Site icon Vistara News

Dengue Fever: ರಾಜ್ಯದಲ್ಲಿ ನಿಫಾ ವೈರಸ್ ಪ್ರಕರಣ ಪತ್ತೆಯಾಗಿಲ್ಲ: ದಿನೇಶ್ ಗುಂಡೂರಾವ್

No cases of Nipah virus have been detected in the state says Minister Dinesh Gundurao

ಬೆಂಗಳೂರು: ಡೆಂಗ್ಯೂಗೆ (Dengue Fever) ತುತ್ತಾದ ಪ್ರತಿಯೊಬ್ಬರ ಮೇಲೆ 14 ದಿನಗಳವರೆಗೆ ನಿಗಾ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರಿನ ಯಲಹಂಕದಲ್ಲಿ ಇಂದು ಡೆಂಗ್ಯೂ ಹಾಟ್‌ಸ್ಪಾಟ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂದರು.

ಯಲಹಂಕದ ಶಿಂಗೇನಹಳ್ಳಿಯಲ್ಲಿ ಇಂದು ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವರು, ಸ್ಥಳೀಯ ಶಾಲೆಗಳಿಗೆ ತೆರಳಿ ಡೆಂಗ್ಯೂ ಕುರಿತು ಜಾಗೃತಿ ಮೂಡಿಸಿದರು. ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಸತತ ಪ್ರಯತ್ನಗಳನ್ನ ಮುಂದುವರಿಸಿದೆ. ಮುಂದಿನ ತಿಂಗಳಿನಿಂದ ಡೆಂಗ್ಯೂ ಪ್ರಕರಣಗಳಲ್ಲಿ ಇಳಿಮುಖ ಕಾಣುವ ನಿರೀಕ್ಷೆ ಹೊಂದಿದ್ದೇವೆ ಎಂದರು.

ಇದನ್ನೂ ಓದಿ: Jio Air Fiber: ಗ್ರಾಹಕರಿಗೆ ಭರ್ಜರಿ ರಿಯಾಯಿತಿ ಘೋಷಿಸಿದ ಜಿಯೊ! ಎಲ್ಲಿಯವರೆಗೆ ಈ ಆಫರ್‌?

ಕೆಲವು ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ಇಳಿಮುಖವಾಗಿವೆ. ರಾಜ್ಯದ ಒಟ್ಟು ಡೆಂಗ್ಯೂ ಪ್ರಕರಣಗಳಲ್ಲಿ ಬೆಂಗಳೂರಿನಲ್ಲಿಯೇ ಶೇ. 50 ರಷ್ಟು ಡೆಂಗ್ಯೂ ಪ್ರಕರಣಗಳಿವೆ. ಹೀಗಾಗಿ ಬೆಂಗಳೂರಿನಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಹೆಚ್ವಿನ ಗಮನ ಹರಿಸಿ ಡೆಂಗ್ಯೂ ಹತೋಟಿಗೆ ತರುವಂತೆ ಸೂಚಿಸಿದ್ದೇನೆ ಎಂದರು.

10 ಜಿಲ್ಲೆಗಳ ಡೆಂಗ್ಯೂ ಹಾಟ್‌ಸ್ಪಾಟ್‌ಗಳಿಗೆ ಉಪನಿರ್ದೇಶಕರ ಮಟ್ಟದ ಅಧಿಕಾರಿಗಳನ್ನು ಕಳುಹಿಸಿಕೊಡಲಾಗುತ್ತಿದೆ. ಸೋಮವಾರ ಹಾಗೂ ಮಂಗಳವಾರ ಅಧಿಕಾರಿಗಳು ಹಾಟ್‌ಸ್ಪಾಟ್‌ಗಳಿಗೆ ಭೇಟಿ ನೀಡಿ ಡೆಂಗ್ಯೂ ನಿಯಂತ್ರಣ ಕ್ರಮಗಳ ಅನುಷ್ಠಾನ ಆಗಿರುವ ಬಗ್ಗೆ ವಿಶೇಷ ಗಮನ ಹರಿಸಲಿದ್ದಾರೆ.

ಎರಡಕ್ಕಿಂತ ಹೆಚ್ಚು ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ಗೋಚರಿಸಿದರೆ ಡೆಂಗ್ಯೂ ಹಾಟ್‌ಸ್ಪಾಟ್ ಎಂದು ಗುರುತಿಸಲಾಗುತ್ತಿದೆ. ಹೆಚ್ಚಿನ ಪ್ರಕರಣಗಳು ಕಂಡುಬಂದರೆ ಅಲ್ಲಿ ಫೀವರ್ ಕ್ಲಿನಿಕ್‌ಗಳನ್ನು ತೆರೆದು, ಜ್ವರ ಕಾಣಿಸಿಕೊಳ್ಳುವ ಎಲ್ಲರನ್ನು ಡೆಂಗ್ಯೂ ಟೆಸ್ಟಿಂಗ್‌ಗೆ ಒಳಪಡಿಸಲಾಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ರಾಜ್ಯದಲ್ಲಿ ನಿಫಾ ವೈರಸ್ ಪ್ರಕರಣಗಳು ಪತ್ತೆಯಾಗಿಲ್ಲ

ಕೇರಳದಲ್ಲಿ ನಿಫಾ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಕೇರಳ ಗಡಿ ಭಾಗದಲ್ಲಿ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ರಾಜ್ಯದಲ್ಲಿ ನಿಪಾ ವೈರಸ್‌ನ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ರಾಜ್ಯದಿಂದ ಕೇರಳಕ್ಕೆ ಪ್ರವಾಸ ಕೈಗೊಳ್ಳುವವರು ಎಚ್ಚರಿಕೆ ವಹಿಸಿ ಎಂದು ಮಾರ್ಗಸೂಚಿ ಹೊರಡಿಸಿದ್ದೇವೆ. ತೀರಾ ಅಗತ್ಯವಾಗಿದ್ದರೆ ಮಾತ್ರ ಕೇರಳ ಪ್ರವಾಸ ಕೈಗೊಳ್ಳಿ. ಅನಗತ್ಯವಾಗಿ ಕೇರಳಕ್ಕೆ ತೆರಳುವುದು ಬೇಡ ಎಂದು ರಾಜ್ಯದ ಜನರಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.

ಇದನ್ನೂ ಓದಿ: Kannada New Movie: ʼಜೀನಿಯಸ್ ಮುತ್ತʼನಿಗೆ ಸಾಥ್ ನೀಡಿದ ʼಚಿನ್ನಾರಿ ಮುತ್ತʼ; ಆಗಸ್ಟ್‌ನಲ್ಲಿ ಸಿನಿಮಾ ರಿಲೀಸ್‌

ರಾಜ್ಯದಲ್ಲಿ ಇತ್ತೀಚೆಗೆ ಝೀಕಾ ವೈರಸ್ ಪತ್ತೆಯಾಗಿತ್ತು. ಝೀಕಾ ವೈರಸ್ ಅಷ್ಟೊಂದು ಅಪಾಯಕಾರಿಯಲ್ಲ. ಆದರೆ ನಿಪಾ ಬಗ್ಗೆ ಎಚ್ಚರಿಕೆ ವಹಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕೂಡ ಮುಂಜಾಗೃತೆ ಕ್ರಮಗಳನ್ನು ಅನುಸರಿಸಲಿದೆ ಎಂದರು.

Exit mobile version