ಮಂಗಳೂರು: ಸರಣಿ ಹತ್ಯೆಗಳು ನಡೆದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು 29ರಿಂದ ಆ.1ವರೆಗೆ ಸಂಜೆ 6ರಿಂದ ಬೆಳಗ್ಗೆ 6ಗಂಟೆವರೆಗೆ ನೈಟ್ ಕರ್ಫ್ಯೂ (Night Curfew) ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.
ಸಂಜೆ 6 ಗಂಟೆಗೆ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಬೇಕು. ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಮೆಡಿಕಲ್, ಆಸ್ಪತ್ರೆ ಹಾಗೂ ತುರ್ತು ಸೇವೆಗಳಿಗೆ ಹೊರತುಪಡಿಸಿ ಎಲ್ಲ ರೀತಿಯ ವಾಹನ ಸಂಚಾರಕ್ಕೆ ನಿಷೇಧ ವಿಧಿಸಲಾಗಿದೆ. ಸಭೆ ಸಮಾರಂಭ, ಸಿನಿಮಾ ಪ್ರದರ್ಶನಗಳಿಗೂ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.
ಹಾಗೆಯೇ ಆಗಸ್ಟ್ 6ವರೆಗೆ ಬಂಡ್ವಾಳ, ಪುತ್ತೂರು, ಕಡಬ ಹಾಗೂ ಸುಳ್ಯ ತಾಲೂಕುಗಳಲ್ಲಿ ಈ ಹಿಂದೆ ವಿಧಿಸಿದ್ದ ನಿಷೇಧಾಜ್ಞೆ(144 ಸೆಕ್ಷನ್) ಮುಂದುವರಿಯಲಿದೆ. ಜನತೆ ಗುಂಪು ಗುಂಪಾಗಿ ಓಡಾಡುವುದು, ವಿನಾಕಾರಣ ತಿರುಗಾಡಲು ಅವಕಾಶವಿಲ್ಲ. ಸಾರ್ವಜನಿಕರ ಸಭೆ ಸಮಾರಂಭಗಳಿಗೆ ನಿಷೇಧ ವಿಧಿಸಲಾಗಿದೆ.
ಇನ್ನು ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್, ಮೂಲ್ಕಿ, ಪಣಂಬೂರು ಮತ್ತು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿಯಲ್ಲಿದೆ.
ಇದನ್ನೂ ಓದಿ | Praveen Nettaru | ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಬಾಳೆಹೊನ್ನೂರು ಸಂಪೂರ್ಣ ಬಂದ್