ಉಡುಪಿ: ಇಲ್ಲಿನ ಮಣಿಪಾಲದ ಮಣ್ಣಪ್ಪಳ್ಳ ಕೆರೆಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ನೀರು ಪಾಲಾಗಿರುವ ಘಟನೆ (Death News) ನಡೆದಿದೆ. ಕುಂದಾಪುರದ ಪ್ರಕಾಶ್ (35) ಮೃತ ದುರ್ದೈವಿ.
ಮಣ್ಣಪಳ್ಳ ಕೆರೆಯಲ್ಲಿ ಗಾಳ ಹಾಕಿ ಮೀನು ಹಿಡಿಯುತ್ತಿದ್ದ ಪ್ರಕಾಶ್ ಆಯತಪ್ಪಿ ನೀರಿಗೆ ಬಿದ್ದಿದ್ದಾರೆ. ನೀರಿನಿಂದ ಹೊರ ಬರಲು ಆಗದೇ ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮಣಿಪಾಲ ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮಣಿಪಾಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಘಾತದಲ್ಲಿ ತಂದೆ-ಮಗ ಸಾವು
ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಬಳಿ ಬುಧವಾರ ಸಂಭವಿಸಿದ್ದ ಅಪಘಾತದಿಂದ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಸಮರ್ಥ್ (೧೪) ಗುರುವಾರ ಮೃತಪಟ್ಟಿದ್ದಾನೆ. ಬೆಳಗಾವಿ ಮೂಲದ ಪ್ರಭಾಕರ್ ಕೋತ ತಮ್ಮ ಮಗ ಸಮರ್ಥ್ ಜತೆ ರಸ್ತೆ ಬದಿಯಲ್ಲಿ ನಿಂತಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿತ್ತು. ಈ ಸಂದರ್ಭದಲ್ಲಿ ಪ್ರಭಾಕರ್ ಸ್ಥಳದಲ್ಲೇ ಪ್ರಾಣ ಕಳೆದುಕೊಂಡರೆ, ತೀವ್ರವಾಗಿ ಗಾಯಗೊಂಡಿದ್ದ ಮಗ ಸಮರ್ಥ್‌ನನ್ನು ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಮರ್ಥ್ ಗುರುವಾರ ಮೃತಪಟ್ಟಿದ್ದಾನೆ.
ಪ್ರಭಾಕರ್ ತಮ್ಮ ಮಗನನ್ನು ಕುತ್ಯಾರಿನ ಆನೆಗುಂದಿ ಸಂಸ್ಥಾನದ ವಿದ್ಯಾ ಸಂಸ್ಥೆಯಲ್ಲಿ ದಾಖಲಿಸುವ ಸಲುವಾಗಿ ಬೆಳಗಾವಿಯಿಂದ ಬಂದಿದ್ದರು. ಉಚ್ಚಿಲದಲ್ಲಿ ಬಸ್ಸಿನಿಂದ ಇಳಿದು ರಸ್ತೆ ಪಕ್ಕದಲ್ಲಿ ನಿಂತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿತ್ತು. ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Bike Accident | ಪ್ರತ್ಯೇಕ ಕಡೆಗಳಲ್ಲಿ ಬೈಕ್ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು