ಕಾರವಾರ: ಶಿಕ್ಷಕರ ದಿನದಂದೇ ನಿವೃತ್ತ ಶಿಕ್ಷಕ, ಮಾಜಿ ಸಚಿವ ಪ್ರಭಾಕರ ರಾಣೆ (81) ವಯೋಸಹಜ ಕಾಯಿಲೆಯಿಂದ (Death News) ನಿಧನರಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಸಿದ್ಧರ ಗ್ರಾಮದ ನಿವಾಸಿಯಾಗಿದ್ದ ಇವರು ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ್ದಾರೆ. ತಿಂಗಳ ಹಿಂದೆ ತೀವ್ರ ಜ್ವರದಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಸೋಮವಾರ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಾರವಾರ, ಜೋಯಿಡಾ ಭಾಗದಲ್ಲಿ ೨೩ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದ ಇವರು, ಸಾಕಷ್ಟು ಮಂದಿಗೆ ವಿದ್ಯಾದಾನ ಮಾಡಿದ್ದಾರೆ. ಕಾರವಾರ-ಜೋಯಿಡಾ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಬಾರಿ ಆಯ್ಕೆಯಾಗಿದ್ದ ಇವರು ವೀರಪ್ಪ ಮೊಯ್ಲಿ ಸರ್ಕಾರದಲ್ಲಿ ಗ್ರಂಥಾಲಯ ಮತ್ತು ವಯಸ್ಕರ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಸಿದ್ದರ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇರಿದ್ದ ಅವರು, ಅದೇ ಶಿಕ್ಷಣ ಸಂಸ್ಥೆಗೆ ಅಧ್ಯಕ್ಷರಾದರು. ಬಳಿಕ ಅನೇಕ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿದ್ದಲ್ಲದೆ, ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟು ಛಾಪು ಮೂಡಿಸಿದರು.
ಇದನ್ನೂ ಓದಿ | ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ಸಾಹಿತಿ ಕಾಹು ಬಿಜಾಪುರ ನಿಧನ