರಿಲೀಫ್‌; ಸಾರ್ವಜನಿಕರ ಷೇರು ಪಾಲು ಶೇ. 10ಕ್ಕೆ ಹೆಚ್ಚಿಸಲು 3 ವರ್ಷ ಹೆಚ್ಚುವರಿ ಕಾಲಾವಕಾಶ

Mobile Phone Recharges:
ದೇಶ55 mins ago

Mobile Phone Recharges: ಮೊಬೈಲ್‌ ಗ್ರಾಹಕರಿಗೆ ಬಿಗ್‌ ಶಾಕ್‌! ಮತ್ತೆ ರಿಚಾರ್ಜ್‌ ಮೊತ್ತ ಏರಿಕೆ

IPL 2024
ಕ್ರೀಡೆ1 hour ago

IPL 2024: ಲಕ್ನೋಗೆ ಸೋಲು; ಪ್ಲೇ ಆಫ್​ ಪ್ರವೇಶಿಸಿದ ರಾಜಸ್ಥಾನ್​ ರಾಯಲ್ಸ್​

blackmail case kgf
ಕೋಲಾರ1 hour ago

Blackmail Case: ಗ್ರಾಮ ಪಂಚಾಯಿತಿಯಲ್ಲೇ ಬಲವಂತದ ರೊಮ್ಯಾನ್ಸ್‌, ಬ್ಲ್ಯಾಕ್‌ಮೇಲ್‌ ಎಸಗಿದ ಬಿಲ್‌ ಕಲೆಕ್ಟರ್‌ ಬಂಧನ

Madhuri Dixit birthday extend wishes
ಬಾಲಿವುಡ್1 hour ago

Madhuri Dixit: ಮಾಧುರಿ ದೀಕ್ಷಿತ್‌ಗೆ ಇಂದು ಜನುಮದಿನ ಸಂಭ್ರಮ; ಅವರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ8 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ11 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ21 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202423 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌