ಮಡಿಕೇರಿ: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಪ್ರಕರಣದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪ್ರತಿಭಟನೆ ನಡೆಸಲುದ್ದೇಶಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಆಗಸ್ಟ್ 24ರ ಬೆಳಗ್ಗೆ 6 ಗಂಟೆಯಿಂದ ಆಗಸ್ಟ್ 27ರ ಬೆಳಗ್ಗೆ 6 ಗಂಟೆವರೆಗೆ ಜಿಲ್ಲೆಯಾಧ್ಯಂತ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಸತೀಶ್ ಆದೇಶ ಹೊರಡಿಸಿದ್ದಾರೆ.
ಮೊಟ್ಟೆ ಎಸೆತ ವಿರೋಧಿಸಿ ಕಾಂಗ್ರೆಸ್ ಪಕ್ಷವು ಆಗಸ್ಟ್ 26ರಂದು ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಗೂ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಅದೇ ದಿನ ಬಿಜೆಪಿಯು ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿಯಾಗಿ ಜನ ಜಾಗೃತಿ ಸಮಾವೇಶ ನಡೆಸುವುದಾಗಿ ಪ್ರಕಟಿಸಿತ್ತು.
ಹೀಗಾಗಿ ಯಾವುದೇ ಅಹಿತಕರ ಚುಟುವಟಿಕೆ ನಡೆಯದಂತೆ ತಡೆಯಲು ನಿಷೇದಾಜ್ಞೆ ವಿಧಿಸಿದ್ದು, ಈ ಅವಧಿಯಲ್ಲಿ ಮದ್ಯ ಮಾರಾಟವನ್ನೂ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ | ʼಸಂತೋಷ್ ಹಠಾವೋ ಅರಸೀಕೆರೆ ಬಚಾವೋʼ ಪ್ರತಿಭಟನಾ ಸಭೆ; ಶಾಸಕ ಶಿವಲಿಂಗೇಗೌಡ ಶಕ್ತಿ ಪ್ರದರ್ಶನ