Site icon Vistara News

CM Siddaramaiah: ಕ್ವಾರಿ ಗಣಿ ರಾಯಲ್ಟಿಯಲ್ಲಿ ಸರ್ಕಾರಕ್ಕೆ ವಂಚನೆ; ಕಠಿಣ ಕ್ರಮಕ್ಕೆ ಸಿಎಂ ಸೂಚನೆ

KRS Dam

ಬೆಂಗಳೂರು: ಕ್ವಾರಿ ಗಣಿ ರಾಯಲ್ಟಿಯಲ್ಲಿ ಸರ್ಕಾರಕ್ಕೆ ನಷ್ಟ ಆಗುತ್ತಿದೆ ಎನ್ನುವ ದೂರಿನ ಬಗ್ಗೆ ಗರಂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಈ ಬಗ್ಗೆ ಕಠಿಣ ಕ್ರಮ ಕೈಗೊಂಡು ನಷ್ಟ ತಡೆಯುವಂತೆ ಸೂಚಿಸಿದ್ದಾರೆ.

ಡಿಸಿ-ಸಿಇಒಗಳ ಸಭೆಯಲ್ಲಿ ಸಚಿವ ಸಂತೋಷ್ ಲಾಡ್, ಈಶ್ವರ್ ಖಂಡ್ರೆ, ಶರಣಪ್ರಕಾಶ್ ಪಾಟೀಲ್ ಹಾಗೂ ಇತರರು, ಪರ್ಮಿಟ್ ಪಡೆಯದೆ ರಾಯಲ್ಟಿ ಸಂಗ್ರಹದಲ್ಲಿ ಸರ್ಕಾರಕ್ಕೆ ಆಗುತ್ತಿರುವ ನಷ್ಟದ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಗಮನ ಸೆಳೆದರು.

ಸಚಿವ ಸಂತೋಷ್ ಲಾಡ್ ಮಾತನಾಡಿ, ಕ್ವಾರಿ ಗಣಿಗಾರಿಕೆಯಲ್ಲಿ 50 ಲಕ್ಷ ಟನ್‌ಗೆ ಪರಿಸರ ತೀರುವಳಿ ಪಡೆದರೆ, 20 ಲಕ್ಷ ಟನ್‌ಗೆ ಮಾತ್ರ ಪರ್ಮಿಟ್ ಪಡೆಯುತ್ತಾರೆ. ಹಾಗಿದ್ದರೆ ಹೆಚ್ಚಿನ ಮಟ್ಟದ ಪರಿಸರ ತೀರುವಳಿ ಪಡೆದದ್ದು ಏತಕ್ಕೆ? ರಾಜ್ಯದಲ್ಲಿ ಪರಿಸರ ತೀರುವಳಿ ಪಡೆದಿರುವುದಕ್ಕೂ, ಪರ್ಮಿಟ್ ಪಡೆದಿರುವುದಕ್ಕೂ ಅರ್ಧಕರ್ಧ ಕಡಿಮೆ ಇದೆ ಎಂದು ಮುಖ್ಯಮಂತ್ರಿಗಳ ಗಮನ ಸೆಳೆದರು.

ಇದನ್ನೂ ಓದಿ: PGET 2024 : ಪಿಜಿಇಟಿಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಜುಲೈ 10ರವರೆಗೆ ಅವಕಾಶ

ಈ ವೇಳೆ ಸಂತೋಷ್ ಲಾಡ್ ಅವರ ಮಾತಿಗೆ ಹಲವು ಸಚಿವರು ಧ್ವನಿಗೂಡಿಸಿದರು. ಈ ಬಗ್ಗೆ ಅಧಿಕಾರಿಗಳಿಗೆ ಸ್ಪಷ್ಟ ಎಚ್ಚರಿಕೆ ನೀಡಿದ ಸಿಎಂ, ಇದನ್ನೆಲ್ಲಾ ತಕ್ಷಣ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಈ ಬಗ್ಗೆ ಅಗತ್ಯವಿದ್ದರೆ ಸರ್ಕಾರದಿಂದ ಹೊಸ ನೀತಿಯನ್ನೇ ರೂಪಿಸೋಣ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಜಂಟಿ ಸಮೀಕ್ಷೆ ನಡೆಸಿ

ಯಾವುದೇ ಜಮೀನನ್ನು ತಪ್ಪಾಗಿ ಡೀಮ್ಡ್‌ ಅರಣ್ಯ ಪಟ್ಟಿಗೆ ಸೇರಿಸಿದ್ದರೆ, ಅಂತದ್ದನ್ನು ಗುರುತಿಸಲು ಕಂದಾಯ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಎರಡು ತಿಂಗಳ ಒಳಗಾಗಿ ಜಂಟಿ ಸಮೀಕ್ಷೆ ನಡೆಸಿ. ಅದನ್ನು ಸಂಪುಟದ ಮುಂದೆ ಮಂಡಿಸಲು ಸಿಎಂ ಸೂಚಿಸಿದರು.

ಇದನ್ನೂ ಓದಿ: Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

ಅಕ್ರಮ ಗಣಿಗಾರಿಕೆಗೆ ತಡೆಗೆ ಕಟ್ಟುನಿಟ್ಟಿನ ಕ್ರಮ

ಅಕ್ರಮ ಗಣಿಗಾರಿಕೆ, ಸಾಗಾಣಿಕೆ ಮತ್ತು ದಾಸ್ತಾನು ಕುರಿತು ಹಲವಾರು ದೂರುಗಳು ಬರುತ್ತಿದ್ದು, ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಕ್ರಮ ಗಣಿಗಾರಿಕೆ ಮಾಡುವ ಮರಳು ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ಗ್ರಾಮ ಪಂಚಾಯಿತಿ ಮೂಲಕ ಮರಳು ಪೂರೈಕೆ ಮಾಡಲು ಈಗಾಗಲೇ ಗುರುತಿಸಲಾಗಿರುವ ಮರಳು ಬ್ಲಾಕ್‌ಗಳ ಮೂಲಕ ಮರಳು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಒಟ್ಟು 372 ಮರಳು ಬ್ಲಾಕ್‌ಗಳನ್ನು ಗುರುತಿಸಲಾಗಿದ್ದು, 102 ಮರಳು ಬ್ಲಾಕ್‌ಗಳು ಕಾರ್ಯ ಪ್ರಾರಂಭಿಸಿವೆ. ಇನ್ನೂ 270 ಮರಳು ಬ್ಲಾಕ್‌ಗಳು ಕಾರ್ಯಾರಂಭ ಮಾಡಬೇಕು ಎಂದು ತಿಳಿಸಿದರು.

Exit mobile version