ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ಉಕ್ಕಡಗಾತ್ರಿ ದೇವಸ್ಥಾನ ಬಳಿಯ ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡುವಾಗ ಇಬ್ಬರು ಸಹೋದರಿಯರು ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ.
ಚೈತ್ರ(19) ಮತ್ತು ಪುಷ್ಪ (17) ನದಿಯಲ್ಲಿ ಕೊಚ್ಚಿಹೋದ ಸಹೋದರಿಯರು. ಉಕ್ಕಡಗಾತ್ರಿ ದೇವಸ್ಥಾನಕ್ಕೆ ಭಾನುವಾರ ಬಂದಾಗ ಇವರು ಸ್ನಾನಕ್ಕಾಗಿ ನದಿಗೆ ಇಳಿದಿದ್ದರು. ಈ ವೇಳೆ ಕಾಲು ಜಾರಿ ನದಿಯಲ್ಲಿ ಬಿದ್ದು ಇಬ್ಬರೂ ಕೊಚ್ಚಿಹೋಗಿದ್ದಾರೆ. ಯುವತಿಯರಿಗಾಗಿ ಮುಳುಗು ತಜ್ಞರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸ್ಥಳಕ್ಕೆ ಮಲೆಬೆನ್ನೂರು ಠಾಣೆ ಪೊಲೀಸರು ಹಾಗೂ ತಹಸೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Dowry case | ಹೆಂಡ್ತಿ ಬೇಕು ಎಂದು ಕೋರ್ಟ್ ಮೊರೆ ಹೋದವನು ಆಗಿದ್ದು ಎರಡನೇ ಮದುವೆ!