Site icon Vistara News

Deer hunting | ನಾಗರಹೊಳೆ ಉದ್ಯಾನವನದಲ್ಲಿ ಜಿಂಕೆ ಬೇಟೆಯಾಡಿದ್ದ ಇಬ್ಬರ ಬಂಧನ, ನಾಲ್ವರು ಪರಾರಿ

deer hunting in Nagarahole National Park

ಮೈಸೂರು: ಎಚ್.ಡಿ.ಕೋಟೆ ತಾಲೂಕಿನ ಮೇಟಿಕುಪ್ಪೆ ಅರಣ್ಯ ವ್ಯಾಪ್ತಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಜಿಂಕೆ ಬೇಟೆಯಾಡಿದ್ದ (Deer hunting) ಇಬ್ಬರನ್ನು ಮೇಟಿಕುಪ್ಪೆ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಈ ವೇಳೆ ಇನ್ನೂ ನಾಲ್ವರು ಆರೋಪಿಗಳು ಪರಾರಿಯಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.

ಬಂಧಿತರಿಂದ ಅಕ್ರಮ ನಾಡ ಬಂದೂಕು ಜಿಂಕೆಯ ಮೃತದೇಹವನ್ನು ವಶಕ್ಕೆ ಪಡೆಯಲಾಗಿದೆ. ಮೇಟಿಕುಪ್ಪೆ ನಿವಾಸಿ ಅಭಿಷೇಕ್ ಮತ್ತು ಕಲ್ಲಹಟ್ಟಿಯ ನೆಹರು ನಾಯಕ್ ಬಂಧಿತ ಆರೋಪಿಗಳಾಗಿದ್ದಾರೆ.

ಆರೋಪಿಗಳು ಜಿಂಕೆಯನ್ನು ಕೊಂದು‌ ಅದರ ಮೃತದೇಹವನ್ನು ಸಾಗಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಈ ವೇಳೆ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಕಂಡು ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಅವರನ್ನು ಹಿಂಬಾಲಿಸಿದ ಸಿಬ್ಬಂದಿ, ಇಬ್ಬರನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರ ವಿರುದ್ಧ ವನ್ಯಜೀವಿ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ಆರೋಪಿಗಳಿಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶರು ಆದೇಶಿಸಿದ್ದಾರೆ. ತಲೆ ಮರೆಸಿಕೊಂಡಿರುವ ಆರೋಪಿಗಳಿಗಾಗಿ ತಂಡ ರಚಿಸಲಾಗಿದ್ದು, ಶೋಧ ಕಾರ್ಯ ಆರಂಭವಾಗಿದೆ.

ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳಾದ ಹರ್ಷಕುಮಾರ್, ರಂಗಸ್ವಾಮಿ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದ್ದು, ಮೇಟಿಕುಪ್ಪೆ ಅರಣ್ಯ ಇಲಾಖೆಯ ಹರ್ಷಿತ್, ಶಿವಕುಮಾರ್, ನಿರಂಜನ್ ಕಟ್ಟಿ, ಆನಂದ್ ತಂಡದಲ್ಲಿದ್ದರು.

ಇದನ್ನೂ ಓದಿ | Border Dispute | ಮಹಾರಾಷ್ಟ್ರ ಕನ್ನಡಿಗರಿಗೆ ಕರವೇ ಬೆಂಬಲ; ತಾಯಿ ಭುವನೇಶ್ವರಿ ಫೋಟೊ ನೀಡಿ ರಾಜ್ಯಕ್ಕೆ ಆಹ್ವಾನ

Exit mobile version