Site icon Vistara News

Death News | ನಿರ್ದೇಶಕ ಕೆ.ಆರ್. ಮುರಳಿ ಕೃಷ್ಣ‌ ಇನ್ನಿಲ್ಲ

muralikrishna

ಬೆಂಗಳೂರು: ಸ್ಯಾಂಡಲ್‌ವುಡ್‌ ನಿರ್ಮಾಪಕ, ನಿರ್ದೇಶಕ ಕೆ.ಆರ್.‌ ಮುರಳಿ ಕೃಷ್ಣ (63) ಅವರು ಹೃದಯಾಘಾತದಿಂದ (Death News) ಮೃತಪಟ್ಟಿದ್ದಾರೆ.

ಬ್ರೈನ್‌ ಟ್ಯೂಮರ್‌ನಿಂದ ಬಳಲುತ್ತಿದ್ದ ಅವರು ಲಾಲ್‌ಬಾಗ್ ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದರೂ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಬಾಳನೌಕೆ, ಕರ್ಣನ ಸಂಪತ್ತು, ಹೃದಯ ಸಾಮ್ರಾಜ್ಯ, ಮರಳಿ ಗೂಡಿಗೆ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಕನ್ನಡ ಚಿತ್ರರಂಗದಲ್ಲಿ ತಮ್ಮನ್ನು ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು. ಅಲ್ಲದೆ, ಸಣ್ಣ ಸತ್ಯ, ಗರ ಚಿತ್ರಗಳನ್ನು ಇವರು ನಿರ್ದೇಶನ ಮಾಡಿದ್ದಾರೆ. ಗರ ಸಿನಿಮಾಗಾಗಿ ಬಾಲಿವುಡ್‌ನ ಖ್ಯಾತ ಹಾಸ್ಯ ನಟ ಜಾನಿ ಲಿವರ್‌ ಅವರನ್ನು ಕನ್ನಡಕ್ಕೆ ಕರೆತಂದಿದ್ದ ನಿರ್ದೇಶಕ ಎಂಬ ಖ್ಯಾತಿಯನ್ನು ಹೊಂದಿದ್ದರು.

ಬ್ರೈನ್‌ ಟ್ಯೂಮರ್‌ಗೆ ತುತ್ತಾಗಿದ್ದ ಮುರಳಿ ಕೃಷ್ಣ
ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಮುರುಳಿ ಕೃಷ್ಣ ಅವರಿಗೆ ಕಾಯಿಲೆ ಬಗ್ಗೆ ತಡವಾಗಿ ಗೊತ್ತಾಗಿದೆ ಎನ್ನಲಾಗಿದೆ. ಸಿಟಿ ಸ್ಕ್ಯಾನ್‌ಗೆ ಒಳಪಟ್ಟಾಗ ಟ್ಯೂಮರ್‌ ಇರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಲಾಲ್ ಬಾಗ್ ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆ ಯಶಸ್ವಿಯಾದರೂ ಸೋಮವಾರ ರಾತ್ರಿ ಮುರಳಿ ಕೃಷ್ಣ ಅವರಿಗೆ ಹೃದಯಾಘಾತವಾಗಿ ನಿಧನರಾಗಿದ್ದಾರೆ.

ಅವರಿಗೆ ಇಬ್ಬರು ಹೆಣ್ಣು ಮಕ್ಕಳು, ಪತ್ನಿ ಇದ್ದಾರೆ. ಇವರು ವೃತ್ತಿಯಲ್ಲಿ ವಕೀಲರಾಗಿದ್ದರೂ ಸಿನಿಮಾವನ್ನು ಪ್ರವೃತ್ತಿಯನ್ನಾಗಿಸಿಕೊಂಡಿದ್ದರು. ಸಹಕಾರ ನಗರದ ಅವರ ನಿವಾಸದಲ್ಲಿ ಮಂಗಳವಾರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಮಧ್ಯಾಹ್ನ ಹೆಬ್ಬಾಳ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಇದನ್ನೂ ಓದಿ | Kantara Movie | ಕಾಂತಾರ ನೋಡುವಾಗಲೇ ಮಹಿಳೆ ಮೈ ಮೇಲೆ ಬಂದ ದೇವರು; ಕುಣಿಯುತ್ತಿರುವ ದೃಶ್ಯ ವೈರಲ್

Exit mobile version