Site icon Vistara News

Yadgiri News: ಪ್ರಕೃತಿ ವಿಕೋಪ ಎದುರಿಸಲು ಅಧಿಕಾರಿಗಳಿಗೆ ಡಿ ಸಿ ಡಾ. ಸುಶೀಲಾ ಸೂಚನೆ

DC inaugurates District Disaster Management Plan Revision Workshop at Yadgiri

ಯಾದಗಿರಿ: ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು (Officers) ತಂಡವಾಗಿ ಕಾರ್ಯತಂತ್ರ ರೂಪಿಸಿ, ಸಮರ್ಪಕವಾಗಿ ಅನುಷ್ಠಾನಗೊಳಿಸಿದರೆ ಯಾವುದೇ ರೀತಿಯ ವಿಕೋಪಗಳು (Disaster) ಎದುರಾದರೂ ಯಶಸ್ವಿಯಾಗಿ ನಿಭಾಯಿಸಬಹುದು ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಬಿ ತಿಳಿಸಿದರು.

ಜಿಲ್ಲಾಡಳಿತ, ಮೈಸೂರು ವಿಕೋಪ ನಿರ್ವಹಣಾ ಮತ್ತು ಆಡಳಿತ ತರಬೇತಿ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿನ ಜಿಲ್ಲಾ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ಗುರುವಾರ ಅಧಿಕಾರಿಗಳಿಗಾಗಿ ಹಮ್ಮಿಕೊಂಡಿದ್ದ ಜಿಲ್ಲಾ ವಿಪತ್ತು ನಿರ್ವಹಣೆ ಯೋಜನೆ ಪರಿಷ್ಕರಣೆ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನೂ ಓದಿ: Banking Jobs: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸ್ಪೆಷಲ್‌ ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ; ಇಲ್ಲಿದೆ ಪೂರ್ಣ ವಿವರ

ಯಾವುದೇ ವಿಕೋಪಗಳನ್ನು ಏಕಾಂಗಿಯಾಗಿ ಎದುರಿಸಲು ಸಾಧ್ಯವಿಲ್ಲ, ವಿಕೋಪಗಳ ಸಂದರ್ಭದಲ್ಲಿ ಅಗತ್ಯ ಇಲಾಖೆಗಳು ತಂಡದಂತೆ ಯೋಜನೆ ರೂಪಿಸಿದರೆ ಅದರಂತೆ ಕಾರ್ಯಪ್ರವೃತ್ತರಾದಾಗ ಮಾತ್ರ ಯಶಸ್ವಿಯಾಗಿ ಎದುರಿಸಲು ಸಾಧ್ಯ ಎಂದರು.

ಕಾರ್ಯಾಗಾರಕ್ಕೆ ನಿಜವಾದ ಅರ್ಥ ಬರಬೇಕೆಂದರೆ ಅಧಿಕಾರಿಗಳು ಕ್ರಿಯಾಶೀಲರಾಗಿ ಪಾಲ್ಗೊಳ್ಳಬೇಕು. ತಮ್ಮಲ್ಲಿನ ಉಪಯುಕ್ತ ವಿಚಾರ, ಮಾರ್ಗಸೂಚಿ ಹಾಗೂ ಯೋಜನೆಗಳನ್ನು ಇತರರೊಂದಿಗೆ ಹಂಚಿಕೊಂಡು, ಇತರರ ಹೊಸ ವಿಚಾರಗಳನ್ನು ಕಲಿತುಕೊಳ್ಳಬೇಕು. ಆ ಮೂಲಕ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಒಗ್ಗಟ್ಟಿನ ಪ್ರದರ್ಶನ ನೀಡಬೇಕು ಎಂದರು.

ಇದನ್ನೂ ಓದಿ: Asia Cup: ಏಷ್ಯಾಕಪ್‌ಗೆ ತಂಡದ ಪಟ್ಟಿ ಫೈನಲ್‌; ಸಂಜು ಸ್ಯಾಮ್ಸನ್‌ ಔಟ್‌

ಈ ಸಂದರ್ಭದಲ್ಲಿ ಮೈಸೂರು ವಿಕೋಪ ನಿರ್ವಹಣಾ ಕೇಂದ್ರದ ತರಬೇತಿ ನಿರ್ದೇಶಕ ಡಾ. ಪರಮೇಶ ಜಿ ಆರ್, ಯಾದಗಿರಿ ತಹಸೀಲ್ದಾರ್‌ ಸುರೇಶ ಅಂಕಲಗಿ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Exit mobile version