Site icon Vistara News

Dengue Fever: ಡೆಂಗ್ಯೂ ಆತಂಕ; ರಾಜಧಾನಿಯಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ಕಸ ಬಿಸಾಡಿದರೆ ಬೀಳಲಿದೆ ಭಾರಿ ದಂಡ!

Dengue Fever

ಬೆಂಗಳೂರು: ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು (Dengue Fever) ಹೆಚ್ಚಳವಾಗುತ್ತಿರುವುದರಿಂದ ಆತಂಕ ಮೂಡಿದೆ. ಹೀಗಾಗಿ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಿರುವ ಬಿಬಿಎಂಪಿ, ಎಲ್ಲೆಂದರಲ್ಲಿ ಕಸ ಬಿಸಾಡುವವರಿಗೆ ಭಾರಿ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಲು ನಿರ್ಧರಿಸಿದೆ. ಸದ್ಯದಲ್ಲೇ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಿಗೂ ಆರೋಗ್ಯ ಇಲಾಖೆ ಆದೇಶ ಹೊರಡಿಸಲಿದೆ.

ಈ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡಿದವರಿಗೆ ಇನ್ಮುಂದೆ 50 ರೂಪಾಯಿ ಅಲ್ಲ, 500 ರೂಪಾಯಿ ದಂಡ ವಿಧಿಸಲು ಪಾಲಿಕೆ ನಿರ್ಧರಿಸಿದೆ. ಸ್ವಚ್ಛತೆ ಇಲ್ಲದಿದ್ದರೆ 500 ರೂ. ದಂಡ ಬೀಳೋದು ಗ್ಯಾರಂಟಿ. 50 ರೂ ಇದ್ದ ದಂಡದ ಮೊತ್ತವನ್ನು 500 ರೂ.ಗೆ ಏರಿಕೆ ಮಾಡಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ನೆನ್ನೆ ಆರೋಗ್ಯ ಸಚಿವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಜನರಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ. ಸಂಗ್ರಹಿಸಿದ ನೀರನ್ನು ನಾಲ್ಕೈದು ದಿನಗಳಿಗೆ ಒಮ್ಮೆ ಬದಲಾಯಿಸಬೇಕು. ಆಶಾ ಕಾರ್ಯಕರ್ತೆಯರು ಬಂದಾಗ ಸಾರ್ವಜನಿಕರು ಸ್ಪಂದಿಸಬೇಕು ಎಂದು ಕೋರಿದ್ದಾರೆ.

ಇದನ್ನೂ ಓದಿ | HD Kumaraswamy: ಸಿಎಂ ಕುರ್ಚಿ ಮೇಲೆ ಟವಲ್‌ ಹಾಕಿದವರಿಂದಲೇ ಮುಡಾ ಹಗರಣ ಬಯಲು: ಎಚ್‌ಡಿಕೆ

ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ

Biometric Attendance

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಕೆಲವು ಇಲಾಖೆಗಳಲ್ಲಿ ಬಯೋಮೆಟ್ರಿಕ್ ಇಲ್ಲದಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಜುಲೈ 6ರೊಳಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ (Biometric Attendance) ಅಳವಡಿಸಿರುವ ಬಗ್ಗೆ ವರದಿ ಪಡೆಯಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಾಕ್ಷಿ ಬಿ. ಅವರು ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯ ಸರ್ಕಾರವು ಹಲವು ಸುತ್ತೋಲೆಗಳ ಮೂಲಕ ರಾಜ್ಯ ಸರ್ಕಾರದ ಕಚೇರಿಗಳು ಸೇರಿ ಅಧೀನಕ್ಕೊಳಪಡುವ ಎಲ್ಲಾ ನಿಗಮ, ಮಂಡಳಿ, ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರಿ, ನೌಕರರ ದೈನಂದಿನ ಹಾಜರಾತಿಯನ್ನು ಬಯೋಮೆಟ್ರಿಕ್ ಯಂತ್ರದ ಮೂಲಕ ದಾಖಲಿಸಲು ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಲು ನಿರ್ದೇಶನಗಳನ್ನು ನೀಡಿದೆ. ಆದರೂ ಹಲವೆಡೆ ಈವರೆಗೂ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಅಳವಡಿಕೆಯಾಗಿಲ್ಲ.

ಇದನ್ನೂ ಓದಿ | Govt Employees: ಸರ್ಕಾರಿ ನೌಕರರಿಗೆ ಅಲರ್ಟ್‌; ಬೆಳಗ್ಗೆ 9.15ಕ್ಕೆ ಆಫೀಸ್‌ ತಲುಪದಿದ್ರೆ ಅರ್ಧ ದಿನ ರಜೆ!

ಈವರೆಗೂ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿವೆ. ಹೀಗಾಗಿ ಸರ್ಕಾರಿ ಕಚೇರಿಗಳಲ್ಲಿ ಜುಲೈ 6ರೊಳಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಅವಡಿಸಿರುವ ವರದಿ ನೀಡಬೇಕು ಎಂದು ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ದರ್ಶಿಗಳಿಗೆ ಸೂಚನ ನೀಡಿದ್ದಾರೆ.

Exit mobile version