Site icon Vistara News

DK Shivakumar: ಪೊಲೀಸ್‌ ಠಾಣೆ ಮೇಲೆ ದಾಳಿ ಮಾಡಿದವರ ಮೇಲೆ ಕಠಿಣ ಕ್ರಮ; ಡಿ.ಕೆ.ಶಿವಕುಮಾರ್

DCM D K Shivakumar statement about new advertising policy

ಬೆಂಗಳೂರು: ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆ ಮೇಲಿನ ದಾಳಿ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು.

ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಬಳಿ ಸೋಮವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಪಕ್ಷ ಸಂವಿಧಾನದ ಆಶಯದಂತೆ ಎಲ್ಲ ಸಮುದಾಯಗಳನ್ನು ಸಮಾನವಾಗಿ ಕಾಣುತ್ತದೆ. ಚನ್ನಗಿರಿ ಪ್ರಕರಣದ ಬಗ್ಗೆ ಮುಖ್ಯಮಂತ್ರಿಗಳು ಪ್ರತ್ಯೇಕ ತನಿಖೆಗೆ ಆದೇಶ ನೀಡಿದ್ದಾರೆ. ತನಿಖೆ ನಡೆಯುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ. ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳುವಂತಿಲ್ಲ. ಈ ವಿಚಾರದಲ್ಲಿ ಸರ್ಕಾರ ನಿಲುವು ಅಚಲವಾಗಿದೆ. ಗೃಹಸಚಿವರು ಈಗಾಗಲೇ ನಿರ್ದೇಶನ ನೀಡಿದ್ದಾರೆ ಎಂದರು.

ಇದನ್ನೂ ಓದಿ: Kiccha Sudeep: ಚಾಮುಂಡಿ ಬೆಟ್ಟಕ್ಕೆ ಕಿಚ್ಚ ಸುದೀಪ್ ಭೇಟಿ; ಇವರನ್ನು ನೋಡಲು ಜನವೋ ಜನ!

ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಒಂದು ತಿಂಗಳು ಪೂರೈಸಿದ್ದು, ಎಸ್ಐಟಿ ತನಿಖೆ ಎಲ್ಲಿಯವರೆಗೆ ಬಂದಿದೆ ಎಂಬ ವಿಚಾರವಾಗಿ ಕೇಳಿದಾಗ, “ತನಿಖೆ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ದೇಶದ ಒಳಗಾಗದರೆ ರಾಜ್ಯ ಸರ್ಕಾರ ಏನು ಬೇಕಾದರೂ ಕ್ರಮಕೈಗೊಳ್ಳಬಹುದು. ವಿದೇಶದ ವಿಚಾರಕ್ಕೆ ಬಂದಾಗ ಕೇಂದ್ರ ಸರ್ಕಾರ ಹೆಚ್ಚು ಕಾರ್ಯಪ್ರವೃತ್ತವಾಗಬೇಕು. ನಮ್ಮ ಗೃಹಸಚಿವರು ಈ ಪ್ರಕರಣ ತನಿಖೆಯನ್ನು ನಿಭಾಯಿಸುತ್ತಿದ್ದಾರೆ”ಎಂದು ಹೇಳಿದರು.

ಪರಿಷತ್ ಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ದೆಹಲಿಗೆ ತೆರಳುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್, ಪಕ್ಷದ ಅಧ್ಯಕ್ಷನಾಗಿ ಹೋಗುವುದು ನನ್ನ ಕರ್ತವ್ಯ. ಹೀಗಾಗಿ ಹೋಗುತ್ತೇನೆ ಎಂದರು.

ಇದನ್ನೂ ಓದಿ: Virat Kohli: ಐಪಿಎಲ್​ 2024ರ ಸಾಧನೆ ಕುರಿತು ಹೇಳಿಕೆ ನೀಡಿದ ವಿರಾಟ್ ಕೊಹ್ಲಿ

ಇನ್ನು ಪ್ರಧಾನಮಂತ್ರಿಗಳು ವಾಸ್ತವ್ಯ ಹೂಡಿದ್ದ ಮೈಸೂರಿನ ಹೊಟೇಲ್ ಬಿಲ್ 85 ಲಕ್ಷ ಮೊತ್ತದ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಯಾಗಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, “ಈ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಮಾಹಿತಿ ಪಡೆದ ನಂತರ ಪ್ರತಿಕ್ರಿಯೆ ನೀಡುತ್ತೇನೆ” ಎಂದು ತಿಳಿಸಿದರು.

Exit mobile version