ಮೋದಿಯ ನಾಲ್ಕು ಡೈಲಾಗ್‌ ಮೂಲಕವೇ ಬಿಜೆಪಿ ಸರ್ಕಾರಗಳನ್ನು ಮೂದಲಿಸಿದ ಸಿದ್ದರಾಮಯ್ಯ - Vistara News

ದಾವಣಗೆರೆ

ಮೋದಿಯ ನಾಲ್ಕು ಡೈಲಾಗ್‌ ಮೂಲಕವೇ ಬಿಜೆಪಿ ಸರ್ಕಾರಗಳನ್ನು ಮೂದಲಿಸಿದ ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿಯವರ ಕುರಿತು ಆಗಾಗ್ಗೆ ವಾಗ್ದಾಳಿ ನಡೆಸುವ ಸಿದ್ದರಾಮಯ್ಯ ಈ ಬಾರಿ ಪೂರ್ವಸಿದ್ಧತೆಯೊಂದಿಗೇ ಬಂದಿದ್ದರು. ಮೋದಿಯವರ ಮಾತುಗಳನ್ನೇ ಉದಾಹರಣೆಯಾಗಿರಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮೇಲೆ ಹರಿಹಾಯ್ದರು.

VISTARANEWS.COM


on

Siddaramaiah speech in siddaramotsava 4
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ: ಸದಾ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ, ಆರ್‌ಎಸ್‌ಎಸ್‌ ವಿರುದ್ಧ ಹರಿಹಾಯುವ ತಮ್ಮ ಅಭ್ಯಾಸವನ್ನು ಮಾಜಿ ಸಿಎಂ ಸಿದ್ದರಾಮಯ್ಯ, ತಮ್ಮ 75ನೇ ಹುಟ್ಟುಹಬ್ಬದ ಸಂಭ್ರಮದ ಸಮಯದಲ್ಲೂ ಇದನ್ನು ಮುಂದುವರಿಸಿದೆ. ಆದರೆ ಈ ಬಾರಿ ಪೂರ್ವಸಿದ್ಧತೆಯೊಂದಿಗೆ ಆಗಮಿಸಿದ್ದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಡೈಲಾಗ್‌ಗಳನ್ನೇ ಆಧಾರವಾಗಿಟ್ಟುಕೊಂಡು ವಾಗ್ದಾಳಿ ನಡೆಸಿದರು.

1. ನಾ ಖಾವೂಂಗಾ, ನಾ ಖಾನೇ ದೂಂಗಾ
ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದಾಗಿನಿಂದಲೂ ಹೇಳುತ್ತಿರುವ ʻಮಹಾಮಂತ್ರʼವೆಂದರೆ ನಾ ಖಾವೂಂಗಾ, ನಾ ಖಾನೇ ದೂಂಗಾ. ಅಂದರೆ, ತಮ್ಮ ಸರ್ಕಾರದಲ್ಲಿ ಸ್ವತಃ ತಾವು ಭ್ರಷ್ಟಾಚಾರ ಮಾಡುವುದಿಲ್ಲ, ಹಾಗೂ ಬೇರೆಯವರೂ ಭ್ರಷ್ಟಾಚಾರವೆಸಗಲು ಅವಕಾಶ ನೀಡುವುದಿಲ್ಲ ಎನ್ನುವುದು. ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಆರೋಪಗಳನ್ನು ಮಾಡಲಾಗಿತ್ತು. ಅನೇಕ ಸಚಿವರ ಮೇಲೆ ಭ್ರಷ್ಟಾಚಾರದ ಆರೋಪಗಳ ಕಾರಣಕ್ಕಾಗಿಯೇ ಬಿಜೆಪಿ ಅಧಿಕಾರಕ್ಕೆ ಬರಲು ಸಹಕಾರವಾಗಿತ್ತು. ಇದೇ ಮಾತನ್ನು ಸಿದ್ದರಾಮಯ್ಯ ತಮ್ಮ ವಾಗ್ದಾಳಿಗೆ ಬಳಸಿಕೊಂಡರು.

ತಾವೂ ತಿನ್ನುವುದಿಲ್ಲ, ಬೇರೆಯವರು ತಿನ್ನಲೂ ಬಿಡುವುದಿಲ್ಲ ಎಂದು ನರೇಂದ್ರ ಮೋದಿಯವರು ಸುಳ್ಳು ಹೇಳುತ್ತಾರೆ. ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರ 40% ಕಮಿಷನ್‌ ಸರ್ಕಾರ ಎಂದು ಕಂಟ್ರಾಕ್ಟರ್‌ ಅಸೋಸಿಯೇಷನ್‌ ಹೇಳಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಇಂತಹ ಭ್ರಷ್ಟ ಸರ್ಕಾರವನ್ನು ತಮ್ಮ 44 ವರ್ಷದ ರಾಜಕೀಯ ಇತಿಹಾಸದಲ್ಲಿ ಕಂಡಿಲ್ಲ. ಈ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ | ಸಿದ್ದರಾಮೋತ್ಸವ | ಜನುಮ ದಿನಾಚರಣೆ ಬೇಡ ಎನ್ನುವ ಸಿದ್ದರಾಮಯ್ಯ ಸಿದ್ದರಾಮೋತ್ಸವಕ್ಕೆ ಒಪ್ಪಿದ್ದೇಕೆ?

2. ಸಬ್‌ ಕಾ ಸಾಥ್‌, ಸಬ್‌ಕಾ ವಿಶ್ವಾಸ್‌
ಸಾಮಾನ್ಯವಾಗಿ ಬಿಜೆಪಿಯನ್ನು ಕೋಮುವಾದಿ ಎಂದು ವಿರೋಧ ಪಕ್ಷಗಳು ಆರೋಪಿಸುತ್ತವೆ. ಬಹುಸಂಖ್ಯಾತ ಹಿಂದುಗಳ ಪರವಾಗಿಯೇ ನೀತಿಗಳನ್ನು ರೂಪಿಸುವ ಮೂಲಕ ಅಲ್ಪಸಂಖ್ಯಾತರು, ಹಿಂದುಳಿದವರು, ದಲಿತರನ್ನು ಅವಕಾಶವಂಚಿತರನ್ನಾಗಿ ಮಾಡಲಾಗುತ್ತದೆ ಎಂಬ ಆರೋಪಗಳನ್ನು ಆಗಾಗ್ಗೆ ಮಾಡಲಾಗುತ್ತದೆ. ಇದಕ್ಕೆ ಉತ್ತರವಾಗಿ ಪ್ರಧಾನಿ ನರೇಂದ್ರ ಮೋದಿಯವರು ಸಬ್‌ ಕಾ ಸಾಥ್‌, ಸಬ್‌ಕಾ ವಿಶ್ವಾಸ್‌ ಎಂಬ ಘೋಷಣೆ ಮಾಡಿದರು. ತಮ್ಮ ಸರ್ಕಾರ ಮುಸ್ಲಿಂ ಮಹಿಳೆಯರ ಪರವಾಗಿ ತ್ರಿವಳಿ ತಲಾಖ್‌ ನಿಷೇಧ ಮಾಡಿದೆ, ಎಸ್‌ಟಿ ಆಯೋಗಕ್ಕೆ ಸಾಂವಿಧಾನಿಕ ಮಾನ್ಯತೆ ನೀಡಿದೆ, ಹಿಂದುಳಿದ ವರ್ಗಗಳ ಮುಖಂಡರನ್ನು ದೇಶದ ಉನ್ನತ ಸ್ಥಾನಕ್ಕೆ ಕರೆತಂದಿದ್ದೇವೆ ಎಂಬ ಸಂದೇಶ ನೀಡಿದ್ದರು. ಈ ವಿಚಾರವನ್ನು ಕರ್ನಾಟಕದ ಕರಾವಳಿಯಲ್ಲಿ ಇತ್ತೀಚೆಗೆ ನಡೆದ ಹತ್ಯೆಗಳಿಗೆ ಲಿಂಕ್‌ ಮಾಡಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಸಬ್‌ ಕಾ ಸಾಥ್‌, ಸಬ್‌ಕಾ ವಿಶ್ವಾಸ್‌ ಎಂದಿರಿ. ಕರಾವಳಿಯಲ್ಲಿ ಇತ್ತೀಚಿನ ದಿನಗಳಲ್ಲಿ ಮೂರು ಕೊಲೆ ಆಗಿವೆ. ಮಸೂದ್‌, ಪ್ರವೀಣ್‌ ಹಾಗೂ ಫಾಜಿಲ್‌ ಕೊಲೆ ಆಗಿದೆ. ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರಾವಳಿಗೆ ಭೇಟಿ ನೀಡಿದ್ದರು. ಮಸೂದ್‌ ಮನೆಗೂ ಹೋಗಲಿಲ್ಲ, ಫಾಜಿಲ್‌ ಮನೆಗೂ ಹೋಗಲಿಲ್ಲ, ಪ್ರವೀಣ್‌ ಮನೆಗೆ ಮಾತ್ರ ಹೋದರು. ಪ್ರವೀಣ್‌ಗೆ ಮಾತ್ರವೇ ಪರಿಹಾರ ಕೊಟ್ಟರು. ಪ್ರವೀಣ್‌ಗೆ ಪರಿಹಾರ ಕೊಟ್ಟಿದ್ದು ಸರಿ, ಅದಕ್ಕೆ ನನ್ನ ವಿರೋಧವಿಲ್ಲ. ಆದರೆ ಉಳಿದಿಬ್ಬರಿಗೆ ಏಕೆ ಕೊಟ್ಟಿಲ್ಲ? ನೀವು ಇಡೀ ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ಒಂದು ಧರ್ಮಕ್ಕೆ ಸೇರಿದ ಮುಖ್ಯಮಂತ್ರಿಯೋ? ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ ಎನ್ನುವುದಕ್ಕೆ ನಿಮಗೆ ನೈತಿಕತೆ ಇದೆಯ? ನೀವು ಈ ರಾಜ್ಯ ಆಳುವುದಕ್ಕೆ ಲಾಯಕ್ಕ? ನೀವು ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದರು.

ಇದನ್ನೂ ಓದಿ | ರಾಹುಲ್‌ ಗಾಂಧಿ ಫಿಟ್‌ನೆಸ್‌: ಸಿದ್ದರಾಮೋತ್ಸವಕ್ಕೂ ಮುನ್ನ 52 ವರ್ಷದ ನಾಯಕನ ವರ್ಕೌಟ್‌

3. ಅಚ್ಛೇ ದಿನ್‌
ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಪಂಚಭೂತಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿ ಆಪಾದನೆ ಮಾಡುತ್ತಿತ್ತು. 2ಜಿ ತರಂಗಾತರ, ಯುದ್ಧ ವಿಮಾನ, ಆದರ್ಶ್‌ ಹೌಸಿಂಗ್‌ ಸೊಸೈಟಿ, ಕಲ್ಲಿದ್ದಲು ಹಗರಣ ಸೇರಿ ಅನೇಕ ವಿಚಾರಗಳನ್ನು ಪ್ರಸ್ತಾಪಿಸುತ್ತಿದ್ದರು. ಕಾಂಗ್ರೆಸ್‌ ಸರ್ಕಾರದಲ್ಲಿ ದೇಶ ಕರಾಳ ದಿನಗಳನ್ನು ಅನುಭವಿಸುತ್ತಿದೆ. ಬಿಜೆಪಿ ಸರ್ಕಾರ ಬಂದರೆ ದೇಶಕ್ಕೆ ಅಚ್ಛೇ ದಿನ್‌ (ಉತ್ತಮ ದಿನಗಳು) ಬರಲಿವೆ ಎಂದು ಚುನಾವಣೆ ಪ್ರಚಾರ ಸಭೆಗಳನ್ನು ನಡೆಸಿದ್ದರು. ಇದೇ ಅಚ್ಛೇ ದಿನ್‌ ಹೇಳಿಕೆಯನ್ನು ಬಳಸಿಕೊಂಡ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ವಿರುದ್ಧವೇ ವಾಗ್ದಾಳಿ ನಡೆಸಿದರು.

ಕಳೆದ ಎಂಟು ವರ್ಷದಿಂದ ನರೇಂದ್ರ ಮೋದಿ ಪ್ರಧಾನಿಯಾಗಿದ್ದಾರೆ. ಅವರು ಪ್ರಧಾನಿಯಾದರೆ ದೇಶಕ್ಕೆ ಅಚ್ಛೇ ದಿನ್‌ ಬರುತ್ತದೆ ಎಂದು ಹೇಳಿದ್ದರು. ಆದರೆ ಅವರು ನುಡಿದಂತೆ ನಡೆಯಲಿಲ್ಲ. 2014ರಲ್ಲಿ ಮೋದಿ ಪ್ರಧಾನಿಯಾದಾಗ ಈ ದೇಶದ ಮೇಲಿದ್ದ ಸಾಲ 53 ಲಕ್ಷ ಕೋಟಿ ರೂಪಾಯಿ. ಎಂಟು ವರ್ಷದ ನಂತರ, ದೇಶದ ಮೇಲೆ 155 ಲಕ್ಷ ಕೋಟಿ ರೂ. ಸಾಲವಾಗಿದೆ. ಅಂದರೆ ಎಂಟು ವರ್ಷದಲ್ಲಿ 102 ಲಕ್ಷ ಕೋಟಿ ರೂ. ಸಾಲ ಮಾಡಿದ್ದೀರಿ. ರೈತರನ್ನು, ದಲಿತರನ್ನು, ಹಿಂದುಳಿದವರನ್ನು, ಅಲ್ಪಸಂಖ್ಯಾತರನ್ನು ಹಾಳು ಮಾಡಿದ್ದೀರಿ. ಅಚ್ಛೇ ದಿನ್‌ ಎಂದುಕೊಂಡು ಅಧಿಕಾರಕ್ಕೆ ಬಂದ ನೀವು ಇಂದು ಪೆಟ್ರೋಲ್‌, ಡೀಸೆಲ್‌, ಎಲ್‌ಪಿಜಿ ಬೆಲೆ ಗಗನಕ್ಕೇರಲು ಕಾರಣವಾಗಿದ್ದೀರ ಎಂದು ಹರಿಹಾಯ್ದರು.

ಇದನ್ನೂ ಓದಿ | Video | ಸಿದ್ದರಾಮಯ್ಯ @75: ಸಿದ್ದರಾಮೋತ್ಸವಕ್ಕೂ ಮುನ್ನ ಒಂದು ಸಿಪ್‌ ಬಿಯರ್‌

4. ಕಾಂಗ್ರೆಸ್‌ ಮುಕ್ತ ಭಾರತ್‌
ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್‌ ಅಧಿಕಾರ ನಡೆಸಿದೆ. ಆದರೆ ಈ ವರ್ಷಗಳಲ್ಲಿ ಕೇವಲ ಭ್ರಷ್ಟಾಚಾರ, ಕುಟುಂಬ ರಾಜಕಾರಣ, ಪ್ರತಿಭೆಗಳಿಗೆ ಅವಕಾಶ ನೀಡದಿರುವುದನ್ನು ನಡೆಸಿದೆ. ಬಿಜೆಪಿ ಸರ್ಕಾರವನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತರುವುದಷ್ಟೆ ಅಲ್ಲ, ದೇಶದ ವಿವಿಧ ರಾಜ್ಯಗಳಲ್ಲಿ, ಸ್ಥಳೀಯ ಮಟ್ಟದಲ್ಲೂ ಕಾಂಗ್ರೆಸ್‌ ಅಧಿಕಾರವನ್ನು ಕಿತ್ತೆಸೆಯುವುದೇ ದೇಶದ ಅಭಿವೃದ್ಧಿಗೆ ಪರಿಹಾರ ಎನ್ನುವುದು ಪ್ರಧಾನಿ ಮೋದಿ ಹಾಗೂ ಬಿಜೆಪಿ ನಾಯಕರ ಭಾಷಣದ ಸಾರಾಂಶವಾಗಿರುತ್ತಿದ್ದವು. ಇದೇ ಮಾತನ್ನು ಅತ್ಯಂತ ಆಕ್ರೋಶಭರಿತರಾಗಿ ಸಿದ್ದರಾಮಯ್ಯ ಭಾಷಣದಲ್ಲಿ ಪ್ರಸ್ತಾಪಿಸಿದರು.

ರಾಹುಲ್‌ ಗಾಂಧಿ ಹಾಗೂ ಸೋನಿಯಾ ಗಾಂಧಿಯವರಿಗೆ ಇ.ಡಿ ವಿಚಾರಣೆ ನಡೆಸುತ್ತಿರುವ ವಿಚಾರವನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ “ಜನಶಕ್ತಿ ಎದ್ದೇ ಏಳುತ್ತದೆ. ಇಂದು ರಾಹುಲ್‌ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರಿಗೆ ಕಿರುಕುಳ ನೀಡಲಾಗುತ್ತಿದೆ. ಯಾವುದೇ ಅಕ್ರಮ ಹಣ ವರ್ಗಾವಣೆ ನಡೆಯದಿದ್ದರೂ ಐವತ್ತು ಗಂಟೆ ವಿಚಾರಣೆ ಮಾಡುತ್ತಿದ್ದೀರ. ಸೋನಿಯಾ ಗಾಂಧಿಯವರ ವಯಸ್ಸನ್ನೂ ಲೆಕ್ಕಿಸದೆ ಇ.ಡಿ. ಕಚೇರಿಗೆ ಕರೆದು ವಿಚಾರಣೆ ಮಾಡಿದ್ದೀರಿ. ನರೇಂದ್ರ ಮೋದಿಯವರೇ, ಕಾಂಗ್ರೆಸ್‌ಗೆ ಕೋಟ್ಯಂತರ ಕಾರ್ಯಕರ್ತರಿದ್ದಾರೆ. ಅವರೆಲ್ಲರೂ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿಯವರ ಜತೆಗೆ ಇದ್ದಾರೆ. ಅಮಾಯಕರನ್ನು ವಿಚಾರಣೆ ನಡೆಸಲು ಕಾನೂನು, ಸಂವಿಧಾನ ಅವಕಾಶ ನೀಡುವುದಿಲ್ಲ. ಸೇಡಿನ ರಾಜಕಾರಣ ಮಾಡುವ ಕೋಮುವಾದಿ ಬಿಜೆಪಿ ಸರ್ಕಾರವನ್ನು ಆದಷ್ಟೂ ಬೇಗ ಕಿತ್ತೊಗೆಯಬೇಕು. ಕಾಂಗ್ರೆಸ್‌ ಮುಕ್ತ ಭಾರತ್‌ ಎಂಬ ಬಿಜೆಪಿ ಘೋಷಣೆಯನ್ನು ಎಂದಿಗೂ ನನಸಾಗಲು ಅವಕಾಶ ನೀಡುವುದಿಲ್ಲʼʼ ಎಂದರು.

ಇದನ್ನೂ ಓದಿ | ಸಿದ್ದರಾಮೋತ್ಸವ ವೇದಿಕೆಯಲ್ಲಿ ಸಾಮೂಹಿಕ ನಾಯಕತ್ವದ ಮಂತ್ರ ಪಠಿಸಿದ ಡಿ.ಕೆ ಶಿವಕುಮಾರ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Lockup Death: ಚನ್ನಗಿರಿ ಆದಿಲ್ ಸಾವು ಪ್ರಕರಣ ಸಿಐಡಿಗೆ ವರ್ಗಾವಣೆ

Lockup Death: ಚನ್ನಗಿರಿ ಆದಿಲ್ ಸಾವು ಪ್ರಕರಣ ಖಂಡಿಸಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ ಸಂಬಂಧ 25 ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.

VISTARANEWS.COM


on

Lockup Death
Koo

ದಾವಣಗೆರೆ: ಚನ್ನಗಿರಿ ಆದಿಲ್ ಸಾವು ಪ್ರಕರಣ (Lockup Death) ಹಾಗೂ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಇದುವರೆಗೂ ಘಟನೆಗೆ ಸಂಬಂಧಿಸಿದಂತೆ 25 ಜನರನ್ನು ಬಂಧಿಸಲಾಗಿದೆ. ಅವರೆಲ್ಲಾ ನ್ಯಾಯಾಂಗ ಬಂಧನದಲ್ಲಿದ್ದು, ಬಂಧಿತರ ಮೇಲೆ ಯಾವುದೇ ಹಳೇ ಕೇಸ್‌ಗಳಿಲ್ಲ. ಗುಂಪಿನಲ್ಲಿದ್ದ ಕೆಲ ಯುವಕರು ಠಾಣೆ ಮೇಲೆ ಕಲ್ಲೆಸೆದಿದ್ದಾರೆ. ಚನ್ನಗಿರಿ ಟೌನ್ ಮತ್ತು ತಾಲೂಕಿನ ಹೊನ್ನೇಬಾಗಿ ನಲ್ಲೂರು ಸೇರಿ ವಿವಿಧ ಹಳ್ಳಿಗಳಿಂದ ಬಂದ ಯುವಕರು ಗುಂಪಿನಲ್ಲಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಬಂಧಿತರ ಮೇಲೆ ಐಪಿಸಿ 353 ಮತ್ತು 307 ಅನ್ವಯ ಪ್ರಕರಣ ದಾಖಲಾಗಿದೆ. ಆದಿಲ್‌ ಮರಣೋತ್ತರ ಪರೀಕ್ಷೆ ನಡೆದಿದ್ದು, ಇನ್ನಷ್ಟೇ ವರದಿ‌ ನಮ್ಮ ಕೈಸೇರಬೇಕಿದೆ. ಇನ್ಮೆರೆಡು ದಿನಗಳಲ್ಲಿ ವರದಿ ಬರುವ ಸಾಧ್ಯತೆ ಇದೆ ಎಂದು ಹೇಳಿದರು.

ಇದನ್ನೂ ಓದಿ | Mob Attacks: ಕುರಾನ್ ಅಪವಿತ್ರ ನೆಪ; ಪಾಕಿಸ್ತಾನದಲ್ಲಿ ಕ್ರಿಶ್ಚಿಯನ್ನರ ಮೇಲೆ ಮುಸ್ಲಿಮರ ದಾಳಿ

ಯುವಕನ ಲಾಕಪ್‌ ಡೆತ್‌ ಆಗಿದೆ ಎಂದು ಆರೋಪಿಸಿ ಕುಟುಂಬಸ್ಥರು ಚನ್ನಗಿರಿ ಪೊಲೀಸ್ ಠಾಣೆಯ ಎದುರು ಶುಕ್ರವಾರ ರಾತ್ರಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಕೆಲ ಕಿಡಿಗೇಡಿಗಳು ಠಾಣೆ ಮೇಲೆ ಕಲ್ಲು ತೂರಾಟ ನಡೆಸಿ, ವಾಹನಗಳನ್ನು ಜಖಂಗೊಳಿಸಿದ್ದರು. ಈ ಸಂಬಂಧ 25 ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಯುವಕನ ಲಾಕಪ್‌ ಡೆತ್‌ ಪ್ರಕರಣದಿಂದ ಉದ್ವಿಗ್ನಗೊಂಡಿದ್ದ ಜಿಲ್ಲೆಯ ಚನ್ನಗಿರಿ ಪಟ್ಟಣ ಸಹಜ‌ ಸ್ಥಿತಿಯತ್ತ ಮರಳುತ್ತಿದೆ. ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ನಡೆದಿದ್ದರಿಂದ ಆಯ ಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದೆ.

ಪೊಲೀಸ್ ವಶದಲ್ಲಿದ್ದ ಆದಿಲ್ (32) ಎಂಬ ವ್ಯಕ್ತಿ ಸಾವಿಗೀಡಾದ ಹಿನ್ನೆಲೆಯಲ್ಲಿ ಲಾಕಪ್ ಡೆತ್ ಆರೋಪ ಕೇಳಿಬಂದಿತ್ತು. ಇದರಿಂದ ರೊಚ್ಚಿಗೆದ್ದ ಕೆಲ ಕಿಡಿಗೇಡಿಗಳು ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಮಾಡಿದ್ದರು. ಈ ವೇಳೆ ಐದು ಪೊಲೀಸ್ ವಾಹನ‌‌ ಜಖಂಗೊಂಡು, ಹನ್ನೊಂದು ಪೊಲೀಸರಿಗೆ ಗಾಯಗಳಾಗಿದ್ದವು. 200ಕ್ಕೂ ಹೆಚ್ಚು ಜನರಿಂದ ಏಕಕಾಲಕ್ಕೆ ದಾಳಿಯಾದ ಹಿನ್ನೆಲೆ ಚನ್ನಗಿರಿ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ಏರ್ಪಟ್ಟಿತ್ತು.

ಇದನ್ನೂ ಓದಿ | Swati Maliwal case: “ರೇಪ್‌, ಕೊಲೆ ಮಾಡೋದಾಗಿ ಬೆದರಿಕೆ ಬರ್ತಿದೆ”- ಸ್ವಾತಿ ಮಲಿವಾಲ್‌ ಮತ್ತೊಂದು ಆರೋಪ

ಈಗ ಶವ ಪರೀಕ್ಷೆ ವರದಿ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಆದಿಲ್‌ ಪೊಲೀಸ್ ಠಾಣೆಯಲ್ಲಿದ್ದದ್ದು ಕೇವಲ‌ ಏಳು ನಿಮಿಷ. ಈ ವೇಳೆ ಕಡಿಮೆ ರಕ್ತದೊತ್ತಡದಿಂದ ಹೃದಯಾಘಾತವಾಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ವೈದ್ಯರು ಪ್ರಾಥಮಿಕ ವರದಿ ನೀಡಿದ ಮೇಲೆ ಸತ್ಯಾಸತ್ಯತೆ ತಿಳಿಯಲಿದೆ.

Continue Reading

ಪ್ರಮುಖ ಸುದ್ದಿ

Lockup Death: ಚನ್ನಗಿರಿ ಠಾಣೆ ಮೇಲೆ ಕಲ್ಲು ತೂರಾಟ ಕೇಸ್; 23 ಕಿಡಿಗೇಡಿಗಳ ಸೆರೆ

Lockup Death: ಯುವಕನ ಲಾಕಪ್‌ ಡೆತ್‌ ಪ್ರಕರಣ ಖಂಡಿಸಿ, ಚನ್ನಗಿರಿ ಠಾಣೆಗೆ ಕಲ್ಲು ತೂರಾಟ ನಡೆಸಿದ್ದ 23 ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

VISTARANEWS.COM


on

Lockup Death
Koo

ದಾವಣಗೆರೆ: ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣದಲ್ಲಿ 23 ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಚನ್ನಗಿರಿ ಟೌನ್ ನಿವಾಸಿಗಳು ಎಂದು ಗುರುತಿಸಲಾಗಿದೆ. ಯುವಕನ ಲಾಕಪ್‌ ಡೆತ್‌ ಪ್ರಕರಣ ಖಂಡಿಸಿ, ಠಾಣೆಗೆ ಕಲ್ಲು ತೂರಾಟ (Lockup Death) ನಡೆಸಿದ್ದ 40ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಸದ್ಯ ಬಂಧಿತರಾಗಿರುವ 23 ಆರೋಪಿಗಳಿಗೆ ಚನ್ನಗಿರಿ ನ್ಯಾಯಾಲಯ, 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಇನ್ನುಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಆದಿಲ್‌ ಎಂಬ ಯುವಕನ ಲಾಕಪ್‌ ಡೆತ್‌ ಆಗಿದೆ ಎಂದು ಆರೋಪಿಸಿ ಕುಟುಂಬಸ್ಥರು ಚನ್ನಗಿರಿ ಪೊಲೀಸ್ ಠಾಣೆಯ ಎದುರು ಶುಕ್ರವಾರ ರಾತ್ರಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಕೆಲ ಕಿಡಿಗೇಡಿಗಳು ಠಾಣೆ ಮೇಲೆ ಕಲ್ಲು ತೂರಾಟ ನಡೆಸಿ, ವಾಹನಗಳನ್ನು ಜಖಂಗೊಳಿಸಿದ್ದರು. ಸಿಸಿ ಕ್ಯಾಮೆರಾ, ಮೊಬೈಲ್‌ ವಿಡಿಯೊ ಆಧರಿಸಿ ಕಿಡಿಗೇಡಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಇಂದು ಮರಣೋತ್ತರ ಪರೀಕ್ಷೆ ವರದಿ ಬಿಡುಗಡೆ

ಯುವಕನ ಲಾಕಪ್‌ ಡೆತ್‌ ಪ್ರಕರಣದಿಂದ ಉದ್ವಿಗ್ನಗೊಂಡಿದ್ದ ಜಿಲ್ಲೆಯ ಚನ್ನಗಿರಿ ಪಟ್ಟಣ ಸಹಜ‌ ಸ್ಥಿತಿಯತ್ತ ಮರಳುತ್ತಿದೆ. ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ನಡೆದಿದ್ದರಿಂದ ಆಯ ಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದೆ.

ಪೊಲೀಸ್ ವಶದಲ್ಲಿದ್ದ ಆದಿಲ್ (32) ಎಂಬ ವ್ಯಕ್ತಿ ಸಾವಿಗೀಡಾದ ಹಿನ್ನೆಲೆಯಲ್ಲಿ ಲಾಕಪ್ ಡೆತ್ ಆರೋಪ ಕೇಳಿಬಂದಿತ್ತು. ಇದರಿಂದ ರೊಚ್ಚಿಗೆದ್ದ ಕೆಲ ಕಿಡಿಗೇಡಿಗಳು ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಮಾಡಿದ್ದರು. ಈ ವೇಳೆ ಐದು ಪೊಲೀಸ್ ವಾಹನ‌‌ ಜಖಂಗೊಂಡು, ಹನ್ನೊಂದು ಪೊಲೀಸರಿಗೆ ಗಾಯಗಳಾಗಿದ್ದವು. 200ಕ್ಕೂ ಹೆಚ್ಚು ಜನರಿಂದ ಏಕಕಾಲಕ್ಕೆ ದಾಳಿಯಾದ ಹಿನ್ನೆಲೆ ಚನ್ನಗಿರಿ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ಏರ್ಪಟ್ಟಿತ್ತು.

ಇದನ್ನೂ ಓದಿ | Teenage Boy Arrested: ತನ್ನನ್ನು ಅತ್ಯಾಚಾರ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದವನನ್ನು ಕೊಂದ ಬಾಲಕ!

ಈಗ ಶವ ಪರೀಕ್ಷೆ ವರದಿ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಆದಿಲ್‌ ಪೊಲೀಸ್ ಠಾಣೆಯಲ್ಲಿದ್ದದ್ದು ಕೇವಲ‌ ಏಳು ನಿಮಿಷ. ಈ ವೇಳೆ ಕಡಿಮೆ ರಕ್ತದೊತ್ತಡದಿಂದ ಹೃದಯಾಘಾತವಾಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇಂದು ವೈದ್ಯರು ಪ್ರಾಥಮಿಕ ವರದಿ ನೀಡುವ ಸಾಧ್ಯತೆ ಇದೆ.

Continue Reading

ಮಳೆ

Monsoon 2024: ಮೇ 31 ರಿಂದ ಕರ್ನಾಟಕದಲ್ಲಿ ಶುರುವಾಗುತ್ತಾ ಮುಂಗಾರು ಮಳೆ ದರ್ಬಾರ್‌!

Monsoon 2024: ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆಯು ಅಬ್ಬರಿಸುತ್ತಿದ್ದು, ಮುಂಗಾರು ಮಳೆಯ ದರ್ಬಾರ್‌ಗೆ ದಿನಗಣನೆ‌ ಶುರುವಾಗಿದೆ. ಈ ಬಾರಿ ಮುಂಗಾರು ಮಳೆಯು ಉತ್ತಮವಾಗಿರಲಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ನಿಟ್ಟುಸಿರು ಬಿಡುವಂತಾಗಿದೆ. ಜನ-ಜಾನುವಾರುಗಳಿಗೆ ನೀರು ಸಿಗುವಂತಾಗಿದೆ.

VISTARANEWS.COM


on

By

Monsoon 2024
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮೇ 31ರಂದು ಪ್ರಸಕ್ತ ಸಾಲಿನ ಮುಂಗಾರು ಮಳೆಯು (Monsoon 2024) ಕೇರಳವನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದೇಶದ ಕೃಷಿ ಚಟುವಟಿಕೆಗಳನ್ನು ನಿರ್ಧರಿಸುವ ಮಳೆಯಾಗಿದ್ದರಿಂದ ರೈತರಲ್ಲಿ ಸಹಜವಾಗಿಯೇ ಸಮಾಧಾನ ತಂದಿದೆ. ಇನ್ನೂ ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಜೂನ್‌ ಮೊದಲ ವಾರ ನೈರುತ್ಯ ಮುಂಗಾರು ಮಳೆ ಕರ್ನಾಟಕವನ್ನು ಪ್ರವೇಶ (Karnataka Monsoon 2024) ಮಾಡಲಿದೆ. ಈ ಬಾರಿ ಮುಂಗಾರಿನಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯನ್ನು ಹವಾಮಾನ ಇಲಾಖೆ ಹೊಂದಿದೆ.

ಒಂದು ವೇಳೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಕಾಣಿಸಿಕೊಂಡರೆ ಮುಂಗಾರು ಆಗಮನವು ಮುಂದಕ್ಕೆ ಹೋಗಲಿದೆ. ನೈರುತ್ಯ ಮಾನ್ಸೂನ್ ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಿಸಿದೆ. ಮೇ 31ಕ್ಕೆ ನೈರುತ್ಯ ಮುಂಗಾರು ಕೇರಳ ಕರಾವಳಿಗೆ ಆಗಮಿಸುವ ನಿರೀಕ್ಷೆ ಇದೆ. ಅಲ್ಲಿಂದ ಕರ್ನಾಟಕ ಕರಾವಳಿಗೆ ಜೂನ್ 1 ಅಥವಾ 2ರಂದು ಪ್ರವೇಶಿಸಬಹುದು. ಕರಾವಳಿಯಿಂದ ಕ್ರಮೇಣ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಪ್ರದೇಶಗಳಿಗೆ ವ್ಯಾಪಿಸಲಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ.

ಕೊಡಗಿನಲ್ಲಿ ವಿಪತ್ತು ನಿರ್ವಹಣಾ ತಂಡ ವಾಸ್ತವ್ಯ

ಮುಂಗಾರು ಪ್ರವೇಶಕ್ಕೆ ದಿನಗಣನೆ ಆರಂಭವಾಗಿದೆ. ಜೂನ್ ಮೊದಲ ವಾರಕ್ಕೆ ಕೊಡಗು ಜಿಲ್ಲೆಗೆ ಮುಂಗಾರು ಎಂಟ್ರಿಯಾಗಲಿದೆ. ಕಳೆದ ಬಾರಿಗಿಂತ ಮೂರರಿಂದ ನಾಲ್ಕು ಪಟ್ಟು ಹೆಚ್ಚು ಮಳೆಯಾಗಲಿದೆ ಎಂದು ಎಂದು ಹವಾಮಾನ ಇಲಾಖೆಯು ಕೊಡಗು ಜಿಲ್ಲಾಡಳಿತಕ್ಕೆ‌ ಮಾಹಿತಿ ರವಾನಿಸಿದೆ. ಈ ಬಾರಿಯ ಮಳೆಗಾಲಕ್ಕೆ ಕೊಡಗು ಜಿಲ್ಲಾಡಳಿತ ಕೂಡ ತಯಾರಿ ನಡೆಸಿಕೊಳ್ಳುತ್ತಿದೆ. ಮೇ ತಿಂಗಳ ಅಂತ್ಯಕ್ಕೆ ಜಿಲ್ಲೆಗೆ ಎನ್.ಡಿ.ಆರ್ ಎಫ್ ತಂಡ ಆಗಮಿಸಲಿದೆ ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ತಿಳಿಸಿದ್ದಾರೆ. 26 ಮಂದಿಯನ್ನು ಒಳಗೊಂಡ ಎನ್.ಡಿ.ಆರ್ ಎಫ್ ಟೀಮ್ ಈ ಬಾರಿ ಆಗಮಿಸಲಿದೆ. ಕಳೆದ ಬಾರಿ ಜಿಲ್ಲೆಗೆ ಬಂದಿದ್ದ ಎನ್.ಡಿ.ಆರ್.ಎಫ್‌ಗೆ ಬೆಟಾಲಿಯನ್ ಕಳುಹಿಸುವಂತೆ ಜಿಲ್ಲಾಡಳಿತ ಮ‌ನವಿ‌ ಮಾಡಿದೆ. ಕಳೆದ ಬಾರಿ ಬಂದ ತಂಡವೆ ಈ ಸಲವು ಆಗಮಿಸಲಿದೆ. ಕೊಡಗಿನಲ್ಲಿ ಮಳೆಗಾಲ ಮುಗಿಯುವವರೆಗೂ ವಿಪತ್ತು ನಿರ್ವಹಣಾ ತಂಡ ಜಿಲ್ಲೆಯಲ್ಲೆ ವಾಸ್ತವ್ಯ ಹೂಡಲಿದೆ.

ಇದನ್ನೂ ಓದಿ: Monsoon 2024: ರೈತರಿಗೆ ಗುಡ್‌ ನ್ಯೂಸ್;‌ ಮುಂಗಾರು ಮಳೆ ಆಗಮನಕ್ಕೆ ಫಿಕ್ಸ್‌ ಆಯ್ತು ದಿನಾಂಕ!

ಭಾರಿ ಮಳೆ ಹಿನ್ನೆಲೆ ಯೆಲ್ಲೋ ಅಲರ್ಟ್‌ ಘೋಷಣೆ

ಮೇ 26ರಂದು ರಾಜ್ಯಾದ್ಯಂತ ಹಗುರವಾದ ಮಳೆಯಾಗುವ (Rain News) ಸಾಧ್ಯತೆ ಇದ್ದು, ವಿವಿಧೆಡೆ ಗುಡುಗು ಸಹಿತ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ದಕ್ಷಿಣ ಒಳನಾಡಿನ ಕೋಲಾರ, ರಾಮನಗರ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ಉತ್ತರ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿಗೆ ಯಾವುದೇ ಮಳೆ ಮುನ್ಸೂಚನೆ ಇಲ್ಲ ಬದಲಿಗೆ ಒಣ ಹವೆ ಇರುವ ಸಾಧ್ಯತೆ ಇದೆ. ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ದಕ್ಷಿಣ ಒಳನಾಡಲ್ಲಿ ಮಳೆ ಸೈಲೆಂಟ್‌; ಕರಾವಳಿ, ಉತ್ತರ ಒಳನಾಡಿನಲ್ಲಿ ಸಿಕ್ಕಾಪಟ್ಟೆ ವೈಲೆಂಟ್

Karnataka Weather Forecast : ದಕ್ಷಿಣ ಒಳನಾಡಿನ ಕೆಲವಡೆ ಮಳೆಯು ಹಿಂದೆ ಸರಿದಿದ್ದು, ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ವೈಲೆಂಟ್‌ ಆಗಿರಲಿದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಕೆಲವಡೆ ಗುಡುಗು ಸಹಿತ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಹಗುರವಾದ ಮಳೆಯಾಗುವ (Rain News) ಸಾಧ್ಯತೆ ಇದ್ದು, ವಿವಿಧೆಡೆ ಗುಡುಗು ಸಹಿತ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಕೋಲಾರ, ರಾಮನಗರ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ಉತ್ತರ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿಗೆ ಯಾವುದೇ ಮಳೆ ಮುನ್ಸೂಚನೆ ಇಲ್ಲ ಬದಲಿಗೆ ಒಣ ಹವೆ ಇರುವ ಸಾಧ್ಯತೆ ಇದೆ.

ಈ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ

ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Egg Benefits: ನೀವು ಮೊಟ್ಟೆ ಪ್ರಿಯರೆ? ಹಾಗಾದರೆ ಎಷ್ಟು ಮೊಟ್ಟೆ ತಿನ್ನಬಹುದು ಎಂಬುದೂ ಅರಿವಿರಲಿ!

ದಕ್ಷಿಣ ಭಾರತದ ಈ 6 ಸ್ಥಳಗಳಲ್ಲಿ ಮಳೆಗಾಲದಲ್ಲಿ ಚಾರಣ ಮಾಡಲೇಬೇಕು!

ಚಾರಣ ಪ್ರಿಯರಿಗೆ ಮಳೆಗಾಲ ಹತ್ತಿರ ಬರುತ್ತಿದ್ದಂತೆ ಸುಗ್ಗಿ. ಒಂದೆರಡು ಮಳೆ ಬರುತ್ತಿದ್ದಂತೆ ಚಿಗುರುವ ಬೆಟ್ಟಗಳು ಹಸಿರಾಗಿ ನಳನಳಿಸಲು ಆರಂಭಿಸುತ್ತವೆ. ಹಸಿರ ಸ್ವರ್ಗದಲ್ಲಿ ನಡೆಯುತ್ತಾ ನೆಲಕ್ಕೆ ಮುತ್ತಿಕ್ಕುವ ಮಂಜಿನ ಹನಿಗಳು, ಮೋಡಗಳ ಜೊತೆ ಹೆಜ್ಜೆ ಹಾಕುತ್ತಾ ಸಾಗುವುದು ಪ್ರಕೃತಿ ಪ್ರಿಯರಿಗೆ ದೈವಿಕ ಅನುಭೂತಿ ನೀಡುವ ಕ್ಷಣಗಳಲ್ಲಿ ಒಂದು. ಅದಕ್ಕಾಗಿಯೇ, ಮಳೆಗಾಲ ಹತ್ತಿರ ಬರುತ್ತಿದ್ದಂತೆ ಈ ಚಾರಣಿಗರೆಲ್ಲ ತಮ್ಮ ಅನುಕೂಲಕ್ಕೆ ತಕ್ಕಂತೆ ಯೋಜನೆ ರೂಪಿಸಿಕೊಂಡು ಒಂದಲ್ಲ ಒಂದು ಚಾರಣಕ್ಕೆ ತಯಾರಾಗುತ್ತಾರೆ. ಹಿಮಾಲಯದ ಚಾರಣ ಕನಸಾದರೂ, ಹತ್ತಿರದಲ್ಲೇ ಸಿಗುವ ಕಡಿಮೆ ಅವಧಿಯಲ್ಲಿ ಮಾಡಿ ಬರಬಹುದಾದ ಚಾರಣಗಳು ಇಂತಹ ಸಂದರ್ಭ ನೆಮ್ಮದಿಯ ಅನುಭವ ನೀಡುತ್ತವೆ. ಬನ್ನಿ, ದಕ್ಷಿಣ ಭಾರತದಲ್ಲಿ ಮಳೆಗಾಲ ಸಮೀಪಿಸುತ್ತಿದ್ದಂತೆ ಮಾಡಬಹುದಾದ ಚಾರಣಗಳು (South Indian monsoon destinations) ಇಲ್ಲಿವೆ.

Meesapulimala trek, Kerala

ಮೀಸಪುಲಿಮಲ ಚಾರಣ, ಕೇರಳ

ಕೇರಳದ ಇಡುಕ್ಕಿ ಜಿಲ್ಲೆಯಲ್ಲಿರುವ ಈ ಚಾರಣ ಅತ್ಯಂತ ಸುಂದರ ಚಾರಣಗಳಲ್ಲಿ ಒಂದು. ದಕ್ಷಿಣ ಭಾರತದಲ್ಲಿ ರೋಡೋಡೆಂಡ್ರಾನ್‌ ಅರಳಿರುವುದನ್ನು ನೋಡಬೇಕಾದರೆ ಈ ಚಾರಣ ಮಾಡಬೇಕು. ಅಣ್ಣಾಮಲೈ ಹಾಗೂ ಪಳನಿ ಪರ್ವತ ಪ್ರದೇಶಗಳ ನಡುವೆ ಇರುವ ಈ ಪ್ರದೇಶದಲ್ಲಿ ಮೋಡಗಳನ್ನು ನೀವು ಮುಟ್ಟಬಹುದು. ಅತ್ಯಂತ ಚಂದದ ಹುಲ್ಲುಗಾವಲ ಮಧ್ಯದಲ್ಲಿ ಮಾಡುವ ಈ ಚಾರಣ ಸುಮಾರು ೧೮ ಕಿಮೀಗಳ ಅತ್ಯಂತ ಸುಮಧುರ ಅನುಭವ ನೀಡಬಹುದಾದದ್ದೇ ಆಗಿದೆ.

kudremukh

ಕುದುರೆಮುಖ ಚಾರಣ

ಕುದುರೇಮುಖ ಬೆಟ್ಟಗಳ ಚಾರಣಕ್ಕೆ ಇಂಥದ್ದೇ ಎಂಬ ಸಮಯ ಇಲ್ಲದಿದ್ದರೂ ಮಳೆಗಾಲ ಅತ್ಯಂತ ಸೂಕ್ತ. ಮಳೆಗಾಲದಲ್ಲಿ ಈ ಬೆಟ್ಟದ ಸಾಲುಗಳು ಈಗಷ್ಟೇ ಮಿಂದೆದ್ದು ಹಸಿರು ಸೀರೆಯುಟ್ಟ ನವತರುಣಿಯಂತೆ ಶೋಭಿಸುತ್ತದೆ. ಸುಮಾರು ೨೦ ಕಿಮೀ ಅಂತರದ ಈ ಚಾರಣ ಶೋಲಾ ಕಾಡುಗಳ ಮದ್ಯದಿಂದ ಹಾದುಹೋಗಬೇಕಾಗುತ್ತದೆ. ಮಂಜು ಕವಿದ, ಮೋಡಗಳು ದಿನವಿಡೀ ಬೆಟ್ಟ ಚುಂಬಿಸುವ ಈ ಚಾರಣದ ಹಾದಿಯೇ ಒಂದು ಸುಮಧುರ ಅನುಭೂತಿ. ಚಾಋಣ ಪ್ರಿಯರಾರೂ ಈ ಚಾರಣವನ್ನು ಮಿಸ್‌ ಮಾಡಲು ಬಯಸುವುದಿಲ್ಲ.

Nagalapuram trek, Andhra Pradesh

ನಾಗಲಾಪುರಂ ಚಾರಣ, ಆಂಧ್ರಪ್ರದೇಶ

ಚಿತ್ತೂರು ಜಿಲ್ಲೆಯಲ್ಲಿರುವ ನಾಗಲಾಪುರಂ ಅತ್ಯಂತ ಸುಂದರ ತಾಣ. ಈ ಜಾಗ ಜಲಪಾತಗಳದದ್ದೇ ಕಾರುಬಾರು. ಚಾರಣದುದ್ದಕ್ಕೂ ಸಿಗುವ ಬಗೆಬಗೆಯ ಜಲಪಾತಗಳು ಚಾರಣಿಗರ ಮನೋಲ್ಲಾಸ ಹೆಚ್ಚಿಸುತ್ತದೆ. ದಣಿವು ಆರಿಸುತ್ತದೆ. 12 ಕಿಮೀ ದೂರದ ಈ ಚಾರಣ ಮಳೆಗಾಲದಲ್ಲಷ್ಟೇ ಅತ್ಯಂತ ಸೊಗಸಾದ ಅನುಭವ ನೀಡುತ್ತದೆ.

Kodachadri trek

ಕೊಡಚಾದ್ರಿ ಚಾರಣ

ಚಾರಣದ ಹುಚ್ಚು ಹತ್ತಿಸಿಕೊಂಡ ಮಂದಿ ಆರಂಭದ ದಿನಗಳಲ್ಲಿ ಮಾಡಬಹುದಾದ, ಮತ್ತಷ್ಟು ಚಾರಣದ ಹುಚ್ಚನ್ನು ಹತ್ತಿಸಿಕೊಳ್ಳಬಹುದಾದ ಎಲ್ಲ ಲಕ್ಷಣಗಳ್ನೂ ಹೊಂದಿದ ತಾಣ. ಮಳೆಗಾಲದಲ್ಲಿ ಈ ಜಾಗದ ಸೌಂದರ್ಯ ಸವಿಯಲು ಎರಡು ಕಣ್ಣು ಸಾಲದು. ಕೊಲ್ಲೂರಿನ ಮೂಕಾಂಬಿಕಾ ಸನ್ನಿಧಿಯಿಂದ ಮಾಡಬಹುದಾದ ಈ ಚಾರಣ ಮೂಕಾಂಬಿಕಾ ರಕ್ಷಿತಾರಣ್ಯದ ಒಳಗೆಯೇ ಇದೆ. ಆದಿ ಶಂಕರರು ಧ್ಯಾನ ಮಾಡಿದ ಸ್ಥಳದವರೆಗೆ ಚಾರಣ ಮಾಡಿ ಧ್ಯಾನವನ್ನೂ ಮಾಡಿ, ಮೋಡಗಳನ್ನು ಬೊಗಸೆ ತುಂಬಾ ಹಿಡಿದು ಮರಳಬಹುದು.

Chembara Peak Trek, Wayanad

ಚೆಂಬಾರ ಪೀಕ್‌ ಚಾರಣ, ವಯನಾಡು

ವಯನಾಡಿನ ಚೆಂಬಾರ ಪೀಕ್‌ ಚಾರಣ ಕೂಡಾ ಮಳೆಗಾಲದ ಅದ್ಭುತಗಳಲ್ಲಿ ಒಂದು. ದಟ್ಟಾರಣ್ಯದ ಮಧ್ಯದಲ್ಲಿರುವ ಈ ಚಾರಣಕ್ಕೆ ಅರಣ್ಯಾಧಿಕಾರಿಗಳ ಅನುಮತಿ ಬೇಕು. ಸರಳವಾದ, ಆದರೆ ಮನಮೋಹಕ ದೃಶ್ಯಗಳನ್ನು ಅನುಭವಗಳನ್ನು ಕಣ್ತುಂಬಿಕೊಳ್ಳಬಹುದಾದ ನಾಲ್ಕೈದು ಗಂಟೆಗಳಲ್ಲಿ ಮುಗಿಸಬಹುದಾದ ಚಾರಣವಿದು. ಆರಂಭಿಕ ಚಾರಣಿಗರಿಗೆ ಬೆಸ್ಟ್‌.

Ombattu gudda trek

ಒಂಭತ್ತು ಗುಡ್ಡ ಚಾರಣ

ಏಳೆಂಟು ಗಂಟೆಗಳ ಈ ಚಾರಣ ಸ್ವಲ್ಪ ಸವಾಲೇ ಆದರೂ, ಅತ್ಯಂತ ಸುಂದರ ಚಾರಣಗಳಲ್ಲಿ ಒಂದು. ಹಾಸನ ಹಾಗೂ ಚಿಕ್ಕಮಗಳೂರಿನ ಸರಹದ್ದಿನಲ್ಲಿ ಬರುವ ಈ ಸ್ಥಳದಲ್ಲಿ ಬಗೆಬಗೆಯ ಸಸ್ಯವೈವಿಧ್ಯವನ್ನೂ ಕಣ್ತುಂಬಿಕೊಳ್ಳಬಹುದು. ರೋಮಾಂಚಕ ಹಾಗೂ ನಿಗೂಢವಾದ ಅನುಭವಗಳನ್ನು ನೀಡಬಲ್ಲ ಈ ಚಾರಣದಲ್ಲಿ ಈ ಅನುಭವಗಳನ್ನು ಪಡೆಯಲು ಮಳೆಗಾಲದಲ್ಲೇ ಚಾರಣ ಮಾಡಬೇಕು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Road Accident
ಕರ್ನಾಟಕ5 mins ago

Road Accident: ಕೆಎಸ್ಆರ್‌ಟಿಸಿ ಬಸ್-ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು

Porsche Car Crash
ದೇಶ6 mins ago

Porsche Crash: ಇಬ್ಬರ ಸಾವಿಗೆ ಕಾರಣವಾದ 17 ವರ್ಷದ ಬಾಲಕನಿಗೆ ಪೋರ್ಶೆ ಕಾರು ಸಿಕ್ಕಿದ್ದು ʼಬರ್ತ್‌ಡೇ ಗಿಫ್ಟ್‌ʼ!

Electric Scooters
ಪ್ರಮುಖ ಸುದ್ದಿ6 mins ago

Electric Scooters : ದೊಡ್ಡ ಬೂಟ್​ ಸ್ಪೇಸ್ ಇರುವಂಥ 5 ಎಲೆಕ್ಟ್ರಿಕ್​ ಸ್ಕೂಟರ್​ಗಳು ಇವು

Shreyanka Patil
ಕ್ರೀಡೆ13 mins ago

Shreyanka Patil: ನಟ ಸಮರ್ಜಿತ್ ಲಂಕೇಶ್ ಜತೆ ಮಸ್ತ್​ ಸ್ಟೆಪ್ಸ್ ಹಾಕಿದ ಆರ್​ಸಿಬಿ ಆಟಗಾರ್ತಿ ಶ್ರೇಯಾಂಕಾ; ವಿಡಿಯೊ ವೈರಲ್​

Kendall Jenner American model flaunted
ಬಾಲಿವುಡ್36 mins ago

Kendall Jenner: ತಿಂಗಳಲ್ಲಿ ಎರಡು ಬಾರಿ ಟಾಪ್‌ಲೆಸ್‌ ಆದ ಹಾಲಿವುಡ್‌ ಬ್ಯೂಟಿ ಕೆಂಡಲ್‌ ಜೆನ್ನರ್‌!

How To Get Rid Of Cockroaches
ಲೈಫ್‌ಸ್ಟೈಲ್40 mins ago

How To Get Rid Of Cockroaches: ಜಿರಳೆಗಳು ಮನೆಯೊಳಗೆ ಬರದಂತೆ ಮಾಡುವ ಈ ಉಪಾಯಗಳು ನಿಮಗೆ ತಿಳಿದಿದೆಯೆ?

Lockup Death
ಕರ್ನಾಟಕ42 mins ago

Lockup Death: ಚನ್ನಗಿರಿ ಆದಿಲ್ ಸಾವು ಪ್ರಕರಣ ಸಿಐಡಿಗೆ ವರ್ಗಾವಣೆ

theft Case in Raichur
ರಾಯಚೂರು42 mins ago

Raichur News : ಸಾಲದ ಸುಳಿಗೆ ಸಿಲುಕಿದ ಸ್ನೇಹಿತೆಗೆ ಕೊಟ್ಟಳು 10 ತೊಲೆ ಬಂಗಾರ! ‘ಕಳ್ಳತನ’ ನಾಟಕವಾಡಿದ ಗೆಳತಿಯರು ಲಾಕ್‌

Swati Maliwal
ದೇಶ49 mins ago

Swati Maliwal case: “ರೇಪ್‌, ಕೊಲೆ ಮಾಡೋದಾಗಿ ಬೆದರಿಕೆ ಬರ್ತಿದೆ”- ಸ್ವಾತಿ ಮಲಿವಾಲ್‌ ಮತ್ತೊಂದು ಆರೋಪ

India Head Coach
ಕ್ರಿಕೆಟ್59 mins ago

India Head Coach: ಕೋಚ್​ ಹುದ್ದೆಗೆ ನಾನು ರೆಡಿ; ಆದರೆ ಒಂದು ಷರತ್ತು ಎಂದ ಗಂಭೀರ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 week ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 week ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌