Site icon Vistara News

Dengue Cases: ರಾಜ್ಯದಲ್ಲಿ ಸೋಮವಾರ 197 ಡೆಂಗ್ಯೂ ಕೇಸ್‌ಗಳು ಪತ್ತೆ, ಒಬ್ಬರ ಸಾವು

Dengue Cases

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 197 ಡೆಂಗ್ಯೂ ಕೇಸ್‌ಗಳು (Dengue Cases) ಪತ್ತೆಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 303ಕ್ಕೇರಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲೇ 95 ಮಂದಿಗೆ ಸೋಮವಾರ ಸೋಂಕು ತಗುಲಿದೆ. ಸೋಂಕಿತರ ಪೈಕಿ 46 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ 24 ಗಂಟೆಯಲ್ಲಿ 892 ಮಂದಿಗೆ ಟೆಸ್ಟ್‌ ನಡೆಸಿದ್ದು, ಈ ಪೈಕಿ 197 ಮಂದಿಗೆ ಡೆಂಗ್ಯೂ ದೃಢಪಟ್ಟಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 95, ಬೆಂಗಳೂರು ನಗರ 4, ಶಿವಮೊಗ್ಗ 16, ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ 3, ಕಲಬುರಗಿ 15, ಕೊಪ್ಪಳ 1, ಚಾಮರಾಜನಗರ 6, ಮಂಡ್ಯ 33, ಉಡುಪಿ 1, ಚಿಕ್ಕಮಗಳೂರು ಜಿಲ್ಲೆಯಲ್ಲಿ 17 ಮಂದಿಗೆ ಸೋಂಕು ತಗುಲಿದೆ. 197 ಮಂದಿಯಲ್ಲಿ 0-1 ವರ್ಷದೊಳಗಿನವರಲ್ಲಿ 1 ಮಗುವಿಗೆ, 1 ರಿಂದ 18 ವರ್ಷಗೊಳಗಿನ 63 ಮಂದಿಗೆ ಸೋಂಕು ತಗುಲಿದೆ.

ಇನ್ನು ರಾಜ್ಯದಲ್ಲಿ ಜನವರಿಯಿಂದ ಈವರೆಗೆ ಒಟ್ಟು 7362 ಮಂದಿ ಡೆಂಗ್ಯೂ ಪೀಡಿತರಾಗಿದ್ದು, 7 ಮಂದಿ ಮೃತಪಟ್ಟಿದ್ದಾರೆ. ಸಾವಿನ ಪ್ರಮಾಣ 0.09 ಇದೆ.

ಕಲುಷಿತ ನೀರು ಪೂರೈಕೆಯಾದ್ರೆ ಅಧಿಕಾರಿಗಳೇ ಹೊಣೆ; 15 ದಿನಕ್ಕೊಮ್ಮೆ ಕ್ವಾಲಿಟಿ ಟೆಸ್ಟ್ ಮಾಡಿ ಎಂದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ (Dengue Cases) ಏರಿಕೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಲಾರ್ವಾ ಸಮೀಕ್ಷೆ, ಸೊಳ್ಳೆ ನಿಯಂತ್ರಣದ ಜತೆಗೆ ಮನೆಮನೆಗೆ ತೆರಳಿ ಆರೋಗ್ಯ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ. ಈ ನಡುವೆ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ ಅವರು, ಜನರಿಗೆ ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಪ್ರತಿ 15 ದಿನಗಳಿಗೊಮ್ಮೆ ನೀರಿನ ಮೂಲಗಳಲ್ಲಿ ಕಡ್ಡಾಯವಾಗಿ ಗುಣಮಟ್ಟ ಪರೀಕ್ಷೆ ನಡೆಸಬೇಕು ಎಂದು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ | Uttara Kannada News: ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ, 12 ಕಾಳಜಿ ಕೇಂದ್ರಗಳಲ್ಲಿ 437 ಜನರಿಗೆ ಆಸರೆ

ಕಲುಷಿತ ನೀರಿನಿಂದ ಯಾವುದೇ ತೊಂದರೆ ಉಂಟಾದರೆ ಸಂಬಂಧಪಟ್ಟ ಅಧಿಕಾರಿಯನ್ನು ನೇರ ಜವಾಬ್ದಾರಿ ಮಾಡಲಾಗುವುದು. ತುಕ್ಕು ಹಿಡಿದ ಹಳೆಯ ಪೈಪ್‌ ಬದಲಾವಣೆ ಮಾಡಬೇಕು. ಪ್ರತಿ 15 ದಿನಗಳಿಗೊಮ್ಮೆ ನೀರಿನ ಮೂಲದಲ್ಲಿ ಹಾಗೂ ವಿತರಣಾ ಬಿಂದುವಿನಲ್ಲಿನ ನೀರಿನ ಗುಣಮಟ್ಟವನ್ನು ಪ್ರಯೋಗಾಲಯದಲ್ಲಿ ಕಡ್ಡಾಯವಾಗಿ ಪರೀಕ್ಷೆ ಮಾಡಬೇಕು. ನೀರಿನ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾದ ಕಡೆಗಳಲ್ಲಿ ಹೊಸ ಮೂಲದಿಂದ ನೀರು ಪೂರೈಕೆ ಮಾಡಬೇಕು ಎಂದು ತಿಳಿಸಿದ್ದಾರೆ.

ಎಲ್ಲಾ ಜಿಲ್ಲೆಗಳಲ್ಲಿ ಆದಷ್ಟು ಬೇಗನೆ ಘನ ತ್ಯಾಜ್ಯ ವಿಲೇವಾರಿ ಘಟಕಗಳನ್ನು ಆರಂಭಿಸಬೇಕು. ಇನ್ನೂ 55 ಕಡೆಗಳಲ್ಲಿ ಘನತ್ಯಾಜ್ಯ ಘಟಕಗಳ ನಿರ್ಮಾಣ ಪ್ರಕ್ರಿಯೆ ನಡೆಯುತ್ತಿದ್ದು, ಆದಷ್ಟು ಬೇಗನೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಬೇಕು. ತ್ಯಾಜ್ಯ ನೀರು ಶುದ್ಧೀಕರಣ ಘಟಕ ಕಾರ್ಯಾರಂಭಿಸುವ ಮೂಲಕ ಕೊಳಚೆ ನೀರು ನೇರವಾಗಿ ಕೆರೆಗಳಿಗೆ ಸೇರುವುದನ್ನು ತಪ್ಪಿಸಬೇಕು. ಮೈಸೂರಿನ ದಳವಾಯಿ ಕೆರೆಗೆ ಕೊಳಚೆ ನೀರು ಸೇರುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಹೇಳಿದ್ದಾರೆ.

Exit mobile version