Site icon Vistara News

DB Chandregowda: ಹಿರಿಯ ರಾಜಕಾರಣಿ, ಮಾಜಿ ಸಚಿವ ಡಿ.ಬಿ ಚಂದ್ರೇಗೌಡ ಇನ್ನಿಲ್ಲ

DB Chandregowda

ಚಿಕ್ಕಮಗಳೂರು: ಮಾಜಿ ಸಚಿವ, ಬಿಜೆಪಿ ನಾಯಕ, ಹಿರಿಯ ರಾಜಕೀಯ ಮುತ್ಸದ್ಧಿ ಡಿ.ಬಿ.ಚಂದ್ರೇಗೌಡ (DB Chandregowda) ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಡಿ.ಬಿ.ಚಂದ್ರೇಗೌಡ (87) ಇಂದು ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಅಂತಿಮ ಇಂದು ಮಧ್ಯಾಹ್ನ 2ರಿಂದ ಸಂಜೆ 6ರವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ (ನ.8) ಮಧ್ಯಾಹ್ನ ದಾರದಹಳ್ಳ ಪೂರ್ಣಚಂದ್ರ ಎಸ್ಟೇಟ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಮೂರು ಬಾರಿ ಶಾಸಕರಾಗಿ, 3 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಚಂದ್ರೇಗೌಡ, ರಾಜ್ಯಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೇ ಕಾನೂನು ಸಚಿವರಾಗಿದ್ದರು. ಕಾಂಗ್ರೆಸ್ ಕಟ್ಟಾಳಾಗಿದ್ದ ಚಂದ್ರೇಗೌಡ, ಬದಲಾದ ಸನ್ನಿವೇಶದಲ್ಲಿ ಬಿಜೆಪಿ ಸೇರಿದ್ದರು.

Exit mobile version