Site icon Vistara News

Dengue fever: 20 ದಿನದಲ್ಲೇ ಡೆಂಗ್ಯೂ ಕೇಸ್‌ ಹೆಚ್ಚಳ; 200ಕ್ಕೂ ಹೆಚ್ಚು ಮಂದಿಗೆ ಫೀವರ್‌

#image_title

ಬೆಂಗಳೂರು: ರಾಜ್ಯದಲ್ಲಿ ಹವಾಮಾನ ವೈಪರೀತ್ಯ ಮತ್ತು ಮಳೆಯಿಂದಾಗಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದು ಆತಂಕ ಮೂಡಿಸಿದೆ. ಕೋವಿಡ್‌ ಜತೆಗೆ ಡೆಂಗ್ಯೂ ಜ್ವರವೂ ಹೆಚ್ಚಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿಗಿಂತ ಡೆಂಗ್ಯೂ ಜ್ವರ ಹಾಗೂ ಚಿಕನ್ ಗೂನ್ಯಾ ಪ್ರಕರಣಗಳು ಹೆಚ್ಚಾಗುತ್ತಿದೆ. ಕಳೆದ ವರ್ಷ (2022) ರಾಜ್ಯದಲ್ಲಿ 7,317 ಡೆಂಗ್ಯೂ ಜ್ವರ (Dengue fever) ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ನಾಲ್ವರು ಮೃತಪಟ್ಟಿದ್ದರು.

ಕಳೆದ ಮಾರ್ಚ್ ತಿಂಗಳಿಂದ ನಿರಂತರವಾಗಿ ಡೆಂಗ್ಯೂ ಪೀಡಿತರ ಸಂಖ್ಯೆ ಏರಿಕೆಯಾಗುತ್ತಿದೆ. ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ತಲೆಕೆಡಿಸಿಕೊಂಡಿದೆ. ಬಿಬಿಎಂಪಿ ವ್ಯಾಪ್ತಿ ಸೇರಿದಂತೆ ರಾಜ್ಯದಲ್ಲಿ ಕಳೆದ 20 ದಿನಗಳಲ್ಲಿ 246 ಡೆಂಗ್ಯೂ ಕೇಸ್ ಪತ್ತೆಯಾಗಿದೆ. ಶೇ. 15 ರಿಂದ 20ರಷ್ಟು ಡೆಂಗ್ಯೂ ಕೇಸ್‌ ಏರಿಕೆ ಕಂಡಿದೆ.

ಏಪ್ರಿಲ್‌ ತಿಂಗಳಲ್ಲಿ ಡೆಂಗ್ಯೂ ಆರ್ಭಟ
ದಿನಾಂಕ- ಪ್ರಕರಣಗಳು
ಏಪ್ರಿಲ್‌ 3ರಿಂದ 9- 80 ಪ್ರಕರಣಗಳು
ಏಪ್ರಿಲ್ 10 ರಿಂದ 16- 94 ಪ್ರಕರಣಗಳು
ಏಪ್ರಿಲ್‌ 17 ರಿಂದ 23- 82 ಪ್ರಕರಣಗಳು

ಕಳೆದ ಒಂದು ವಾರದಲ್ಲಿ ಅಂದರೆ ಏಪ್ರಿಲ್‌ 17 ರಿಂದ 23ರ ವರೆಗೆ ಒಟ್ಟು 82 ಡೆಂಗ್ಯೂ ಕೇಸ್ ಪತ್ತೆಯಾಗಿದ್ದರೆ, ಇದರಲ್ಲಿ ಸಿಂಹಪಾಲು ಬೆಂಗಳೂರಿನಲ್ಲಿ 49 ಕೇಸ್ ಪತ್ತೆಯಾಗಿದೆ. ಏಪ್ರಿಲ್ 10 ರಿಂದ 16ರ ವೆರೆಗೆ ರಾಜ್ಯದಲ್ಲಿ 94 ಕೇಸ್, ಏಪ್ರಿಲ್‌ 3ರಿಂದ 9 ರವರೆಗೆ 80 ಕೇಸ್ ಪತ್ತೆಯಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಡೆಂಗ್ಯೂ ಜ್ವರ ಕಾಣಿಸಿಕೊಳ್ಳುತ್ತಿದ್ದು, ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ.

ರಾಜಧಾನಿ ಬೆಂಗಳೂರಲ್ಲಿ ಡೆಂಗ್ಯೂ ಹೆಚ್ಚಳದಿಂದಾಗಿ ಹೊರ ರೋಗಿಗಳ ವಿಭಾಗದಲ್ಲಿ ಶೇ. 15-20 ರಷ್ಟು ಏರಿಕೆ ಕಂಡಿದೆ. ಈ ಹಿನ್ನಲೆ ವೈದ್ಯರು ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದ್ದು, ಡೆಂಗ್ಯೂ ಲಕ್ಷಣಗಳು ಕಂಡು ಬಂದರೆ ಕೂಡಲೇ ವೈದ್ಯರನ್ನು ಕಾಣುವಂತೆ ಸೂಚಿಸಿದ್ದಾರೆ.

ಡೆಂಗ್ಯೂ ಹೇಗೆ ಹರಡುತ್ತದೆ?

ಡೆಂಗ್ಯೂ ಜ್ವರ ಸೊಳ್ಳೆಯಿಂದ ಹರಡುವ ವೈರಲ್ ಸೋಂಕು ಆಗಿದೆ. ಇದು ಈಡಿಪಸ್‌ ಎಂಬ ಹೆಣ್ಣು ಸೊಳ್ಳೆಗಳ ಕಡಿತದಿಂದ ಹರಡುತ್ತದೆ. ಸೊಳ್ಳೆ ಕಚ್ಚಿದ 4-7 ದಿನಗಳ ನಂತರ ರೋಗ ಲಕ್ಷಣಗಳು ಸಾಮಾನ್ಯವಾಗಿ ಕಂಡು ಬರುತ್ತವೆ. ಇದರ ಪ್ರಭಾವ 10 ದಿನಗಳವರೆಗೆ ಇರುತ್ತದೆ. ಹೀಗಾಗಿ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು, ಸ್ವಚ್ಛತೆಗೆ ಆದ್ಯತೆ ನೀಡುವುದು ಉತ್ತಮವಾಗಿದೆ.

ಇದನ್ನೂ ಓದಿ: Weather Report: ಮುಂದಿನ 24 ಗಂಟೆಯಲ್ಲಿ ಈ 8 ಜಿಲ್ಲೆಗಳಲ್ಲಿ ಭಾರಿ ಮಳೆ; ಬೆಂಗಳೂರಲ್ಲಿ ಸಂಜೆ ಮಳೆ

ಡೆಂಗ್ಯೂ ಜ್ವರ ತಲೆನೋವಿನಂತಹ ರೋಗಲಕ್ಷಣಗಳನ್ನು ಉಂಟು ಮಾಡಬಹುದು. ಆದರೆ, ಡೆಂಗ್ಯೂವನ್ನು ಹೆಮರಾಜಿಕ್ ಜ್ವರ ಎಂದೂ ಕರೆಯಲಾಗುತ್ತದೆ. ಡೆಂಗ್ಯೂ ಜ್ವರದ ತೀವ್ರ ಸ್ವರೂಪವು ತೀವ್ರ ರಕ್ತಸ್ರಾವ, ರಕ್ತದೊತ್ತಡ ಹಾಗೂ ರಕ್ತಕಣಗಳ ಸಂಖ್ಯೆಯಲ್ಲಿ ಭಾರಿ ಕುಸಿತವಾಗಿ ವ್ಯಕ್ತಿಯ ಸಾವಿಗೂ ಕಾರಣವಾಗಬಹುದು. ಅಧಿಕ ಜ್ವರ, ತೀವ್ರ ತಲೆನೋವು, ವಾಂತಿ, ದೇಹದ ವಿವಿಧ ಭಾಗಗಳಲ್ಲಿ ದದ್ದುಗಳು, ಗ್ರಂಥಿಗಳಲ್ಲಿ ಊತ, ಮೂಳೆ ಮತ್ತು ಕೀಲು ನೋವು, ರಕ್ತಸ್ರಾವವಾಗವುದು ರೋಗ ಲಕ್ಷಣಗಳಾಗಿವೆ.

Exit mobile version