Delivery Boy: ಬೆಂಗಳೂರಲ್ಲಿ ವ್ಯಕ್ತಿಯ ಗುಪ್ತಾಂಗ ಮುಟ್ಟಿ ದುರ್ವರ್ತನೆ ತೋರಿದ ಡೆಲಿವರಿ ಬಾಯ್‌ ಅಹ್ಮದ್! - Vistara News

ಕರ್ನಾಟಕ

Delivery Boy: ಬೆಂಗಳೂರಲ್ಲಿ ವ್ಯಕ್ತಿಯ ಗುಪ್ತಾಂಗ ಮುಟ್ಟಿ ದುರ್ವರ್ತನೆ ತೋರಿದ ಡೆಲಿವರಿ ಬಾಯ್‌ ಅಹ್ಮದ್!

Delivery Boy: ಇಶಾನ್‌ ಶರ್ಮಾ ಎಂಬ ಯುವಕ ಜೆಪ್ಟೋದಲ್ಲಿ ಹಲವು ವಸ್ತುಗಳನ್ನು ಆರ್ಡರ್‌ ಮಾಡಿದ್ದಾರೆ. ಸಾಜನ್‌ ಅಹ್ಮದ್‌ ಲಷ್ಕರ್‌ ಎಂಬ ಡೆಲಿವರಿ ಬಾಯ್‌, ಇಶಾನ್‌ ಶರ್ಮಾ ಅವರ ಮನೆಬಾಗಿಲಿಗೆ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ. ವಸ್ತುಗಳನ್ನು ಡೆಲಿವರಿ ಮಾಡಿದ ಬಳಿಕ ಅವರು ಮೊದಲಿಗೆ ಯುವಕನ ಗುಪ್ತಾಂಗವನ್ನು ಸ್ಪರ್ಶಿಸಿದ್ದಾರೆ. ಯುವಕನು ಕೂಗಾಡಿದ ಬಳಿಕ ಆತನು ಅಲ್ಲಿಂದ ಕಾಲ್ಕಿತ್ತಿದ್ದಾನೆ.

VISTARANEWS.COM


on

Delivery Boy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಡೆಲಿವರಿ ಬಾಯ್ಸ್‌ (Delivery Boy) ಆಹಾರ ಸೇರಿ ಹಲವು ವಸ್ತುಗಳನ್ನು ಮಳೆ, ಬಿಸಿಲು, ಚಳಿ, ರಾತ್ರಿ ಎನ್ನದೆ ಮನೆಬಾಗಿಲಿಗೆ ತಲುಪಿಸುವ ಮೂಲಕ ಗ್ರಾಹಕರ ಅಗತ್ಯಗಳನ್ನು ಪೂರೈಸುತ್ತಾರೆ. ಆದರೆ, ಕೆಲವು ಡೆಲಿವರಿ ಬಾಯ್‌ಗಳು ಗ್ರಾಹಕರ ಜತೆ ಜಗಳ ಆಡುವುದು, ವಾದ ಮಾಡುವುದು, ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ದುರ್ವರ್ತನೆ ತೋರುವ ಪ್ರಕರಣಗಳು ಆಗಾಗ ಕೇಳಿಬರುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ನಗರದಲ್ಲಿ ಡೆಲಿವರಿ ಬಾಯ್‌ ಒಬ್ಬ ಗ್ರಾಹಕನ ಗುಪ್ತಾಂಗ ಮುಟ್ಟಿ ದುರ್ವರ್ತನೆ ತೋರಿದ್ದಾನೆ. ಈ ಕುರಿತು ಗ್ರಾಹಕ ಇಶಾನ್‌ ಶರ್ಮಾ ಎಂಬುವರು ದೂರು ದಾಖಲಿಸಿದ್ದಾರೆ.

ಇಶಾನ್‌ ಶರ್ಮಾ ಎಂಬ ಯುವಕ ಜೆಪ್ಟೋದಲ್ಲಿ ಹಲವು ವಸ್ತುಗಳನ್ನು ಆರ್ಡರ್‌ ಮಾಡಿದ್ದಾರೆ. ಸಾಜನ್‌ ಅಹ್ಮದ್‌ ಲಷ್ಕರ್‌ ಎಂಬ ಡೆಲಿವರಿ ಬಾಯ್‌, ಇಶಾನ್‌ ಶರ್ಮಾ ಅವರ ಮನೆಬಾಗಿಲಿಗೆ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ. ವಸ್ತುಗಳನ್ನು ಡೆಲಿವರಿ ಮಾಡಿದ ಬಳಿಕ ಅವರು ಮೊದಲಿಗೆ ಯುವಕನ ಗುಪ್ತಾಂಗವನ್ನು ಸ್ಪರ್ಶಿಸಿದ್ದಾರೆ. ಆಕಸ್ಮಿಕ ಎಂದುಕೊಂಡ ಯುವಕ ಸುಮ್ಮನಾಗಿದ್ದಾರೆ. ಆದರೆ, ಎರಡನೇ ಬಾರಿಯೂ ಮುಟ್ಟಿದಾಗ ಉದ್ದೇಶಪೂರ್ವಕ ವರ್ತನೆ ಎಂಬುದು ಬಯಲಾಗಿದೆ. ಇದೇ ವೇಳೆ, ಯುವಕ ಕೂಗಿದ ಕಾರಣ ಡೆಲಿವರಿ ಬಾಯ್‌ ಅಲ್ಲಿಂದ ಕಾಲ್ಕಿತ್ತದ್ದಾನೆ ಎಂದು ಯುವಕ ತಿಳಿಸಿದ್ದಾರೆ.

ಡೆಲಿವರಿ ಬಾಯ್‌ ವರ್ತನೆ ಕುರಿತು ಇಶಾನ್‌ ಶರ್ಮಾ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೊಲೀಸರನ್ನು ಟ್ಯಾಗ್‌ ಮಾಡಿ ದೂರಿದ್ದಾರೆ. “ಜೆಪ್ಟೋದಲ್ಲಿ ನಾನು ಕೆಲ ವಸ್ತುಗಳನ್ನು ಆರ್ಡರ್‌ ಮಾಡಿದ್ದೆ. ಆದರೆ, ವಸ್ತುಗಳನ್ನು ಡೆಲಿವರಿ ಮಾಡಿದ ಆತನು ನನ್ನ ಗುಪ್ತಾಂಗವನ್ನು ಮುಟ್ಟಿದ್ದಾನೆ. ಮೊದಲಿಗೆ ಆಕಸ್ಮಿಕ ಎಂಬುದಾಗಿ ನಾನು ಸುಮ್ಮನಿದ್ದೆ. ಆದರೆ, ಆತನು ಎರಡನೇ ಬಾರಿಯೂ ಉದ್ದೇಶಪೂರ್ವಕವಾಗಿ ನನ್ನ ಗುಪ್ತಾಂಗವನ್ನು ಮುಟ್ಟಿ ಅಸಭ್ಯ ವರ್ತನೆ ತೋರಿದ್ದಾನೆ. ಈತನ ವಿರುದ್ಧ ದಯಮಾಡಿ ಕ್ರಮ ತೆಗೆದುಕೊಳ್ಳಿ” ಎಂಬುದಾಗಿ ಆರೋಪಿಸಿದ್ದಾನೆ. ಏಪ್ರಿಲ್‌ 26ರಂದು ಘಟನೆ ನಡೆದಿದೆ.

ಕೆಲ ವಾರಗಳ ಹಿಂದಷ್ಟೇ ಬೆಂಗಳೂರಿನಲ್ಲಿ ಬೈಯ್ಯಪ್ಪನಹಳ್ಳಿ ಪೊಲೀಸರು ನಟೋರಿಯಸ್ ಬೈಕ್ ಕಳ್ಳನನ್ನು ಬಂಧಿಸಿದ್ದರು. ದೀಪಕ್ ಅಲಿಯಾಸ್‌ ದೀಪು ಬಂಧಿತ ಆರೋಪಿಯಾಗಿದ್ದಾನೆ. ದೀಪಕ್‌ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಈತನ ಮೇಲೆ ವಿವಿಧ ಪೊಲೀಸ್ ಠಾಣೆಯಲ್ಲಿ ಸುಮಾರು 14 ಪ್ರಕರಣ ದಾಖಲಾಗಿವೆ.

ಬೆಳಗಿನಿಂದ ಸಂಜೆವರೆಗೂ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿ, ರಾತ್ರಿ ವೇಳೆ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕದಿಯುತ್ತಿದ್ದ. ಕದ್ದ ಬೈಕ್‌ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ. ಬೈಕ್‌ ಮಾರಾಟಕ್ಕೂ ಮೊದಲು ದಾಖಲಾತಿಯನ್ನೆಲ್ಲ ನಂತರ ಕೊಡುತ್ತೇನೆ ಎಂದು ಯಮಾರಿಸಿ, ಕಡಿಮೆ ಬೆಲೆಗೆ ಬೈಕ್ ಮಾರುತ್ತಿದ್ದ ಎಂಬುದು ಗೊತ್ತಾಗಿತ್ತು.

ಇದನ್ನೂ ಓದಿ: Viral Video: ಐಷಾರಾಮಿ ಹಾರ್ಲೆ –ಡೇವಿಡ್ಸನ್​ ಬೈಕ್​ನಲ್ಲಿ ಫುಡ್​ ಡೆಲಿವರಿ ಕೊಟ್ಟ ಯುವಕ; ವಿಡಿಯೊ ವೈರಲ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಪ್ರಮುಖ ಸುದ್ದಿ

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

VISTARANEWS.COM


on


ಕೇಂದ್ರ ಚುನಾವಣಾ ಆಯೋಗ 3 ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್‌) ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದ್ದು, ಮೇ 30ರಿಂದ ಎಸ್‌ಐಆರ್‌ ನಡೆಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಹರಿಯಾಣ, ಪಂಜಾಬ್‌, ಚಂಡೀಗಢ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮೇಘಾಲಯ, ಜಾರ್ಜಂಡ್‌, ನಾಗಾಲ್ಯಾಂಡ್‌, ತ್ರಿಪುರ, ದಾದರ್‌ ಮತ್ತು ನಗರ ಹವೇಲಿ, ದಮನ್‌ ಮತ್ತು ದಿಯುಗಳಲ್ಲಿ 3 ನೇ ಹಂತದಲ್ಲಿ ಎಸ್‌ಐಆರ್‌ ನಡೆಯಲಿದೆ.
3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಅಧಿಕ ಬೂತ್‌ ಮಟ್ಟದ ಅಧಿಕಾರಿಗಳು 36.73ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ದೇಶದ 10 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ನಡೆಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢ, ಕೇರಳಂ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪ, ಗುಜರಾತ್‌, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ ಈಗಾಗಲೇ ಎಸ್‌ಐಆರ್‌ ಕಾರ್ಯ ಮುಗಿದಿದೆ.
ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎಸ್‌ಐಆರ್‌ ಬಾಕಿ ಇದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ಘೋಷಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Continue Reading

ಚಿತ್ರದುರ್ಗ

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

VISTARANEWS.COM


on

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್‌ ಅವರ ಅಗಲಿಕೆಯಿಂದ ರಾಜ್ಯ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ. ಸುಧಾಕರ್‌ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಸುಧಾಕರ್‌ ಅವರು ಜನಪರ ನಾಯಕನಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ” ಎಂದು ಹೇಳಿದರು.

ಸುಧಾಕರ್‌ ಅವರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. “ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಸಿಎಂ ಪ್ರಾರ್ಥಿಸಿದರು.

ಡಿ. ಸುಧಾಕರ್‌ ಅವರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಅವರ ನಿಧನ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು, ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ.

ನಾಳೆ ಸಂಜೆ 4 ಗಂಟೆಗೆ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

Continue Reading

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading
Advertisement
Latest15 hours ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest20 hours ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest20 hours ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest2 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest2 days ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ2 days ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest2 days ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest2 days ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

Latest2 days ago

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

Latest3 days ago

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌