ಮೋದಿಯ ನಾಲ್ಕು ಡೈಲಾಗ್‌ ಮೂಲಕವೇ ಬಿಜೆಪಿ ಸರ್ಕಾರಗಳನ್ನು ಮೂದಲಿಸಿದ ಸಿದ್ದರಾಮಯ್ಯ - Vistara News

ದಾವಣಗೆರೆ

ಮೋದಿಯ ನಾಲ್ಕು ಡೈಲಾಗ್‌ ಮೂಲಕವೇ ಬಿಜೆಪಿ ಸರ್ಕಾರಗಳನ್ನು ಮೂದಲಿಸಿದ ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿಯವರ ಕುರಿತು ಆಗಾಗ್ಗೆ ವಾಗ್ದಾಳಿ ನಡೆಸುವ ಸಿದ್ದರಾಮಯ್ಯ ಈ ಬಾರಿ ಪೂರ್ವಸಿದ್ಧತೆಯೊಂದಿಗೇ ಬಂದಿದ್ದರು. ಮೋದಿಯವರ ಮಾತುಗಳನ್ನೇ ಉದಾಹರಣೆಯಾಗಿರಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮೇಲೆ ಹರಿಹಾಯ್ದರು.

VISTARANEWS.COM


on

Siddaramaiah speech in siddaramotsava 4
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ: ಸದಾ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ, ಆರ್‌ಎಸ್‌ಎಸ್‌ ವಿರುದ್ಧ ಹರಿಹಾಯುವ ತಮ್ಮ ಅಭ್ಯಾಸವನ್ನು ಮಾಜಿ ಸಿಎಂ ಸಿದ್ದರಾಮಯ್ಯ, ತಮ್ಮ 75ನೇ ಹುಟ್ಟುಹಬ್ಬದ ಸಂಭ್ರಮದ ಸಮಯದಲ್ಲೂ ಇದನ್ನು ಮುಂದುವರಿಸಿದೆ. ಆದರೆ ಈ ಬಾರಿ ಪೂರ್ವಸಿದ್ಧತೆಯೊಂದಿಗೆ ಆಗಮಿಸಿದ್ದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಡೈಲಾಗ್‌ಗಳನ್ನೇ ಆಧಾರವಾಗಿಟ್ಟುಕೊಂಡು ವಾಗ್ದಾಳಿ ನಡೆಸಿದರು.

1. ನಾ ಖಾವೂಂಗಾ, ನಾ ಖಾನೇ ದೂಂಗಾ
ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದಾಗಿನಿಂದಲೂ ಹೇಳುತ್ತಿರುವ ʻಮಹಾಮಂತ್ರʼವೆಂದರೆ ನಾ ಖಾವೂಂಗಾ, ನಾ ಖಾನೇ ದೂಂಗಾ. ಅಂದರೆ, ತಮ್ಮ ಸರ್ಕಾರದಲ್ಲಿ ಸ್ವತಃ ತಾವು ಭ್ರಷ್ಟಾಚಾರ ಮಾಡುವುದಿಲ್ಲ, ಹಾಗೂ ಬೇರೆಯವರೂ ಭ್ರಷ್ಟಾಚಾರವೆಸಗಲು ಅವಕಾಶ ನೀಡುವುದಿಲ್ಲ ಎನ್ನುವುದು. ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಆರೋಪಗಳನ್ನು ಮಾಡಲಾಗಿತ್ತು. ಅನೇಕ ಸಚಿವರ ಮೇಲೆ ಭ್ರಷ್ಟಾಚಾರದ ಆರೋಪಗಳ ಕಾರಣಕ್ಕಾಗಿಯೇ ಬಿಜೆಪಿ ಅಧಿಕಾರಕ್ಕೆ ಬರಲು ಸಹಕಾರವಾಗಿತ್ತು. ಇದೇ ಮಾತನ್ನು ಸಿದ್ದರಾಮಯ್ಯ ತಮ್ಮ ವಾಗ್ದಾಳಿಗೆ ಬಳಸಿಕೊಂಡರು.

ತಾವೂ ತಿನ್ನುವುದಿಲ್ಲ, ಬೇರೆಯವರು ತಿನ್ನಲೂ ಬಿಡುವುದಿಲ್ಲ ಎಂದು ನರೇಂದ್ರ ಮೋದಿಯವರು ಸುಳ್ಳು ಹೇಳುತ್ತಾರೆ. ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರ 40% ಕಮಿಷನ್‌ ಸರ್ಕಾರ ಎಂದು ಕಂಟ್ರಾಕ್ಟರ್‌ ಅಸೋಸಿಯೇಷನ್‌ ಹೇಳಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಇಂತಹ ಭ್ರಷ್ಟ ಸರ್ಕಾರವನ್ನು ತಮ್ಮ 44 ವರ್ಷದ ರಾಜಕೀಯ ಇತಿಹಾಸದಲ್ಲಿ ಕಂಡಿಲ್ಲ. ಈ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ | ಸಿದ್ದರಾಮೋತ್ಸವ | ಜನುಮ ದಿನಾಚರಣೆ ಬೇಡ ಎನ್ನುವ ಸಿದ್ದರಾಮಯ್ಯ ಸಿದ್ದರಾಮೋತ್ಸವಕ್ಕೆ ಒಪ್ಪಿದ್ದೇಕೆ?

2. ಸಬ್‌ ಕಾ ಸಾಥ್‌, ಸಬ್‌ಕಾ ವಿಶ್ವಾಸ್‌
ಸಾಮಾನ್ಯವಾಗಿ ಬಿಜೆಪಿಯನ್ನು ಕೋಮುವಾದಿ ಎಂದು ವಿರೋಧ ಪಕ್ಷಗಳು ಆರೋಪಿಸುತ್ತವೆ. ಬಹುಸಂಖ್ಯಾತ ಹಿಂದುಗಳ ಪರವಾಗಿಯೇ ನೀತಿಗಳನ್ನು ರೂಪಿಸುವ ಮೂಲಕ ಅಲ್ಪಸಂಖ್ಯಾತರು, ಹಿಂದುಳಿದವರು, ದಲಿತರನ್ನು ಅವಕಾಶವಂಚಿತರನ್ನಾಗಿ ಮಾಡಲಾಗುತ್ತದೆ ಎಂಬ ಆರೋಪಗಳನ್ನು ಆಗಾಗ್ಗೆ ಮಾಡಲಾಗುತ್ತದೆ. ಇದಕ್ಕೆ ಉತ್ತರವಾಗಿ ಪ್ರಧಾನಿ ನರೇಂದ್ರ ಮೋದಿಯವರು ಸಬ್‌ ಕಾ ಸಾಥ್‌, ಸಬ್‌ಕಾ ವಿಶ್ವಾಸ್‌ ಎಂಬ ಘೋಷಣೆ ಮಾಡಿದರು. ತಮ್ಮ ಸರ್ಕಾರ ಮುಸ್ಲಿಂ ಮಹಿಳೆಯರ ಪರವಾಗಿ ತ್ರಿವಳಿ ತಲಾಖ್‌ ನಿಷೇಧ ಮಾಡಿದೆ, ಎಸ್‌ಟಿ ಆಯೋಗಕ್ಕೆ ಸಾಂವಿಧಾನಿಕ ಮಾನ್ಯತೆ ನೀಡಿದೆ, ಹಿಂದುಳಿದ ವರ್ಗಗಳ ಮುಖಂಡರನ್ನು ದೇಶದ ಉನ್ನತ ಸ್ಥಾನಕ್ಕೆ ಕರೆತಂದಿದ್ದೇವೆ ಎಂಬ ಸಂದೇಶ ನೀಡಿದ್ದರು. ಈ ವಿಚಾರವನ್ನು ಕರ್ನಾಟಕದ ಕರಾವಳಿಯಲ್ಲಿ ಇತ್ತೀಚೆಗೆ ನಡೆದ ಹತ್ಯೆಗಳಿಗೆ ಲಿಂಕ್‌ ಮಾಡಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಸಬ್‌ ಕಾ ಸಾಥ್‌, ಸಬ್‌ಕಾ ವಿಶ್ವಾಸ್‌ ಎಂದಿರಿ. ಕರಾವಳಿಯಲ್ಲಿ ಇತ್ತೀಚಿನ ದಿನಗಳಲ್ಲಿ ಮೂರು ಕೊಲೆ ಆಗಿವೆ. ಮಸೂದ್‌, ಪ್ರವೀಣ್‌ ಹಾಗೂ ಫಾಜಿಲ್‌ ಕೊಲೆ ಆಗಿದೆ. ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರಾವಳಿಗೆ ಭೇಟಿ ನೀಡಿದ್ದರು. ಮಸೂದ್‌ ಮನೆಗೂ ಹೋಗಲಿಲ್ಲ, ಫಾಜಿಲ್‌ ಮನೆಗೂ ಹೋಗಲಿಲ್ಲ, ಪ್ರವೀಣ್‌ ಮನೆಗೆ ಮಾತ್ರ ಹೋದರು. ಪ್ರವೀಣ್‌ಗೆ ಮಾತ್ರವೇ ಪರಿಹಾರ ಕೊಟ್ಟರು. ಪ್ರವೀಣ್‌ಗೆ ಪರಿಹಾರ ಕೊಟ್ಟಿದ್ದು ಸರಿ, ಅದಕ್ಕೆ ನನ್ನ ವಿರೋಧವಿಲ್ಲ. ಆದರೆ ಉಳಿದಿಬ್ಬರಿಗೆ ಏಕೆ ಕೊಟ್ಟಿಲ್ಲ? ನೀವು ಇಡೀ ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ಒಂದು ಧರ್ಮಕ್ಕೆ ಸೇರಿದ ಮುಖ್ಯಮಂತ್ರಿಯೋ? ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ ಎನ್ನುವುದಕ್ಕೆ ನಿಮಗೆ ನೈತಿಕತೆ ಇದೆಯ? ನೀವು ಈ ರಾಜ್ಯ ಆಳುವುದಕ್ಕೆ ಲಾಯಕ್ಕ? ನೀವು ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದರು.

ಇದನ್ನೂ ಓದಿ | ರಾಹುಲ್‌ ಗಾಂಧಿ ಫಿಟ್‌ನೆಸ್‌: ಸಿದ್ದರಾಮೋತ್ಸವಕ್ಕೂ ಮುನ್ನ 52 ವರ್ಷದ ನಾಯಕನ ವರ್ಕೌಟ್‌

3. ಅಚ್ಛೇ ದಿನ್‌
ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಪಂಚಭೂತಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿ ಆಪಾದನೆ ಮಾಡುತ್ತಿತ್ತು. 2ಜಿ ತರಂಗಾತರ, ಯುದ್ಧ ವಿಮಾನ, ಆದರ್ಶ್‌ ಹೌಸಿಂಗ್‌ ಸೊಸೈಟಿ, ಕಲ್ಲಿದ್ದಲು ಹಗರಣ ಸೇರಿ ಅನೇಕ ವಿಚಾರಗಳನ್ನು ಪ್ರಸ್ತಾಪಿಸುತ್ತಿದ್ದರು. ಕಾಂಗ್ರೆಸ್‌ ಸರ್ಕಾರದಲ್ಲಿ ದೇಶ ಕರಾಳ ದಿನಗಳನ್ನು ಅನುಭವಿಸುತ್ತಿದೆ. ಬಿಜೆಪಿ ಸರ್ಕಾರ ಬಂದರೆ ದೇಶಕ್ಕೆ ಅಚ್ಛೇ ದಿನ್‌ (ಉತ್ತಮ ದಿನಗಳು) ಬರಲಿವೆ ಎಂದು ಚುನಾವಣೆ ಪ್ರಚಾರ ಸಭೆಗಳನ್ನು ನಡೆಸಿದ್ದರು. ಇದೇ ಅಚ್ಛೇ ದಿನ್‌ ಹೇಳಿಕೆಯನ್ನು ಬಳಸಿಕೊಂಡ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ವಿರುದ್ಧವೇ ವಾಗ್ದಾಳಿ ನಡೆಸಿದರು.

ಕಳೆದ ಎಂಟು ವರ್ಷದಿಂದ ನರೇಂದ್ರ ಮೋದಿ ಪ್ರಧಾನಿಯಾಗಿದ್ದಾರೆ. ಅವರು ಪ್ರಧಾನಿಯಾದರೆ ದೇಶಕ್ಕೆ ಅಚ್ಛೇ ದಿನ್‌ ಬರುತ್ತದೆ ಎಂದು ಹೇಳಿದ್ದರು. ಆದರೆ ಅವರು ನುಡಿದಂತೆ ನಡೆಯಲಿಲ್ಲ. 2014ರಲ್ಲಿ ಮೋದಿ ಪ್ರಧಾನಿಯಾದಾಗ ಈ ದೇಶದ ಮೇಲಿದ್ದ ಸಾಲ 53 ಲಕ್ಷ ಕೋಟಿ ರೂಪಾಯಿ. ಎಂಟು ವರ್ಷದ ನಂತರ, ದೇಶದ ಮೇಲೆ 155 ಲಕ್ಷ ಕೋಟಿ ರೂ. ಸಾಲವಾಗಿದೆ. ಅಂದರೆ ಎಂಟು ವರ್ಷದಲ್ಲಿ 102 ಲಕ್ಷ ಕೋಟಿ ರೂ. ಸಾಲ ಮಾಡಿದ್ದೀರಿ. ರೈತರನ್ನು, ದಲಿತರನ್ನು, ಹಿಂದುಳಿದವರನ್ನು, ಅಲ್ಪಸಂಖ್ಯಾತರನ್ನು ಹಾಳು ಮಾಡಿದ್ದೀರಿ. ಅಚ್ಛೇ ದಿನ್‌ ಎಂದುಕೊಂಡು ಅಧಿಕಾರಕ್ಕೆ ಬಂದ ನೀವು ಇಂದು ಪೆಟ್ರೋಲ್‌, ಡೀಸೆಲ್‌, ಎಲ್‌ಪಿಜಿ ಬೆಲೆ ಗಗನಕ್ಕೇರಲು ಕಾರಣವಾಗಿದ್ದೀರ ಎಂದು ಹರಿಹಾಯ್ದರು.

ಇದನ್ನೂ ಓದಿ | Video | ಸಿದ್ದರಾಮಯ್ಯ @75: ಸಿದ್ದರಾಮೋತ್ಸವಕ್ಕೂ ಮುನ್ನ ಒಂದು ಸಿಪ್‌ ಬಿಯರ್‌

4. ಕಾಂಗ್ರೆಸ್‌ ಮುಕ್ತ ಭಾರತ್‌
ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್‌ ಅಧಿಕಾರ ನಡೆಸಿದೆ. ಆದರೆ ಈ ವರ್ಷಗಳಲ್ಲಿ ಕೇವಲ ಭ್ರಷ್ಟಾಚಾರ, ಕುಟುಂಬ ರಾಜಕಾರಣ, ಪ್ರತಿಭೆಗಳಿಗೆ ಅವಕಾಶ ನೀಡದಿರುವುದನ್ನು ನಡೆಸಿದೆ. ಬಿಜೆಪಿ ಸರ್ಕಾರವನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತರುವುದಷ್ಟೆ ಅಲ್ಲ, ದೇಶದ ವಿವಿಧ ರಾಜ್ಯಗಳಲ್ಲಿ, ಸ್ಥಳೀಯ ಮಟ್ಟದಲ್ಲೂ ಕಾಂಗ್ರೆಸ್‌ ಅಧಿಕಾರವನ್ನು ಕಿತ್ತೆಸೆಯುವುದೇ ದೇಶದ ಅಭಿವೃದ್ಧಿಗೆ ಪರಿಹಾರ ಎನ್ನುವುದು ಪ್ರಧಾನಿ ಮೋದಿ ಹಾಗೂ ಬಿಜೆಪಿ ನಾಯಕರ ಭಾಷಣದ ಸಾರಾಂಶವಾಗಿರುತ್ತಿದ್ದವು. ಇದೇ ಮಾತನ್ನು ಅತ್ಯಂತ ಆಕ್ರೋಶಭರಿತರಾಗಿ ಸಿದ್ದರಾಮಯ್ಯ ಭಾಷಣದಲ್ಲಿ ಪ್ರಸ್ತಾಪಿಸಿದರು.

ರಾಹುಲ್‌ ಗಾಂಧಿ ಹಾಗೂ ಸೋನಿಯಾ ಗಾಂಧಿಯವರಿಗೆ ಇ.ಡಿ ವಿಚಾರಣೆ ನಡೆಸುತ್ತಿರುವ ವಿಚಾರವನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ “ಜನಶಕ್ತಿ ಎದ್ದೇ ಏಳುತ್ತದೆ. ಇಂದು ರಾಹುಲ್‌ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರಿಗೆ ಕಿರುಕುಳ ನೀಡಲಾಗುತ್ತಿದೆ. ಯಾವುದೇ ಅಕ್ರಮ ಹಣ ವರ್ಗಾವಣೆ ನಡೆಯದಿದ್ದರೂ ಐವತ್ತು ಗಂಟೆ ವಿಚಾರಣೆ ಮಾಡುತ್ತಿದ್ದೀರ. ಸೋನಿಯಾ ಗಾಂಧಿಯವರ ವಯಸ್ಸನ್ನೂ ಲೆಕ್ಕಿಸದೆ ಇ.ಡಿ. ಕಚೇರಿಗೆ ಕರೆದು ವಿಚಾರಣೆ ಮಾಡಿದ್ದೀರಿ. ನರೇಂದ್ರ ಮೋದಿಯವರೇ, ಕಾಂಗ್ರೆಸ್‌ಗೆ ಕೋಟ್ಯಂತರ ಕಾರ್ಯಕರ್ತರಿದ್ದಾರೆ. ಅವರೆಲ್ಲರೂ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿಯವರ ಜತೆಗೆ ಇದ್ದಾರೆ. ಅಮಾಯಕರನ್ನು ವಿಚಾರಣೆ ನಡೆಸಲು ಕಾನೂನು, ಸಂವಿಧಾನ ಅವಕಾಶ ನೀಡುವುದಿಲ್ಲ. ಸೇಡಿನ ರಾಜಕಾರಣ ಮಾಡುವ ಕೋಮುವಾದಿ ಬಿಜೆಪಿ ಸರ್ಕಾರವನ್ನು ಆದಷ್ಟೂ ಬೇಗ ಕಿತ್ತೊಗೆಯಬೇಕು. ಕಾಂಗ್ರೆಸ್‌ ಮುಕ್ತ ಭಾರತ್‌ ಎಂಬ ಬಿಜೆಪಿ ಘೋಷಣೆಯನ್ನು ಎಂದಿಗೂ ನನಸಾಗಲು ಅವಕಾಶ ನೀಡುವುದಿಲ್ಲʼʼ ಎಂದರು.

ಇದನ್ನೂ ಓದಿ | ಸಿದ್ದರಾಮೋತ್ಸವ ವೇದಿಕೆಯಲ್ಲಿ ಸಾಮೂಹಿಕ ನಾಯಕತ್ವದ ಮಂತ್ರ ಪಠಿಸಿದ ಡಿ.ಕೆ ಶಿವಕುಮಾರ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಬಿರುಗಾಳಿ ಮಳೆಗೆ ಜನರು ತತ್ತರ; ಸಿಡಿಲಿಗೆ ಎತ್ತುಗಳು ಬಲಿ, ನೆಲಕಚ್ಚಿದ ಬೆಳೆಗಳು

Karnataka Weather Forecast : ಬಿರುಗಾಳಿ ಸಹಿತ ಸುರಿದ ಮಳೆಗೆ (Rain News) ಬೀದರ್‌, ವಿಜಯನಗರ, ದಾವಣಗೆರೆ ರೈತರು ತತ್ತರಿಸಿ ಹೋಗಿದ್ದಾರೆ. ಸಾಲಸೋಲ ಮಾಡಿ ಖರೀದಿಸಿದ್ದ ಎತ್ತುಗಳು ಸಿಡಿಲಿಗೆ ಬಲಿಯಾದರೆ, ನೀರಿಲ್ಲದಿದ್ದರೂ ಟ್ಯಾಂಕರ್‌ ಮೂಲಕ ಕಷ್ಟ ಪಟ್ಟು ಬೆಳೆದಿದ್ದ ಬೆಳೆಯು ನೆಲಕಚ್ಚಿದೆ. ಸದ್ಯ ಬುಧವಾರದಂದು ಎಲ್ಲೆಲ್ಲಿ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಅಬ್ಬರಕ್ಕೆ ಜನ-ಜೀವನ ಅಸ್ತವ್ಯಸ್ತವಾಗಿದೆ. ಮುಂದಿನ 24 ಗಂಟೆಯಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ (Rain News) ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಮಧ್ಯ‌ ಮಹಾರಾಷ್ಟ್ರದಿಂದ ಕರ್ನಾಟಕ ಸೇರಿ ಕೇರಳದವರೆಗೆ ಸುಳಿಗಾಳಿಯ ಚಲನೆಯಿಂದ ಹವಾಮಾನದಲ್ಲಿ ವೈಪರಿತ್ಯ ಉಂಟಾಗಿದೆ. ಇದರ ಪ್ರಭಾವದಿಂದಾಗಿ ಇನ್ನೆರಡು ದಿನಗಳು ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ.

ಪ್ರಮುಖವಾಗಿ ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಬಾಗಲಕೋಟೆ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಸೇರಿ ದಕ್ಷಿಣ ಒಳನಾಡಿನ ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗಲಿದೆ. ಇನ್ನೂ 30-40 ಕಿಮೀ ವೇಗದಲ್ಲಿ ಬಿರುಸಿನ ಗಾಳಿ ಬೀಸಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಇದನ್ನೂ ಓದಿ:Murder Case : ಕೊಲೆಯಾದ ಮಹಿಳೆಗೆ 20 ಹುಡುಗರ ಸಹವಾಸ! ಅವರಿಗೆ ಆಕೆ ಇಟ್ಟಿದ್ದ ಹೆಸರು ಆರೆಂಜ್, ಆ್ಯಪಲ್, ಬನಾನಾ ಇತ್ಯಾದಿ!

ಸಿಡಿಲಿಗೆ ಎತ್ತುಗಳು ಬಲಿ

ಬೀದರ್‌ನ ಔರಾದ್ ತಾಲೂಕಿನ ಕೊಳ್ಳೂರ ಗ್ರಾಮದಲ್ಲಿ ಸಿಡಿಲು ಬಡಿದು 2 ಎತ್ತುಗಳು ಮೃತಪಟ್ಟಿರುವ ಘಟನೆ ನಡೆದಿದೆ. ಸೋಮವಾರ ತಡರಾತ್ರಿಯಲ್ಲಿ ಭಾರಿ ಮಳೆಯೊಂದಿಗೆ ಸಿಡಿಲು ಬಡಿದಿದೆ. ಪರಿಣಾಮ ಸಾಗರ ಬಸವರಾಜ ಪಾಟೀಲ ಎಂಬುವವರಿಗೆ ಸೇರಿದ ಎತ್ತುಗಳು ಮೃತಪಟ್ಟಿವೆ.

ವಿಜಯನಗರದಲ್ಲಿ ಗಾಳಿ-ಮಳೆಗೆ ಹಾರಿದ ಶಾಮಿಯಾನ

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಸೀತಾರಾಮ್ ತಾಂಡಾದ ಗ್ರಾಮದ ಬಳಿಯ ಆಂಜನೇಯ ದೇಗುಲದಲ್ಲಿ ಹನುಮ ಜಯಂತಿ ನಿಮಿತ್ತ ಶಾಮಿಯಾನ, ಲೈಟಿಂಗ್ ಹಾಕಲಾಗಿತ್ತು. ಆದರೆ ಜೋರಾಗಿ ಬೀಸಿದ ಗಾಳಿ, ಮಳೆಗೆ ಶಾಮಿಯಾನ, ಲೈಟಿಂಗ್ಸ್‌ ಹಾರಿ ಹೋಗಿತ್ತು. ಇದರಿಂದಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿತ್ತು.

ತಡರಾತ್ರಿ ಬಿರುಗಾಳಿ ಸಹಿತ ಮಳೆಗೆ ಹತ್ತಾರು ಎಕರೆ ಪಪ್ಪಾಯಿ ಬೆಳೆ ನೆಲಕ್ಕೆ ಉರುಳಿದೆ. ಹಗರಿಬೊಮ್ಮನಹಳ್ಳಿ ತಾಲೂಕಿನ ವಟ್ಟಮ್ಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ವಟ್ಟಮ್ಮನಹಳ್ಳಿ ಗ್ರಾಮದ ಮೂಗಪ್ಪ ಎಂಬುವರಿಗೆ ಸೇರಿದ 5 ಎಕರೆ ಪಪ್ಪಾಯಿ ಬೆಳೆ ಹಾಳಾಗಿದೆ. ಇದರಿಂದ ಅಂದಾಜು 5 ರಿಂದ 7 ಲಕ್ಷ ರೂಪಾಯಿ ಬೆಲೆ ಬಾಳುವ ಪಪ್ಪಾಯಿ ಬೆಳೆಗೆ ಹಾನಿಯಾಗಿದೆ. ಇದೇ ಗ್ರಾಮದ ಪತ್ರಿಗೌಡ ಹೊನ್ನೆಹಳ್ಳಿ ಎನ್ನುವವರ 3 ಎಕರೆ, ಕುಸುಮ ಅವರ 4 ಎಕರೆ ಪಪ್ಪಾಯಿ ಬೆಳೆ ನಷ್ಟವಾಗಿದೆ. ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೂಕ್ತ ಪರಿಹಾರಕ್ಕೆ ರೈತರು ಆಗ್ರಹಿಸಿದ್ದಾರೆ.

ದಾವಣಗೆರೆಯಲ್ಲಿ ಬಾಳೆ ಬೆಳೆ ನಾಶ

ಸೋಮವಾರ ಸಂಜೆ ಸುರಿದ ಗಾಳಿ ಮಳೆಗೆ ಅಪಾರ ಪ್ರಮಾಣದ ಬಾಳೆ ಬೆಳೆ ನಾಶವಾಗಿವೆ. ದಾವಣಗೆರೆಯ ಜಗಳೂರು ತಾಲೂಕಿನ ಕಟ್ಟಿಗೆಹಳ್ಳಿ, ಜಮ್ಮಪುರ, ಹರಿಶಿನಗುಂಡಿ ಸೇರಿದಂತೆ ಹಲವು ಕಡೆ ಬೆಳೆ ನಾಶವಾಗಿದೆ. ಕಟ್ಟಿಗೆಹಳ್ಳಿ ಗ್ರಾಮದ ಸಿದ್ದಮ್ಮ, ಬಸವರಾಜಪ್ಪ ಎಂಬುವರಿಗೆ ಸೇರಿದ 20 ಎಕರೆ ಬಾಳೆ ತೋಟ ನೆಲಕಚ್ಚಿದೆ. ಬರಗಾಲದಲ್ಲಿ ಟ್ಯಾಂಕರ್ ನೀರು ಖರೀದಿ ಮಾಡಿ ಬಾಳೆ ಬೆಳೆಸಿದ್ದರು. ಆದರೆ ಗಾಳಿ ಮಳೆಗೆ ಬಾಳೆಯು ನೆಲಸಮವಾಗಿದೆ. ಕೂಡಲೇ ಹಾನಿಗೊಂಡ ಬೆಳೆಗೆ ಸರ್ಕಾರ ಪರಿಹಾರ ‌ನೀಡುವಂತೆ ಒತ್ತಾಯಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Modi in Karnataka: ಏಪ್ರಿಲ್‌ 28 – 29ಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರವಾಸ; ಯಾವ ಯಾವ ಕ್ಷೇತ್ರದಲ್ಲಿ ಮತ ಬೇಟೆ?

Modi in Karnataka: ಏಪ್ರಿಲ್‌ 28ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಂದು ಮೂರು ಕಡೆ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ದಾವಣಗೆರೆ, ಬೆಳಗಾವಿ ಹಾಗೂ ಉತ್ತರಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ. ಈ ಮೂಲಕ ಇವುಗಳೂ ಸೇರಿದಂತೆ ಸುತ್ತಮುತ್ತಲಿನ ಲೋಕಸಭಾ ಕ್ಷೇತ್ರಗಳ ಮತದಾರರನ್ನೂ ಸೆಳೆಯಲು ಬಿಜೆಪಿ ಪ್ಲ್ಯಾನ್‌ ಮಾಡಿಕೊಂಡಿದೆ.

VISTARANEWS.COM


on

Modi in Karnataka PM Narendra Modi to visit from April 28 and 29
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಈಗಾಗಲೇ ಒಂದು ಸುತ್ತಿನ ಮತ ಬೇಟೆ ಮುಗಿಸಿ ತೆರಳಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಎರಡನೇ ಹಂತದ ಚುನಾವಣೆಗೆ ರಿಎಂಟ್ರಿ ಕೊಡಲಿದ್ದಾರೆ. ಈ ವೇಳೆ ಮೋದಿ (Modi in Karnataka) ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಏಪ್ರಿಲ್‌ 28 ಹಾಗೂ 29ರಂದು ಕರ್ನಾಟಕದಲ್ಲಿ ಜನರನ್ನು ಮೋಡಿ ಮಾಡಲು ಮೋದಿ ಮುಂದಾಗಿದ್ದಾರೆ.

ಏಪ್ರಿಲ್‌ 28ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಂದು ಮೂರು ಕಡೆ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ದಾವಣಗೆರೆ, ಬೆಳಗಾವಿ ಹಾಗೂ ಉತ್ತರಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ. ಈ ಮೂಲಕ ಇವುಗಳೂ ಸೇರಿದಂತೆ ಸುತ್ತಮುತ್ತಲಿನ ಲೋಕಸಭಾ ಕ್ಷೇತ್ರಗಳ ಮತದಾರರನ್ನೂ ಸೆಳೆಯಲು ಬಿಜೆಪಿ ಪ್ಲ್ಯಾನ್‌ ಮಾಡಿಕೊಂಡಿದೆ.

ಮೂರು ಕಡೆಯೂ ಬೃಹತ್‌ ಸಮಾವೇಶ

ಈ ಮೂರು ಲೋಕಸಭಾ ಕ್ಷೇತ್ರಗಳಲ್ಲಿಯೂ ಬೃಹತ್‌ ಸಮಾವೇಶ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಂದು ಬೆಳಗಾವಿಯಲ್ಲಿ 28 ರಾತ್ರಿ ವಾಸ್ತವ್ಯ ಹೂಡಲಿದ್ದಾರೆ.

29ರಂದು 4 ಕಡೆ ಸಮಾವೇಶ

ಏಪ್ರಿಲ್‌ 29ರಂದು ಕಲಬುರಗಿ, ಬಳ್ಳಾರಿ, ರಾಯಚೂರು ಅಥವಾ ಕೊಪ್ಪಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಮಾವೇಶವನ್ನು ನಡೆಸಲಿದ್ದಾರೆ.

ಕರ್ನಾಟಕದಲ್ಲಿ ಇಂದು ಅಮಿತ್‌ ಶಾ, ಪ್ರಿಯಾಂಕಾ ವಾದ್ರಾ ಪ್ರಚಾರ

ಮಂಗಳವಾರ (ಏಪ್ರಿಲ್‌ 23) ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಹಾಗೂ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ (Priyanka Vadra) ಅವರು ಅಬ್ಬರದ ಪ್ರಚಾರ ಮಾಡಲಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿಯೇ ಮಂಗಳವಾರ ಅಮಿತ್‌ ಶಾ ಹಾಗೂ ಪ್ರಿಯಾಂಕಾ ವಾದ್ರಾ ಅವರು ಪ್ರಚಾರ ಮಾಡುತ್ತಿರುವುದು ವಿಶೇಷವಾಗಿದೆ. ಇಂದು ಸಂಜೆ 7.50ಕ್ಕೆ ಅಮಿತ್‌ ಶಾ ಅವರು ತೇಜಸ್ವಿ ಸೂರ್ಯ ಪರ ರೋಡ್‌ ಶೋ ನಡೆಸಲಿದ್ದಾರೆ. ಸ್ವಾಮಿ ವಿವೇಕಾನಂದ ವೃತ್ತದಿಂದ ಸೇಂಟ್‌ ಫ್ರಾನ್ಸಿಸ್‌ ಶಾಲೆವರೆಗೂ ಅಮಿತ್‌ ಶಾ ಅವರು ರೋಡ್‌ ಶೋ ನಡೆಸುವ ಮೂಲಕ ತೇಜಸ್ವಿ ಸೂರ್ಯ ಪರ ಮತಯಾಚನೆ ಮಾಡಲಿದ್ದಾರೆ. ರೋಡ್‌ ಶೋಗಾಗಿ ಬಿಜೆಪಿ ಸಕಲ ಸಿದ್ಧತೆ ಮಾಡಿಕೊಂಡಿದೆ. 8.45ರವರೆಗೆ ರೋಡ್‌ ಶೋ ನಡೆಯಲಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರು ಮಧ್ಯಾಹ್ನ 2 ಗಂಟೆಗೆ ಚಿತ್ರದುರ್ಗಕ್ಕೆ ಆಗಮಿಸಲಿದ್ದು, ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಪ್ರಿಯಾಂಕಾ ವಾದ್ರಾ ಅವರು ಭಾಷಣ ಮಾಡಲಿದ್ದಾರೆ. ಇದಾದ ನಂತರ ಸಂಜೆ ಬೆಂಗಳೂರಿಗೆ ಆಗಮಿಸುವ ಪ್ರಿಯಾಂಕಾ ವಾದ್ರಾ, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರ ಪರವಾಗಿ ಪ್ರಚಾರ ನಡೆಸುವ ಮೂಲಕ ಹೆಣ್ಣುಮಕ್ಕಳ ಮತ ಸೆಳೆಯುವ ಪ್ರಯತ್ನ ಮಾಡಲಿದ್ದಾರೆ.

ಅಮಿತ್‌ ಶಾ ಅವರು ಬೊಮ್ಮನಹಳ್ಳಿ ವೃತ್ತದಿಂದ ಪ್ರಚಾರ ಆರಂಭಿಸಿದರೆ, ಪ್ರಿಯಾಂಕಾ ವಾದ್ರಾ ಅವರು ಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ಎಚ್.ಎಸ್. ಆರ್ ಬಡಾವಣೆಯಿಂದ ಪ್ರಚಾರ ಆರಂಭಿಸಲಿದ್ದಾರೆ. ಕರ್ನಾಟಕದಲ್ಲಿ ಏಪ್ರಿಲ್‌ 26ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಏಪ್ರಿಲ್‌ 24ರಂದೇ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಇದರಿಂದಾಗಿ ಮಂಗಳವಾರದ ಪ್ರಚಾರವು ಪ್ರಾಮುಖ್ಯತೆ ಪಡೆದಿದೆ. ಕರ್ನಾಟಕದಲ್ಲಿ ಈಗಾಗಲೇ ನರೇಂದ್ರ ಮೋದಿ ಅವರು ಪ್ರಚಾರ ನಡೆಸಿದ್ದಾರೆ.

Continue Reading

ಮಳೆ

Karnataka Weather : ಬೆಂಗಳೂರು ಕರಗಕ್ಕೆ ಅಡ್ಡಿಯಾಗುತ್ತಾ ಮಳೆ; ಮತ್ತೆ ಬಿಸಿ ಗಾಳಿ ಎಚ್ಚರಿಕೆ ಕೊಟ್ಟ ತಜ್ಞರು

Rain News : ರಾಜ್ಯದ ಹಲವೆಡೆ ಸುರಿದ ಮಳೆಯಿಂದಾಗಿ ವಾತಾವರಣವು ತಂಪಾಗಿತ್ತು. ಇದೀಗ ಮತ್ತೆ ಹೀಟ್‌ ವೇವ್‌ ಅಲರ್ಟ್‌ ನೀಡಲಾಗಿದ್ದು, ಬಿಸಿ ಗಾಳಿಗೆ ಜನರು ತತ್ತರಿಸಿ ಹೋಗಲಿದ್ದಾರೆ. ಮಳೆ ಮುನ್ಸೂಚನೆ ನಡುವೆಯೂ (Karnataka Weather Forecast) ಬಿಸಿ ಗಾಳಿ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಹಲವೆಡೆ ಗುಡುಗು, ಸಿಡಿಲಿನ ಎಚ್ಚರಿಕೆಯನ್ನು ನೀಡಲಾಗಿದೆ. ಇದರ ಜತೆಗೆ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಹೀಟ್‌ ವೇವ್‌ ಅಲರ್ಟ್‌ ನೀಡಲಾಗಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಮಂಡ್ಯ, ಮೈಸೂರು, ತುಮಕೂರು ರಾಮನಗರ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಒಣಹವೆ ಇರಲಿದೆ. ಉತ್ತರ ಒಳನಾಡಿನ ಹಾವೇರಿ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಚದುರಿದಂತೆ ಹಾಗೂ ಉತ್ತರ ಕನ್ನಡ, ಉಡುಪಿಯಲ್ಲಿ ಹಗುರವಾದ ಮಳೆಯಾಗಲಿದೆ.

ಇದನ್ನೂ ಓದಿ: Health Tips: ಒಂದೇ ಕಡೆ ಕೂತಿರುತ್ತೀರಾ? ಸಮಸ್ಯೆಗಳು ಒಂದೆರಡಲ್ಲ!

ಬೆಂಗಳೂರಿಗಿಲ್ಲ ಮಳೆ ಭಾಗ್ಯ

ರಾಜಧಾನಿ ಬೆಂಗಳೂರಲ್ಲಿ ಶುಷ್ಕ ಹವಾಮಾನವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂಜಾನೆ ಭಾಗಶಃ ಮೋಡ ಕವಿದ ವಾತಾವರಣ ಇದ್ರೆ, ಮಧ್ಯಾಹ್ನ ಅಥವಾ ಸಂಜೆಗೆ ಆಕಾಶವು ನಿರ್ಮಲವಾಗಿರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 24 ಡಿ.ಸೆ ಇರಲಿದೆ.

ಒಳನಾಡಿಗೆ ಬಿಸಿ ಮುಟ್ಟಿಸಲಿದೆ ಗಾಳಿ

ಬೀದರ್‌, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಗದಗ, ಧಾರವಾಡ, ದಾವಣಗೆರೆ, ಕೋಲಾರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.

ಕರಾವಳಿಯಲ್ಲಿ ಬಿಸಿ ಮತ್ತು ಆರ್ದ್ರತೆ ವಾತಾವರಣ

ಮುಂದಿನ 5 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಜತೆಗೆ ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ 30-40 ಕಿ.ಮೀ ವ್ಯಾಪ್ತಿಯಲ್ಲಿ ರಭಸವಾದ ಗಾಳಿಯು ಬೀಸಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದಾವಣಗೆರೆ

Neha Murder Case: ನೇಹಾ ಹಿರೇಮಠ್ ಹತ್ಯೆ ಖಂಡಿಸಿ ಹೊನ್ನಾಳಿಯಲ್ಲಿ ಪ್ರತಿಭಟನೆ

Neha Murder Case: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್‌ ಹತ್ಯೆ ಖಂಡಿಸಿ, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ, ಹೊನ್ನಾಳಿಯ ಸ್ವಾಮಿ ವಿವೇಕಾನಂದ ಭಗತ್‌ಸಿಂಗ್ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ಹಿಂದೂಪರ ಸಂಘಟನೆಗಳು ಹಾಗೂ ಎಬಿವಿಪಿ ಸಂಘಟನೆಯ ವತಿಯಿಂದ ಸೋಮವಾರ ಹೊನ್ನಾಳಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

VISTARANEWS.COM


on

protest against Neha murder case in honnali
Koo

ಹೊನ್ನಾಳಿ: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್‌ ಹತ್ಯೆ (Neha Murder Case) ಖಂಡಿಸಿ, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ, ಹೊನ್ನಾಳಿಯ ಸ್ವಾಮಿ ವಿವೇಕಾನಂದ ಭಗತ್‌ಸಿಂಗ್ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ಹಿಂದೂ ಪರ ಸಂಘಟನೆಗಳು ಹಾಗೂ ಎಬಿವಿಪಿ ಸಂಘಟನೆಯ ವತಿಯಿಂದ ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಇದನ್ನೂ ಓದಿ: Neha Murder Case: ಒಂದು ಕೋಮನ್ನು ಓಲೈಸದೆ ಸರಿ ದಿಕ್ಕಿನಲ್ಲಿ ತನಿಖೆ ಮಾಡಿ: ಪ್ರಲ್ಹಾದ್‌ ಜೋಶಿ ಆಗ್ರಹ

ಪ್ರತಿಭಟನೆಯಲ್ಲಿ ಹಿಂದೂ ಜಾಗರಣ ವೇದಿಕೆಯ ಪ್ರಾಂತ ಸಂಚಾಲಕ ಸತೀಶ್ ಮಾತನಾಡಿ, ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್‌ ಹತ್ಯೆ ಘಟನೆ ತೀವ್ರ ಖಂಡನೀಯವಾಗಿದ್ದು, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಮತ್ತು ಇಂತಹ ಪ್ರಕರಣಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸ್ವಾಮಿ ವಿವೇಕಾನಂದ ಭಗತ್‌ಸಿಂಗ್ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಎಂ.ಆರ್. ಮಹೇಶ್ ಮಾತನಾಡಿ ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಅವರ ಬರ್ಬರ ಹತ್ಯೆ ಮಾಡಿರುವ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು ಮತ್ತೊಮ್ಮೆ ಇಂತಹ ಕೃತ್ಯಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: Car Accident: ಆಕಸ್ಮಿಕವಾಗಿ ಕಾರು ಹರಿದು ಒಂದೂವರೆ ವರ್ಷದ ಮಗು ಸಾವು; ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಈ ಸಂದರ್ಭದಲ್ಲಿ ಮುಖಂಡರಾದ ಅರುಣ್, ಶಾಂತರಾಜ್ ಪಾಟೀಲ್‌, ಎ.ಬಿ.ಎಚ್. ಹನುಮಂತಪ್ಪ, ಕೆ. ವಿ. ಚೆನ್ನಪ್ಪ, ಬಲಮುರಿ ಹನುಮಂತಪ್ಪ, ಅಜಯ್ ರೆಡ್ಡಿ, ನಟರಾಜ್, ಚೆನ್ನೇಶ್, ಸಿದ್ದೇಶ್ ಮಾಸಡಿ, ಪ್ರವೀಣ್, ರವಿ, ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾಲೇಜು ವಿದ್ಯಾರ್ಥಿಗಳು, ಇತರರು ಪಾಲ್ಗೊಂಡಿದ್ದರು.

Continue Reading
Advertisement
Bengaluru karaga
ಕರ್ನಾಟಕ2 hours ago

Bengaluru Karaga: ಐತಿಹಾಸಿಕ ಬೆಂಗಳೂರು ಕರಗಕ್ಕೆ ಅದ್ಧೂರಿ ಚಾಲನೆ; ಉತ್ಸವ ವೀಕ್ಷಿಸಲು ಹರಿದು ಬಂದ ಜನಸಾಗರ

vistara Editorial ವಿಸ್ತಾರ ಸಂಪಾದಕೀಯ
ದೇಶ4 hours ago

ವಿಸ್ತಾರ ಸಂಪಾದಕೀಯ: ರಕ್ಷಣಾ ರಫ್ತು ಕ್ಷೇತ್ರದಲ್ಲಿ ಬೆಳವಣಿಗೆ ನಮ್ಮ ಹೆಗ್ಗಳಿಕೆ

IPL 2024
ಪ್ರಮುಖ ಸುದ್ದಿ4 hours ago

IPL 2024 : ಸ್ಟೊಯ್ನಿಸ್​​ ಶತಕ, ಚೆನ್ನೈ ವಿರುದ್ಧ 6 ವಿಕೆಟ್​ ಗೆಲವು ಸಾಧಿಸಿದ ಲಕ್ನೊ

Voters' Pledge
ಬೆಂಗಳೂರು5 hours ago

Voters Pledge: ಸಹಕಾರ ಸಂಘಗಳ ಕಾರ್ಯದರ್ಶಿಗಳು, ಸಿಬ್ಬಂದಿಗೆ ಮತದಾನ ಪ್ರತಿಜ್ಞಾವಿಧಿ ಬೋಧನೆ

Lok Sabha Election 2024
Lok Sabha Election 20245 hours ago

Lok Sabha Election 2024: ರಾಹುಲ್‌ ಗಾಂಧಿಯ ಡಿಎನ್‌ಎ ಪರೀಕ್ಷಿಸಬೇಕು; ವಿವಾದ ಹುಟ್ಟುಹಾಕಿದ ಶಾಸಕ ಅನ್ವರ್ ಹೇಳಿಕೆ

DCM DK Shivakumar Election campaign for Bangalore Rural Lok Sabha Constituency Congress candidate DK Suresh In Ramanagara
ರಾಮನಗರ5 hours ago

Lok Sabha Election 2024: ಕೇಂದ್ರ ಸರ್ಕಾರದಿಂದ ರಾಜ್ಯದ ಬಗ್ಗೆ ತಾರತಮ್ಯ ಧೋರಣೆ: ಡಿ.ಕೆ. ಸುರೇಶ್

Priyanka Gandhi
ಕರ್ನಾಟಕ5 hours ago

Priyanka Gandhi: ನಿರುದ್ಯೋಗಿಗಳಿಗೆ ಉದ್ಯೋಗ ನೀಡಿ ಮಂಗಳಸೂತ್ರ ಉಳಿಸೋದು ಗೊತ್ತಿಲ್ಲವೇ?; ಮೋದಿ ವಿರುದ್ಧ ಪ್ರಿಯಾಂಕ ಗಾಂಧಿ ವಾಗ್ದಾಳಿ

Lok Sabha Election 2024
Lok Sabha Election 20246 hours ago

Lok Sabha Election 2024: ಕಾಂಗ್ರೆಸ್‌ ಅಧಿಕಾರಕ್ಕೆ ಬಂದೆ ದೇಶದಲ್ಲಿ ಶರಿಯಾ ಕಾನೂನು ಜಾರಿ; ಯೋಗಿ ಆದಿತ್ಯನಾಥ್ ವಾಗ್ದಾಳಿ

Amit Shah
ಕರ್ನಾಟಕ6 hours ago

Amit Shah: ಬೆಂಗಳೂರಲ್ಲಿ ಅಮಿತ್‌ ಶಾ ಹವಾ; ತೇಜಸ್ವಿ ಸೂರ್ಯ ಪರ ಭರ್ಜರಿ ರೋಡ್‌ ಶೋ

Public Sector Banks
ಪ್ರಮುಖ ಸುದ್ದಿ7 hours ago

Public Sector Banks : ಸಾರ್ವಜನಿಕ ಬ್ಯಾಂಕ್​ಗಳು ಸಾಲ ಕಟ್ಟದವರಿಗೆ ಲುಕ್ ಔಟ್ ನೋಟಿಸ್​ ನೀಡುವಂತಿಲ್ಲ, ಕೋರ್ಟ್​​ ಆದೇಶ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ23 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು1 day ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ1 day ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20244 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌