Site icon Vistara News

Contaminated water | ಕಲುಷಿತ ನೀರು ಸೇವಿಸಿ ಶಹಾಪುರದಲ್ಲಿ ಮತ್ತೊಬ್ಬರ ಸಾವು: ಮೃತರ ಸಂಖ್ಯೆ 3ಕ್ಕೆ ಏರಿಕೆ

yadgiri water 4

ಯಾದಗಿರಿ: ಶಹಾಪುರ ತಾಲೂಕಿನ ಹೋತಪೇಟ ಗ್ರಾಮದಲ್ಲಿ ಕಲುಷಿತ ನೀರು (Contaminated water) ಸೇವಿಸಿ ಇಬ್ಬರು ಮೃತಪಟ್ಟಿರುವ ಬೆನ್ನಲ್ಲೇ ಈಗ ಮತ್ತೊಬ್ಬರು ಅಸುನೀಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ೩ಕ್ಕೇರಿದಂತಾಗಿದೆ.

ಹೋತಪೇಟ ಗ್ರಾಮದಲ್ಲಿ ವಾಂತಿ-ಭೇದಿ ಪ್ರಕರಣವು ಉಲ್ಬಣಗೊಂಡಿದ್ದು, ಹಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕಾರಣದಿಂದ ಆಸ್ಪತ್ರೆ ಸೇರಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದಮ್ಮ ಹಿರೇಮಠ (62 ) ಎಂಬುವರು ಮೃತಪಟ್ಟಿದ್ದಾರೆ. ಇವರು ಮನೆಯಲ್ಲಿ ಖಾಸಗಿ ವೈದ್ಯರಿಂದ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ಬಗ್ಗೆ ಸಿದ್ದಮ್ಮ ಅವರ ಪುತ್ರ ಶಾಂತಕುಮಾರ ಹೇಳಿಕೆ ನೀಡಿದ್ದು, ತಾಯಿಗೆ ವಾಂತಿ-ಭೇದಿ ತೀವ್ರವಾಗಿ ಬಾಧಿಸಿದ್ದರಿಂದ ಮೃತಪಟ್ಟಿದ್ದಾರೆ. ಮನೆಯಲ್ಲಿ ಚಿಕಿತ್ಸೆ ಕೊಡಿಸಿದರೂ ಫಲ ನೀಡಲಿಲ್ಲ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಸಾವಿನ ನಿಖರ ಕಾರಣ ತಿಳಿಯಲು ಆರೋಗ್ಯ ಇಲಾಖೆ ಮುಂದಾಗಿದ್ದು, ಪ್ರಾಥಮಿಕ ವರದಿ ಸಲ್ಲಿಸಲು ಸೂಚನೆ ನೀಡಿದೆ.

ತಾಲೂಕು ವೈದ್ಯಾಧಿಕಾರಿ ಡಾ.ರಮೇಶ ಗುತ್ತೆದಾರ ಅವರಿಂದ ಆಡಳಿತ ಅಧಿಕಾರಿಗೆ ಸೂಚನೆ ನೀಡಿದ್ದು, ಸಿದ್ದಮ್ಮ ಅವರ ಸಾವಿನ ಬಗ್ಗೆ ಪ್ರಾಥಮಿಕ ವರದಿ ಸಲ್ಲಿಸುವಂತೆ ಹೇಳಿದ್ದಾರೆ. ಕಲುಷಿತ ನೀರು ಸೇವನೆಯಿಂದ ಅ. 22ರಂದು ಹೊನ್ನಪ್ಪಗೌಡ ಹಾಗೂ ಅ.೨೩ರಂದು 23 ಮೃತಪಟ್ಟಿದ್ದರು. ಇದಾದ ಒಂದೇ ದಿನಕ್ಕೆ ಸಿದ್ದಮ್ಮ ಸಹ ಅಸುನೀಗಿದ್ದಾರೆ. ಇಲ್ಲಿಯವರೆಗೆ 38 ಜನರಿಗೆ ವಾಂತಿ-ಭೇದಿ ಕಾಣಿಸಿಕೊಂಡಿದೆ.

ಇದನ್ನೂ ಓದಿ | Contaminated water | ಯಾದಗಿರಿಯಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರ ಸಾವು, 30ಕ್ಕೂ ಹೆಚ್ಚು ಜನ ಅಸ್ವಸ್ಥ

Exit mobile version