Site icon Vistara News

Dearness Allowance: KSRTC ಸಿಬ್ಬಂದಿಗೆ ಗುಡ್‌ ನ್ಯೂಸ್;‌ ತುಟ್ಟಿಭತ್ಯೆ ಶೇ.35ರಿಂದ 38.75ಕ್ಕೆ ಹೆಚ್ಚಳ

Dearness Allowance

ಬೆಂಗಳೂರು: ಕೆಎಸ್‌ಆರ್‌ಟಿಸಿ (KSRTC) ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಸಿಬ್ಬಂದಿಯ ತುಟ್ಟಿಭತ್ಯೆಯನ್ನು (Dearness Allowance) ಶೇ.35ರಿಂದ 38.75ಕ್ಕೆ ಹೆಚ್ಚಿಸಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಿಬ್ಬಂದಿಯ ತುಟ್ಟಿಭತ್ಯೆ (Dearness Allowance) ಹೆಚ್ಚಳ ಮಾಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಆದೇಶ ಹೊರಡಿಸಿದೆ. ಕರ್ನಾಟಕ ಸರ್ಕಾರದ ಆದೇಶ ಸಂಖ್ಯೆ ಆಇ 19 ಎಸ್ಆರ್‌ಪಿ 2023 ಪ್ರಕಾರ ಸರ್ಕಾರಿ ನೌಕರರಿಗೆ ದಿನಾಂಕ 01.07.2023ರಿಂದ ಅನ್ವಯವಾಗುವಂತೆ ತುಟ್ಟಿಭತ್ಯೆ ದರವನ್ನು ಶೇ.35 ರಿಂದ ಶೇ.38.75ಕ್ಕೆ ಹೆಚ್ಚಿಸಿ ಆದೇಶ ನೀಡಲಾಗಿದೆ.

ಆದೇಶ ಹೀಗಿದೆ: ಮಾನ್ಯ ವ್ಯವಸ್ಥಾಪಕ ನಿರ್ದೇಶಕರು, ಕರಾರಸಾ ನಿಗಮರವರು ರಾಜ್ಯ ಸಾರಿಗೆ ನಿಗಮಗಳಲ್ಲಿ ಪರಿಷ್ಕೃತ ತುಟ್ಟಿಭತ್ಯೆ ದರವನ್ನು ಅನುಷ್ಠಾನಗೊಳಿಸಿ ಪಾವತಿಸಲು ಆದೇಶಿಸಿರುವ ಪ್ರಯುಕ್ತ ಕೆಳಕಂಡಂತೆ ಕ್ರಮ
ಜರುಗಿಸುವುದು. ನಾಲ್ಕೂ ಸಾರಿಗೆ ನಿಗಮಗಳಲ್ಲಿ ನವಂಬರ್-2023ರ ಮಾಹೆಯ ವೇತನದಲ್ಲಿ ಮತ್ತು ಮುಂದಕ್ಕೆ ತುಟ್ಟಿಭತ್ಯೆ ದರವನ್ನು ಅನುಷ್ಠಾನಗೊಳಿಸುವುದು. ಶೇ.35ರಿಂದ ಶೇ.38.75ಕ್ಕೆ ಹೆಚ್ಚಿಸಿ ಕರಾರಸಾ ನಿಗಮದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಜುಲೈ-2023ರಿಂದ ಅಕ್ಟೋಬರ್-2023 ರವರೆಗಿನ ತುಟ್ಟಿಭತ್ಯೆ ಹಿಂಬಾಕಿ ಪಾವತಿಯ ಕುರಿತು ಪ್ರತ್ಯೇಕವಾಗಿ ಆದೇಶಿಸಲಾಗುವುದು. ಸಹೋದರ ಸಂಸ್ಥೆಗಳಾದ ಬೆಂಮನಸಾ/ವಾಕರಸಾ/ಕಕರಸಾ ಸಂಸ್ಥೆಗಳು ಹಿಂಬಾಕಿ ಪಾವತಿಯ ಕುರಿತು ಆಯಾ ಸಂಸ್ಥೆಗಳ ಆರ್ಥಿಕ ಪರಿಸ್ಥಿತಿಗನುಗುಣವಾಗಿ ನಿರ್ಧರಿಸುವುದು.

ಅಕ್ಟೋಬರ್‌ನಲ್ಲಿ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಿಸಲಾಗಿತ್ತು. ಶೇ.3.75 ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದರಿಂದ ತುಟ್ಟಿಭತ್ಯೆಯ ದರಗಳನ್ನು ಮೂಲ ವೇತನದ ಶೇ. 35ರಿಂದ ಶೇ. 38.75ಕ್ಕೆ ಪರಿಷ್ಕರಿಸಲಾಗಿತ್ತು.

ಇದನ್ನೂ ಓದಿ: Dearness Allowance: ಕೇಂದ್ರ ಸರ್ಕಾರಿ ನೌಕರರಿಗೆ ಮತ್ತು ಪಿಂಚಣಿದಾರರಿಗೆ ಶೇ.4 ತುಟ್ಟಿಭತ್ಯೆ ಹೆಚ್ಚಳ

Exit mobile version